Government of Karnataka

Department of Information

Monday 02/11/2015

District News 03-09-2015

Date : Thursday, September 3rd, 2015

ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಆಧಾರ್ ಕಾರ್ಡ್ ನೋಂದಣಿ

ಬೆಂಗಳೂರು: ಸೆ, 3: ಬೆಂಗಳೂರು ನಗರ ಜಿಲ್ಲೆಯ 27 ನಾಡ ಕಛೇರಿ ಹಾಗೂ 50 ಬೆಂಗಳೂರು ಒನ್ ಕೇಂದ್ರಗಳು ಮತ್ತು ಅಟಲ್ ಜೀ ಜನಸ್ನೇಹಿ ಕೇಂದ್ರ (ನಾಡ ಕಛೇರಿ) ಕಛೇರಿಗೆ ಸಾರ್ವಜನಿಕರು ಭೇಟಿ ನೀಡಿ ಈಗಾಗಲೇ ಪಡೆದಿರುವ ಕಾರ್ಡುಗಳಲ್ಲಿ ತಿದ್ದುಪಡಿ ಹಾಗೂ ಹೊಸ ಆಧಾರ್ ಕಾರ್ಡುಗಳನ್ನು ಉಚಿತವಾಗಿ ನೊಂದಾಯಿಸಿಕೊಳ್ಳಬೇಕೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀ ವಿ.ಶಂಕರ್ ಅವರು ತಿಳಿಸಿದ್ದಾರೆ.

ಹೆಚ್ಚುವರಿ ಜನಸಂಖ್ಯೆವುಳ್ಳ ನಗರ ಪ್ರದೇಶಗಳಲ್ಲಿ ಆಧಾರ್ ಕಾರ್ಡ್ ನೋಂದಣಿಗಾಗಿ ಹೆಚ್ಚುವರಿ ಮೊಬೈಲ್ ಅಳವಡಿಸಲಾಗಿದೆ. ಅವುಗಳು ಜಿಲ್ಲಾಧಿಕಾರಿಯವರ ಕಛೇರಿ, ಬೆಂಗಳೂರು ನಗರ ಜಿಲ್ಲೆ, ಬಹುಮಹಡಿಗಳ ಕಟ್ಟಡ, ಗೇಟ್ ನಂ.2, ಬೆಂಗಳೂರು. ನೂರಾನಿ ಮಸೀದಿ, ಯಾರಬ್ ನಗರ, ಬನಶಂಕರಿ, ಬೆಂಗಳೂರು, ಗಿರಿನಗರದ ನಾಗರಿಕ ಹಿತರಕ್ಷಣಾ ಸಮಿತಿ, ಗಿರಿನಗರ, ಬೆಂಗಳೂರು, ಪೈಪ್ ಲೈನ್ ರೋಡ್, ಟಿ.ದಾಸರಹಳ್ಳಿ, ಬೆಂಗಳೂರು. ರೇವಾ ಯೂನಿರ್ವಸಿಟಿ, ಯಲಹಂಕ, ಬೆಂಗಳೂರು ಇಲ್ಲಿ ಸಾರ್ವಜನಿಕರು ಹಾಗೂ ಗ್ರಾಮಸ್ಥರು ನೋಂದಣಿ ಕಾರ್ಯದ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಆಯೋಗದ ಸದಸ್ಯರ ಭೇಟಿ

ಬೆಂಗಳೂರು: ಸೆ, 3: ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಸದಸ್ಯರಾದ ಶ್ರೀಮತಿ ಪಿ.ಎಂ.ಕಮಲಮ್ಮ ಅವರು ಸೆಪ್ಟೆಂಬರ್ – 1 ರಿಂದ ಸೆಪ್ಟೆಂಬರ್ 6 ವರೆಗೆ ಬೆಂಗಳೂರು ನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಕುಂದುಕೊರತೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಿ, ಕ್ರಮ ಕೈಗೊಳ್ಳಲು ಆಯೋಗದ ಸದಸ್ಯರನ್ನು ಕುಮಾರಕೃಪ ಅತಿಥಿಗೃಹದ ಕೊಠಡಿ ಸಂಖ್ಯೆ 2 ರಲ್ಲಿ ನೇರವಾಗಿ ಸಂಪರ್ಕಿಸಲು ತಿಳಿಸಿದ್ದಾರೆ. ಮೊಬೈಲ್: 9560043703 ದೂರವಾಣಿ 080-2557767, 0112537.

ಬಾಲ ನ್ಯಾಯ ಕಾಯಿದೆ ಉಲ್ಲಂಘನೆಗೆ ಕ್ರಮ

ಬೆಂಗಳೂರು: ಸೆ,3: ಮಕ್ಕಳ ಪಾಲನೆ ಮತ್ತು ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರೇತರ ಸ್ವಯಂಸೇವಾ ಸಂಸ್ಥೆಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀ ವಿ.ಶಂಕರ್ ಅವರು ತಿಳಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 72 ಸಂಸ್ಥೆಗಳು ನೊಂದಣಿಯಾಗಿದ್ದು, ಈ ಸಂಸ್ಥೆಗಳ ನೋಂದಣಿ ಅವಧಿ ಮುಗಿಯುತ್ತಿರುವುದರಿಂದ ಈ ಸಂಸ್ಥೆಗಳು ಕೂಡ ನವೀಕರಿಸಿಕೊಳ್ಳತಕ್ಕದ್ದು. ತಪ್ಪಿದ್ದಲ್ಲಿ ಸಂಸ್ಥೆಯು ಯಾವುದೇ ಕಾಯಿದೆಯಲ್ಲಿ ನೋಂದಣಿಯಾಗಿದ್ದರೂ ಸಹ ಹಿಂಪಡೆಯಲು ಅಥವಾ ರದ್ದುಪಡಿಸಲು ಕ್ರಮ ಜರುಗಿಸಲಾಗುವುದು. ಅಲ್ಲದೆ ಈ ಸಂಸ್ಥೆಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಹಾಗೂ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದ್ದಲ್ಲಿ ಸಂಸ್ಥೆಯ ಮುಖ್ಯಸ್ಥರನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.

ಸಂಸ್ಥೆಗಳು ನಿಗದಿತ ಅರ್ಜಿ ನಮೂನೆಯನ್ನು ಕಛೇರಿಯ ವೆಬ್‍ಸೈಟ್ www.dcpublr.org ಯಿಂದ ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿದ ನಮೂನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕಿರಣ, ಡಾ: ಎಂ.ಹೆಚ್.ಮರೀಗೌಡ ರಸ್ತೆ, ಕಿದ್ವಾಯಿ ಆಸ್ಪತ್ರೆ ಪಕ್ಕ, ಬೆಂಗಳೂರು – 29 ಇಲ್ಲಿಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ: ವೆಬ್‍ಸೈಟ್ : www.dcpublr.org ಇ.ಮೇಲ್:[email protected] ದೂರವಾಣಿ: 080-26560273.

ಗೃಹ ಸಚಿವರ ಪ್ರವಾಸ ಕಾರ್ಯಕ್ರಮ ಮುಂದೂಡಿಕೆ

ಯಾದಗಿರಿ:ಸೆಪ್ಟೆಂಬರ್:3: (ಕರ್ನಾಟಕ ವಾರ್ತೆ): ರಾಜ್ಯದ ಗೃಹ ಸಚಿವರಾದ ಶ್ರೀ. ಕೆ.ಜೆ. ಜಾರ್ಜ್ ಅವರು ಇದೇ ಸೆಪ್ಟೆಂಬರ್ 5 ರಂದು ಯಾದಗಿರಿ ಜಿಲ್ಲೆಗೆ ಭೇಟಿ ನೀಡಲಿರುವ ಪ್ರವಾಸ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಗೃಹ ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿಗಳ ನೇರ ಸಂಭಾಷಣೆ

ಯಾದಗಿರಿ: ಸೆಪ್ಟೆಂಬರ್:3: (ಕರ್ನಾಟಕ ವಾರ್ತೆ): ಇದೇ ಸೆಪ್ಟೆಂಬರ್ 4 ರಂದು ಬೆಳಿಗ್ಗೆ 10 ರಿಂದ 11-45 ಗಂಟೆಯವರೆಗೆ ಭಾರತದ ಮಾನ್ಯ ಪ್ರಧಾನಮಂತ್ರಿಯವರು ರಾಷ್ಟ್ರಾದ್ಯಂತ ಶಾಲಾ-ಕಾಲೇಜುಗಳ ಮಕ್ಕಳ ಜೊತೆ ನೇರ ಸಂಭಾಷಣೆಯನ್ನು ನಡೆಸಲಿದ್ದಾರೆ.

ಇದಕ್ಕಾಗಿ ಶಾಲಾ-ಕಾಲೇಜುಗಳಲ್ಲಿ, ಶಿಕ್ಷಣ ಸಂಸ್ಥೆ ಹಾಗೂ ಕಚೇರಿಗಳಲ್ಲಿ ಕಾರ್ಯಕ್ರಮವನ್ನು ವೀಕ್ಷಿಸಲು ಹಾಗೂ ಆಲಿಸಲು ಸೂಕ್ತ ವ್ಯವಸ್ಥೆಯನ್ನು ಮಾಡಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಲಾಗಿದೆ ಎಂದು ಯಾದಗಿರಿ ಸರ್ವಶಿಕ್ಷಣ ಅಭಿಯಾನದ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಹಾಗೂ ಉಪನಿರ್ದೇಶಕರು (ಆಡಳಿತ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳೆಯರ ಮೇಲೆ ದೌರ್ಜನ್ಯ ತಡೆಯಲು 1098 ಕ್ಕೆ ಕರೆ ಮಾಡಿ

ಚಿತ್ರದುರ್ಗ,ಸೆಪ್ಟೆಂ.3-: ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ, ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯ ತಡೆಯಲು ಮಹಿಳಾ ಸಹಾಯವಾಣಿ ಕೇಂದ್ರ ನಂ.1098 ಕ್ಕೆ ಉಚಿತ ಕರೆ ಮಾಡುವಂತೆ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಶ್ರೀಮತಿ ಮಂಜುಶ್ರೀ ತಿಳಿಸಿದ್ದಾರೆ.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಹಿಳೆಯರು ಅತ್ಯಾಚಾರಕ್ಕೆ, ದೌರ್ಜನ್ಯಕ್ಕೊಳಗಾದರೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿರುವ ಮಹಿಳಾ ತುರ್ತು ಚಿಕಿತ್ಸಾ ಕೇಂದ್ರದ ಉಚಿತ ದೂರವಾಣಿ ನಂ.181 ಕ್ಕೆ ಕರೆ ಮಾಡುವಂತೆ ಹಾಗೂ ದಿನದ 24 ಗಂಟೆಯೂ ಪೊಲೀಸ್ ಸಿಬ್ಬಂದಿ ರಕ್ಷಣೆಗೆ ಇರುವಂತೆ ವ್ಯವಸ್ಥೆ ಮಾಡಲು ಅವರು ತಿಳಿಸಿದರು.

ಜಿಲ್ಲೆಯಲ್ಲಿರುವ ಎಲ್ಲಾ ಶಾಲೆಗಳಲ್ಲಿ, ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಕೇಂದ್ರಗಳ ದೂರವಾಣಿ ಸಂಖ್ಯೆಯನ್ನು ಸೂಚನಾ ಫಲಕದಲ್ಲಿ ಹಾಕುವಂತೆ ಹಾಗೂ ಶಾಲೆಗಳಲ್ಲಿ ಶಿಕ್ಷಕರಿಂದ, ವಸತಿನಿಲಯಗಳಲ್ಲಿ ಮೇಲ್ವಿಚಾರಕರಿಂದ, ಮನೆಗಳಲ್ಲಿ ಹತ್ತಿರದ ಸಂಬಂಧಿಗಳಿಂದಾಗುವ ಲೈಂಗಿಕ ಕಿರುಕುಳದ ಬಗ್ಗೆ, 6 ನೇ ತರಗತಿಯಿಂದ 10 ನೇ ತರಗತಿಗಳಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿನಿಯರಿಗೆ ಜಾಗೃತಿ ಮೂಡಿಸುವುದರ ಜೊತೆಗೆ ಮಹಿಳಾ ಸಹಾಯವಾಣಿಯ ಕೇಂದ್ರಗಳ ದೂರವಾಣಿಗೆ ಸಂಪರ್ಕಿಸಲು ತಿಳಿಸಲು ಎಲ್ಲಾ ಅಂಗನವಾಡಿ ಕೇಂದ್ರಗಳ ಸಿ.ಡಿ.ಪಿ.ಒ, ಬಿ.ಇ.ಒ ಮತ್ತು ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸೂಕ್ತ ಕಾರ್ಯಕ್ರಮ ಹಾಕಿಕೊಂಡು ಪ್ರಚಾರಗೊಳಿಸಲು ಅವರು ಸೂಚನೆ ನೀಡಿದರು.

ಜಿಲ್ಲಾಸ್ಪತ್ರೆಯಲ್ಲಿರುವ ಮಹಿಳಾ ತುರ್ತು ಚಿಕಿತ್ಸಾ ಕೇಂದ್ರದಲ್ಲಿ ಪ್ರತ್ಯೇಕ ಕೊಠಡಿಯನ್ನು ಸಿದ್ದಪಡಿಸಿ ಆಪ್ತ ಸಮಾಲೋಚನಾ ಕೇಂದ್ರವನ್ನು ಆದಷ್ಟು ಬೇಗ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಬಾಲ್ಯವಿವಾಹ ತಡೆಯಲು ಎಲ್ಲಾ ಇಲಾಖೆಗಳ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಪಿ.ಡಿ.ಒ, ಗ್ರಾಮಲೆಕ್ಕಾಧಿಕಾರಿಗಳು ಅಂತಹ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಸ್ಪಂದಿಸಿ ಬಾಲ್ಯವಿವಾಹ ತಡೆಯಲು ಕ್ರಮ ಜರುಗಿಸಬೇಕೆಂದು ಸಲಹೆ ಮಾಡಿದರು. ಜಿಲ್ಲೆಯಲ್ಲಿ ಕಳೆದ ವರ್ಷ 28 ಬಾಲ್ಯವಿವಾಹ ಪ್ರಕರಣಗಳನ್ನು ತಡೆಗಟ್ಟಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕರು ಸಭೆಗೆ ತಿಳಿಸಿದರು.

18 ವರ್ಷ ಆದ ತಕ್ಷಣ ಹೆಣ್ಣು ಮಕ್ಕಳ ಮದುವೆ ಮಾಡುವುದು ಕಡ್ಡಾಯವಲ್ಲ. ಹೆಣ್ಣುಮಕ್ಕಳು ಮುಂದೆ ಓದುತ್ತೇವೆ ಅಥವಾ ನೌಕರಿಗೆ ಹೋಗುತ್ತೇವೆ ಎಂದು ಅಭಿಲಾಷೆ ಇದ್ದರೆ ಅವರ ಪೋಷಕರು ಮದುವೆಗೆ ಅವರ ಒಪ್ಪಿಗೆ ಬಗ್ಗೆ ಸಮಾಲೋಚನೆ ಮಾಡಿ ಕ್ರಮ ಜರುಗಿಸುವುದು ಸೂಕ್ತ ಎಂಬುದನ್ನು ಪಾಲಕರ ಗಮನಕ್ಕೆ ಅಧಿಕಾರಿಗಳು ತರಬೇಕೆಂದು ಅವರು ಸಲಹೆ ಮಾಡಿದರು.

ಕೌಟುಂಬಿಕ ದೌರ್ಜನ್ಯ ಕುರಿತು 2006 ರಿಂದ 204 ಪ್ರಕರಣಗಳು ದಾಖಲಾಗಿದ್ದು, 54 ಪ್ರಕರಣಗಳು ಇತ್ಯರ್ತಗೊಂಡಿವೆ. 122 ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿ ಬಾಕಿ ಇವೆ ಹಾಗೂ 78 ಪ್ರಕರಣಗಳಿಗೆ ಮಧ್ಯಂತರ ಪರಿಹಾರ ಕ್ರಮ ಜರುಗಿಸಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕ ಪರಮೇಶ್ವರಪ್ಪ ಸಭೆಗೆ ತಿಳಿಸಿದರು.

ಏಡ್ಸ್ ಪೀಡಿತ 129 ಮಹಿಳೆಯರಲ್ಲಿ ನಿರಾಶ್ರಿತರ ಪಟ್ಟಿ ತಯಾರಿಸಿ ರಾಜೀವ್‍ಗಾಂಧಿ ಹೌಸಿಂಗ್ ಸ್ಕೀಂ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಪ್ರಭಾರ ಜಿಲ್ಲಾಧಿಕಾರಿಗಳು ತಿಳಿಸಿದರು.

