Government of Karnataka

Department of Information

Saturday 21/01/2017

ಜಿಲ್ಲಾ ವಾರ್ತೆ 27-12-2016

Date : ಮಂಗಳವಾರ, ದಶಂಬರ 27th, 2016

ಜಿಲ್ಲಾ ಸುದ್ದಿಗಳು:

ವಿಶ್ವಮಾನವ ದಿನಾಚರಣೆ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ

ಶಿವಮೊಗ್ಗ, ಡಿಸೆಂಬರ್ 27 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಡಿ. 29 ರಂದು ಸಂಜೆ 6.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ವಿಶ್ವಮಾನವ ಕುವೆಂಪುರವರ ದಿನಾಚರಣೆ ಅಂಗವಾಗಿ ವಿಶ್ವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗದ ಶ್ರೀ ವಿಜಯಕಲಾನಿಕೇತನದ ಡಾ|| ಕೆ.ಎಸ್.ಪವಿತ್ರ ಮತ್ತು ತಂಡದವರಿಂದ ರಸಋಷಿ ನಮನ ರೂಪಕ ಪ್ರದರ್ಶನ ಮತ್ತು ಶಿವಮೊಗ್ಗ ಸಹ್ಯಾದ್ರಿ ರಂಗತರಂಗ ತಂಡದವರಿಂದ ಶ್ರೀ ಕಾಂತೇಶ್ ಕದರಮಂಡಲಗಿ ನಿರ್ದೇಶನದ ಜಲಗಾರ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ.

ಜಿಲ್ಲಾಧಿಕಾರಿ ಡಾ|| ಎಂ ಲೋಕೇಶ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ|| ಕೆ. ರಾಕೇಶ್‍ಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಅಭಿನವ್ ಖರೆ, ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ವೆಂ. ನಾಯಕ್ ಇವರುಗಳ ಉಪಸ್ಥಿತರಿರುವರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಡಳಿತ ಕೋರಿದೆ.

ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ:

ಶಿವಮೊಗ್ಗ, ಡಿಸೆಂಬರ್ 27 (ಕರ್ನಾಟಕ ವಾರ್ತೆ) : ಸಾರ್ವಜನಿಕ ಶಿಕ್ಷಣ ಇಲಾಖೆಯು ಸಂಸದೀಯ ವ್ಯಹಾರಗಳು ಮತ್ತು ಶಾಸನ ರಚನೆ ಇಲಾಖೆ ಇವರ ಸಹಯೋಗದಲ್ಲಿ ಪ್ರಸಕ್ತ ಸಾಲಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಡಿಸೆಂಬರ್ 29ರಂದು ಮಧ್ಯಾಹ್ನ 2.30ಕ್ಕೆ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‍ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯನ್ನು ಏರ್ಪಡಿಸಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಣರಾಜ್ಯೋತ್ಸವ ಪೆರೇಡ್‍ಗೆ ಕು.ರೇವತಿ ಆಯ್ಕೆ

ಶಿವಮೊಗ್ಗ, ಡಿಸೆಂಬರ್ 27 (ಕರ್ನಾಟಕ ವಾರ್ತೆ) : ಜನವರಿ 26ರಂದು ಗಣರಾಜ್ಯೋತ್ಸವದ ಅಂಗವಾಗಿ ನವದೆಹಲಿಯಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ಭಾಗವಹಿಸಲು ನಗರದ ಕಮಲಾನೆಹರೂ ಕಾಲೇಜಿನ ದ್ವಿತೀಯ ಬಿ.ಕಾಂ., ವಿದ್ಯಾರ್ಥಿನಿ ಹಾಗೂ ಎನ್.ಎಸ್.ಎಸ್. ಘಟಕ ಮತ್ತು ಕುವೆಂಪು ವಿಶ್ವವಿದ್ಯಾನಿಲಯದ ಪ್ರತಿನಿಧಿಯಾಗಿ ಕು.ರೇವತಿ ಇವರು ಆಯ್ಕೆಯಾಗಿದ್ದಾರೆ. ಇವರು ನಗರದ ಕಸ್ತೂರ್ಬಾ ಬಾಲಿಕಾ ಪ್ರೌಢಶಾಲೆಯ ಸಂಗೀತ ಶಿಕ್ಷಕಿ ಶ್ರೀಮತಿ ದಾಕ್ಷಾಯಣಿ ರಾಜಕುಮಾರ್ ಮತ್ತು ಮಂಡಘಟ್ಟ ಶಾಲೆಯ ಶಿಕ್ಷಕ ಹೊಸೂರು ಕೆ.ರಾಜಕುಮಾರ್ ದಂಪತಿಗಳ ಪುತ್ರಿ. ಜಿಲ್ಲೆಯ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಭಾಗವಹಿಸುತ್ತಿರುವ ಕು.ರೇವತಿ ಇವರಿಗೆ ಕಾಲೇಜಿನ ಪ್ರಾಂಶುಪಾಲರು, ಎನ್.ಎಸ್.ಎಸ್.ಘಟಕಾಧಿಕಾರಿಗಳು, ಉಪನ್ಯಾಸಕರು ಹಾಗೂ ವಿದ್ಯಾರ್ಥಿವೃಂದ ಅಭಿನಂದಿಸಿದೆ.

ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

ಬೆಂ,ನ.ಜಿ . ಡಿ. 27 (ಕರ್ನಾಟಕ ವಾರ್ತೆ): 2016ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿ, ಸರಾಸರಿ ಶೇಕಡ 75 ಮತ್ತು ಅದಕ್ಕಿಂತ ಹೆಚ್ಚು ಅಂಕಗಳಿಸಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ “ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜನವರಿ 10 ಕೊನೆ ದಿನವಾಗಿರುತ್ತದೆ.

ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಡೈಟ್ www.backwardclasses.kar.nic.in ನಲ್ಲಿ ಸಂಪರ್ಕಿಸಬಹುದಾಗಿದೆ. ಅನುದಾನದ ಲಭ್ಯತೆಗೆ ಅನುಗುಣವಾಗಿ ಮೆರಿಟ್ ಮತ್ತು ಮೀಸಲಾತಿ ಅನ್ವಯ ಪುರಸ್ಕಾರಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ತುರ್ತು ಮಾಹಿತಿಗೆ ದೂರವಾಣಿ ಸಂಖ್ಯೆ:080-65970004 ನ್ನು ಸಂಪರ್ಕಿಸಬಹುದಾಗಿದೆ.

ಸಮೃದ್ಧ ಜೀವನ ಮಲ್ಟಿ ಪರ್ಪಸ್ ಕೋ-ಆಪರೇಟಿವ್ ಸೊಸೈಟಿ ಅಮಾಪನೆಗೊಳಿಸಿ ಆದೇಶ

ಬೆಂ. ನ. ಜಿ ಡಿ. 27 (ಕರ್ನಾಟಕ ವಾರ್ತೆ): ಸಮೃದ್ಧ ಜೀವನ ಮಲ್ಟಿ ಪರ್ಪಸ್ ಕೋ-ಅಪರೇಟಿವ್ ಸೊಸೈಟಿ ಲಿಮಿಟೆಡ್, ಪುಣೆ ಈ ಸಂಘಗಳನ್ನು ದೆಹಲಿಯ ಕೇಂದ್ರ ಸಹಕಾರ ಸಂಘಗಳ ನಿಬಂಧಕರು, ಸಮಾಪನೆಗೊಳಿಸಿ, ಸಮಾಪನಾಧಿಕಾರಿಯನ್ನು ನೇಮಕ ಮಾಡಿದ್ದಾರೆ.

