Government of Karnataka

Department of Information

Friday 01/04/2016

ಜಿಲ್ಲಾ ವಾರ್ತೆ 02-02-2016

Date : ಮಂಗಳವಾರ, ಫೆಬ್ರವರಿ 2nd, 2016

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಶಿಕ್ಷಾರ್ಹ ಅಪರಾಧ

ಬೆಂಗಳೂರು, ಫೆ, 2: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ನಡೆಯುವ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ನಗರ/ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದ ವಾಸಿಗರು ಮತ್ತು ಮತದಾರರಿಗೆ ಹಣ, ಮದ್ಯ ಇತ್ಯಾದಿ ವಸ್ತುಗಳ ಆಮಿಷ ನೀಡುವುದು ಮತ್ತು ಹಂಚುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಬ್ರಷ್ಠಾಚಾರ ಪ್ರಕರಣವನ್ನು ದಾಖಲಿಸಲಾಗುವುದೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶ್ರೀ ವಿ.ಶಂಕರ್ ಅವರು ತಿಳಿಸಿದ್ದಾರೆ.

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಸಾರ್ವಜನಿಕರ ಗಮನಕ್ಕೆ ಬಂದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಕಛೇರಿಗಳಲ್ಲಿ ತೆರೆಯಲಾಗಿರುವ ನಿಯಂತ್ರಣ ಕೊಠಡಿಯಲ್ಲಿ ದೂರು ದಾಖಲಿಸಿ ಹಾಗೂ ನೀತಿ ಸಂಹಿತೆ ಉಲ್ಲಂಘಿಸಿದವರ ವಿರುದ್ಧ ಭಾರತೀಯ ದಂಡ ಸಂಹಿತೆ ಪ್ರಕರಣದಡಿ ಶಿಕ್ಷಾರ್ಹ ಅಪರಾಧವಾಗಿದ್ದು, 5 ವರ್ಷಗಳ ಅವಧಿವರೆಗೆ ಯಾವುದೇ ಸ್ಥಳೀಯ ಪ್ರಾಧಿಕಾರದ ಸದಸ್ಯತ್ವಕ್ಕೆ ಅನರ್ಹಗೊಳ್ಳುತ್ತಾರೆ ಎಂದು ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 080-22211106, 22240614 (ಜಿಲ್ಲಾಧಿಕಾರಿಗಳ ಕಛೇರಿ), 22232050 (ಬೆಂಗಳೂರು ಉತ್ತರ), 38560696, 28560763 (ಬೆಂಗಳೂರು ಉತ್ತರ (ಅಪರ), 22223152 (ಬೆಂಗಳೂರು ದಕ್ಷಿಣ), 9535113676 (ಆನೇಕಲ್) 9481633873, 9480852007, 9980538272 (ಜಿಲ್ಲಾ ಪಂಚಾಯಿತಿ ಕಛೇರಿ)