ಲೈಂಗಿಕ ಕಾರ್ಯಕರ್ತೆಯರಿಗೆ ಸ್ವಉದ್ಯೋಗ ಕೈಗೊಳ್ಳಲು ಮೊದಲು ತರಬೇತಿ ನೀಡಿ ಅವರಿಗೆ ಸಾಲಸೌಲಭ್ಯ ನೀಡಲು ಬ್ಯಾಂಕುಗಳೊಂದಿಗೆ ಚರ್ಚಿಸಲು ಸಲಹೆ ಮಾಡಿದ ಅವರು ಜಿಲ್ಲೆಯಲ್ಲಿ 55 ಅರ್ಜಿಗಳು ಬಂದಿದ್ದು, ಅವರಲ್ಲಿ ತೀರಾ ಶೋಚನೀಯ ಸ್ಥಿತಿಯಲ್ಲಿರುವವರಿಗೆ ತಲಾ 20 ಸಾವಿರ ಧನಸಹಾಯ ನೀಡಲು ಕ್ರಮ ಜರುಗಿಸಲಾಗುತ್ತಿದೆ ಎಂದು ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಕೇಂದ್ರಸ್ಥಾನದಲ್ಲಿ ಕೇಂದ್ರ ಸರ್ಕಾರದ ಅನುದಾನದಲ್ಲಿ ನಡೆಯುತ್ತಿರುವ ಕಾರ್ಯನಿರತ ಮಹಿಳಾ ವಸತಿನಿಲಯದ ದುರಸ್ತಿಗೆ ಧನಸಹಾಯಕ್ಕಾಗಿ ಪ್ರಸ್ತಾವನೆ ಸಲ್ಲಿಸುವಂತೆ ಅವರು ಸೂಚನೆ ನೀಡಿದರು. ಜಿಲ್ಲಾ ಕೇಂದ್ರಸ್ಥಾನದಲ್ಲಿ ನಡೆಯುತ್ತಿರುವ ಮಧ್ಯ ವರ್ಜನ ಕೇಂದ್ರದಲ್ಲಿ ಅಗತ್ಯ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲು ಅವರು ತಿಳಿಸಿದರು.

ಸಭೆಯಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಂಘಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ

ಧಾರವಾಡ (ಕರ್ನಾಟಕ ವಾರ್ತೆ:ಸೆ.03: ಸರ್ಕಾರವು ಅಧಿಸೂಚನೆ ನಂ. HD-150-POSAE ದಿನಾಂಕ: 20-10-2014 ನೇದ್ದರ ಮೇರೆಗೆ ಕರ್ನಾಟಕ ಪೊಲೀಸ್ (ತಿದ್ದುಪಡಿ) ಕಾಯ್ದೆ 2012 ರ ಕಲಂ 20-ಡಿ (7) ರನ್ವಯ ಬೆಳಗಾವಿ ವಿಭಾಗದ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರಗಳನ್ನು ರಚಿಸಿರುತ್ತದೆ. ಈ ಪ್ರಾಧಿಕಾರಕ್ಕೆ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಅಧ್ಯಕ್ಷರಾಗಿದ್ದು, ಆರ್.ಜೆ. ಜೋಶಿ, ನಿವೃತ್ತ ಸೆಲೆಕ್ಷನ್ ಗ್ರೇಡ್ ಕೆ.ಎ.ಎಸ್ ಅಧಿಕಾರಿಯವರು ಸದಸ್ಯರಾಗಿದ್ದು, ವಿಭಾಗದ ಜಿಲ್ಲೆಗಳ ಜಿಲ್ಲಾ ಪೊಲೀಸ್ ಅಧೀಕ್ಷಕರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ. ನಾಗರೀಕ ಸಮಾಜದಿಂದ ಓರ್ವರು ಸರ್ಕಾರದಿಂದ ನಾಮನಿರ್ದೇಶಿತ ಸದಸ್ಯರು ಸಹ ಇರುತ್ತಾರೆ.

ಈ ಪ್ರಾಧಿಕಾರಕ್ಕೆ ತಿದ್ದುಪಡಿ ಪೊಲೀಸ್ ಕಾಯ್ದೆ ಮೇರೆಗೆ ನಾಗರೀಕರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಪೊಲೀಸ್ ಇಲಾಖೆಯ ಡಿವೈಎಸ್‍ಪಿ ಹಾಗೂ ಅವರ ಹುದ್ದೆಗಿಂತ ಕೆಳಗಿನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ಎಸಗುವ ಘೋರವಾದ ದುರ್ವರ್ತನೆ ಹಾಗೂ ಪೊಲೀಸ್ ಅಭಿರಕ್ಷೆಯಲ್ಲಿರುವಾಗ ಸಂಭವಿಸುವ ಲಾಕಪ್ ಸಾವು ಮತ್ತು ಅತ್ಯಾಚಾರ ಅಲ್ಲದೇ ಮಾರಣಾಂತಿಕ ಅಪರಾಧಗಳನ್ನು ಎಸಗಿದಲ್ಲಿ ದೂರುಗಳನ್ನು ಜಿಲ್ಲಾ ಪೊಲೀಸ್ ಪ್ರಾಧಿಕಾರಕ್ಕೆ ಸಲ್ಲಿಸಬಹುದು ಎಂದು ಅಧ್ಯಕ್ಷರು, ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ ಹಾಗೂ ಪ್ರಾದೇಶಿಕ ಆಯುಕ್ತರು, ಬೆಳಗಾವಿ ವಿಭಾಗ, ಬೆಳಗಾವಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ.5ರಂದು ಡಾ|| ರಾಧಾಕೃಷ್ಣನ್ ಅವರ 128ನೇ ಜನ್ಮ ದಿನಾಚರಣೆ

ತುಮಕೂರು, ಸೆ.3: ಜಿಲ್ಲಾ ಪಂಚಾಯತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸೆಪ್ಟೆಂಬರ್ 5ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸರ್ಕಾರಿ ಎಂಪ್ರೆಸ್ ಬಾಲಕಿಯರ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ಅವರ 128ನೇ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ. ಜಯಚಂದ್ರ ಉದ್ಘಾಟಿಸಲಿದ್ದು, ಶಾಸಕ ಡಾ|| ಎಸ್. ರಫೀಕ್ ಅಹಮದ್ ಅಧ್ಯಕ್ಷತೆವಹಿಸಲಿದ್ದಾರೆ. ಜಿ.ಪಂ. ಅಧ್ಯಕ್ಷ ವೈ.ಹೆಚ್. ಹುಚ್ಚಯ್ಯ, ಮೇಯರ್ ಲಲಿತಾ ರವೀಶ್, ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರು ಜಿಲ್ಲಾ ಪ್ರಶಸ್ತಿ ಪುರಸ್ಕøತರಿಗೆ ಸನ್ಮಾನಿಸಲಿದ್ದಾರೆ.

ವಿವಿಧ ಶಾಸಕರು, ವಿಧಾನ ಪರಿಷತ್ ಸದಸ್ಯರು, ಶಿಕ್ಷಕರ ಸಂಘದ ಪದಾಧಿಕಾರಿಗಳು, ಅಧಿಕಾರಿಗಳು, ಮತ್ತಿತರರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

ವಿವಿಧ ಜಾತಿಯ ಕಸಿ / ಸಸಿ ಗಿಡಗಳು ಲಭ್ಯ

ತುಮಕೂರು ಸೆ.3: ಜಿಲ್ಲೆಯ ವಿವಿಧ ತೋಟಗಾರಿಕಾ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ವಿವಿಧ ಜಾತಿಯ ಕಸಿ / ಸಸಿ ಗಿಡಗಳು ಇಲಾಖಾ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ರೈತರು ಇದರ ಪ್ರಯೋಜನ ಪಡೆಯಬೇಕು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ತೋಟಗಾರಿಕೆ ಕ್ಷೇತ್ರಗಳಲ್ಲಿ ಲಭ್ಯವಿರು ಸಸಿ ತಳಿ ಹಾಗೂ ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬಹುದಾದ ಮೊಬೈಲ್ ಸಂಖ್ಯೆ ವಿವರಗಳು ಇಂತಿದೆ.

ಕೊರಟಗೆರೆ ತಾಲ್ಲೂಕು ದೊಡ್ಡಸಾಗ್ಗೆರೆ ತೋಟಗಾರಿಕೆ ಕ್ಷೇತ್ರದಲ್ಲಿ ಮಾವಿನ ಸಸಿ ಮಲ್ಲಿಕಾ ಹಾಗೂ ಕೇಸರ ತಳಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗೆ ಮೊ.ಸಂ. 9035941119 / 9964749681 ಅನ್ನು ಸಂಪರ್ಕಿಸಬಹುದು.

ತುಮಕೂರು ತಾಲ್ಲೂಕಿನ ನಿಡವಳಲು ತೋಟಗಾರಿಕೆ ಕ್ಷೇತ್ರದಲ್ಲಿ ಮಾವಿನ ಸಸಿಯ ಬಾದಾಮಿ, ರಸಪುರಿ, ಬೇನಿಷಾನ್, ಸೇಂಧೂರ ತಳಿ ಹಾಗೂ ನಿಂಬೆ ಸಸಿಯ ಸ್ಥಳೀಯ ತಳಿಯು ಲಭ್ಯವಿದ್ದು, ಮೊ.ಸಂ.9845854422 / 9964749681 ಅನ್ನು ಸಂಪರ್ಕಿಸಬಹುದು.

ಕುಣಿಗಲ್ ತಾಲ್ಲೂಕಿನ ಮಾರ್ಕೋನಹಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಮಾವಿನ ಸಸಿಯ ಸೇಂಧೂರ, ರಸಪುರಿ, ಮಲ್ಲಿಕಾ ತಳಿ ಲಭ್ಯವಿದೆ (ಮೊ.ಸಂ.9980073909 / 9448660766) ಮಧುಗಿರಿ ತಾಲ್ಲೂಕಿನ ಬಡವನಹಳ್ಳಿ ತೋಟಗಾರಿಕೆ ಕ್ಷೇತ್ರ: ಸಪೋಟ ಸಸಿಯ ಕ್ರಿಕೆಟ್‍ಬಾಲ್ ತಳಿ ಹಾಗೂ ಹುಣಸೆ ಸಸಿಯ ಸ್ಥಳೀಯ ತಳಿಯು ಲಭ್ಯವಿದೆ (ಮೊ.ಸಂ.8710009177, 9480067787) ತುರುವೇಕೆರೆ ತಾಲ್ಲೂಕು ಮಾದಿಹಳ್ಳಿ ತೋಟಗಾರಿಕೆ ಕ್ಷೇತ್ರ : ಸಪೋಟ ಸಸಿ ಕ್ರಿಕೆಟ್‍ಬಾಲ್ ತಳಿ ಹಾಗೂ ಮಾವಿನ ಸಸಿಯ ಬಾದಾಮಿ, ಮಲ್ಲಿಕಾ ತಳಿಗಳು ಲಭ್ಯವಿದೆ (ಮೊ.ಸಂ.8971167552 / 9886221502)
ತಿಪಟೂರು ತಾಲ್ಲೂಕಿನ ಗೊರಗೊಂಡನಹಳ್ಳಿ, ತೋಟಗಾರಿಕೆ ಕ್ಷೇತ್ರ : ಸಪೋಟ ಸಸಿ ಕ್ರಿಕೆಟ್‍ಬಾಲ್ ತಳಿ ಹಾಗೂ ನಿಂಬೆ ಸಸಿ ಸ್ಥಳೀಯ ತಳಿ ಲಭ್ಯವಿದೆ (ಮೊ.ಸಂ.8970397581, 9835781963).

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜೆ.ಸಿ.ಪುರ ತೋಟಗಾರಿಕೆ ಕ್ಷೇತ್ರದಲ್ಲಿ ಸಪೋಟ ಸಸಿ ಕ್ರಿಕೆಟ್‍ಬಾಲ್ ಮತ್ತು ಕಾಲಿಪಟ್ಟಿ ತಳಿ ಹಾಗೂ ಮಾವಿನ ಸಸಿ ಮಲ್ಲಿಕಾ ತಳಿ ಲಭ್ಯವಿದೆ (ಮೊ.ಸಂ.8861836832 / 9945792725).

ಗುಬ್ಬಿ ತಾಲ್ಲೂಕು ಹೇರೂರು ತೋಟಗಾರಿಕೆ ಕ್ಷೇತ್ರ : ಸಪೋಟ ಸಸಿ ಕ್ರಿಕೆಟ್‍ಬಾಲ್ ಮತ್ತು ಕಾಲಿಪಟ್ಟಿ ತಳಿ ಹಾಗೂ ನಿಂಬೆ ಸಸಿಯ ಸ್ಥಳೀಯ ತಳಿಗಳು ಲಭ್ಯವಿದೆ (ಮೊ.ಸಂ.9980035414/ 9844667639) ಇದೇ ತಾಲ್ಲೂಕಿನ ಕೆ.ಮತ್ತಿಘಟ್ಟ ತೋಟಗಾರಿಕೆ ಕ್ಷೇತ್ರ : ಸಪೋಟ ಸಸಿ ಕ್ರಿಕೆಟ್‍ಬಾಲ್ ತಳಿಯು ಲಭ್ಯವಿದೆ (ಮೊ.ಸಂ.8197088527 / 9844667639).

ಪಾವಗಡ ತಾಲ್ಲೂಕು ರಾಜವಂತಿ ತೋಟಗಾರಿಕೆ ಕ್ಷೇತ್ರದಲ್ಲಿ ಸಪೋಟ ಸಸಿ ಕ್ರಿಕೆಟ್‍ಬಾಲ್ ಹಾಗೂ ಕಾಲಿಪಟ್ಟಿ ತಳಿ ಲಭ್ಯವಿದ್ದು, ಮೊ.ಸಂ.9482446561 / 7259363162 ಅನ್ನು ಸಂಪರ್ಕಿಸಬಹುದು.

ಬೆಳ್ಳಾರದ ಶ್ರೀ ಧರ್ಮವೀರ ತೋಟಗಾರಿಕೆ ಕ್ಷೇತ್ರದಲ್ಲಿ ನಿಂಬೆ ಸಸಿ ಸ್ಥಳೀಯ ತಳಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9845801715 / 9964749681 ಅನ್ನು ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಕಲಬುರಗಿ,ಸೆ.03.(ಕ.ವಾ)-ಪೌರಾಡಳಿತ, ಸಾರ್ವಜನಿಕ ಉದ್ದಿಮೆ, ಅಲ್ಪಸಂಖ್ಯಾತ ಕಲ್ಯಾಣ, ವಕ್ಫ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಖಮರುಲ್ ಇಸ್ಲಾಂ ಅವರು ಬೆಂಗಳೂರಿನಿಂದ ಉದ್ಯಾನ ಎಕ್ಸ್‍ಪ್ರೆಸ್ ರೈಲಿನ ಮೂಲಕ ಕಲಬುರಗಿ ನಗರಕ್ಕೆ ಸೆಪ್ಟೆಂಬರ್ 04 ರಂದು ಬೆಳಿಗ್ಗೆ 9 ಗಂಟೆಗೆ ಆಗಮಿಸುವರು.

ಅಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮುಂದುವರಿದ ಮುಂದುವರಿದ ಜಿಲ್ಲಾ ಮಟ್ಟದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(ಕೆ.ಡಿ.ಪಿ.) ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ ಸಾರ್ವಜನಿಕರ ಭೇಟಿ ಹಾಗೂ ಕುಂದುಕೊರತೆಗಳ ವಿಚಾರಣೆ ಕಾರ್ಯಕ್ರಮ ನಡೆಸಿ ವಾಸ್ತವ್ಯ ಮಾಡುವರು.

ಸೆಪ್ಟೆಂಬರ್ 5ರಂದು ಬೆಳಿಗ್ಗೆ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2 ಗಂಟೆಗೆ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಹಾಗೂ ಸಂಜೆ 4 ಗಂಟೆಯಿಂದ ಸಾರ್ವಜನಿಕರ ಭೇಟಿ ಹಾಗೂ ಕುಂದುಕೊರತೆಗಳ ವಿಚಾರಣೆ ಕಾರ್ಯಕ್ರಮ ನಡೆಸಿ ವಾಸ್ತವ್ಯ ಮಾಡುವರು. ಸೆಪ್ಟೆಂಬರ್ 06 ರಂದು ಮಧ್ಯಾಹ್ನ ಕಲಬುರಗಿಯಿಂದ ರಸ್ತೆ ಮೂಲಕ ಹೈದ್ರಾಬಾದಿಗೆ ಪ್ರಯಾಣ ಮಾಡುವರು.

ಆಸ್ತಿ ತೆರಿಗೆ ಪರಿಷ್ಕರಣೆ

ಉಡುಪಿ, ಸೆಪ್ಟೆಂಬರ್ 03 (ಕರ್ನಾಟಕ ವಾರ್ತೆ):- ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಟ್ಟಡಗಳ ಮತ್ತು ಕೃಷಿಯೇತರ ನಿವೇಶನಗಳ ಮಾಲಿಕರು/ ಅನುಭೋಗದಾರರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಸ್ವಯಂಘೋಷಿತ ಆಸ್ತಿ ತೆರಿಗೆ ಪದ್ಧತಿ ಕರ್ನಾಟಕ ರಾಜ್ಯದಾದ್ಯಂತ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಏಕರೂಪ ಆನ್‍ಲೈನ್ ವ್ಯವಸ್ಥೆ ಜಾರಿಯಲ್ಲಿರುತ್ತದೆ. ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರತಿ ಮೂರು ವರ್ಷಕೊಮ್ಮೆ ತೆರಿಗೆ ದರವನ್ನು ಪರಿಷ್ಕರಿಸಬೇಕಾಗಿದ್ದು, ಅದರಂತೆ 2013-14ನೇ ಸಾಲಿನ ವರೆಗೆ ಪರಿಷ್ಕರಿಸಲಾಗಿತ್ತು. 2014-15ನೇ ಸಾಲಿನಿಂದ ಪರಿಷ್ಕರಣೆ ಮಾಡಿರುವುದಿಲ್ಲ. ರಾಜ್ಯಾದ್ಯಂತ ಏಕರೂಪ ತೆರಿಗೆ ವ್ಯವಸ್ಥೆ ಇರುವುದರಿಂದ ಉಡುಪಿ ನಗರಸಭೆಯು ಕೂಡ ಈ ವ್ಯಾಪ್ತಿಗೆ ಬರುವುದರಿಂದ ತೆರಿಗೆ ಪರಿಷ್ಕರಣೆ ಅನಿವಾರ್ಯವಾಗಿದ್ದು 2014-15ನೇ ಸಾಲಿನಿಂದ ಪೂರ್ವಾನ್ವಯವಾಗುವಂತೆ ತಲಾ ವಾರ್ಷಿಕ ಶೇಕಡಾ 15 ರಂತೆ 2013-14ನೇ ಸಾಲಿನ ತೆರಿಗೆ ಮೇಲೆ ಹೆಚ್ಚಳ ಮಾಡಿ ಪರಿಷ್ಕರಿಸಲಾಗಿರುತ್ತದೆ.