ಸಾರ್ವಜನಿಕರು ಸದರಿ ಸಂಘದಲ್ಲಿ ಇಟ್ಟಿರುವ ಠೇವಣಿಗಳ ವಾಪಸಾತಿಗೆ ಹಾಗೂ ಇತರೆ ಯಾವುದೇ ವಿಷಯವನ್ನಾದರಿಸಿದ ದೂರುಗಳು ಇದ್ದಲ್ಲಿ ಸಮಾಪನಾಧಿಕಾರಿ, ಸಮೃದ್ದ ಜೀವನ ಮಲ್ಟಿ ಪರ್ಪಸ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್, ನಂ:502, 4ನೇ ಮಹಡಿ, ಪ್ರಾಸ್‍ಪರಿಟಿ ಹೈಟ್ಸ್, ಸಿಟಿಎಸ್ ನಂ:6769, ಮಿತ್ರ ಮಂಡಲ ಚೌಕ್ ಪಾರ್ವತಿ, ಪುಣೆ-411009 ರವನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರುನಗರ ಜಿಲ್ಲ್ಲೆ ಸಹಕಾರ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗುರುವಾರ ವಿಶ್ವ ಮಾನವ ದಿನಾಚರಣೆ

ಗದಗ(ಕರ್ನಾಟಕ ವಾರ್ತೆ) ಡಿಸೆಂಬರ್ 27: ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ ಅಂಗವಾಗಿ ಗುರುವಾರ ದಿ. 29 ರಂದು ಮುಂಜಾನೆ 10.30 ಗಂಟೆಗೆ ಗದಗ ಜಿಲ್ಲಾಡಳಿತ ಭವನದ ಅಡಿಟೋರಿಯಂದಲ್ಲಿ ವಿಶ್ವ ಮಾನವ ದಿನಾಚರಣೆ ಏರ್ಪಡಿಸಲಾಗಿದೆ.

ಗದಗ ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿರುವ ಈ ಸಮಾರಂಭವನ್ನು ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತರಾಜ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಉದ್ಘಾಟಿಸುವರು. ಹಟ್ಟಿ ಚಿನ್ನದಗಣಿ ಅಧ್ಯಕ್ಷ ಹಾಗೂ ಶಾಸಕರಾದ ಬಿ.ಆರ್.ಯಾವಗಲ್ಲ, ಕನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕರಾದ ಜಿ.ಎಸ್.ಪಾಟೀಲ, ರಾಜ್ಯ ಸಂಪನ್ಮೂಲ ಇಲಾಖೆ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ರಾಮಕೃಷ್ಣ ದೊಡಮನಿ, ಜಿ.ಪಂ. ಅಧ್ಯಕ್ಷ ವಾಸಣ್ಣ ಕುರಡಗಿ, ಸಂಸದರಾದ ಶಿವಕುಮಾರ ಉದಾಸಿ, ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ ಸದಸ್ಯರುಗಳಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ಜಿ.ಪಂ. ಉಪಾಧ್ಯಕ್ಷೆ ಶ್ರೀಮತಿ ರೂಪಾ ಅಂಗಡಿ, ಗದಗ ತಾ.ಪಂ. ಅಧ್ಯಕ್ಷೆ ರವಿ ಮನೋಹರ ಇನಾಮತಿ, ಉಪಾಧ್ಯಕ್ಷ ಎ.ಆರ.ನದಾಫ್, ಗದಗ ಬೆಟಗೇರಿ ನಗರ ಸಭೆ ಅಧ್ಯಕ್ಷ ಪೀರಸಾಬ ಕೌತಾಳ, ಉಪಾಧ್ಯಕ್ಷ ಶ್ರೀನಿವಾಸ ಹುಯಿಲಗೊಳ ಅವರುಗಳು ಮುಖ್ಯ ಅತಿಥಿಗಳಾಗಿರುತ್ತಾರೆ.

ಸಂಕೇಶ್ವರದ ಡಾ.ಗುರುಪಾದ ಮರಿಗುದ್ದಿ, ಕುವೆಂಪು ಅವರ ಜೀವನ ಮತ್ತು ಸಂದೇಶ ಕುರಿತು ಉಪನ್ಯಾಸ ನೀಡಲಿದ್ದು ಎಸ್.ಎಸ್. ಗಡ್ಕರಮಠ ತಂಡದವರಿಂದ ಗೀತಗಾಯನ ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಹಾಗು ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿಗಳು ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೋಗೇರಿ ತಿಳಿಸಿದ್ದಾರೆ.

ಜಿಮ್ಸ :ಪ್ಯಾರಾ ಮೆಡಿಕಲ್ ಕಾಲೇಜ ಆರಂಭ

ಗದಗ(ಕರ್ನಾಟಕ ವಾರ್ತೆ) ಡಿಸೆಂಬರ್ 27: ಗದುಗಿನ ಮಲ್ಲಮಸುದ್ರದಲ್ಲಿರುವ ಗದಗ ವೈಧ್ಯಕೀಯ ವಿಜ್ಞಾನ ಸಂಸ್ಥೆಯ ಪ್ಯಾರಾ ಮೆಡಿಕಲ್ ಕಾಲೇಜಿನಿಂದ ಏಳು ಕೋರ್ಸ ಆರಂಭಿಸಲು ಅನುಮತಿ ಪಡೆದಿದೆ.

ತಲಾ 20 ವಿಧ್ಯಾರ್ಥಿಗಳಿಗೆ ಅವಕಾಶವಿರುವ ಡಿಪ್ಲೋಮಾ ಕೋರ್ಸಗಳಲ್ಲಿ ಲ್ಯಾಬ ಟೆಕ್ನಾಲಾಜಿ, ಹೆಲ್ತ ಇನ್ಸಪೆಕ್ಟರ, ಡಯಾಲಿಸಿಸ್, ರೇಡಿಯಾಲಾಜಿ, ಆಪರೇಶನ ಥಿಯೇಟರ, ಆಪ್ಥಾಮಿಕ ಹಾಗೂ ಮೆಡಕಲ್ ರೆಕಾರ್ಡ ಟೆಕ್ನಿಸಿಯನಗಳ ಕೋರ್ಸಗಳಿಗೆ ಎಸ್.ಎಸ್.ಎಲ್.ಸಿ ಅಥವಾ ಪಿಯಸಿಯಾದ ಅರ್ಹ ವಿಧ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತು ಹೆಚ್ಚಿನ ಮಾಹಿತಿಗಾಗಿ ಡಾ. ಗೀರಿಶ 8050390137, ಡಾ.ದೇಶಪಾಂಡೆ 9480157850 ಅಥವಾ 08372-297274 ಸಂಪರ್ಕಿಸಲು ಜಿಮ್ಸನ ಪ್ರಾಚಾರ್ಯರು ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ನಗದು ರಹಿತ ವಹಿವಾಟು ತರಬೇತಿ

ಕೊಪ್ಪಳ ಡಿ. 27 (ಕರ್ನಾಟಕ ವಾರ್ತೆ): ಪ್ರಸ್ತುತ ವಿದ್ಯಮಾನದಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ನಗದು ರಹಿತ ವಹಿವಾಟು ವ್ಯವಸ್ಥೆ ಕುರಿತಂತೆ ಜಿಲ್ಲಾ ಪಂಚಾಯತಿಯ ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಅಲ್ಲದೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ತರಬೇತಿ ನೀಡಲಾಯಿತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಐದುನೂರು ಮತ್ತು ಸಾವಿರ ಮುಖಬೆಲೆಯ ನೋಟು ರದ್ದುಪಡಿಸಿದ ನಂತರ ನಗದು ರಹಿತ ವಹಿವಾಟು ಹೆಚ್ಚಿನ ಆದ್ಯತೆ ನೀಡಿದ್ದಾರೆ. ನಗದು ರಹಿತ ವ್ಯವಹಾರ ಹೆಚ್ಚು ಪಾರದರ್ಶಕವಾಗಿದ್ದು , ಯಾವುದೇ ಚಿಲ್ಲರೆ ನೋಟಿನ ಸವiಸ್ಯೆ ಇರಲ್ಲ. ಹಣವನ್ನು ಇ-ವಾಲೇಟ್, ಆಧಾರ ಪೇಮೆಂಟ್ ಸರ್ವಿಸ್, ಎಟಿಎಂ ಕ್ರೇಡಿಟ್/ಡೆಬಿಟ್ ಕಾರ್ಡ,ಯುಪಿಐ ಮತ್ತು ಕ್ಯೂ.ಆರ್ ಕೋಡ್ ಬಳಸಿ ವಹಿವಾಟು ನಡೆಸುವ ಕುರಿತಂತೆ ತರಬೇತಿ ನೀಡಲಾಯಿತು.

