Government of Karnataka

Department of Information

Saturday 21/01/2017

ಜಿಲ್ಲಾ ವಾರ್ತೆ 06-01-2017

Date : ಶುಕ್ರವಾರ, ಜನವರಿ 6th, 2017

ಪತ್ರಿಕಾ ಪ್ರಕಟಣೆ

ಫ್ಯಾಷನ್ ಟೆಕ್ನಾಲಜಿ ಕೋರ್ಸ್‍ಗಳಿಗಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂ. ನ ಜಿ. ಜ. 06. (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಜಿಲ್ಲೆಯ ಹಿಂದುಳಿದ ವರ್ಗಗಳ ಅರ್ಹ ನಿರುದ್ಯೋಗಿ ಮಹಿಳಾ/ ಪುರುಷ ಅಭ್ಯರ್ಥಿಗಳಿಗಾಗಿ ಬೆಂಗಳೂರಿನ ನ್ಯಾಷನಲ್ ಇನ್ಸ್‍ಟ್ಯೂಟ್ ಆಫ್ ಟೆಕ್ನಾಲಜೆ ಸಂಸ್ಥೆಯಲ್ಲಿ ಫ್ಯಾಷನ್ ಟೆಕ್ನಾಲಜಿಯ ಕೋರ್ಸ್‍ಗಳಲ್ಲಿ ಉಚಿತ ತರಬೇತಿಯನ್ನು ಆಯೋಜಿಸಿದೆ.

18-35 ವರ್ಷ ವಯಸ್ಸಿನ ದ್ವಿತೀಯ ಪಿಯುಸಿ ಪಾಸಾಗಿರುವ ಜಿಲ್ಲೆಯ ಆಸಕ್ತ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿ ಗಳಿಗೆ ಸೇರಿದ ಅರ್ಹ ನಿರುದ್ಯೋಗಿ ಮಹಿಳಾ/ಪುರುಷ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜನವರಿ 17 ರೊಳಗಾಗಿ ಸಲ್ಲಿಸಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ www.backwardclasses.kar.nic.in ವೆಬ್‍ಸೈಟ್ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.