ಅದರಿಂದ ಎಲ್ಲಾ ತೆರಿಗೆದಾರರು ನಗರಸಭೆಯೊಂದಿಗೆ ಸಹಕರಿಸಿ ತಾವು ಪಾವತಿಸಬೇಕಾದ ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ಸಕಾಲದಲ್ಲಿ ಪಾವತಿಸಬೇಕಾಗಿ ಉಡುಪಿ ನಗರಸಭಾ ಪೌರಾಯುಕ್ತರಾದ ಡಿ.ಮಂಜುನಾಥಯ್ಯ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹಿರಿಯಡಕ ಕಾಲೇಜಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಮುಕ್ತ ಸಂವಾದ; ಆತ್ಮಸ್ಥೈರ್ಯದಿಂದ ಸ್ವಯಂರಕ್ಷಣೆ ಸಾಧ್ಯ

ಉಡುಪಿ, ಸೆಪ್ಟೆಂಬರ್ 03 (ಕರ್ನಾಟಕ ವಾರ್ತೆ):- ಹೆಣ್ಣುಮಕ್ಕಳು ತಮ್ಮ ಇತಿಮಿತಿಗಳನ್ನರಿತು ಆತ್ಮಸ್ಥೈರ್ಯ ಬೆಳೆಸಿಕೊಂಡು, ಮೌಲ್ಯಾಧಾರಿತ ಬದುಕನ್ನು ಕಟ್ಟಿಕೊಂಡು, ಸ್ವಾವಲಂಬಿಗಳಾಗಿ, ಸ್ವಯಂ ರಕ್ಷಣೆಗೆ ತಾವೇ ಸಿದ್ಧರಿರಬೇಕೆಂದು ಮಹಾವೀರ ಕಾಲೇಜು, ಮೂಡಬಿದಿರೆಯ ಸಮಾಜಶಾಸ್ತ್ರ ಉಪನ್ಯಾಸಕರಾದ ಸುಜಾತ ಶೆಟ್ಟಿ ಬಿ. ಹೇಳಿದರು.

ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕ ಇಲ್ಲಿ ಆಯೋಜಿಸಿದ ವಿದ್ಯಾರ್ಥಿನಿಯರೊಂದಿಗೆ ಮುಕ್ತ ಸಂವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ನಾವು ಸೌಂದರ್ಯವತಿಯರಾಗುವುದು ನಮ್ಮ ವೇಷ-ಭೂಷಣಗಳಿಂದಲ್ಲ, ಬದಲಾಗಿ ಆಂತರಿಕವಾಗಿರುವ ನಡವಳಿಕೆಗಳಿಂದ ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು. ನಂತರ ವಿದ್ಯಾರ್ಥಿನಿಯರ ಅಹವಾಲುಗಳನ್ನು ಸ್ವೀಕರಿಸಿ ಸಲಹೆ ಸೂಚನೆಗಳನ್ನು ನೀಡುವುದರೊಂದಿಗೆ ಕಾರ್ಯಕ್ರಮ ನಡೆಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾದೇಕಲ್ಲು ವಿಷ್ಣು ಭಟ್ಟ ಇವರು ವಿದ್ಯಾರ್ಥಿನಿಯರು ನಯ, ವಿನಯವನ್ನು ಬೆಳೆಸಿಕೊಳ್ಳಬೇಕೆಂದು ತಿಳಿಸಿದರು. ಮಹಿಳಾ ದೌರ್ಜನ್ಯ ತಡೆ ಹಾಗೂ ಕುಂದು ಕೊರತೆ ಸಮಿತಿಯ ಸಂಚಾಲಕರಾದ ಶ್ರೀಮತಿ ಪ್ರೇಮಾ ಪ್ರಾಸ್ತವಿಕ ನುಡಿಗಳನ್ನಾಡಿ ಬಂದ ಅತಿಥಿಗಳನ್ನು ಸ್ವಾಗತಿಸಿದರು. ಕುಮಾರಿ ನವ್ಯ ನಿರೂಪಣೆ ಗೈದರೆ ಕುಮಾರಿ ಅಕ್ಷತಾ ವಂದನಾರ್ಪಣೆ ಮಾಡಿದರು. ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿಯರೆಲ್ಲರೂ ಸಭಾಸದರಾಗಿದ್ದರು.

ಸೆ.4 ರಂದು ಆರೋಗ್ಯ ಸಚಿವರ ಜಿಲ್ಲಾ ಪ್ರವಾಸ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ ಖಾದರ್ ಅವರು ಸೆಪ್ಟೆಂಬರ್ 4 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮಾನ್ಯ ಸಚಿವರು ಸೆಪ್ಟೆಂಬರ್ 4 ರಂದು ಬೆಳಗ್ಗೆ 10 ಗಂಟೆಗೆ ಸೋಮವಾರಪೇಟೆಯ ಟೆನ್ನಿಸ್ ಕ್ಲಬ್ ಬಳಿ ಟ್ರಾಕ್ ಈವೆಂಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ಸೋಮವಾರಪೇಟೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ವಿರಾಜಪೇಟೆ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.

ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಆಧಾರ್ ಕಾರ್ಡ್ ನೋಂದಣಿ

ಬೆಂಗಳೂರು: ಸೆ, 3: ಬೆಂಗಳೂರು ನಗರ ಜಿಲ್ಲೆಯ 27 ನಾಡ ಕಛೇರಿ ಹಾಗೂ 50 ಬೆಂಗಳೂರು ಒನ್ ಕೇಂದ್ರಗಳು ಮತ್ತು ಅಟಲ್ ಜೀ ಜನಸ್ನೇಹಿ ಕೇಂದ್ರ (ನಾಡ ಕಛೇರಿ) ಕಛೇರಿಗೆ ಸಾರ್ವಜನಿಕರು ಭೇಟಿ ನೀಡಿ ಈಗಾಗಲೇ ಪಡೆದಿರುವ ಕಾರ್ಡುಗಳಲ್ಲಿ ತಿದ್ದುಪಡಿ ಹಾಗೂ ಹೊಸ ಆಧಾರ್ ಕಾರ್ಡುಗಳನ್ನು ಉಚಿತವಾಗಿ ನೊಂದಾಯಿಸಿಕೊಳ್ಳಬೇಕೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀ ವಿ.ಶಂಕರ್ ಅವರು ತಿಳಿಸಿದ್ದಾರೆ.

ಹೆಚ್ಚುವರಿ ಜನಸಂಖ್ಯೆವುಳ್ಳ ನಗರ ಪ್ರದೇಶಗಳಲ್ಲಿ ಆಧಾರ್ ಕಾರ್ಡ್ ನೋಂದಣಿಗಾಗಿ ಹೆಚ್ಚುವರಿ ಮೊಬೈಲ್ ಅಳವಡಿಸಲಾಗಿದೆ. ಅವುಗಳು ಜಿಲ್ಲಾಧಿಕಾರಿಯವರ ಕಛೇರಿ, ಬೆಂಗಳೂರು ನಗರ ಜಿಲ್ಲೆ, ಬಹುಮಹಡಿಗಳ ಕಟ್ಟಡ, ಗೇಟ್ ನಂ.2, ಬೆಂಗಳೂರು. ನೂರಾನಿ ಮಸೀದಿ, ಯಾರಬ್ ನಗರ, ಬನಶಂಕರಿ, ಬೆಂಗಳೂರು, ಗಿರಿನಗರದ ನಾಗರಿಕ ಹಿತರಕ್ಷಣಾ ಸಮಿತಿ, ಗಿರಿನಗರ, ಬೆಂಗಳೂರು, ಪೈಪ್ ಲೈನ್ ರೋಡ್, ಟಿ.ದಾಸರಹಳ್ಳಿ, ಬೆಂಗಳೂರು. ರೇವಾ ಯೂನಿರ್ವಸಿಟಿ, ಯಲಹಂಕ, ಬೆಂಗಳೂರು ಇಲ್ಲಿ ಸಾರ್ವಜನಿಕರು ಹಾಗೂ ಗ್ರಾಮಸ್ಥರು ನೋಂದಣಿ ಕಾರ್ಯದ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಆಯೋಗದ ಸದಸ್ಯರ ಭೇಟಿ

ಬೆಂಗಳೂರು: ಸೆ, 3: ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಸದಸ್ಯರಾದ ಶ್ರೀಮತಿ ಪಿ.ಎಂ.ಕಮಲಮ್ಮ ಅವರು ಸೆಪ್ಟೆಂಬರ್ – 1 ರಿಂದ ಸೆಪ್ಟೆಂಬರ್ 6 ವರೆಗೆ ಬೆಂಗಳೂರು ನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಕುಂದುಕೊರತೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಿ, ಕ್ರಮ ಕೈಗೊಳ್ಳಲು ಆಯೋಗದ ಸದಸ್ಯರನ್ನು ಕುಮಾರಕೃಪ ಅತಿಥಿಗೃಹದ ಕೊಠಡಿ ಸಂಖ್ಯೆ 2 ರಲ್ಲಿ ನೇರವಾಗಿ ಸಂಪರ್ಕಿಸಲು ತಿಳಿಸಿದ್ದಾರೆ. ಮೊಬೈಲ್: 9560043703 ದೂರವಾಣಿ 080-2557767, 0112537.

ಬಾಲ ನ್ಯಾಯ ಕಾಯಿದೆ ಉಲ್ಲಂಘನೆಗೆ ಕ್ರಮ

ಬೆಂಗಳೂರು: ಸೆ,3: ಮಕ್ಕಳ ಪಾಲನೆ ಮತ್ತು ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರೇತರ ಸ್ವಯಂಸೇವಾ ಸಂಸ್ಥೆಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀ ವಿ.ಶಂಕರ್ ಅವರು ತಿಳಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 72 ಸಂಸ್ಥೆಗಳು ನೊಂದಣಿಯಾಗಿದ್ದು, ಈ ಸಂಸ್ಥೆಗಳ ನೋಂದಣಿ ಅವಧಿ ಮುಗಿಯುತ್ತಿರುವುದರಿಂದ ಈ ಸಂಸ್ಥೆಗಳು ಕೂಡ ನವೀಕರಿಸಿಕೊಳ್ಳತಕ್ಕದ್ದು. ತಪ್ಪಿದ್ದಲ್ಲಿ ಸಂಸ್ಥೆಯು ಯಾವುದೇ ಕಾಯಿದೆಯಲ್ಲಿ ನೋಂದಣಿಯಾಗಿದ್ದರೂ ಸಹ ಹಿಂಪಡೆಯಲು ಅಥವಾ ರದ್ದುಪಡಿಸಲು ಕ್ರಮ ಜರುಗಿಸಲಾಗುವುದು. ಅಲ್ಲದೆ ಈ ಸಂಸ್ಥೆಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಹಾಗೂ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದ್ದಲ್ಲಿ ಸಂಸ್ಥೆಯ ಮುಖ್ಯಸ್ಥರನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.

ಸಂಸ್ಥೆಗಳು ನಿಗದಿತ ಅರ್ಜಿ ನಮೂನೆಯನ್ನು ಕಛೇರಿಯ ವೆಬ್‍ಸೈಟ್ www.dcpublr.org ಯಿಂದ ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿದ ನಮೂನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕಿರಣ, ಡಾ: ಎಂ.ಹೆಚ್.ಮರೀಗೌಡ ರಸ್ತೆ, ಕಿದ್ವಾಯಿ ಆಸ್ಪತ್ರೆ ಪಕ್ಕ, ಬೆಂಗಳೂರು – 29 ಇಲ್ಲಿಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ: ವೆಬ್‍ಸೈಟ್ : www.dcpublr.org ಇ.ಮೇಲ್: [email protected] ದೂರವಾಣಿ: 080-26560273.

ದೇವಸ್ಥಾನಗಳಲ್ಲಿನ ಹಣವನ್ನು ಮೂಲಭೂತ ಸೌಕರ್ಯಕ್ಕೆ ಬಳಸಲು ಸೂಚನೆ- ಟಿ.ಬಿ. ಜಯಚಂದ್ರ

ಕೊಪ್ಪಳ ಸೆ. 03 (ಕರ್ನಾಟಕ ವಾರ್ತೆ): ರಾಜ್ಯ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಲಭ್ಯವಿರುವ ಹಣವನ್ನು ದೇವಸ್ಥಾನಗಳ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ವಿನಿಯೋಗಿಸುವಂತೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಕಾನೂನು, ಸಂಸದೀಯ ವ್ಯವಹಾರಗಳು, ಪಶುಸಂಗೋಪನೆ ಹಾಗೂ ಮುಜರಾಯಿ ಸಚಿವ ಟಿ.ಬಿ. ಜಯಚಂದ್ರ ಅವರು ಹೇಳಿದರು.

ಜಿಲ್ಲಾಡಳಿತ ಕೊಪ್ಪಳ ವತಿಯಿಂದ ಯಲಬುರ್ಗಾದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದ ಬಯಲು ರಂಗಮಂದಿರದಲ್ಲಿ ಗುರುವಾರದಂದು ಏರ್ಪಡಿಸಲಾಗಿದ್ದ ಯಲಬುರ್ಗಾ ವಿಧಾನಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಹಾಗೂ ಧಾರ್ಮಿಕ ದತ್ತಿ ಆರಾಧನಾ ಯೋಜನೆಯಡಿ ವಿವಿಧ ದೇವಸ್ಥಾನ ಮತ್ತು ಮಸೀದಿ ಕಟ್ಟಡಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಬಿಡುಗಡೆಯಾಗಿರುವ ಚೆಕ್ಕುಗಳ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಅನುದಾನ ಒದಗಿಸುತ್ತಿದೆಯಾದರೂ, ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ. ದೇವಸ್ಥಾನಗಳಲ್ಲಿ ಹಣದ ಕೊರತೆ ಇರುವುದಾಗಿ ಈ ಮೊದಲು ಹೇಳಲಾಗುತ್ತಿತ್ತು. ದೇವಸ್ಥಾನಗಳ ಲೆಕ್ಕ ಪರಿಶೋಧನೆ ಮಾಡಿಸಿ, ವರದಿ ಪಡೆಯಲಾಗಿದ್ದು, ದೇವಸ್ಥಾನಗಳಲ್ಲಿ ಒಟ್ಟಾರೆ ಸುಮಾರು 500 ಕೋಟಿ ರೂ. ಹಣ ಲಭ್ಯವಿರುವ ಅಂಶ ಬೆಳಕಿಗೆ ಬಂದಿದೆ. ದೇವಾಲಯಗಳಿಗೆ ಬರುವ ದೇಣಿಗೆ ಹಣವನ್ನು ಬ್ಯಾಂಕ್‍ಗಳಲ್ಲಿ ಠೇವಣಿ ಇಟ್ಟ ಮಾತ್ರಕ್ಕೆ ದೇವಾಲಯಗಳು ಅಭಿವೃದ್ಧಿಯಾಗುವುದಿಲ್ಲ ಅಲ್ಲದೆ ಭಕ್ತಾದಿಗಳಿಗೆ ಉತ್ತಮ ಸೌಲಭ್ಯ ದೊರೆಯುವುದಿಲ್ಲ. ಭಕ್ತಾದಿಗಳು ಮಾನಸಿಕ ನೆಮ್ಮದಿಯನ್ನರಸಿ ದೇವಾಲಯಗಳಿಗೆ ಬರುತ್ತಾರೆ. ಅಲ್ಲಿ ಅವರಿಗೆ ಉತ್ತಮ ವಾತಾವರಣ ಲಭ್ಯವಾಗಬೇಕು. ದೇವಾಲಯಕ್ಕೆ ನೆಮ್ಮದಿಯರಸಿ ಬರುವ ಭಕ್ತರು ಅಸಹ್ಯ ಪಡುವಂತಾಗಬಾರದು. ಇಲಾಖಾ ವ್ಯಾಪ್ತಿಯ ಹಲವು ದೇವಾಲಯಗಳಲ್ಲಿ ಮೂಲಭೂತ ಸೌಕರ್ಯ ಹಾಗೂ ಸ್ವಚ್ಛತೆಯ ಕೊರತೆ ಕಂಡುಬರುತ್ತಿದೆ. ಇದನ್ನು ಮನಗಂಡಿರುವ ಸರ್ಕಾರ, ದೇವಾಲಯಗಳಲ್ಲಿ ಲಭ್ಯವಿರುವ ಹಣವನ್ನು ಭಕ್ತಾದಿಗಳಿಗೆ ಉತ್ತಮ ಮೂಲಭೂತ ಸೌಕರ್ಯಗಳು, ಸ್ವಚ್ಛತೆ ಹಾಗೂ ಅಭಿವೃದ್ಧಿಗಾಗಿ ಬಳಸಲು ದೇವಾಲಯಗಳ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ. ಯಲಬುರ್ಗಾ ಕ್ಷೇತ್ರದಲ್ಲಿ ದೇವಾಲಯಗಳು ಹಾಗೂ ಮಸೀದಿಗಳ ಅಭಿವೃದ್ಧಿಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಆರಾಧನಾ ಯೋಜನೆ ಯೋಜನೆಯಡಿ ಒಟ್ಟು 5. 73 ಕೋಟಿ ರೂ. ಅನುದಾನವನ್ನು ಏಕಕಾಲಕ್ಕೆ ಬಳಸುತ್ತಿರುವುದು, ರಾಜ್ಯದಲ್ಲಿಯೇ ಮೊದಲ ಪ್ರಕರಣವಾಗಿದೆ. ದೇವರ ಆರಾಧನೆಯಲ್ಲಿ ಆಡಂಬರವಿರಬಾರದು, ಆದರೆ ಪ್ರಾಮಾಣಿಕತೆ ತೋರಬೇಕು. ದೇವಾಲಯಗಳ ಅಭಿವೃದ್ಧಿಗೆ ಶಾಸಕ ಬಸವರಾಜ ರಾಯರಡ್ಡಿ ಅವರು ಪ್ರಾಮಾಣಿಕತೆ ಮೆರೆದಿದ್ದಾರೆ ಎಂದು ಸಚಿವ ಟಿ.ಬಿ. ಜಯಚಂದ್ರ ಅವರು ಶ್ಲಾಘಿಸಿದರು.