ಈಲ್ಲಾ ಪಂಚಾಯತಿ ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ ಸೇರಿದಂತೆ ಜಿಲ್ಲಾ ಪಂಚಾಯತಿಯ ವಿವಿಧ ಸದಸ್ಯರುಗಳು, ಅಲ್ಲದೆ ಮುಖ್ಯ ಯೋಜನಾಧಿಕಾರಿ ಎಂ. ನಿಂಗಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡಿದ್ದರು. ಸಿ.ಎಸ್.ಸಿ. ಜಿಲ್ಲಾ ವ್ಯವಸ್ಥಾಪಕ ಶಿವಶೇಖರಗೌಡ ಪಾಟೀಲ್ ಮಂಜುನಾಥ ಹಿರೇಮಠ ರವರು ಡಿಜಿಟಲಿಕರಣದ ಕುರಿತು ಈ ಸಂದರ್ಭದಲ್ಲಿ ವಿವರಣೆ ನೀಡಿದರು.

ಮೈನಳ್ಳಿಯಲ್ಲಿ ಊರುಗಾಳು ಪದ್ಧತಿ ತೊಗರಿ ಬೆಳೆ ಕ್ಷೇತ್ರೋತ್ಸವ

ಕೊಪ್ಪಳ ಡಿ. 27 (ಕರ್ನಾಟಕ ವಾರ್ತೆ): ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ, ಕೃಷಿ ಇಲಾಖೆ, ಕೊಪ್ಪಳ ಇವರ ಜಂಟಿ ಸಹಯೋಗದಲ್ಲಿ “ಊರುಗಾಳು ಪದ್ಧತಿ ತೊಗರಿ ಬೆಳೆ ಕ್ಷೇತ್ರೋತ್ಸವ” ವನ್ನು ತಾಲೂಕಿನ ಮೈನಳ್ಳಿ ಗ್ರಾಮದ ಪ್ರಗತಿಪರ ರೈತ ಸಿದ್ದಾರೆಡ್ಡಿ ರವರ ತೊಗರಿ ಬೆಳೆ ಹೊಲದಲ್ಲಿ ಇತ್ತೀಚೆಗೆ ಆಚರಿಸಲಾಯಿತು.

ಡಾ. ಎಂ.ಬಿ. ಪಾಟೀಲ, ವಿಸ್ತರಣಾ ಮುಂದಾಳು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ತೊಗರಿ ಬೆಳೆ ಒಂದು ಅತ್ಯುತ್ತಮ ವರಮಾನ ಬೆಳೆ ಅದನ್ನು ವೈಜ್ಞಾನಿಕವಾಗಿ ಬೆಳೆದು ಅದರ ಲಾಭವನ್ನು ನಮ್ಮ ರೈತರು ಎರಡು ವಿಧವಾಗಿ ತೆಗೆದುಕೊಳ್ಳಬಹುದು ಎಂದು ತಿಳಿಸಿದರು. ಮೊದಲನೆಯದು, ತೊಗರಿ ಬೆಳೆಯು ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುತ್ತದೆ. ಎರಡನೆಯದು, ತೊಗರಿ ಬೆಳೆಯನ್ನು ಊರುಗಾಳು ಪದ್ಧತಿಯನ್ನು ಅನುಸರಿಸಿ ಬೆಳೆದರೆ ಖರ್ಚು ಕಡಿಮೆ ಮಾಡಿ ಇಳುವರಿಯನ್ನು ಹೆಚ್ಚಿಸಬಹುದು ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ತೊಗರಿ ಬೆಳೆಯನ್ನು ಊರುಗಾಳು ಪದ್ಧತಿಯಲ್ಲಿ ಬೆಳೆಯಲಾಗಿದ್ದು, ಅನೇಕ ರೈತರು ಇದರ ಸದುಪಯೋಗ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ಗ್ರಾಮ ಪಂಚಾಯತ ಸದಸ್ಯ ಈಶಪ್ಪಹಳ್ಳಿ ವಹಿಸಿದ್ದರು, ವಿಷಯ ತಜ್ಞೆ ಕವಿತಾ ವೈ ಉಳ್ಳಿಕಾಶಿ, ಇವರು ತೊಗರಿ ಬೆಳೆಯ ಮೌಲ್ಯವರ್ಧನೆಯ ಬಗ್ಗೆ ವಿವರಿಸಿದರು. ತೋಟಗಾರಿಕೆ ವಿಷಯ ತಜ್ಞ ಪ್ರದೀಪ ಬಿರಾದರ ತೋಟಗಾರಿಕೆ ಬೆಳೆಗಳ ಬಗ್ಗೆ ಮಾಹಿತಿಯನ್ನು ನೀಡಿದರು, ಕೀತಶಾಸ್ತ್ರ ವಿಷಯತಜ್ಞೆ ಶ್ವೇತ ಇವರು ತೊಗರಿ ಬೆಳೆಯಲ್ಲಿ ಕೀಟದ ನಿರ್ವಹಣೆ ಬಗ್ಗೆ ತಿಳಿಸಿದರು. ಕೃಷಿ ಅಧಿಕಾರಿ ಮಾರುತಿ ಪೂಜಾರ, ಸಹಾಯಕ ಕೃಷಿ ಅಧಿಕಾರಿ ವಿ.ಎನ್. ಮ್ಯಾಗೇರಿ, ಗ್ರಾ.ಪಂ. ಸದಸ್ಯ ಬಸವರಾಜ, ರೈತ ಮುಖಂಡರಾದ ವಿದ್ಯಾಧರ ಹಿರೇಗೌಡರ, ಚೆನ್ನಪ್ಪಹಳ್ಳಿ, ಗುದ್ನೆಪ್ಪಾ ಬೆಳಗೆರೆ, ನಿಂಗರೆಡ್ಡಿ ಭಾಗವಹಿಸಿದ್ದರು.

