Government of Karnataka

Department of Information

Saturday 14/11/2015

ಜಿಲ್ಲಾ ವಾರ್ತೆ 13-11-2015

Date : ಶುಕ್ರವಾರ, ನವೆಂಬರ 13th, 2015

ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ನ, 13: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಉತ್ತರ ತಾಲ್ಲೂಕು ಸಮಗ್ರ ಶಿಶು ಅಭಿವೃದ್ಧಿ ಯೋಜನೆಗೆ ಸುಮಂಗಲಿ ಸೇವಾಶ್ರಮದಿಂದ ಹೆಚ್ಚುವರಿಯಾಗಿ ಸೇರಿರುವ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಗೌರವ ಧನದ ಆಧಾರದ ಮೇಲೆ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕಾರ್ಯಕರ್ತೆಯರ ಹುದ್ದೆಗೆ ಎಸ್.ಎಸ್.ಎಲ್.ಸಿ. ಉತ್ತೀರ್ಣ ಹಾಗೂ ಸಹಾಯಕಿಯರ ಹುದ್ದೆಗೆ 4ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಅರ್ಜಿಗಳನ್ನು ಡಿಸೆಂಬರ್ 3 ರವರೆಗೆ ಬೆಳಿಗ್ಗೆ 10.00 ರಿಂದ ಸಂಜೆ 5.00 ರವರೆಗೆ ಪಡೆದು ಡಿಸೆಂಬರ್‍ರೊಳಗೆ ಸಂಜೆ 5.00 ಗಂಟೆಯೊಳಗೆ ಸಲ್ಲಿಸಬೇಕು.

ಅರ್ಜಿ ಹಾಗೂ ಹೆಚ್ಚಿನ ವಿವರಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಸಮಗ್ರ ಶಿಶು ಅಭಿವೃದ್ಧಿ ಸೇವಾ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, # 2023, ಹೆಚ್.ಐ.ಜಿ. 3ನೇ ಹಂತ, ಯಲಹಂಕ ಉಪನಗರ ಪೊಲೀಸ್ ಠಾಣೆಯ ಹತ್ತಿರ, ಯಲಹಂಕ ಉಪನಗರ, ಬೆಂಗಳೂರು 64 ಅಥವಾ ದೂರವಾಣಿ ಸಂಖ್ಯೆ: 080-28462513 ನ್ನು ಸಂಪರ್ಕಿಸಬಹುದು.