ಮಳೆ ಬಾರದಿದ್ದಲ್ಲಿ ಪರಿಸ್ಥಿತಿ ಗಂಭೀರ : ಸದ್ಯ ರಾಜ್ಯದಲ್ಲಿ ಮಳೆಯ ಅಭಾವ ಕಾಡುತ್ತಿದ್ದು, ಅಲ್ಪ ಸ್ವಲ್ಪ ಆಗಿರುವ ಮಳೆ ರೈತರಿಗೆ ಯಾವುದೇ ರೀತಿಯಲ್ಲಿ ಅನುಕೂಲತೆಯನ್ನು ತಂದಿಲ್ಲ. ಜಲಾಶಯಗಳು ಖಾಲಿಯೇ ಉಳಿದಿವೆ. ಮುಂದಿನ ದಿನಗಳಲ್ಲಿ ಮಳೆ ಆಗದಿದ್ದಲ್ಲಿ ಬರ ಪರಿಸ್ಥಿತಿ ಇನ್ನಷ್ಟು ಗಂಭೀರತೆಯನ್ನು ಪಡೆಯಲಿದೆ. ಬರ ಪರಿಸ್ಥಿತಿಯ ನಿರ್ವಹಣೆಗೆ ಸರ್ಕಾರ ಅಗತ್ಯ ಅನುದಾನವನ್ನು ಜಿಲ್ಲೆಗಳಿಗೆ ಒದಗಿಸಲಿದ್ದು, ಬರ ನಿರ್ವಹಣೆಗೆ ಹಣಕಾಸಿನ ಯಾವುದೇ ಕೊರತೆ ಇಲ್ಲ. ಬರುವ ದಿನಗಳಲ್ಲಾದರೂ ಉತ್ತಮ ಮಳೆಯಾಗಲಿ ಎಂದು ದೇವರಲ್ಲಿ ಮೊರೆಯಿಡುವುದೊಂದೇ ನಮಗೆ ಇರುವ ದಾರಿ ಎಂದು ಸಚಿವ ಟಿ.ಬಿ. ಜಯಚಂದ್ರ ಅವರು ಹೇಳಿದರು.

ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಶಾಸಕ ಬಸವರಾಜ ರಾಯರಡ್ಡಿ ಅವರು, ಯಲಬುರ್ಗಾ ಕ್ಷೇತ್ರದಲ್ಲಿನ ಬರ ಪರಿಸ್ಥಿತಿ ಬಗ್ಗೆ ಈಗಾಗಲೆ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ವಿದ್ಯುತ್ ಹಾಗೂ ನೀರಿನ ಸಮಸ್ಯೆ ಕ್ಷೇತ್ರದಲ್ಲಿ ಅಷ್ಟೇ ಅಲ್ಲ ಇಡೀ ರಾಜ್ಯದಲ್ಲಿ ಉದ್ಭವವಾಗಿದೆ. ಕ್ಷೇತ್ರದ ವಿದ್ಯುತ್ ಸಮಸ್ಯೆ ನಿವಾರಣೆಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದ್ದು, 40-50 ಮೆ.ವ್ಯಾ. ಹೆಚ್ಚುವರಿ ವಿದ್ಯುತ್ ಹಂಚಿಕೆ ಮಾಡುವಂತೆ ಕೋರಲಾಗಿದೆ. ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ರಾಜ್ಯದ ನೆರವಿಗೆ ಬರಬೇಕು. ವಿದ್ಯುತ್ ಹಂಚಿಕೆಯಲ್ಲಿ ತಾರತಮ್ಯ ನಿವಾರಿಸಿ, ಕೇಂದ್ರ ಸರ್ಕಾರ ಸಮರ್ಪಕ ವಿದ್ಯುತ್ ಹಂಚಿಕೆ ಮಾಡಬೇಕು. ವಿದರ್ಭ ಪ್ಯಾಕೇಜ್ ರೀತಿಯಲ್ಲಿ ಕರ್ನಾಟಕ ರಾಜ್ಯಕ್ಕೂ ವಿಶೇಷ ಪ್ಯಾಕೇಜನ್ನು ಕೇಂದ್ರ ಸರ್ಕಾರ ಘೋಷಿಸಬೇಕು. ಯಲಬುರ್ಗಾ ತಾಲೂಕಿನಲ್ಲಿ ವರ್ಷದೊಳಗಾಗಿ 100 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಲಾಗುವುದು. ಕ್ಷೇತ್ರದ 106 ಗ್ರಾಮಗಳ 269 ದೇವಸ್ಥಾನ/ಮಸೀದಿಗಳ ಅಭಿವೃದ್ಧಿಗೆ ಒಟ್ಟು 5. 73 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. 2005-06 ರಿಂದ 2008-09 ನೇ ಸಾಲಿನವರೆಗಿನ ಆಶ್ರಯ ಹಾಗೂ ವಿವಿಧ ವಸತಿ ಯೊಜನೆಗಳ ಫಲಾನುಭವಿಗಳ ಸುಮಾರು 100 ಕೋಟಿ ರೂ. ಗಳ ಸಾಲ ವನ್ನು ನಮ್ಮ ಸರ್ಕಾರ ಮನ್ನಾ ಮಾಡಿದೆ ಎಂದರು.

ಕಾರ್ಯಕ್ರಮದಲ್ಲಿ ಯಲಬುರ್ಗಾ ತಾ.ಪಂ. ಅಧ್ಯಕ್ಷೆ ಮಹಾದೇವಿ ಕಂಬಳಿ, ಪಟ್ಟಣ ಪಂಚಾಯತಿ ಅಧ್ಯಕ್ಷೆ ಭಾಗೀರಥಿ ಜೋಗಿನ, ಜಿ.ಪಂ. ಸದಸ್ಯರುಗಳಾದ ಅಶೋಕ ತೋಟದ, ರಾಮಣ್ಣ ಸಾಲಭಾವಿ, ಜಿಲ್ಲಾಧಿಕಾರಿ ರಮಣದೀಪ್ ಚೌಧರಿ, ಬಳ್ಳಾರಿ, ರಾಯಚೂರು ಮತ್ತು ಬಳ್ಳಾರಿ ಹಾಲು ಒಕ್ಕೂಟ ಅಧ್ಯಕ್ಷ ವೆಂಕನಗೌಡ ಹಿರೇಗೌಡರ ಮುಂತಾದ ಗಣ್ಯರು ಪಾಲ್ಗೊಂಡಿದ್ದರು. ವಸತಿ ಯೋಜನೆಗಳ ಸಾಲ ಮನ್ನಾ ಮಾಡಿದ ಫಲಾನುಭವಿಗಳಿಗೆ ಮನೆಗಳ ಹಕ್ಕುಪತ್ರವನ್ನು ವಿತರಣೆ ಮಾಡಲಾಯಿತು. ಹಾಲು ಒಕ್ಕೂಟ ವತಿಯಿಂದ 18 ಕಂಪ್ಯೂಟರ್‍ಗಳನ್ನು ವಿತರಿಸಲಾಯಿತು. ಹಾಗೂ ಮೇವು ಬೆಳೆ ಉತ್ತೇಜನಕ್ಕೆ ರೈತರಿಗೆ ಉಚಿತ ಮೇವು ಬೀಜ ಕಿಟ್ ಅನ್ನು ಇದೇ ಸಂದರ್ಭದಲ್ಲಿ ರೈತರಿಗೆ ಸಚಿವ ಟಿ.ಬಿ. ಜಯಚಂದ್ರ ಅವರು ವಿತರಿಸಿದರು.

ಕೊಪ್ಪಳ : ಸ್ವಚ್ಛ ಭಾರತ ಯೋಜನೆ ಯಶೋಗಾಥೆ ಸೆ. 04 ರಂದು ಚಂದನದಲ್ಲಿ ಪ್ರಸಾರ

ಕೊಪ್ಪಳ ಸೆ. 03 (ಕರ್ನಾಟಕ ವಾರ್ತೆ) : ಸ್ವಚ್ಛ ಭಾರತ ಅಭಿಯಾನ ಯೋಜನೆಯಡಿ ಕೊಪ್ಪಳ ಜಿಲ್ಲೆಯ ಹುಲಿಗಿ, ನಿಂಗಾಪುರ ಹಾಗೂ ವಿವಿಧ ಗ್ರಾಮದಲ್ಲಿನ ಬಯಲು ಶೌಚ ಮುಕ್ತ ಗ್ರಾಮ ನಿರ್ಮಾಣ ಹಾಗೂ ಕಸ ವಿಲೇವಾರಿಯಲ್ಲಿನ ಉತ್ತಮ ಸಾಧನೆ ಕುರಿತ ಯಶೋಗಾಥೆ ಸೆ. 04 ರಂದು ಸಂಜೆ 6 ಗಂಟೆಯಿಂದ 6-30 ರವರೆಗೆ ದೂರದರ್ಶನದ ಚಂದನ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಜಿಲ್ಲೆಯ ಸಾರ್ವಜನಿಕರು ಈ ಕಾರ್ಯಕ್ರಮದ ವೀಕ್ಷಣೆ ಮಾಡಬೇಕು. ಹಾಗೂ ಜಿಲ್ಲೆಯನ್ನು ಬಯಲು ಶೌಚ ಮುಕ್ತವನ್ನಾಗಿಸಲು ಸಹಕರಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ಮನವಿ ಮಾಡಿಕೊಂಡಿದ್ದಾರೆ.

ಪಡಿತರ ಚೀಟಿಯಲ್ಲಿ ನಮೂದಾಗಿರುವ ಎಲ್ಲಾ ಸದಸ್ಯರಿಗೂ ಆಹಾರಧಾನ್ಯ ಹಂಚಿಕೆ

ಕೊಪ್ಪಳ: ಸೆ. 3 (ಕರ್ನಾಟಕ ವಾರ್ತೆ) : ಬಿಪಿಎಲ್ ಪಡಿತರ ಚೀಟಿಯಲ್ಲಿ ನಮೂದಾಗಿರುವ ಕುಟುಂಬದ ಎಲ್ಲಾ ಸದಸ್ಯರಿಗೂ ಆಹಾರಧಾನ್ಯವನ್ನು ಹಂಚಿಕೆ ಮಾಡಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಆಯುಕ್ತ ಎಸ್.ಎಸ್. ಪಟ್ಟಣಶೆಟ್ಟಿ ಅವರು ತಿಳಿಸಿದ್ದಾರೆ.

ಕೆಲವು ನ್ಯಾಯಬೆಲೆ ಅಂಗಡಿ ವರ್ತಕರು ಬಿಪಿಎಲ್ ಪಡಿತರ ಚೀಟಿಯಲ್ಲಿ ನಮೂದಾಗಿದ್ದರೂ ಸಹ ಮಕ್ಕಳಿಗೆ ಆಹಾರಧಾನ್ಯವನ್ನು ನೀಡುತ್ತಿಲ್ಲವೆಂದು ಪಡಿತರ ಚೀಟಿದಾರರು ಇಲಾಖೆಗೆ ದೂರನ್ನು ಸಲ್ಲಿಸಿದ್ದಾರೆ. ಆದರೆ ಇಲಾಖೆಯು ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿಯಲ್ಲಿ ಬಿಪಿಎಲ್. ಪಡಿತರ ಚೀಟಿಯಲ್ಲಿನ ಕುಟುಂಬ ಸದಸ್ಯರಿಗೆ ಒಂದು ಯೂನಿಟ್‍ನಂತೆ 5 ಕೆ.ಜಿ. ಆಹಾರ ಧಾನ್ಯವನ್ನು, ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ. ಆಹಾರ ಧಾನ್ಯವನ್ನು ವಿತರಿಸಲಾಗುತ್ತಿದೆ.

ಪಡಿತರ ಚೀಟಿದಾರರು ತಮ್ಮ ಚೀಟಿಯಲ್ಲಿ ನಮೂದಾಗಿರುವ ಮಕ್ಕಳ ಹೆಸರಿಗೂ ಆಹಾರ ಧಾನ್ಯವನ್ನು ಪಡೆದುಕೊಳ್ಳಬಹುದು ಉಚಿತ ಆಹಾರಧಾನ್ಯ ವಿತರರಣೆ ‘ಅನ್ಯಭಾಗ್ಯ ಯೋಜನೆ’ ಜಾರಿಯಾದಾಗಿನಿಂದ ಬಿಪಿಎಲ್ ಮತ್ತು ಅಂತ್ಯೋದಯಗಳಿಗೆ ನೀಡಲಾಗುವ ಆಹಾರಧಾನ್ಯಕ್ಕೆ ಪಡಿತರ ಚೀಟಿದಾರರು ಕೇವಲ ರೂ. 40.50 ಪಾವತಿಸಿ ಪಡಿತರ ಪಡೆಯಬಹುದು. ನ್ಯಾಯಬೆಲೆ ಅಂಗಡಿಯ ವರ್ತಕರು ಹೆಚ್ಚಿನ ದರವನ್ನು ಕೇಳಿದರೆ ಇಲಾಖೆಯ ದೂರವಾಣಿ ಸಂಖ್ಯೆ 1967 ಕ್ಕೆ ಕರೆ ಮಾಡಿ ದೂರು ಸಲ್ಲಿಸುವಂತೆ ಅವರು ತಿಳಿಸಿದ್ದಾರೆ.

ಅದೇ ರೀತಿ ಸರ್ಕಾರದಿಂದ ನೀಡಲಾದ ಪಡಿತರ ಪದಾರ್ಥಗಳಾದ ಅಕ್ಕಿ, ಗೋಧಿ, ರಾಗಿ, ಸಕ್ಕರೆ, ಸೀಮೆಎಣ್ಣೆ ಅಯೋಡಿನ್‍ಯುಕ್ತ ಉಪ್ಪು ಮತ್ತು ತಾಳೆ ಎಣ್ಣೆಯನ್ನು ಹೊರತುಪಡಿಸಿ ಬೇರೆ ಮುಕ್ತ ಮಾರುಕಟ್ಟೆಯ ಪದಾರ್ಥಗಳನ್ನು ಖರೀದಿಸುವುದು ಕಡ್ಡಾಯವಿರುವುದಿಲ್ಲ. ಆದರೂ ಖರೀದಿಸುವಂತೆ ಒತ್ತಾಯಿಸಿದಲ್ಲಿ ದೂರವಾಣಿ ಸಂಖ್ಯೆ 1967 ಗೆ ದೂರನ್ನು ಸಲ್ಲಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಆಯುಕ್ತರು, ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ವಿಡಿಯೋ ಚಿತ್ರೀಕರಣ ಮತ್ತು ಸಂಕಲನ ತರಬೇತಿ : ಅರ್ಜಿ ಆಹ್ವಾನ

