Government of Karnataka

Department of Information

Friday 01/04/2016

ಜಿಲ್ಲಾ ವಾರ್ತೆ 28-01-2016

Date : ಗುರುವಾರ, ಜನವರಿ 28th, 2016

ಪ್ರತಿಭಾ ವೇತನಕ್ಕಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು:ಜ, 28: 2015ನೇ ಶೈಕ್ಷಣಿಕ ವರ್ಷದಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿ ಶೇಕಡಾ 70ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ – 1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರತಿಭಾ ವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ 8, 2016 ಕೊನೆಯ ದಿನಾಂಕವಾಗಿರುತ್ತದೆ.  ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‍ಸೈಟ್ www.backwardclasses.kar.nic.in   ಸಂಪರ್ಕಿಸಬಹುದಾಗಿದ್ದು, ವಿದ್ಯಾರ್ಥಿಗಳನ್ನು ಮೆರಿಟ್ ಹಾಗೂ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 9480818013, 9480818010, 080-444554444.