ಕೇಂದ್ರಿಯವಲಯದ ಜಿಲ್ಲೆಗಳ 1040 ಪೋಲೀಸ್ ಸಿಬ್ಬಂದಿಗೆ ಮುಂಬಡ್ತಿ

ಪೋಲೀಸ್ ಇಲಾಖೆಯು ಕೇಂದ್ರ ವಲಯದ ಜಿಲ್ಲೆಗಳ 1040 ಪೋಲೀಸ್ ಸಿಬ್ಬಂದಿಗಳ ಮುಂಬಡ್ತಿ ಕಾರ್ಯಕ್ರಮವಸ್ಸು ಡಿಸೆಂಬರ್ 29 ರಂದು ಬೆಳ್ಳಿಗೆ 11.30 ಗಂಟೆಗೆ ತುಮಾಕೂರು ರಸ್ತೆಯಲ್ಲಿರುವ ಮಾದಾವರದ ಬಿ,ಐ,ಇ,ಸಿ,ಯಲ್ಲಿ ಆಯೋಜಿಸಿದೆ,

ಈ ಕಾರ್ಯಕ್ರಮದಲ್ಲಿ ಮಾನ್ಯ ಗೃಹ ಸಚಿವ ಡಾ,ಜಿ.ಪರಮೇಶ್ಚರ್ ಸೇರಿದಂತೆ ಹಲವಾರು ಹಿರಿಯ ಪೋಲೀಸ್ ಅಧಿಕಾರಿಗಳು ಭಾಗವಹಿಸಲಿದ್ದಾರೆ,ಎಂದು ಪೋಲೀಸ್ ಅಧೀಕ್ಷರು ಅಮೀತ್ ಸಿಂಗೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶ್ವ ಮಾನವ ದಿನಾಚರಣೆ

ತುಮಕೂರು (ಕ.ವಾ.) ಡಿ.27: ಕುವೆಂಪುರವರ ಜನ್ಮ ದಿನಾಚರಣೆಯನ್ನು ಡಿಸೆಂಬರ್ 29ರಂದು ಬೆಳಿಗ್ಗೆ 11 ಗಂಟೆಗೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ವಿಶ್ವ ಮಾನವ ದಿನಾಚರಣೆ”ಯಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಚರಿಸಲಾಗುತ್ತಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾನೂನು, ಸಂಸದೀಯ ವ್ಯವಹಾರಗಳು, ಮತ್ತು ಸಣ್ಣ ನೀರಾವರಿ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ಬಿ. ಜಯಚಂದ್ರ, ಅವರು ನೆರವೇರಿಸುವರು. ಗೃಹ ಸಚಿವರಾದ ಡಾ: ಜಿ.ಪರಮೇಶ್ವರ ಅವರು ಗೌರವ ಉಪಸ್ಥಿತರಿರುತ್ತಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಮಕೂರು ನಗರ ಶಾಸಕರಾದ ಡಾ: ಎಸ್.ರಫೀಕ್ ಅಹಮದ್ ಅವರು ವಹಿಸುವರು. ಸಂಸ್ಕೃತಿ ಚಿಂತಕರು ಹಾಗೂ ಕುವೆಂಪುರವರ ಜೀವನ, ಸಾಹಿತ್ಯ ಮುಂತಾದ ವಿಷಯಗಳ ಕುರಿತು ಡಾ: ಎಸ್.ನಟರಾಜ ಬೂದಾಳುರವರು ವಿಶೇಷ ಉಪನ್ಯಾಸ ನೀಡುವರು. ಬೆಂಗಳೂರಿನ ಹೊಂಬಾಳೆ ಪ್ರತಿಭಾ ರಂಗದ ಹೆಚ್. ಪಲ್ಗುಣ ಮತ್ತು ತಂಡದಿಂದ ಕುವೆಂಪುರಚಿತ ಗೀತೆಗಳ ಗಾಯನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ, ಡಿಸೆಂಬರ್ 27 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2016ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದು, ಸರಾಸರಿ ಶೇ.75 ಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳನ್ನು ಮೆರಿಟ್, ಮೀಸಲಾತಿ ಹಾಗೂ ನಿಗಧಿಪಡಿಸಿಕೊಳ್ಳಲಾಗಿರುವ ಭೌತಿಕ ಗುರಿಗನುಗುಣವಾಗಿ ಆಯ್ಕೆ ಮಾಡಲಾಗುವುದು. ಪದವಿ/ಸ್ನಾತಕೋತ್ತರ ಪದವಿ (ಸಾಮಾನ್ಯ) ಪಡೆದವರಿಗೆ ರೂ. 20,000/- ಮತ್ತು ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿ (ತಾಂತ್ರಿಕ, ವೈದ್ಯಕೀಯ ಹಾಗೂ ಸಂಬಂಧಿಸಿದ ವಿಜ್ಞಾನ) ಪಡೆದವರಿಗೆ ರೂ. 25,000/-ಗಳ ಪ್ರತಿಭಾ ಪುರಸ್ಕಾರ ಮೊತ್ತವನ್ನು ನೀಡಲಾಗುವುದು. ಅರ್ಜಿಯನ್ನು ಇಲಾಖೆಯ ಅಂತರ್ಜಾಲ ತಾಣ www.backwardclass.kar.nic.inನಲ್ಲಿ ಜ. 10 ರೊಳಗಾಗಿ ಸಲ್ಲಿಸಬಹುದಾಗಿದೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ..

ಹೆಚ್ಚಿನ ಮಾಹಿತಿಗಾಗಿ www.backwardclass.kar.nic.in ಅಥವಾ ದೂ. ಸಂ: 9480818013/9480818010/080-44554444 ಗಳನ್ನು ಸಂಪರ್ಕಿಸಬಹುದಾಗಿದೆ.

ವಿಕಲಚೇತನರಿಗೆ ವೈದ್ಯಕೀಯ ತಪಾಸಣೆ ಮತ್ತು ಜಾಗೃತಿ ಶಿಬಿರ

ದಾವಣಗೆರೆ ಡಿ. 27-(ಕರ್ನಾಟಕ ವಾರ್ತೆ)- : ಮಹಾನಗರ ಪಾಲಿಕೆ ವ್ಯಾಪಿಯ ವಾರ್ಡ್‍ಗಳಲ್ಲಿರುವ ವಿಕಲಚೇತನ ಮಕ್ಕಳಿಗೆ ವೈದ್ಯಕೀಯ ತಪಾಸಣೆ ಮತ್ತು ಸೌಲಭ್ಯಗಳ ಜಾಗೃತಿ ಶಿಬಿರವನ್ನು ಡಿಸೆಂಬರ್ 28 ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಪಿ.ಬಿ. ರಸ್ತೆಯಲ್ಲಿರುವ ಶ್ರೀಮದ್ ಅಭಿನವ ರೇಣುಕಾ ಮಂದಿರದಲ್ಲಿ ಏರ್ಪಡಿಸಲಾಗಿದೆ.