ಕೊಪ್ಪಳ ಸೆ. 03 (ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಅಂಗೀಕೃತ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ/ಕಮ್ಯುನಿಕೇಷನ್/ಮಾಸ್ ಕಮ್ಯುನಿಕೇಷನ್ ಅಥವಾ ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡಿಪ್ಲೋಮಾ/ಪದವಿ/ಸ್ನಾತಕೋತ್ತರ ಪದವಿ ಪಡೆದ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ ವಿಡಿಯೋ ಚಿತ್ರೀಕರಣ ಮತ್ತು ಸಂಕಲನದ ತರಬೇತಿಯನ್ನು ಮೈಸೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಬಹುಮಾಧ್ಯಮ ಸಂಶೋಧನಾ ಕೇಂದ್ರದಲ್ಲಿ ಏರ್ಪಡಿಸಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ತರಬೇತಿಗೆ 40 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ತರಬೇತಿ ಅವಧಿಯು 30 ದಿನಗಳ ಅವಧಿಯದಾಗಿದ್ದು, ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ಸೌಕರ್ಯವನ್ನು ಒದಗಿಸಲಾಗುವುದು. ತರಬೇತಿ ಅಂತ್ಯದಲ್ಲಿ ಅಭ್ಯರ್ಥಿಗಳಿಗೆ ಸ್ವಯಂ ವೃತ್ತಿ ಕೈಗೊಳ್ಳಲು ಉಚಿತವಾಗಿ ಮೂವಿ ಕ್ಯಾಮೆರಾ ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವೆಬ್‍ಸೈಟ್ karnatakavarthe.org ನಿಂದ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದು. ಅಥವಾ ಅಭ್ಯರ್ಥಿಯ ಹೆಸರು, ವಯಸ್ಸು, ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಶೇಕಡಾವಾರು ಅಂಕ ಇತ್ಯಾದಿ ಮಾಹಿತಿಯುಳ್ಳ ಸ್ವ-ವಿವರ, ಯಾವುದಾದರೂ ತರಬೇತಿ ಪಡೆದ ವಿವರ ಹಾಗೂ ವರ್ಷದ ಮಾಹಿತಿಯನ್ನು ಭರ್ತಿ ಮಾಡಿ, ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯೊಂದಿಗೆ ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ವಿಳಾಸ ಹಾಗೂ ವಯಸ್ಸು ದೃಢೀಕರಿಸುವ ದಾಖಲೆಗಳ ಪ್ರತಿಯನ್ನು ಲಗತ್ತಿಸಿ ಸಲ್ಲಿಸಬೇಕು. ಲಕೋಟೆಯ ಮೇಲೆ “ವಿಡಿಯೋ ಚಿತ್ರೀಕರಣ ಮತ್ತು ಸಂಕಲನದ ತರಬೇತಿಗಾಗಿ ಅರ್ಜಿ” ಎಂದು ನಮೂದಿಸಿ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾ ಸೌಧ, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು-01 ಇವರಿಗೆ ಅಕ್ಟೋಬರ್ 03 ರ ಸಂಜೆ 04 ಗಂಟೆಯ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಚಲನಚಿತ್ರ ವಿಭಾಗದ ಉಪನಿರ್ದೇಶಕರು ಇವರನ್ನು ದೂರವಾಣಿ ಸಂ: 080-22028052/ 56 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕೊಪ್ಪಳ, ಸೆ.03 (ಕರ್ನಾಟಕ ವಾರ್ತೆ) : ಕೊಪ್ಪಳ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಪಿಯುಸಿ-2, ಪದವಿ ಅಂತಿಮ, ಸ್ನಾತಕೋತ್ತರ ಮತ್ತು ಕೃಷಿ, ಇಂಜನೀಯರಿಂಗ್, ಮೆಡಿಸಿನ್, ವೆಟರ್ನರಿ, ಪದವಿಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸಾಗುವ ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಬಹುದಾಗಿದ್ದು. ಪ್ರೋತ್ಸಾಹಧನಕ್ಕೆ ಆಯ್ಕೆಗೊಳ್ಳುವ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ 20,000 ರೂ., ಪದವಿ ವಿದ್ಯಾರ್ಥಿಗಳಿಗೆ 25,000 ರೂ., ಸ್ನಾತಕೋತ್ತರ ಪದವಿ (ಎಂ.ಎ, ಎಂ.ಎಸ್.ಸಿ, ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಫ್.ಎ ಇತ್ಯಾದಿ) ವಿದ್ಯಾರ್ಥಿಗಳಿಗೆ 30,000 ರೂ., ಕೃಷಿ, ಇಂಜನೀಯರಿಂಗ್, ಮೆಡಿಸಿನ್, ವೆಟರ್ನರಿ ವಿದ್ಯಾರ್ಥಿಗಳಿಗೆ 35,000 ರೂ. ವಿದ್ಯಾರ್ಥಿ ವೇತನ ನೀಡಲಾಗುವುದು.

ಅರ್ಜಿ ಸಲ್ಲಿಸಲಿಚ್ಛಿಸುವವರು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಇವರಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಸ್ವೀಕೃತವಾದ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯಲ್ಲಿ ಮಂಡಿಸಿ, ಬಹುಮಾನ ಹಣವನ್ನು ಮಂಜೂರು ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಬಿ.ಕಲ್ಲೇಶ್, ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ, ದೂರವಾಣಿ ಸಂಖ್ಯೆ : 08539-220138 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕಾನೂನು ಪುಸ್ತಕಗಳ ಪೂರೈಕೆ : ಅರ್ಜಿ ಆಹ್ವಾನ

ಕೊಪ್ಪಳ, ಸೆ.03 (ಕರ್ನಾಟಕ ವಾರ್ತೆ) : ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಇವರಿಂದ ಕಾನೂನು ಪದವೀಧರರಿಗೆ ಪ್ರೋತ್ಸಾಹಧನ ನೀಡುವ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಗಳಿಗಾಗಿ ಮೀಸಲಿಡಲಾದ 108 ಲಕ್ಷ ರೂ.ಗಳ ಅನುದಾನವನ್ನು ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಗಳಡಿ ಕಾನೂನು ಪದವಿಧರರಿಗೆ ಕಾನೂನು ಪುಸ್ತಕಗಳನ್ನು ಪೂರೈಸಲು ಉದ್ದೇಶಿಸಲಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲಿಚ್ಛಿಸುವವರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದವರಾಗಿರಬೇಕು. ರಾಜ್ಯದ ಬಾರ್ ಕೌನ್ಸಿಲ್‍ನಲ್ಲಿ 2006 ರ ಏಪ್ರಿಲ್.01 ರಿಂದ ಹಾಗೂ ನಂತರ ನೊಂದಾಯಿಸಿರಬೇಕು. ಕಾನೂನು ಇಲಾಖೆಯಿಂದ ಪ್ರೋತ್ಸಾಹಧನ ಪಡೆಯುತ್ತಿರುವ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿ ಲಭ್ಯವಾಗದಿದ್ದಲ್ಲಿ ಇದೇ ಯೋಜನೆಯಡಿ ಬೇರೆ ಇಲಾಖೆಗಳಲ್ಲಿ ಪ್ರೋತ್ಸಾಹಧನ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪುಸ್ತಕಗಳನ್ನು ಒದಗಿಸಲಾಗುವುದು. ಕಾನೂನು ಇಲಾಖೆಯಿಂದ ರಚಿಸಲಾದ ಜಿಲ್ಲಾ ಮಟ್ಟದ ಸಮಿತಿಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಜಿಲ್ಲಾಧಿಕಾರಿಗಳು ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ.

ಭರ್ತಿ ಮಾಡಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಅಳತೆಯ 02 ಫೋಟೋ, ರಾಜ್ಯ ಬಾರ್ ಕೌನ್ಸಿಲ್‍ನಲ್ಲಿ ನೊಂದಾಯಿಸಿದ ಪ್ರಮಾಣ ಪತ್ರ, ಕಾನೂನು ಇಲಾಖೆ ಅಥವಾ ಸಮಾಜ ಕಲ್ಯಾಣ ಇಲಾಖೆ ಅಥವಾ ಇತರೆ ಇಲಾಖೆಗಳಿಂದ ಪ್ರೋತ್ಸಾಹಧನ ಪಡೆಯುತ್ತಿರುವ ಬಗ್ಗೆ ದೃಢೀಕರಣ ಪತ್ರ ದಾಖಲೆಗಳನ್ನು ಲಗತ್ತಿಸಿ, ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ, ದೂರವಾಣಿ ಸಂಖ್ಯೆ : 08539-220138 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸೇನೆ ಭರ್ತಿಗೆ ಆನ್‍ಲೈನ್‍ನಲ್ಲಿ ನೊಂದಣಿ

ಕೊಪ್ಪಳ, ಸೆ.03 (ಕರ್ನಾಟಕ ವಾರ್ತೆ) : ಭಾರತೀಯ ಸೇನೆಯ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಯುವ ಪ್ರಕ್ರಿಯೆ ಅಕ್ಟೋಬರ್ 01 ರಿಂದ ಬದಲಾವಣೆಗೊಳ್ಳಲಿದ್ದು, ಸೇನೆ ಸೇರಬಯಸುವ ಅರ್ಹ ಅಭ್ಯರ್ಥಿಗಳು www.joinindianarmy.nic.in ವೆಬ್‍ಸೈಟ್ ನಲ್ಲಿ ನೋಂದಾಯಿಸಿಕೊಳ್ಳಬೇಕು.

ಬೆಳಗಾವಿಯ ಸೇನಾ ಭರ್ತಿ ಕಛೇರಿಯು ಈ ಕುರಿತಂತೆ ಪ್ರಕಟಣೆಯನ್ನು ಹೊರಡಿಸಿದೆ. ಸೇನಾ ಭರ್ತಿ ಪ್ರಕ್ರಿಯೆಯು 2015 ರ ಅಕ್ಟೋಬರ್ 01 ರಿಂದ ಬದಲಾವಣೆಗೊಳ್ಳಲಿದ್ದು, ಸೇನೆ ಸೇರಬಯಸುವ ಅರ್ಹ ಅಭ್ಯರ್ಥಿಗಳು www.joinindianarmy.nic.inವೆಬ್‍ಸೈಟ್ ಮೂಲಕ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕು. ಆನ್‍ಲೈನ್ ನೋಂದಣಿ ಸಂದರ್ಭದಲ್ಲಿ ವೆಬ್‍ಸೈಟ್‍ನಲ್ಲಿ ತಿಳಿಸಿರುವ ಎಲ್ಲ ಮಾಹಿತಿಯನ್ನು ನಮೂದಿಸಿ, ನೋಂದಣಿ ಮಾಡಿಕೊಳ್ಳಬೇಕು ಎಂದು ಬೆಳಗಾವಿಯ ಸೇನಾ ನೇಮಕಾತಿ ಕಚೇರಿ ಪ್ರಕಟಣೆ ತಿಳಿಸಿದೆ.

ಆನ್‍ಲೈನ್ ಮೂಲಕ ಅರ್ಜಿ

ಬೆಂ.ಗ್ರಾ.ಜಿ. ಸೆಪ್ಟಂಬರ್ 03 (ಕರ್ನಾಟಕ ವಾರ್ತೆ):-2015-16ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಮಾಸಿಕ ರೂ. 5000/- ದಂತೆ ವ್ಯಾಸಂಗ ವೇತನ/ಫೆಲೋಶಿಪ್‍ಗಾಗಿ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಆನ್‍ಲೈನ್ ಮೂಲಕ karepass.cgg.gov.in ಹಾಗೂ www.backwardclasses.kar.nic.in ನಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟಂಬರ್ 05 ಆಗಿರುತ್ತದೆ.

ಪ್ರತಿಭಾನ್ವಿತ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿ. ಸೆಪ್ಟಂಬರ್ 03 (ಕರ್ನಾಟಕ ವಾರ್ತೆ):- 2015-16ನೇ ಸಾಲಿನಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾನ್ವಿತ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಯ ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲ ಹಾಗೂ ಹೊಸಕೋಟೆ ತಾಲ್ಲೂಕುಗಳ ಅರ್ಹ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಲಪಿಂಕ್ ಗೇಮ್ಸ್, ವಲ್ರ್ಡ್ ಚಾಂಪಿಯನ್‍ಶಿಪ್, ಏಷಿಯನ್ ಚಾಂಪಿಯನ್‍ಶಿಪ್, ಏಷಿಯನ್ ಗೇಮ್ಸ್, ಕಾಮನ್‍ವೆಲ್ತ್ ಗೇಮ್ಸ್, ಕಾಮನ್‍ವೆಲ್ತ್ ಚಾಂಪಿಯನ್‍ಶಿಪ್, ಆಫ್ರೋ-ಎಷಿಯನ್ ಗೇಮ್ಸ್, ಎಸ್.ಎ.ಎಫ್. ಗೇಮ್ಸ್, ಇಂಟರ್‍ನ್ಯಾಷನಲ್ ಮೀಟ್ಸ್, ನ್ಯಾಷನಲ್ ಗೇಮ್ಸ್, ನ್ಯಾಷನಲ್ ಚಾಂಪಿಯನ್‍ಶಿಪ್, ಆಲ್‍ಇಂಡಿಯಾ ಇಂಟರ್ ಜೋನಲ್ ಮೀಟ್ಸ್, ಎಸ್.ಜಿ.ಎಫ್.ಐ. ಆಲ್ ಇಂಡಿಯಾ ಇಂಟರ್ ಯೂನಿವರ್ಸಿಟಿ ಮೀಟ್ಸ್, ಆಲ್ ಇಂಡಿಯಾ ಫ್ರೀ ಯೂನಿವರ್ಸಿಟಿ ಮೀಟ್ಸ್, ಭಾರತ ಸರ್ಕಾರದ ಅಂಗೀಕೃತ ಕ್ರೀಡಾ ಪೆಡೆರೇಷನ್‍ನಿಂದ ಸಂಘಟಿಸಲಾದ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟ/ಶಾಲಾ ಮಟ್ಟದ ಚಾಂಪಿಯನ್‍ಶಿಪ್/ಪಂಚಾಯತ್ ರಾಜ್ ಯುವ ಕ್ರೀಡಾ ಔರ್ ಖೇಲ್ ಅಭಿಯಾನ್ ಕ್ರೀಡಾಕೂಟಗಳು, ಭಾರತ ಕ್ರೀಡಾ ಪ್ರಾಧಿಕಾರದಿಂದ ಆಯೋಜಿಸಲಾದ ಅಖಿಲ ಭಾರತ ಗ್ರಾಮೀಣ ಕ್ರೀಡಾಕೂಟ, ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ಆಯೋಜಿಸಲಾದ ಅಖಿಲ ಭಾರತ ಮಹಿಳಾ ಕ್ರೀಡಾಕೂಟ, ಪ್ಯಾರಾ ಒಲಂಪಿಕ್, ಪ್ಯಾರಾ ಏಷಿಯನ್ ಗೇಮ್ಸ್, ಐ.ಡಬ್ಲ್ಯೂ.ಎ.ಎಸ್/ವಿಕಲಚೇತನರ/ಕುಬ್ಜರ ವಲ್ರ್ಡ್ ಕಪ್, ಅಂಗವಿಕಲರ ವಲ್ರ್ಡ್ ಗೇಮ್ಸ್, ನ್ಯಾಷನಲ್ ಗೇಮ್ಸ್ ಫಾರ್ ಡಿಸೇಬಲ್ಡ್, ಅಂತರಾಷ್ಟೀಯ/ರಾಷ್ಟ್ರೀಯ ಅಂಗವಿಕಲರ ಚಾಂಪಿಯನ್‍ಶಿಪ್‍ಗಳಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳು ಅರ್ಹರಿರುತ್ತಾರೆ.

ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟಂಬರ್ 26 ರೊಳಗಾಗಿ ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಶ್ರೀ ಕಂಠೀರವ ಕ್ರೀಡಾ ಸಂಕೀರ್ಣ, ಭವನ-2, ಕಸ್ತೂರ್ಬಾ ರಸ್ತೆ, ಬೆಂಗಳೂರು ಈ ಕಛೇರಿಯಲ್ಲಿ ಪಡೆಯಬಹುದು. ದೂರವಾಣಿ ಸಂಖ್ಯೆ:22113603 ಅನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಜಿಲ್ಲೆಯಲ್ಲಿ ಪಶುಭಾಗ್ಯ ಯೋಜನೆ ಅನುಷ್ಠಾನ: ರೈತರಿಂದ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿ. ಸೆಪ್ಟಂಬರ್ 03 (ಕರ್ನಾಟಕ ವಾರ್ತೆ):-ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪಶುಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಆಸಕ್ತ ರೈತರು ಹಸು ಘಟಕ, ಕುರಿ/ಮೇಕೆ ಘಟಕ, ಹಂದಿ ಘಟಕ ಹಾಗೂ ಕೋಳಿ ಘಟಕಗಳನ್ನು ಆರಂಭಿಸಲು ಸಹಾಯಧನ ಪಡೆಯಬಹುದಾಗಿದೆ.

ಯೋಜನೆಯ ಎಲ್ಲಾ ಫಲಾನುಭವಿಗಳು ಕಡ್ಡಾಯವಾಗಿ ತರಬೇತಿ ಪಡೆಯಬೇಕು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ50 ರಷ್ಟು ಸಹಾಯಧನ ನೀಡಲಾಗುವುದು.

ಒಟ್ಟು ಫಲಾನುಭವಿಗಳಲ್ಲಿ ಶೇ.30 ರಷ್ಟು ಮಹಿಳೆಯರಿಗೆ ಮೀಸಲಿರಿಸಲಾಗಿದೆ. ಬೆಳೆ ಸಾಲದ ಮಾದರಿಯಲ್ಲಿ ಸಹಕಾರಿ ಬ್ಯಾಂಕುಗಳಿಂದ ಶೂನ್ಯ ಬಡ್ಡಿದರದಲ್ಲಿ 50000/- ಗಳವರೆಗೆ ಪಶು ಆಹಾರ/ಇತರೆ ನಿರ್ವಹಣಿ ವೆಚ್ಚಕ್ಕಾಗಿ ಅಲ್ಪಾವಧಿ ಸಾಲ ಒದಗಿಸಲಾಗುವುದು.

ಆಸಕ್ತ ರೈತರು ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಪಶುಆಸ್ಪತ್ರೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ ರವರ ಕಛೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟಂಬರ್ 30ರ ಸಂಜೆ 5.00 ಗಂಟೆಯ ಒಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆಯ ಎಲ್ಲ ಪಶುವೈದ್ಯಕೀಯ ಸಂಸ್ಥೆಗಳಿಂದ ಹಾಗೂ ಇಲಾಖೆಯ ವೆಬ್‍ಸೈïwww.ahvs.kar.nic.in ಇಂದ ಪಡೆಯಬಹುದಾಗಿದೆ.

ಸೆ.5 ರಂದು ಶ್ರೀ ಕೃಷ್ಣ ಜಯಂತಿ ಆಚರಣೆ

ಬಳ್ಳಾರಿ, ಸೆ.02 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ 5 ರಂದು ಬೆ.10:30ಕ್ಕೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ ನಡೆಯಲಿದೆ.

ರಾಜ್ಯ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಟಿ.ಪರಮೇಶ್ವರ ನಾಯ್ಕ ಅವರು ಶ್ರೀ ಕೃಷ್ಣ ಭಾವಚಿತ್ರಕ್ಕೆ ಪೂಜೆ ಹಾಗೂ ಉದ್ಘಾಟಿಸಲಿದ್ದಾರೆ. ಬಳ್ಳಾರಿ ನಗರ ಶಾಸಕರಾದ ಅನಿಲ್ ಹೆಚ್.ಲಾಡ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಬಿ.ಅನಿತಾ, ಲೋಕಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಡಾ| ಬಿ.ಎಂ.ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವೆಂಕಟರಾವ್ ಘೋರ್ಪಡೆ, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರಾದ ವೆಂಕೋಬ, ಕರ್ನಾಟಕ ರಾಜ್ಯ ಜವಳಿ ಮತ್ತು ಕೈಮಗ್ಗ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಶ್ರೀಮತಿ ಜಿ.ಕಮಲಾ ಮರಿಸ್ವಾಮಿ, ಮಹಾನಗರಪಾಲಿಕೆಯ ಮಹಾಪೌರರಾದ ನಾಗಮ್ಮ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಜಿಲ್ಲಾ ಗೊಲ್ಲರ ಸಂಘದ ಅಧ್ಯಕ್ಷ ಪಿ.ಗಾದೆಪ್ಪ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಎಲ್ಲಾ ಸ್ಥಳೀಯ ಸಂಘ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಸಂಜೆ ಕಾರ್ಯಕ್ರಮ :-ನಗರದ ದೇವಿನಗರ ಪ್ರದೇಶದಲ್ಲಿರುವ ನಂದಗೋಕುಲ ಶಾಲಾ ಆವರಣದಲ್ಲಿ ಸಂಜೆ 6 ಗಂಟೆಗೆ ಬಳ್ಳಾರಿ ಜಿಲ್ಲಾ ಗೊಲ್ಲರ ಸಂಘದವತಿಯಿಂದ ಮಕ್ಕಳಿಂದ ಸಮೂಹ ನೃತ್ಯ, ಪೂಜೆ, ಭಜನೆ, ಶ್ರೀಕೃಷ್ಣ ಕಥಾಸಾರಾಂಶ, ಮಹಾಮಂಗಳಾರತಿ ನಡೆಯಲಿದೆ.

ಕೊಡಗು ಜಿಲ್ಲೆಯ ಮಳೆ ವಿವರ (ಮಿಲಿ ಮೀಟರ್‍ಗಳಲ್ಲಿ)

ಮಡಿಕೇರಿ ಸೆ.03 (ಕರ್ನಾಟಕ ವಾರ್ತೆ):- ಕೊಡಗು ಜಿಲ್ಲೆಯ ಇಂದಿನ ಸರಾಸರಿ ಮಳೆ 0.39 ಮಿ.ಮೀ. ಕಳೆದ ವರ್ಷ ಇದೇ ದಿನ 10.85 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 1842.12 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2354.93 ಮಿ.ಮೀ ಮಳೆ ದಾಖಲಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.0 ಮಿ.ಮೀ. ಕಳೆದ ವರ್ಷ ಇದೇ ದಿನ 19.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2789..69 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3396.31 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.17 ಮಿ.ಮೀ. ಕಳೆದ ವರ್ಷ ಇದೇ ದಿನ 11.08 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1444.24 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1911.96 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 2.47 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1292.47ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1756.52 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:- ಶ್ರೀಮಂಗಳ 4, ಪೊನ್ನಂಪೇಟೆ 3 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (03-09-15) ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2852.87 ಅಡಿಗಳು, ಕಳೆದ ವರ್ಷ ಇದೇ ದಿನ 2857..33 ಅಡಿ, ಇಂದಿನ ನೀರಿನ ಒಳ ಹರಿವು 1956 ಕ್ಯೂಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 5549 ಕ್ಯೂಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 965, ನಾಲೆಗೆ 1750 ಕ್ಯೂಸೆಕ್, ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 5426, ನಾಲೆಗೆ 1725 ಕ್ಯೂಸೆಕ್.

ಪಡಿತರ ಚೀಟಿ ಹೆಸರು ನಮೂದಾಗಿರುವ ಎಲ್ಲಾ ಸದಸ್ಯರಿಗೂ ಆಹಾರ ಧಾನ್ಯ ಹಂಚಿಕೆ

ಮಡಿಕೇರಿ ಸೆ.03(ಕರ್ನಾಟಕ ವಾರ್ತೆ):- ಬಿಪಿಎಲ್ ಪಡಿತರ ಚೀಟಿಯಲ್ಲಿ ಹೆಸರು ನಮೂದಾಗಿರುವ ಕುಟುಂಬ ಎಲ್ಲಾ ಸದಸ್ಯರಿಗೂ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಆಯುಕ್ತರಾದ ಎಸ್.ಎಸ್.ಪಟ್ಟಣಶೆಟ್ಟಿ ಅವರು ತಿಳಿಸಿದ್ದಾರೆ.

ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಪಡಿತರ ಚೀಟಿಯಲ್ಲಿ ಹೆಸರು ನಮೂದಾಗಿದ್ದರೂ ಸಹ ಕುಟುಂಬದ ಸದಸ್ಯರಿಗೆ ಆಹಾರ ಧಾನ್ಯ ನೀಡುತ್ತಿಲ್ಲ ಎಂಬ ದೂರುಗಳು ಬರುತ್ತಿವೆ. ಆದರೆ ಇಲಾಖೆಯು ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿಯಲ್ಲಿ ಬಿಪಿಎಲ್ ಪಡಿತರ ಚೀಟಿಯಲ್ಲಿನ ಕುಟುಂಬದ ಎಲ್ಲಾ ಸದಸ್ಯರಿಗೆ ಒಂದು ಯೂನಿಟ್‍ನಂತೆ 5 ಕೆ.ಜಿ. ಆಹಾರ ಧಾನ್ಯವನ್ನು, ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ.ಆಹಾರ ಧಾನ್ಯವನ್ನು ವಿತರಿಸಲಾಗುತ್ತಿದೆ ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಡಿತರ ಚೀಟಿದಾರರು ತಮ್ಮ ಚೀಟಿಯಲ್ಲಿ ನಮೂದಾಗಿರುವ ಮಕ್ಕಳ ಹೆಸರಿಗೂ ಆಹಾರ ಧಾನ್ಯವನ್ನು ಪಡೆದುಕೊಳ್ಳಬಹುದು ಉಚಿತ ಆಹಾರಧಾನ್ಯ ವಿತರರಣೆಂ ‘ಅನ್ಯಭಾಗ್ಯ ಯೋಜನೆ’ ಜಾರಿಯಾದಾಗಿನಿಂದ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿಗಳಿಗೆ ನೀಡಲಾಗುವ ಆಹಾರ ಧಾನ್ಯಕ್ಕೆ ಪಡಿತರ ಚೀಟಿದಾರರು ಕೇವಲ ರೂ. 40.50 ಪಾವತಿಸಿ ಪಡಿತರ ಪಡೆಯಬಹುದು. ನ್ಯಾಯಬೆಲೆ ಅಂಗಡಿಯ ವರ್ತಕರು ಹೆಚ್ಚಿನ ದರವನ್ನು ಕೇಳಿದರೆ ಇಲಾಖೆಯ ದೂರವಾಣಿ ಸಂಖ್ಯೆ 1967 ಕ್ಕೆ ಕರೆ ಮಾಡಿ ದೂರು ಸಲ್ಲಿಸುವಂತೆ ಪಟ್ಟಣಶೆಟ್ಟಿ ಅವರು ತಿಳಿಸಿದ್ದಾರೆ.

ಅದೇ ರೀತಿ ಸರ್ಕಾರದಿಂದ ನೀಡಲಾದ ಪಡಿತರ ಪದಾರ್ಥಗಳಾದ ಅಕ್ಕಿ, ಗೋಧಿ, ರಾಗಿ, ಸಕ್ಕರೆ, ಸೀಮೆಎಣ್ಣೆ ಅಯೋಡಿನ್‍ಯುಕ್ತ ಉಪ್ಪು ಮತ್ತು ತಾಳೆ ಎಣ್ಣೆಯನ್ನು ಹೊರತುಪಡಿಸಿ ಬೇರೆ ಮುಕ್ತ ಮಾರುಕಟ್ಟೆಯ ಪದಾರ್ಥಗಳನ್ನು ಖರೀದಿಸುವುದು ಕಡ್ಡಾಯವಿಲ್ಲ. ಆದರೂ ಖರೀದಿಸುವಂತೆ ಒತ್ತಾಯಿಸಿದಲ್ಲಿ ಮಾಹಿತಿ ನೀಡಬಹುದಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಯುಕ್ತರು ಕೋರಿದ್ದಾರೆ.

ಸೆ.5 ರಂದು ವೈದ್ಯಕೀಯ ಶಿಕ್ಷಣ ಸಚಿವರ ಜಿಲ್ಲಾ ಪ್ರವಾಸ

ಮಡಿಕೇರಿ ಸೆ.03(ಕರ್ನಾಟಕ ವಾರ್ತೆ):-ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ ಪ್ರಕಾಶ ಆರ್.ಪಾಟೀಲ ಅವರು ಸೆಪ್ಟೆಂಬರ್ 5 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮಾನ್ಯ ಸಚಿವರು ಸೆ. 5 ರಂದು ಮಧ್ಯಾಹ್ನ 2 ಗಂಟೆಗೆ ಕೊಡಗು ವೈದ್ಯಕೀಯ ವಿಜ್ಞಾನಗಳ ಕಾಲೇಜು ಕಟ್ಟಡ ನಿರ್ಮಾಣದ ಪ್ರಗತಿ ಪರಿಶೀಲನೆ ಹಾಗೂ ಕಾಲೇಜು ಪ್ರಾರಂಭದ ವಿಷಯಗಳಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವರ ಆಪ್ತ ಕಾರ್ಯದರ್ಶಿ ಸಂಗಪ್ಪ ಅವರು ತಿಳಿಸಿದ್ದಾರೆ.

ಸೆ. 5 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಾರಂಭ

ಮಡಿಕೇರಿ ಸೆ.03(ಕರ್ನಾಟಕ ವಾರ್ತೆ):-ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸೆಪ್ಟೆಂಬರ್ 5 ರಂದು ಮಧ್ಯಾಹ್ನ 12.30 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಾರಂಭ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಟಿ.ಜಾನ್, ವಿಧಾನ ಪರಿಷತ್ ಸಭಾಪತಿ ಡಿ.ಹೆಚ್.ಶಂಕರಮೂರ್ತಿ, ವಿರೋಧ ಪಕ್ಷದ ಮುಖ್ಯ ಸಚೇತಕರಾದ ಗಣೇಶ್ ಕಾರ್ಣಿಕ್, ಜಿ.ಪಂ.ಅಧ್ಯಕ್ಷರಾದ ಚೋಡುಮಾಡ ಶರೀನ್ ಸುಬ್ಬಯ್ಯ, ಉಪಾಧ್ಯಕ್ಷರಾದ ಅಲ್ಲಾರಂಡ ಬೀನಾ ಬೊಳ್ಳಮ್ಮ, ಸಂಸದರಾದ ಪ್ರತಾಪ್ ಸಿಂಹ, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಂತೆಯಂಡ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷರಾದ ಶ್ರೀಮತಿ ಬಂಗೇರಾ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಪ್ರತೀಜಾ ಅಚ್ಚಪ್ಪ ಮತ್ತಿತರರು ಭಾಗವಹಿಸಲಿದ್ದಾರೆ.

ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಪ್ರಶಸ್ತಿ ಪುರಸ್ಕøತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ

ಗದಗ (ಕರ್ನಾಟಕ ವಾರ್ತೆ) ಸೆಪ್ಟೆಂಬರ್ 3: ಡಾ. ಸರ್ವಪಲ್ಲಿ ರಾಧಾಕೃಷ್ಣ್ ರವರ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಪ್ರಶಸ್ತಿ ಪುರಸ್ಕøತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆಪ್ಟೆಂಬರ್ 5 ರಂದು ಬೆ. 11 ಗಂಟೆಗೆ ನಗರದ ಕೆ.ಎಚ್.ಪಾಟೀಲ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ತ್ರಿವಿಧ ದಾಸೋಹಿ ಪರಮಪೂಜ್ಯ ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು ವಹಿಸುವರು. ಕಾರ್ಯಕ್ರಮವನ್ನು ಗ್ರಾಮೀಣಾಭಿವೃದ್ಧಿ , ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಂಸದರು, ಶಾಸಕರು, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರು, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು, ಜಿ.ಪಂ. ಅಧ್ಯಕ್ಷ, ಉಪಾಧ್ಯಕ್ಷರು, ಸಂಸದರು, ತಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರು, ನಗರಸಭೆಯ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿಗಳು, ಜಿ.ಪಂ. ಉಪಕಾರ್ಯದರ್ಶಿಗಳು, ಕ.ರಾ.ಸ.ನೌ.ಸಂಘದ ಜಿಲ್ಲಾ ಅಧ್ಯಕ್ಷರು, ಬಿ- ವೃಂದದ ಅಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷರು, ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರು, ಸರಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರು, ದೈ.ಶಿ.ಶಿ. ಸಂಘದ ಜಿಲ್ಲಾ ಅಧ್ಯಕ್ಷರು, ಕ.ರಾ.ಸ. ಗ್ರೇಡ್-1 ದೈ.ಶಿ.ಶಿ. ಸಂಘದ ಜಿಲ್ಲಾ ಅಧ್ಯಕ್ಷರು, ಪ್ರೌಢಶಾಲಾ ಚಿತ್ರಕಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರು, ಪ್ರೌಢಶಾಲಾ ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರು, ಎಸ್.ಸಿ. ಎಸ್.ಟಿ. ವೇದಿಕೆ. ಕ.ರಾ.ಪ್ರಾ.ಶಾ.ಶಿ ಸಂಘದ ಸಂಚಾಲಕರು, ಕ.ರಾ.ಪ್ರಾ.ಶಾ.ಶಿ. ಸಂಘದ ಜಿಲ್ಲಾ ಅಧ್ಯಕ್ಷರು, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕಾ ಅಧ್ಯಕ್ಷರು, ಕ.ರಾ.ಪ್ರಾ.ಶಾ.ಶಿ. ಸಂಘದ ( ಗದಗ ಶಹರ) , ಕ.ರಾ.ಪ್ರಾ.ಶಾ.ಶಿ. ಸಂಘದ ( ಗದಗ-ಗ್ರಾಮೀಣ) ತಾಲೂಕಾ ಅಧ್ಯಕ್ಷರು ಅಧ್ಯಕ್ಷರು, ಕ.ರಾ.ಸ.ನೌ.ಸಂಘದ ಪ್ರಧಾನ ಕಾರ್ಯದರ್ಶಿ, ಕ.ರಾ.ಸ.ನೌ.ಸಂಘದ ರಾಜ್ಯ ಪರಿಷತ್ ಸದಸ್ಯರು, ಆಗಮಿಸುವರು. ಸ,ಪ.ಪೂ. ಮಹಾವಿದ್ಯಾಲಯದ ಉಪನ್ಯಾಸಕ ಶ್ರೀ ಎಸ್.ಎನ್. ಆದಿ ಅತಿಥಿ ಉಪನ್ಯಾಸ ನೀಡುವರು.

ಸೆ. 4,5ರಂದು ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರ ಪ್ರವಾಸ

ಚಾಮರಾಜನಗರ, ಸೆ. 03 (ಕರ್ನಾಟಕ ವಾರ್ತೆ):- ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಸೆಪ್ಟೆಂಬರ್ 4 ಹಾಗೂ 5ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು.

ಸೆ. 4ರಂದು ಬೆಳಿಗ್ಗೆ 10.30 ಗಂಟೆಗೆ ನಗರಕ್ಕೆ ಆಗಮಿಸುವರು. ಬಳಿಕ ವಿವಿ ಸ್ನಾತಕೋತ್ತರ ಉಪಕೇಂದ್ರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಉಪಕೇಂದ್ರ ಎಂದು ನಾಮಕರಣ ಮಾಡಿರುವ ಹಿನ್ನೆಲೆಯಲ್ಲಿ ನಾಮಫಲಕದ ಅನಾವರಣ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಬಲವರ್ಧನೆಗೊಳಿಸುವ ಕುರಿತು ಅದರ ಪದಾಧಿಕಾರಿಗಳೊಂದಿಗೆ ಸಭೆ ನಡೆಸುವರು. ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಪ್ರಕೃತಿ ವಿಕೋಪ ಸಮಿತಿಯ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 1.30 ಗಂಟೆಗೆ ಪಟ್ಟಣದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸುವರು. ಸಂಜೆ 4 ಗಂಟೆಗೆ ಚಾಮರಾಜನಗರ ತಾಲೂಕಿನ ವೆಂಕಟಯ್ಯನ ಛತ್ರದ ಬಳಿ ಸ್ವಾಗತ ಕಮಾನು ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವರು. ಸಂಜೆ 4.30ಕ್ಕೆ ಮೈಸೂರಿಗೆ ತೆರಳುವರು.