ಅಂದು ಎಸ್‍ಜೆಎಂ ನಗರ, ಗಾಂಧಿನಗರ, ಆಜಾದ್ ನಗರ, ಅಹಮ್ಮದ್ ನಗರ, ಕುರುಬರ ಕೇರಿ, ಬಸವರಾಜ್ ಪೇಟೆ, ಚಾಮರಾಜ ಪೇಟೆ, ಮಂಡಿ ಪೇಟೆ, ಎಂಸಿಸಿ ‘ಎ’ ಮತ್ತು ‘ಬಿ’ ಬ್ಲಾಕ್, ನಿಜಲಿಂಗಪ್ಪ ಬಡಾವಣೆ, ಸಿದ್ದವೀರಪ್ಪ ಬಡಾವಣೆ, ನಿಟ್ಟುವಳ್ಳಿ ಹೊಸ ಬಡಾವಣೆ, ಶಿವಕುಮಾರ್‍ಸ್ವಾಮಿ ಬಡಾವಣೆ, ಲೆನಿನ್ ನಗರ, ವಿದ್ಯಾನಗರ, ಮತ್ತು ಆಂಜನೇಯ ಬಡಾವಣೆಗಳ ವಿಕಲಚೇತನರು ಈ ಸೌಲಭ್ಯ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಪ್ರಸನ್ನಕುಮಾರ್-9663119042, ಶಶಿಧರ್.ಜಿ.ಎಸ್-9844899262, ಶಿವಕುಮಾರ್ ಎಂ.ಜಿ-9844533343, ವಿರುಪಾಕ್ಷಗೌಡ ಎಸ್-9164222245, ಕೆಂಚಪ್ಪ-9449203467, ಹಾಗೂ ಸುರೇಶ್ ಜೆ-9538871553 ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ ಡಿ. 27-(ಕರ್ನಾಟಕ ವಾರ್ತೆ)- : ದಾವಣಗೆರೆ ಜಿಲ್ಲೆಗೆ ಸಂಬಂಧಿಸಿದಂತೆ ಅತ್ಯುನ್ನತ ಸೇವೆಗೈದ/ಸಾಧನೆಗೈದ ವಿವಿಧ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎ, ಬಿ, ಸಿ ವೃಂದದ ಸರ್ಕಾರಿ ಅಧಿಕಾರಿ/ನೌಕರರುಗಳು ಅನುಬಂಧ-2 ರ ನಮೂನೆಯಲ್ಲಿ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜನವರಿ 10 ರೊಳಗಾಗಿ ದಾವಣಗೆರೆ ಉಪವಿಭಾಗದ ಉಪ ವಿಭಾಗಾಧಿಕಾರಿಗಳ ಕಛೇರಿಗೆ ಸಲ್ಲಿಸಬಹುದಾಗಿದೆ. ಹಾಗೂ ಅರ್ಜಿ ನಮೂನೆಗಳಿಗಾಗಿ ಉಪ ವಿಭಾಗಾಧಿಕಾರಿಗಳ ಕಛೇರಿಗೆ ಭೇಟಿ ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಫೆಬ್ರವರಿ 7 ರಿಂದ ದಡಾರ ಮತ್ತು ರುಬೆಲ್ಲಾ ಲಸಿಕಾ ಅಭಿಯಾನ ಆರಂಭ

ಚಿಕ್ಕಬಳ್ಳಾಪುರ: ಮಕ್ಕಳಿಗೆ ತೀವ್ರವಾಗಿ ಕಾಡುವ ದಡಾರ ಮತ್ತು ರುಬೆಲ್ಲಾ ಲಸಿಕಾ ಅಭಿಯಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೆ.ಮಂಜುನಾಥ್ ರವರು ಅಧಿಕಾರಿಗಳಿಗೆ ಸೂಚಿಸಿದರು.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮೀಸಲ್ಸ್ ಮತ್ತು ರುಬೆಲ್ಲಾ ಜಿಲ್ಲಾ ಲಸಿಕಾ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಅವರು ಮಕ್ಕಳಿಗೆ ತೀವ್ರವಾಗಿ ಕಾಡುವ ದಡಾರ ಮತ್ತು ರುಬೆಲ್ಲಾ ರೋಗಗಳ ತಡೆಗಾಗಿ ರಾಷ್ಟ್ರೀಯ ಆರೋಗ್ಯ ಮಿಷನ್‍ನಿಂದ ಜಿಲ್ಲೆಯಲ್ಲಿ ಫೆಬ್ರವರಿ 7 ರಿಂದ 28ರ ವರೆಗೆ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನ ಕುರಿತು ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಕ್ರಮಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ರವಿಶಂಕರ್ ರವರು 9 ತಿಂಗಳಿನಿಂದ 15 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕುವ ವ್ಯವಸ್ಥೆ ಮಾಡಿಕೊಳ್ಳಬೇಕು.

ದಡಾರ ಮತ್ತು ರುಬೆಲ್ಲಾ ಮಕ್ಕಳನ್ನು ತೀವ್ರವಾಗಿ ಕಾಡುವಂತಹ ಕಾಯಿಲೆಗಳು. ಇದನ್ನು ತಡೆಯುವ ನಿಟ್ಟಿನಲ್ಲಿ ಪಲ್ಸ್ ಪೋಲಿಯೋ ಮಾದರಿಯಲ್ಲಿ ಫೆಬ್ರವರಿ 7, 2016 ರಿಂದ ದಡಾರ ಲಸಿಕಾ ಅಭಿಯಾನವನ್ನು ಜಿಲ್ಲೆಯಾದ್ಯಂತ ಶಾಲೆಗಳಲ್ಲಿ ಆರಂಭಿಸಲಾಗುತ್ತದೆ ಎಂದು ತಿಳಿಸಿದರು.

ಯಾವುದೇ ಮಕ್ಕಳು ಲಸಿಕೆಯಿಂದ ವಂಚಿತರಾಗಬಾರದು. ಪ್ರಮುಖವಾಗಿ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಗರ, ಸ್ಥಳೀಯ ಸಂಸ್ಥೆಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ಯಶಸ್ವಿಯಾಗಲು ಕೈಜೋಡಿಸಬೇಕು. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಲಸಿಕೆ ಹಾಕಬೇಕು ಎಂದು ತಿಳಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ವಿಶ್ವ ಮಾನವ ದಿನಾಚರಣೆ 29ರಂದು

ಮ0ಗಳೂರು ಡಿsಸೆಂಬರ್ 27 ಕರ್ನಾಟಕ ವಾರ್ತೆ:- ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಡಿ.29 ರಂದು ವಿಶ್ವ್ವ ಮಾನವ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸೃತಿ ಇಲಾಖೆ ದ.ಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುವ ವಿಶ್ವ ಮಾನವ ದಿನಾಚರಣೆಯನ್ನು ಅಂದು ಬೆಳಿಗ್ಗೆ 11 ಗಂಟೆಗೆ ಕೆನರಾ ಫ್ರೌಢಶಾಲೆ ಉರ್ವ ಇಲ್ಲಿ ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸುವರು. ಶಾಸಕ ಜೆ.ಆರ್ ಲೋಬೊ ಅಧ್ಯಕ್ಷತೆಯನ್ನು ವಹಿಸುವರು. ಡಾ. ಸಂಪತ್ ಕುಮಾರ್ ಉಜಿರೆ ಅವರು ವಿಶ್ವ ಮಾನವ ಸಂದೇಶ ನೀಡಲಿದ್ದಾರೆ ಎಂದು ಎಂದು ಕನ್ನಡ ಮತ್ತು ಸಂಸೃತಿ ಇಲಾಖೆಯ ಪ್ರಕಟಣೆ ತಿಳಿಸಿದೆ.

ನೇರ ಸಂದರ್ಶನ

ಚಿಕ್ಕಮಗಳೂರು,ಡಿ.27:- ಎನ್.ಪಿ.ಸಿ.ಡಿ.ಸಿ.ಎಸ್ / ಎನ್.ಪಿ.ಹೆಚ್.ಸಿ.ಇ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ತಜ್ಞ ವೈದ್ಯರನ್ನು ಜಿಲ್ಲಾ ಆಸ್ಪತ್ರೆಗೆ ಹಾಗೂ ಸಾಮಾನ್ಯ ಕರ್ತವ್ಯ ವೈದ್ಯರು ಸಮುದಾಯ ಆರೋಗ್ಯ ಕೇಂದ್ರಗಳಿಗೆ ನೇಮಕಾತಿ ಮಾಡಲು 2017 ರ ಜನವರಿ 2 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಎಂ.ಬಿ.ಬಿ.ಎಸ್ ಹಾಗೂ ಎಂ.ಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಚಕ್ಷಣಾಧಿಕಾರಿಗಳು, ಜಿಲ್ಲಾ ವಿಚಕ್ಷಣಾ ಘಟಕ, ಚಿಕ್ಕಮಗಳೂರು ಅಥವಾ ದೂ.ಸಂ:08262-237226 ಅನ್ನು ಸಂಪರ್ಕಿಸಬಹುದಾಗಿದೆ.