ಸೆ. 5ರಂದು ಬೆಳಿಗ್ಗೆ 10.30 ಗಂಟೆಗೆ ನಗರಕ್ಕೆ ಆಗಮಿಸಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಗುಂಡ್ಲುಪೇಟೆಯಲ್ಲಿ ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 5 ಗಂಟೆಗೆ ಮೈಸೂರಿಗೆ ತೆರಳುವರು ಎಂದು ಸಚಿವರ ಆಪ್ತಕಾರ್ಯದರ್ಶಿ ತಿಳಿಸಿದ್ದಾರ

ಸೆ. 4ರಂದು ಡಾ.ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ನೂತನ ನಾಮಫಲಕ ಅನಾವರಣ, ಹೊಸ ವಿಭಾಗಗಳ ಉದ್ಘಾಟನೆ

ಚಾಮರಾಜನಗರ, ಸೆ. 03 (ಕರ್ನಾಟಕ ವಾರ್ತೆ):- ನಗರದ ಮೈಸೂರು ವಿವಿಯ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ನೂತನ ನಾಮಫಲಕ ಅನಾವರಣ ಹಾಗೂ ಹೊಸ ವಿಭಾಗಗಳ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 4ರಂದು ಬೆಳಿಗ್ಗೆ 10 ಗಂಟೆಗೆ ಸ್ನಾತಕೋತ್ತರ ಕೇಂದ್ರದ ಆವರಣದಲ್ಲಿ ನಡೆಯಲಿದೆ.

ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಕಾರ್ಯಕ್ರಮ ಉದ್ಘಾಟಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ನಾಮಫಲಕ ಅನಾವರಣ ಮಾಡುವರು. ಮೈಸೂರು ವಿವಿ ಕುಲಪತಿಗಳಾದ ಪ್ರೊ. ಕೆ.ಎಸ್. ರಂಗಪ್ಪ ಹೊಸ ವಿಭಾಗಗಳನ್ನು ಉದ್ಘಾಟಿಸುವರು. ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.

ಶಾಸಕರಾದ ಆರ್. ನರೇಂದ್ರ, ಎಸ್. ಜಯಣ್ಣ, ನಗರಸಭೆ ಅಧ್ಯಕ್ಷರಾದ ಎಸ್. ನಂಜುಂಡಸ್ವಾಮಿ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರೆಂದು ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪ್ರೊ. ಶಿವಬಸವಯ್ಯ ತಿಳಿಸಿದ್ದಾರೆ.

ಸೆ. 5ರಂದು ಗುಂಡ್ಲುಪೇಟೆಯಲ್ಲಿ ಶಿಕ್ಷಕರ ದಿನಾಚರಣೆ

ಚಾಮರಾಜನಗರ, ಸೆ. 03 (ಕರ್ನಾಟಕ ವಾರ್ತೆ):- ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಗುಂಡ್ಲುಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಸೆಪ್ಟಂಬರ್ 5ರಂದು ಗುಂಡ್ಲುಪೇಟೆ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಪ್ರವಾಸಿ ಮಂದಿರದಿಂದ ಅಶ್ವಾರೂಢ ಸಾರೋಟಿನಲ್ಲಿ ಡಾ. ರಾಧಾಕೃಷ್ಣನ್ ಅವರ ಭಾವಚಿತ್ರವನ್ನು ಒಳಗೊಂಡ ಡೊಳ್ಳುಕುಣಿತ, ಕಂಸಾಳೆ ಹಾಗೂ ಬ್ಯಾಂಡ್ ವಾದನವನ್ನು ಕೂಡಿದ ಮೆರವಣಿಗೆ ಗುರುಭವನದವರೆಗೂ ನಡೆಯಲಿದೆ. ಈ ಮೆರವಣಿಗೆಯಲ್ಲಿ 1300 ಶಿಕ್ಷಕರು ಸಮವಸ್ತ್ರದೊಂದಿಗೆ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ಶಿಕ್ಷಕರ ಭವನದಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು ಸಹಕಾರ, ಸಕ್ಕರೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅಧ್ಯಕ್ಷತೆ ವಹಿಸುವರು.

ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದೇವಮ್ಮಣ್ಣಿ ಕಾರ್ಯಕ್ರಮ ಉದ್ಘಾಟಿಸುವರು. ತಾಲೂಕು ಪಂಚಾಯತ್ ಅಧ್ಯಕ್ಷರಾದ ಎನ್.ಎಸ್. ನಾಗಮಲ್ಲಪ್ಪ್ರ ಅವರು ಭಾವಚಿತ್ರ ಅನಾವರಣ ಮಾಡುವರು. ಪುರಸಭೆ ಅಧ್ಯಕ್ಷರಾದ ಪಿ. ಚಂದ್ರಪ್ಪ ನಿವೃತ್ತ ಶಿಕ್ಷಕರನ್ನು ಸನ್ಮಾನಿಸುವರು.

ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಶಾಸಕರಾದ ಗೋ. ಮಧುಸೂದನ್, ಸಂದೇಶ್ ನಾಗರಾಜು, ಧರ್ಮಸೇನ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಬಂಗಾರ ನಾಯಕ, ಪುರಸಭೆ ಉಪಾಧ್ಯಕ್ಷರಾದ ಸುರೇಶ್ ಕುಮಾರ್, ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪುಟ್ಟಬುದ್ಧಿ, ಜಿಲ್ಳಾ ಪಂಚಾಯತ್ ಸದಸ್ಯರಾದ ಡಿ.ಸಿ. ನಾಗೇಂದ್ರ, ಮಹದೇವಪ್ಪ, ರಾಜೇಶ್ವರಿ, ಆರ್. ಅಂಬಿಕ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಮತ ಸಮಾರಂಭದಲ್ಲಿ ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಲಾವಿದರು ಹಾಗು ಚಲನಚಿತ್ರ ಸಾಹಿತಿಯೂ ಆದ ರಿಚರ್ಡ್ ಲೂಯಿಸ್ ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

ಸೆ. 5ರಂದು ನಗರದಲ್ಲಿ ಶಿಕ್ಷಕರ ದಿನಾಚರಣೆ : ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ

ಚಾಮರಾಜನಗರ, ಸೆ. 03 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆಪ್ಟಂಬರ್ 5ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಭದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಹಕಾರ, ಸಕ್ಕರೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಅವರು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರ ಅನಾವರಣ ಮಾಡುವರು.ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದೇವಮ್ಮಣ್ಣಿ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ನಿವೃತ್ತ ಶಿಕ್ಷಕರನ್ನು ಸನ್ಮಾನಿಸುವರು.

ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಆರ್. ಧರ್ಮಸೇನ, ಎಸ್. ನಾಗರಾಜು (ಸಂದೇಶ್ ನಾಗರಾಜು), ಗೋ. ಮಧುಸೂದನ್, ನಗರಸಭೆ ಅಧ್ಯಕ್ಷರಾದ ಎಸ್. ನಂಜುಂಡಸ್ವಾಮಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಕೇತಮ್ಮ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಪಿ. ಪುಟ್ಟಬುದ್ಧಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಕೆ.ಎಂ. ಗುರುಮಲ್ಲಮ್ಮ, ಉಪಾಧ್ಯಕ್ಷರಾದ ಲಲಿತಾ ನಾಗಯ್ಯ, ನಗರಸಭೆ ಉಪಾಧ್ಯಕ್ಷರಾದ ವಿಜಯಕುಮಾರಿ, ಪ್ರಾದೇಶಿಕ ಪ್ರಬಾರ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಾದ ಎ.ಎಂ. ಕುಂಜಪ್ಪ, ಜಿಲ್ಳಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎಚ್. ನರಸಿಂಹಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್. ಜೈನ್, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಎಚ್.ಎನ್. ಗೀತಾಂಬ ಮುಖ್ಯ ಅತಿಥಿಗಳಾಗಿ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ಖ್ಯಾತ ಕವಿ ಹಾಗೂ ಸಂಸ್ಕøತಿ ಚಿಂತಕರಾದ ಡಾ ಮೂಡ್ನಾಕೂಡು ಚಿನ್ನಸ್ವಾಮಿ ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

10 ಮಂದಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ

ಚಾಮರಾಜನಗರ, ಸೆ. 03 (ಕರ್ನಾಟಕ ವಾರ್ತೆ):- ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ವಿಭಾಗ ಹಾಗೂ ಪ್ರೌಢಶಾಲಾ ವಿಭಾಗದಿಂದ ತಲಾ ಐವರು ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.

ಪ್ರಾಥಮಿಕ ಶಾಲಾ ಶಿಕ್ಷಕರ ವಿಭಾಗ: ನಾರಾಯಣ, ದೈಹಿಕ ಶಿಕ್ಷಕ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸಿದ್ದಯ್ಯನಪುರ, ಚಾ.ನಗರ ತಾಲೂಕು, ನಿರಂಜನ, ಸಹಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಡಗೂರು, ಗುಂಡ್ಲುಪೇಟೆ ತಾಲೂಕು, ಜಿ.ಪಿ. ರಂಗಸ್ವಾಮಿ, ಸಹಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಂತೂರುಮೋಳೆ, ಕೊಳ್ಳೇಗಾಲ ತಾಲೂಕು, ಪಿ. ನಟರಾಜಾಚಾರಿ, ಸಹಶಿಕ್ಷರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಂಚಾಪುರ, ಹನೂರು ವಲಯ, ಮಹದೇವಸ್ವಾಮಿ, ಸಹಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಯರಿಯೂರು, ಯಳಂದೂರು ತಾಲೂಕು.

ಪ್ರೌಢ ಶಾಲಾ ಶಿಕ್ಷಕರ ವಿಭಾಗ: ಶ್ವೇತಾದ್ರಿ, ಸಹಶಿಕ್ಷಕರು, ಸರ್ಕಾರಿ ಪ್ರೌಢ ಶಾಲೆ, ಹರದನಹಳ್ಳಿ, ಚಾ.ನಗರ ತಾಲೂಕು, ಹರಿಕುಮಾರ್, ಸಹಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಕುರಟ್ಟಿ ಹೊಸೂರು, ಹನೂರು ವಲಯ, ನಂದೀಶ್, ಸಹಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಭೀಮನಬೀಡು, ಗುಂಡ್ಲುಪೇಟೆ ತಾಲೂಕು, ಮಹೇಶ್, ಸಹಶಿಕ್ಷಕರು, ಶ್ರೀ ಶಂಭುಲಿಂಗೇಶ್ವರ ಸರ್ಕಾರಿ ಪ್ರೌಢಶಾಲೆ, ಚಿಲಕವಾಡಿ, ಕೊಳ್ಳೇಗಾಲ ತಾಲೂಕು, ಶಿವಕುಮಾರಸ್ವಾಮಿ, ಸಹಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಕೆಸ್ತೂರು, ಯಳಂದೂರು ತಾಲೂಕು.

ಈ ಎಲ್ಲ ಶಿಕ್ಷಕರಿಗೆ ಸೆಪ್ಟೆಂಬರ್ 5ರಂದು ನಗರದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎಸ್. ಮಮತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ. 5ರಂದು ನಗರದಲ್ಲಿ ಮಕ್ಕಳಿಗೆ ಶ್ರೀಕೃಷ್ಣ ವೇಷ ಭೂಷಣ ಸ್ಪರ್ಧೆ

ಚಾಮರಾಜನಗರ, ಸೆ. 03 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತದ ವತಿಯಿಂದ ಶ್ರೀ ಕೃಷ್ಣ ಜಯಂತಿ ಅಂಗವಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಸೆಪ್ಟಂಬರ್ 5ರಂದು ಮದ್ಯಾಹ್ನ 3 ಗಂಟೆಗೆ ಶಾಲಾ ಮಕ್ಕಳಿಗೆ ಶ್ರೀ ಕೃಷ್ಣನ ವೇಷ ಧರಿಸುವ ಸ್ಪರ್ಧೆ ಏರ್ಪಡಿಸಲಾಗಿದೆ.

ಪಟ್ಟಣದ ಪೂರ್ವ ಪ್ರಾಥಮಿಕ ಶಾಲೆಯ ಎಲ್.ಕೆ.ಜಿ, ಯು.ಕೆ.ಜಿ ಹಾಗೂ ಒಂದರಿಂದ ನಾಲ್ಕನೇ ತರಗತಿವರೆಗಿನ ಮಕ್ಕಳು ಶ್ರೀ ಕೃಷ್ಣನ ವೇಷ ಧರಿಸುವ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಸರ್ಕಾರಿ, ಅನುದಾನಿತ, ಅನುದಾನರಹಿತ ಎಲ್ಲಾ ಶಾಲೆಗಳ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಮತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ. 8ರಂದು ಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪಂದ್ಯಾವಳಿ

ಚಾಮರಾಜನಗರ, ಸೆ. 03 (ಕರ್ನಾಟಕ ವಾರ್ತೆ):- ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 14 ರಿಂದ 17ರ ವಯೋಮಿತಿಯ ಶಾಲಾ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 8ರಂದು ವಿವಿಧೆಡೆ ಜಿಲ್ಲಾಮಟ್ಟದ ಪಂದ್ಯಾವಳಿ ಆಯೋಜಿತವಾಗಿದೆ.

ಸಂತೇಮರಹಳ್ಳಿಯ ಜೆ.ಎಸ್.ಎಸ್. ಪ್ರೌಢಶಾಲೆ ಆವರಣದಲ್ಲಿ ಥ್ರೋಬಾಲ್(ವಿವರಗಳಿಗೆ ಮೊಬೈಲ್ 9164607125), ಕೊಳ್ಳೇಗಾಲ ಪಟ್ಟಣದ ಎಂ.ಜಿ.ಎಸ್.ವಿ. ಸಂಸ್ಥೆಯಲ್ಲಿ ಕಬಡ್ಡಿ (ವಿವರಗಳಿಗೆ ಮೊಬೈಲ್ 9481319727), ಹನೂರಿನ ಮಹದೆÉೀಶ್ವರ ಕ್ರೀಡಾಂಗಣದಲ್ಲಿ ಖೋಖೋ (ವಿವರಗಳಿಗೆ ಮೊಬೈಲ್ 9900621670), ಯಳಂದೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಬ್ಯಾಡ್ಮಿಂಟನ್ (ವಿವರಗಳಿಗೆ ಮೊಬೈಲ್ 9448685426), ಗುಂಡ್ಲುಪೇಟೆಯ ದೇವರಾಜ ಅರಸ್ ಕ್ರೀಡಾಂಗಣದಲ್ಲಿ ವಾಲಿಬಾಲ್ (ವಿವರಗಳಿಗೆ ಮೊಬೈಲ್ 9480574290) ಪಂದ್ಯಾವಳಿಗಳು ನಡೆಯಲಿದೆ.

ತಾಲೂಕು ಮಟ್ಟದಲ್ಲಿ ಪ್ರಥಮಸ್ಥಾನ ಗಳಿಸಿರುವವರು ತಮ್ಮ ಶಿಕ್ಷಕರೊಂದಿಗೆ ಆಯಾ ಸ್ಥಳದಂದು ಬೆಳಿಗ್ಗೆ 8.30 ಗಂಟೆಗೆ ವರದಿ ಮಾಡಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ಕಛೇರಿಯ ಕಟ್ಟಡ ನಿರ್ಮಾಣದ ಶಂಕುಸ್ಥಾಪನಾ ಕಾರ್ಯಕ್ರಮ

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ಪೊಲೀಸ್, ಚಿಕ್ಕಬಳ್ಳಾಪುರ ವತಿಯಿಂದ ಜಿಲ್ಲಾ ಪೊಲೀಸ್ ಕಛೇರಿಯ ಕಟ್ಟಡ ನಿರ್ಮಾಣದ ಶಂಕುಸ್ಥಾಪನಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 4ರ ಬೆಳಗ್ಗೆ 11.30 ಕ್ಕೆ ಅಣಕನೂರು ಗ್ರಾಮ, ಚಿಕ್ಕಬಳ್ಳಾಪುರ ತಾಲ್ಲೂಕು ಇಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಶಂಕುಸ್ಥಾಪನೆಯನ್ನು ಗೃಹ ಸಚಿವರಾದ ಕೆ.ಜೆ. ಜಾರ್ಜ್ ರವರು ನೆರವೇರಿಸುವರು. ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರ ಶಾಸಕರಾದ ಡಾ.ಕೆ.ಸುಧಾಕರ್ ರವರು ವಹಿಸುವರು.

ಮೂಲ ಸೌಲಭ್ಯ ಅಭಿವೃದ್ಧಿ, ಹಜ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವರು ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್. ರೋಷನ್‍ಬೇಗ್ ರವರು ನಂದಿ ರೇಂಜರ್‍ಗೆ ಚಾಲನೆಯನ್ನು ನೀಡುವರು.

ಡಾ.ಎಂ. ವೀರಪ್ಪ ಮೊಯಿಲಿ, ಸಂಸದರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ, ವಿಧಾನಸಭೆಯ ಉಪಾಸಭಾಧ್ಯಕ್ಷರು ಹಾಗೂ ಗೌರಿಬಿದನೂರು ಕ್ಷೇತ್ರದ ಶಾಸಕರಾದ ಎನ್.ಹೆಚ್.ಶಿವಶಂಕರರೆಡ್ಡಿ, ಗೃಹ ಸಚಿವರ ಸಲಹೆಗಾರರಾದ ಕೆಂಪಯ್ಯ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಪಿ.ಎನ್.ಮುನೇಗೌಡ, ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಕೆ.ಹೆಚ್. ಮುನಿಯಪ್ಪ ರವರು ಘನ ಉಪಸ್ಥಿತಿ ವಹಿಸುವರು.