ಸೀಮೆಎಣ್ಣೆ ಬಿಡುಗಡೆ

ಚಿಕ್ಕಮಗಳೂರು.ಡಿ.27:- ಡಿಸೆಂಬರ್ ಮಾಹೆಗೆ ಅನೌಪಚಾರಿಕ ಪಡಿತರ ಪ್ರದೇಶ, ನಗರ ಹಾಗೂ ಗ್ರಾಮಾಂತರ ಪ್ರದೇಶದ ಅನಿಲ ರಹಿತ ಪಡಿತರ ಚೀಟಿ ಹೊಂದಿದ ಎ.ಎ.ವೈ ಹಾಗೂ ಬಿ.ಪಿ.ಎಲ್ ಪಡಿತರ ಹೊಂದಿರುವವರಿಗೆ 3 ಲೀ ಹಾಗೂ ಎಪಿಎಲ್ ಪಡಿತರ ಹೊಂದಿರುವವರಿಗೆ 2 ಲೀ ಸೀಮೆಎಣ್ಣೆ ಬಿಡುಗಡೆ ಮಾಡಲಾಗಿದೆ.

ಸಾರ್ವಜನಿಕರು ಸಂಬಂಧಪಟ್ಟ ನ್ಯಾಯ ಬೆಲೆ ಅಂಗಡಿಯಿಂದ ಪಡೆಯಬಹುದಾಗಿದೆ. ವಿತರಣೆಯ ದೂರುಗಳಿದ್ದಲ್ಲಿ ದೂ.ಸಂ. 08262-235261 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ಪೊಲೀಸ್ ವಾರ್ಷಿಕ ಕ್ರೀಡಾಕೂಟ-2016

ಬೆಳಗಾವಿ, ಡಿಸೆಂಬರ್ 27 (ಕರ್ನಾಟಕ ವಾರ್ತೆ): ಪೊಲೀಸ್ ಕಮಿಷನರೇಟ್ ಬೆಳಗಾವಿ ನಗರ ಹಾಗೂ ಜಿಲ್ಲಾ ಪೊಲೀಸ್ ಬೆಳಗಾವಿ ಜಿಲ್ಲೆ ಇವರುಗಳ ವತಿಯಿಂದ “ಪೊಲೀಸ್ ವಾರ್ಷಿಕ ಕ್ರೀಡಾಕೂಟ-2016”ವನ್ನು ಡಿಸೆಂಬರ್ 28 ಮತ್ತು 30 ರಂದು ಬೆಳಗಾವಿ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದೆ.

ಈ ಕಾರ್ಯಕ್ರಮವನ್ನು (ಡಿ.28)ರಂದು ಬೆಳಿಗ್ಗೆ 9 ಗಂಟೆಗೆ ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಆರ್.ಜೆ. ಸತೀಶ ಸಿಂಗ್, ಅವರು ಉದ್ಘಾಟಿಸುವರು. ನಂತರ ಸಮಾರಂಭದ ಕಾರ್ಯಕ್ರಮಗಳು ಜರುಗಲಿವೆ.

ಡಿಸೆಂಬರ್ 30 ರಂದು ಸಾಯಂಕಾಲ 4 ಗಂಟೆಗೆ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನುಸ ಬೆಳಗಾವಿ ಉತ್ತರ ವಲಯದ ಆರಕ್ಷಕ ಮಹಾನಿರೀಕ್ಷಕರಾದ ಶ್ರೀ ಡಾ.ಕೆ.ರಾಮಚಂದ್ರರಾವ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ನಂತರ ಸಮಾರಂಭದ ಕಾರ್ಯಕ್ರಮಗಳು ಜರುಗಲಿವೆ.

ಸಹಕಾರ ಸಂಘ ಚುನಾವಣೆ: ಕಾರ್ಯದರ್ಶಿಗಳಿಗೆ ತರಬೇತಿ

ಬೆಳಗಾವಿ, ಡಿಸೆಂಬರ್ 27 (ಕರ್ನಾಟಕ ವಾರ್ತೆ): 2017ರ ಜನೇವರಿ 1 ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಅಧಿಕಾರಾವಧಿ ಅಂತ್ಯಗೊಳ್ಳಲಿರುವ ಎಲ್ಲ ಕಾರ್ಯವ್ಯಾಪ್ತಿಯ ಪ್ರಾಥಮಿಕ ವರ್ಗದ ಸಹಕಾರ ಸಂಘ/ಸಹಕಾರಿಗಳಿಗೆ ಮುಂದಿನ ಅವಧಿಗೆ ಚುನಾವಣೆ ಜರುಗಿಸಲು ದಿನಾಂಕಗಳನ್ನು ನಿಗದಿಗೊಳಿಸಿ ಆಯುಕ್ತರು ಸಹಕಾರ ಚುನಾವಣಾ ಪ್ರಾಧಿಕಾರ ಬೆಂಗಳೂರು ಇರವರು ಅಧಿಸೂಚನೆ ಹೊರಡಿಸಿರುತ್ತಾರೆ.

ಅದರಂತೆ ಸಹಕಾರ ಸಂಘ /ಸಹಕಾರಿಗಳ ಚುನಾವಣೆ ಜರುಗಿಸಲು ರಿಟರ್ನಿಂಗ ಅಧಿಕಾರಿಗಳನ್ನು ನೇಮಕ ಮಾಡಲು ಸಹಕಾರ ಚುನಾವಣಾ ಪ್ರಾಧಿಕಾರ ನಿಗದಿಪಡಿಸಿದ ನಮೂನೆ ಹಾಗೂ ಸಂಬಂಧಿಸಿದ ದಾಖಲಾತಿಗಳೊಂದಿಗೆ ಪ್ರಸ್ತಾವನೆ ತಯಾರಿಸಿ ಈ ಕಾರ್ಯಾಲಯಕ್ಕೆ ಸಲ್ಲಿಸುವಂತೆ ಈಗಾಗಲೆ ತಿಳಿಸಲಾಗಿರುತ್ತದೆ.

ಬೆಳಗಾವಿ ಜಿಲ್ಲೆಯಲ್ಲಿನ ಎಲ್ಲ ಸಂಘ/ ಸಹಕಾರಿಗಳ ಕಾರ್ಯದರ್ಶಿಗಳು ಜರುಗಿಸಬೇಕಾದ ಕ್ರಮಗಳ ಕುರಿತು ಡಿಸಿಸಿ ಬ್ಯಾಂಕ್ ಕೇಂದ್ರ ಕಛೇರಿ ಬೆಳಗಾವಿ ಇದರ ಸಭಾಭವನದಲ್ಲಿ ತರಬೇತಿ ನೀಡಲು ಈ ಕೆಳಗಿನಂತೆ ದಿನಾಂಕ ಹಾಗೂ ಸಮಯ ನಿಗದಿಪಡಿಸಲಾಗಿದೆ.

ಅಥಣಿ, ರಾಯಬಾಗ, ಚಿಕ್ಕೋಡಿ, ಸವದತ್ತಿ ಹಾಗೂ ರಾಮದುರ್ಗ ತಾಲೂಕಿನ ಎಲ್ಲ ಕಾರ್ಯವ್ಯಾಪ್ತಿಯ ಪ್ರಾಥಮಿಕ ವರ್ಗದ ಸಹಕಾರ ಸಂಘ/ಸಹಕಾರಿಗಳ ಕಾರ್ಯದರ್ಶಿಗಳು 2017ರ ಜನೇವರಿ 5 ಬೆಳಿಗ್ಗೆ 11 ಗಂಟೆಗೆ ಹಾಗೂ ಬೆಳಗಾವಿ, ಹುಕ್ಕೇರಿ, ಖಾನಾಪೂರ, ಗೋಕಾಕ ಹಾಗೂ ಬೈಲಹೊಂಗಲ ತಾಲೂಕಿನ ಎಲ್ಲ ಕಾರ್ಯವ್ಯಾಪ್ತಿಯ ಪ್ರಾಥಮಿಕ ವರ್ಗದ ಸಹಕಾರ ಸಂಘ/ಸಹಕಾರಿಗಳ ಕಾರ್ಯದರ್ಶಿಗಳು ಮಧ್ಯಾಹ್ನ 2 ಗಂಟೆಗೆ ಆಯೋಜಿಸಲಾಗಿದೆ. ಈ ತರಬೇತಿಗೆ ಕಾರ್ಯದರ್ಶಿಗಳು ತರಬೇತಿಗೆ ಹಾಜರಾಗಬೇಕೆಂದು ಬೆಳಗಾವಿ ಸಹಕಾರ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜನವರಿ 6 ಮತ್ತು 7 ರಂದು ಜಿಲ್ಲಾ ಮಟ್ಟದ ಯುವಜನ ಮೇಳ

2016-17ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಜನವರಿ 6 ಮತ್ತು 7 ರಂದು ಮದ್ದೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಂಘಟಿಸಲಾಗುತ್ತಿದೆ. ತಾಲ್ಲೂಕು ಮಟ್ಟದ ಯುವಜನ ಮೇಳದಲ್ಲಿ ವೈಯುಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಹಾಗೂ ದ್ವಿತೀಯ ಸ್ಥಾನ ಪಡೆದ ಯುವ ಕಲಾವಿದರು ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕಲಾ ತಂಡಗಳು ಈ ಜಿಲ್ಲಾ ಯುವಜನ ಮೇಳದಲ್ಲಿ ಭಾಗವಹಿಸುವ ಅವಕಾಶ ಪಡೆದಿರುತ್ತಾರೆ. ಎಲ್ಲಾ ಕಲಾಬಂಧುಗಳು ದಿನಾಂಕ.06-01-2017 ರಂದು ಬೆಳಗ್ಗೆ 11.30 ಗಂಟೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣಕ್ಕೆ ಆಗಮಿಸಿ, ಸಂಘಟಕರಲ್ಲಿ ನೊಂದಣಿ ಮಾಡಿಕೊಳ್ಳಲು ಕೋರಲಾಗಿದೆ. ಜಿಲ್ಲಾ ಯುವಜನ ಮೇಳದಲ್ಲಿ ಭಾಗವಹಿಸುವ ಕಲಾವಿದರಿಗೆ ಪ್ರಯಾಣಭತ್ಯೆ ಹಾಗೂ ಈ ಎರಡು ದಿನಗಳ ಕಾಲ ಊಟ, ಸಾಮಾನ್ಯ ವಸತಿ ಸೌಕರ್ಯ ಕಲ್ಪಿಸಲಾಗುವುದು. ಲಘು, ಹಾಸಿಗೆ, ಹೊದಿಕೆಗಳೊಂದಿಗೆ ಆಗಮಿಸುವುದು ಆಪೇಕ್ಷಣೀಯ. ಎಲ್ಲಾ ಯುವ ಬಂಧುಗಳು ಜಿಲ್ಲಾ ಯುವಜನ ಮೇಳದಲ್ಲಿ ಉತ್ಸಾಹದಿಂದ ಭಾಗವಹಿಸಲು ಕೋರಲಾಗಿದೆ.

ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ

2016 ನೇ ಸಾಲಿನಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದು, ಸರಾಸರಿ ಶೇ. 75 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರತಿಭಾ ವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.01.2017 ಆಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ www.backwardclasses.kar.nic.in  ನ್ನು ಸಂಪರ್ಕಿಸುವುದು. ಅನುದಾನದ ಲಭ್ಯತೆಗೆ ಅನುಗುಣವಾಗಿ ಮೆರಿಟ್ ಹಾಗೂ ಮೀಸಲಾತಿ ಅನ್ವಯ ವಿದ್ಯಾರ್ಥಿಗಳನ್ನು ಆಯ್ಕೆಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಂಡ್ಯ ಇವರನ್ನು ಸಂಪರ್ಕಿಸಬಹುದು.

ಕಲಾಶ್ರೀ ಪ್ರಶಸ್ತಿ : ಅರ್ಜಿ ಅಹ್ವಾನ

ಬಾಲಭವನ ಸೊಸೈಟಿ, ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2016-17ನೇ ಸಾಲಿನಲ್ಲಿ ಕಲಾಶ್ರೀ ಪ್ರಶಸ್ತಿ ನೀಡುವ ಸಲುವಾಗಿ ತಾಲ್ಲೂಕು ಮಟ್ಟದಲ್ಲಿ ಸೃಜನಾತ್ಮಕ ಕಲೆ, ಸೃಜನಾತ್ಮಕ ಬರವಣಿಗೆ, ಸೃಜನಾತ್ಮಕ ಪ್ರದರ್ಶನ ಕಲೆ, ವಿಜ್ಞಾನದಲ್ಲಿ ನೂತನ ಆವಿಷ್ಕಾರ ಈ ಕ್ಷೇತ್ರಗಳಲ್ಲಿ ಜನವರಿ 3 ರಂದು ಶ್ರೀರಂಗಪಟ್ಟಣದ ಗುರುಭವನದಲ್ಲಿ ಏರ್ಪಡಿಸಲಾಗಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಆಸಕ್ತ 9 ರಿಂದ 16 ವರ್ಷದೊಳಗಿನ ಮಕ್ಕಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಶ್ರೀರಂಗಪಟ್ಟಣ ಇವರನ್ನು ಸಂಪರ್ಕಿಸಬಹುದು.

ವಸ್ತುಪ್ರದರ್ಶನಕ್ಕೆ ಸ್ತ್ರೀಶಕ್ತಿ ಸಂಘಗಳಿಂದ ಅರ್ಜಿ ಆಹ್ವಾನ

ಧಾರವಾಡ ( ಕರ್ನಾಟಕ ವಾರ್ತೆ) ಡಿ.27 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ನವಲಗುಂದದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಬರುವ ಜ.2 ರಿಂದ 4 ನೇ ತಾರೀಖಿನವರೆಗೆ ಮೂರು ದಿನಗಳ ಕಾಲ ನವಲಗುಂದದಲ್ಲಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಿದೆ. ಪರಮಪೂಜ್ಯ ಶ್ರೀಹುರಕಡ್ಲಿ ಅಜ್ಜನವರ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಹುರಕಡ್ಲಿ ಅಜ್ಜನವರ ಪುಣ್ಯಾಶ್ರಮದಲ್ಲಿ ಕಾರ್ಯಕ್ರಮ ನಡೆಯಲಿದೆ.ಮಹಿಳಾ ಉದ್ದಿಮೆದಾರರು,ಸ್ತ್ರೀಶಕ್ತಿ ಮತ್ತು ಸ್ವಯಂ ಸೇವಾ ಸಂಸ್ಥೆಗಳಿಗೆ ವಸ್ತು ಪ್ರರ್ದನದಲ್ಲಿ ಉಚಿತವಾಗಿ ಮಳಿಗೆಗಳನ್ನು ಒದಗಿಸಲಾಗುವದು.ಆಸಕ್ತರು ತಮ್ಮ ಅರ್ಜಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ,ಜಿಲ್ಲಾ ಬಾಲಭವನ,ಡಿ.ಸಿ.ಕಂಪೌಂಡ್ ಧಾರವಾಡ ಇವರಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ 0836-24478750 ದೂರವಾಣಿಯನ್ನು ಸಮಪರ್ಕಿಸಲು ಕೋರಲಾಗಿದೆ.

ವಿಕಲಚೇತನರ ಇಲಾಖೆಯ ವಿವಿಧ ಸೌಲಭ್ಯ ಪಡೆಯಲು ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ

ಚಿತ್ರದುರ್ಗ,ಡಿಸೆಂ.27- : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಚಿತ್ರದುರ್ಗ ಜಿಲ್ಲೆಯ ಅರ್ಹ ಫಲಾನುಭವಿಗಳು ಆನ್‍ಲೈನಿನಲ್ಲಿ ಅರ್ಜಿ ಸಲ್ಲಿಸುವ ಮೂಲಕ ವಿದ್ಯಾರ್ಥಿವೇತನ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಶುಲ್ಕ ಮರುಪಾವತಿ, ಸಾಧನ ಸಲಕರಣೆಗಳು, ಆಧಾರ ಸಾಲ ಯೋಜನೆ, ಶಿಶುಪಾಲನಾ ಭತ್ಯ, ವಿವಾಹ ಪ್ರೋತ್ಸಾಹಧನ, ವೈದ್ಯಕೀಯ ಪರಿಹಾರ ನಿಧಿ, ವಿಕಲಚೇತನರ ಗುರುತಿನ ಚೀಟಿ ಸೌಲಭ್ಯಗಳನ್ನು ಪಡೆಯಲು ಅವಕಾಶ ಮಾಡಿದ್ದು, ವಿಕಲಚೇತನರು ವೆಬ್‍ಸೈಟ್ www.welfareofdisabled.kar.nic.in  ನಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಿದ ನಕಲು ಪ್ರತಿಗಳನ್ನು ಚಿತ್ರದುರ್ಗ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಿಲಾಖೆ, ಸ್ಟೇಡಿಯಂ ಹತ್ತಿರ, ಬಾಲಭವನ, ಕಚೇರಿಗೆ ಸಲ್ಲಿಸಿ ನಿಯಮಾನುಸಾರ ಸೌಲಭ್ಯವನ್ನು ಪಡೆಯುಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ನಂ.08194-235284 ನ್ನು ಸಂಪರ್ಕಿಸಲು ಕೋರಿದೆ.

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ

ಚಿತ್ರದುರ್ಗ,ಡಿ.27- ; ಚಿತ್ರದುರ್ಗದ ಶ್ರೀ ವಾಸವಿ ಪ್ರೌಢಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಡಿಸೆಂಬರ್ 31 ರಂದು ಬೆ.10-30 ಕ್ಕೆ ಜಿಲ್ಲಾ ಮಟ್ಟದ ಯುವಸಂಸತ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಗೆ ಚಿತ್ರದುರ್ಗ ನಗರದ ಪ್ರೌಢಶಾಲಾ ಮುಖ್ಯಶಿಕ್ಷಕರು ಪ್ರತಿ ಶಾಲೆಯಿಂದ ಐದು ವಿದ್ಯಾರ್ಥಿಗಳನ್ನು ಕಳುಹಿಸಿಕೊಟ್ಟು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಚಿತ್ರದುರ್ಗ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಕೋರಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಉಡುಪಿ, ಡಿಸೆಂಬರ್ 27 (ಕರ್ನಾಟಕ ವಾರ್ತೆ):- ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಡಿಸೆಂಬರ್ 28 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಬೆಳಗ್ಗೆ 9 ಗಂಟೆಗೆ ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ವಿಕಾಸ ಕಾಮಗಾರಿಗಳ ಗುದ್ದಲಿ ಪೂಜೆ, 10.30 ಗಂಟೆಗೆ ಮಣಿಪಾಲ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ , ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರು ಕುಂದಾಪುರ ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂರೂರು ಕೊರಗ ಕಾಲನಿಯಲ್ಲಿ ಗ್ರಾಮ ವಾಸ್ತವ್ಯ ಮಾಡುವ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ, 11.30 ಗಂಟೆಗೆ ಬ್ರಹ್ಮಾವರ ಹೋಲಿ ಫ್ಯಾಮಿಲಿ ಚರ್ಚ್ ಇದರ ಹೊಸ ಕಟ್ಟಡದ ಉದ್ಘಾಟನಾ ಸಮಾರಂಭ, 12.30 ಗಂಟೆಗೆ ಬೈಕಾಡಿ ಯುವಕ ಮಂಡಲ ವಠಾರದಲ್ಲಿ ಹೊಸ ಅಂಗನವಾಡಿ ಕಟ್ಟಡದ ಗುದ್ದಲಿ ಪೂಜೆ ಕಾರ್ಯಕ್ರಮ, ಮಧ್ಯಾಹ್ನ 3 ಗಂಟೆಗೆ ಸಂತೆಕಟ್ಟೆ ಕಳ್ತೂರು ಗಣೇಶ ಕಲಾ ಮಂಟಪದಲ್ಲಿ ಜನಸಂಪರ್ಕ ಸಭೆ, 5.30 ಗಂಟೆಗೆ ಬ್ರಹ್ಮಾವರ ಹಳೇ ಮೀನು ಮಾರುಕಟ್ಟೆ ಬಳಿ ರಿಕ್ಷಾ ಸ್ಟ್ಯಾಂಡ್ ಉದ್ಘಾಟನೆ, 6 ಗಂಟೆಗೆ ಬ್ರಹ್ಮಾವರ ಬಂಟರಭವನದ ಎದುರು ಹಂದಾಡಿ ಸುಬ್ಬಣ್ಣ ಭಟ್ಟ ವೇದಿಕೆಯಲ್ಲಿ ಆಯೋಜಿಸಿರುವ ಕಿಶೋರ ಸಂಭ್ರಮ-2016 ರ ಸಮಾರೋಪ ಸಮಾರಂಭ, 7 ಗಂಟೆಗೆ ಉಪ್ಪೂರು ತೆಂಕಬೆಟ್ಟು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಉಡುಪಿಯಲ್ಲಿ ವಾಸ್ತವ್ಯ.

ಮುಖ್ಯಮಂತ್ರಿಗಳ ಪರಿಹಾರ ನಿಧಿ ಮಂಜೂರು

ಉಡುಪಿ, ಡಿಸೆಂಬರ್ 27 (ಕರ್ನಾಟಕ ವಾರ್ತೆ):- ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಹಮ್ಮದ್ ಸನವುಲ್ಲಾ ಬಿನ್ ಶಾಬಾ ಸಾಹೇಬ್, ಹಾರಾಡಿ ಗ್ರಾಮ, ಹೊನ್ನಾಳ ಇವರ ವೈದ್ಯಕೀಯ ಚಿಕಿತ್ಸೆಗೆ ಮಂಜೂರಾದ ಪರಿಹಾರ ರೂ.1,21,000/- ಚೆಕ್ಕನ್ನು ರಾಜ್ಯ ಮೀನುಗಾರಿಕೆ, ಯುವಸಬಲೀಕರಣ, ಕ್ರೀಡಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಮೋದ್ ಮಧ್ವರಾಜ್‍ರವರು ಫಲಾನುಭವಿಗೆ ತಮ್ಮ ಕಚೇರಿಯಲ್ಲಿ ಹಸ್ತಾಂತರಿಸಿದರು.