ಮುಖ್ಯ ಅತಿಥಿಗಳಾಗಿ ಎಸ್.ಎನ್.ಸುಬ್ಬಾರೆಡ್ಡಿ, ಎಂ.ಕೃಷ್ಣಾರೆಡ್ಡಿ, ಎಂ.ರಾಜಣ್ಣ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ವೀರಯ್ಯ, ನಜೀರ್ ಅಹವiದ್, ವೈ.ಎ.ನಾರಾಯಣಸ್ವಾಮಿ, ತೂಪಲ್ಲಿ ಆರ್. ಚೌಡರೆಡ್ಡಿ, ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರಾದ ಓಂಪ್ರಕಾಶ್, ವiಹಾನಿದೇರ್ಶಕರು, ಕೆ.ಎಸ್.ಪಿ.ಹೆಚ್. ಮತ್ತು ಐಡಿಸಿಎಲ್‍ನ ಅಧ್ಯಕ್ಷರಾದ ಸುಶಾಂತ್ ಮಹಾಪಾತ್ರ, ರಾಜ್ಯಗುಪ್ತವಾರ್ತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಇಲಾಖೆ ಉಸ್ತುವಾರಿ ಅಧಿಕಾರಿಗಳಾದ ಎ.ಎಂ.ಪ್ರಸಾದ್ ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಪೊಲೀಸ್ ಮಹಾನಿರೀಕ್ಷರಾದ ಜೆ.ಅರುಣ್ ಚಕ್ರವರ್ತಿ, ಮಹಾನಿರೀಕ್ಷಕರು ಕೆ.ಎಸ್.ಪಿ.ಹೆಚ್. ಮತ್ತು ಐಡಿಸಿಎಲ್‍ನ ವ್ಯವಸ್ಥಾಪಕ ನಿರ್ದೇಶಕರಾದ ಸೀಮಂತ್ ಕುಮಾರ್ ಸಿಂಗ್, ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬಿ.ಬಿ.ಕಾವೇರಿ ರವರು ಭಾಗವಹಿಸುವರು.

ಸಂಸದರ ಪ್ರವಾಸ ಕಾರ್ಯಕ್ರಮ

ಚಿಕ್ಕಬಳ್ಳಾಪುರ : ಡಾ.ಎಂ. ವೀರಪ್ಪ ಮೊಯಿಲಿ, ಸಂಸದರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ, ರವರು ಸೆಪ್ಟೆಂಬರ್ 4 ಮತ್ತು 5 ರಂದು ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡುವರು.

ಅವರು ಸೆಪ್ಟೆಂಬರ್ 4 ರಂದು ಬೆಳಗ್ಗೆ 11 ಗಂಟೆಗೆ ಚಿಕ್ಕಬಳ್ಳಾಪುರಕ್ಕೆ ಆಗಮಿಸುವರು. ನಂತರ ಬೆಳಗ್ಗೆ 11.30 ಕ್ಕೆ ಅಣಕನೂರು ಗ್ರಾಮದಲ್ಲಿ ಆಯೋಜಿಸಲಾಗಿರುವ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಕಛೇರಿಯ ಕಟ್ಟಡ ನಿರ್ಮಾಣದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಬಾಗವಹಿಸುವರು. ನಂತರ ಮಧ್ಯಾಹ್ನ 1 ಗಂಟೆಗೆ ಚಿಕ್ಕಬಳ್ಳಾಪುರದಿಂದ ನಿರ್ಗಮಿಸುವರು.

ಸೆಪ್ಟೆಂಬರ್ 5 ರ ಬೆಳಗ್ಗೆ 11 ಗಂಟೆಗೆ ಒಕ್ಕಲಿಗರ ಕಲ್ಯಾಣ ಮಂಟಪ, ಬಿ.ಬಿ.ರಸ್ತೆ, ಚಿಕ್ಕಬಳ್ಳಾಪುರ ಇಲ್ಲಿ ಆಯೋಜಿಸಲಾಗಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಕ್ಕೆ ಅವರ ಗೃಹ ಕಛೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡುವರು. ಮಧ್ಯಾಹ್ನ 3 ಗಂಟೆಗೆ ಪತ್ರಕರ್ತರ ಭವನ, ಚಿಕ್ಕಬಳ್ಳಾಪುರ ಇಲ್ಲಿ ಹಮ್ಮಿಕೊಳ್ಳಲಾಗಿರುವ ಚಿಕ್ಕಬಳ್ಳಾಪುರ ಪತ್ರಕರ್ತರ ಸಂಘದ ಭವನ ಉದ್ಘಾಟನೆ ಮತ್ತು ಮೊದಲನೇ ಅಂತಸ್ತಿನ ಸಭಾಂಗಣ ನಿರ್ಮಾಣದ ಶಂಕುಸ್ಥಾಪನಾ ಕಾಂiÀರ್iಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 4ಕ್ಕೆ ಚಿಕ್ಕಬಳ್ಳಾಪುರದಿಂದ ನಿರ್ಗಮಿಸಿ, ಸಂಜೆ 4.30ಕ್ಕೆ ಗೌರಿಬಿದನೂರಿನ ಪ್ರವಾಸಿ ಮಂದಿರಕ್ಕೆ ಆಗಮಿಸುವರು. ಸಂಜೆ 4.40ಕ್ಕೆ ಹೊಸೂರು, ಗೌರಿಬಿದನೂರು ತಾಲ್ಲೂಕು ಇಲ್ಲಿ ಹಮ್ಮಿಕೊಳ್ಳಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ಕಟ್ಟಡ ನಿರ್ಮಾಣದ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 5.15 ಕ್ಕೆ ಕೋಟಾಲದಿನ್ನೆ ಇಲ್ಲಿ ಆಯೋಜಿಸಲಾಗಿರುವ ಎನ್.ಹೆಚ್.-234 ಮಧುಗಿರಿ-ಗೌರಿಬಿದನೂರು-ಚಿಕ್ಕಬಳ್ಳಾಪುರ ಮೊದಲನೇ ಭಾಗದ ರಸ್ತೆ ಕಾಮಗಾರಿಗೆ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು. ನಂತರ ಸಂಜೆ 6.30ಕ್ಕೆ ಗೌರಿಬಿದನೂರಿನಿಂದ ನಿರ್ಗಮಿಸುವರೆಂದು ಸಂಸದರ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಡಿತರ ಚೀಟಿಯಲ್ಲಿ ನಮೂದಾಗಿರುವ ಎಲ್ಲಾ ಸದಸ್ಯರಿಗೂ ಆಹಾರಧಾನ್ಯ ಹಂಚಿಕೆ

ಚಿಕ್ಕಬಳ್ಳಾಪುರ: ಬಿಪಿಎಲ್ ಪಡಿತರ ಚೀಟಿಯಲ್ಲಿ ನಮೂದಾಗಿರುವ ಎಲ್ಲಾ ಕುಟುಂಬ ಸದಸ್ಯರಿಗೂ ಆಹಾರಧಾನ್ಯವನ್ನು ಹಂಚಿಕೆ ಮಾಡಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಆಯುಕ್ತ ಎಸ್.ಎಸ್. ಪಟ್ಟಣಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಲವು ನ್ಯಾಯಬೆಲೆ ಅಂಗಡಿ ವರ್ತಕರು ಬಿಪಿಎಲ್ ಪಡಿತರ ಚೀಟಿಯಲ್ಲಿ ನಮೂದಾಗಿದ್ದರೂ ಸಹ ಮಕ್ಕಳಿಗೆ ಆಹಾರಧಾನ್ಯವನ್ನು ನೀಡುತ್ತಿಲ್ಲವೆಂದು ಪಡಿತರ ಚೀಟಿದಾರರು ಇಲಾಖೆಗೆ ದೂರನ್ನು ಸಲ್ಲಿಸಿದ್ದಾರೆ. ಆದರೆ ಇಲಾಖೆಯು ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿಯಲ್ಲಿ ಬಿಪಿಎಲ್. ಪಡಿತರ ಚೀಟಿಯಲ್ಲಿನ ಕುಟುಂಬ ಸದಸ್ಯರಿಗೆ ಒಂದು ಯೂನಿಟ್‍ನಂತೆ 5 ಕೆ.ಜಿ. ಆಹಾರ ಧಾನ್ಯವನ್ನು, ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ. ಆಹಾರ ಧಾನ್ಯವನ್ನು ವಿತರಿಸಲಾಗುತ್ತಿದೆ.

ಪಡಿತರ ಚೀಟಿದಾರರು ತಮ್ಮ ಚೀಟಿಯಲ್ಲಿ ನಮೂದಾಗಿರುವ ಮಕ್ಕಳ ಹೆಸರಿಗೂ ಆಹಾರ ಧಾನ್ಯವನ್ನು ಪಡೆದುಕೊಳ್ಳಬಹುದು ಉಚಿತ ಆಹಾರಧಾನ್ಯ ವಿತರಣೆಂ ‘ಅನ್ಯಭಾಗ್ಯ ಯೋಜನೆ’ ಜಾರಿಯಾದಾಗಿನಿಂದ ಬಿಪಿಎಲ್ ಮತ್ತು ಅಂತ್ಯೋದಯಗಳಿಗೆ ನೀಡಲಾಗುವ ಆಹಾರಧಾನ್ಯಕ್ಕೆ ಪಡಿತರ ಚೀಟಿದಾರರು ಕೇವಲ ರೂ. 40.50 ಪಾವತಿಸಿ ಪಡಿತರ ಪಡೆಯಬಹುದು. ನ್ಯಾಯಬೆಲೆ ಅಂಗಡಿಯ ವರ್ತಕರು ಹೆಚ್ಚಿನ ದರವನ್ನು ಕೇಳಿದರೆ ಇಲಾಖೆಯ ದೂರವಾಣಿ ಸಂಖ್ಯೆ 1967ಕ್ಕೆ ಕರೆ ಮಾಡಿ ದೂರು ಸಲ್ಲಿಸುವಂತೆ ಅವರು ತಿಳಿಸಿದ್ದಾರೆ.

ಅದೇ ರೀತಿ ಸರ್ಕಾರದಿಂದ ನೀಡಲಾದ ಪಡಿತರ ಪದಾರ್ಥಗಳಾದ ಅಕ್ಕಿ, ಗೋಧಿ, ರಾಗಿ, ಸಕ್ಕರೆ, ಸೀಮೆಎಣ್ಣೆ ಅಯೋಡಿನ್‍ಯುಕ್ತ ಉಪ್ಪು ಮತ್ತು ತಾಳೆ ಎಣ್ಣೆಯನ್ನು ಹೊರತುಪಡಿಸಿ ಬೇರೆ ಮುಕ್ತ ಮಾರುಕಟ್ಟೆಯ ಪದಾರ್ಥಗಳನ್ನು ಖರೀದಿಸುವುದು ಕಡ್ಡಾಯವಿರುವುದಿಲ್ಲ. ಆದರೂ ಖರೀದಿಸುವಂತೆ ಒತ್ತಾಯಿಸಿದಲ್ಲಿ ದೂರವಾಣಿ ಸಂಖ್ಯೆ 1967ಗೆ ದೂರನ್ನು ಸಲ್ಲಿಸುವಂತೆ ಆಯುಕ್ತರು, ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ

ಚಿಕ್ಕಬಳ್ಳಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಸೆಪ್ಟೆಂಬರ್ 5ರ ಬೆಳಗ್ಗೆ 9.30 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮೂಲ ಸೌಲಭ್ಯ ಅಭಿವೃದ್ಧಿ, ಹಜ್ ಹಾಗೂ ವಾರ್ತಾ ಸಚಿವರು ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್. ರೋಷನ್ ಬೇಗ್ ರವರು ನೆರವೇರಿಸುವರು. ಶಾಸಕರಾದ ಡಾ.ಕೆ.ಸುಧಾಕರ್ ರವರು ವಹಿಸುವರು.

ಡಾ.ಎಂ. ವೀರಪ್ಪ ಮೊಯಿಲಿ, ಸಂಸದರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ, ವಿಧಾನಸಭೆಯ ಉಪಾಸಭಾಧ್ಯಕ್ಷರು ಹಾಗೂ ಗೌರಿಬಿದನೂರು ಕ್ಷೇತ್ರದ ಶಾಸಕರಾದ ಎನ್.ಹೆಚ್.ಶಿವಶಂಕರರೆಡ್ಡಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಪಿ.ಎನ್.ಮುನೇಗೌಡ, ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಕೆ.ಹೆಚ್. ಮುನಿಯಪ್ಪ ರವರು ಘನ ಉಪಸ್ಥಿತಿ ವಹಿಸುವರು.

ಮುಖ್ಯ ಅತಿಥಿಗಳಾಗಿ ಎಸ್.ಎನ್.ಸುಬ್ಬಾರೆಡ್ಡಿ, ಎಂ.ಕೃಷ್ಣಾರೆಡ್ಡಿ, ಎಂ.ರಾಜಣ್ಣ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ವೀರಯ್ಯ, ನಜೀರ್ ಅಹವiದ್, ವೈ.ಎ.ನಾರಾಯಣಸ್ವಾಮಿ, ತೂಪಲ್ಲಿ ಆರ್. ಚೌಡರೆಡ್ಡಿ, ನಗರಸಭೆ ಅಧ್ಯಕ್ಷರಾದ ಎಸ್.ಲೀಲಾವತಿ, ಮುಖ್ಯ ಭಾಷಣಕಾರರಾಗಿ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ಎಂ.ಸಿ.ಶ್ರೀನಿವಾಸಯ್ಯ ರವರು ಭಾಗವಹಿಸುವರು.

ಶಿಕ್ಷಕರ ದಿನಾಚರಣೆ

ಚಿಕ್ಕಬಳ್ಳಾಪುರ : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕಬಳ್ಳಾಪುರ ಇವರ ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆಯನ್ನು ಸೆಪ್ಟೆಂಬರ್ 5ರ ಬೆಳಗ್ಗೆ 10.30 ಕ್ಕೆ ಒಕ್ಕಲಿಗರ ಕಲ್ಯಾಣ ಮಂಟಪ, ಬಿ.ಬಿ.ರಸ್ತೆ, ಚಿಕ್ಕಬಳ್ಳಾಪುರ ಇಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮೂಲ ಸೌಲಭ್ಯ ಅಭಿವೃದ್ಧಿ, ಹಜ್ ಹಾಗೂ ವಾರ್ತಾ ಸಚಿವರು ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್. ರೋಷನ್ ಬೇಗ್ ರವರು ನೆರವೇರಿಸುವರು. ಶಾಸಕರಾದ ಡಾ.ಕೆ.ಸುಧಾಕರ್ ರವರು ವಹಿಸುವರು.

ಡಾ.ಎಂ. ವೀರಪ್ಪ ಮೊಯಿಲಿ, ಸಂಸದರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ, ವಿಧಾನಸಭೆಯ ಉಪಾಸಭಾಧ್ಯಕ್ಷರು ಹಾಗೂ ಗೌರಿಬಿದನೂರು ಕ್ಷೇತ್ರದ ಶಾಸಕರಾದ ಎನ್.ಹೆಚ್.ಶಿವಶಂಕರರೆಡ್ಡಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಪಿ.ಎನ್.ಮುನೇಗೌಡ, ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಕೆ.ಹೆಚ್. ಮುನಿಯಪ್ಪ ರವರು ಘನ ಉಪಸ್ಥಿತಿ ವಹಿಸುವರು.

ಮುಖ್ಯ ಅತಿಥಿಗಳಾಗಿ ಎಸ್.ಎನ್.ಸುಬ್ಬಾರೆಡ್ಡಿ, ಎಂ.ಕೃಷ್ಣಾರೆಡ್ಡಿ, ಎಂ.ರಾಜಣ್ಣ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ವೀರಯ್ಯ, ನಜೀರ್ ಅಹವiದ್, ವೈ.ಎ.ನಾರಾಯಣಸ್ವಾಮಿ, ತೂಪಲ್ಲಿ ಆರ್. ಚೌಡರೆಡ್ಡಿ, ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬಿ.ಬಿ.ಕಾವೇರಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ರಾಧಮ್ಮ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಜನಿ ವೇಣುಗೋಪಾಲರೆಡ್ಡಿ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಪಿ.ಎ.ಮೋಹನ್, ಉಪಾಧ್ಯಕ್ಷರಾದ ಕೆ.ಬಿ.ಪ್ರೇಮಾ ವೆಂಕಟಸ್ವಾಮಿ, ನಗರಸಭೆ ಅಧ್ಯಕ್ಷರಾದ ಎಸ್.ಲೀಲಾವತಿ, ಉಪಾಧ್ಯಕ್ಷರಾದ ಜಬೀನಾ ತಾಜ್, ಮುಖ್ಯ ಭಾಷಣಕಾರರಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ.ನರಸಿಂಹಮೂರ್ತಿ ರವರು ಭಾಗವಹಿಸುವರು.

ನಾರಿಶಕ್ತಿ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ: ದಿನಾಂಕ: 08.03.2016ರಂದು ನಡೆಯಲಿರುವ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ 2015-16ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಾಡುವ “ನಾರಿಶಕ್ತಿ ಪುರಸ್ಕಾರ” ಪ್ರಶಸ್ತಿಗಳಿಗಾಗಿ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಸಾಧನೆ ಗೈದಿರುವ ಅರ್ಹ ವ್ಯಕ್ತಿಗಳಿಂದ ಹಾಗೂ ಸಂಸ್ಥೆಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿರುತ್ತದೆ ಎಂದು ಉಲ್ಲೇಖಿತ ಪ್ರಧಾನ ಕಛೇರಿಯ ಅರೆ ಸರ್ಕಾರಿ ಪತ್ರದಲ್ಲಿ ತಿಳಿಸಿರುತ್ತಾರೆ.

ರಾಣಿ ರುದ್ರಮ್ಮದೇವಿ, ಮಾತಾ ಜೀಜಾಬಾಯಿ, ಹಾಗೂ ದೇವಿ ಅಹಲ್ಯಬಾಯಿ ಹೋಳ್ಕರ್ ಪ್ರಶಸ್ತಿಗಳಿಗೆ ಅರ್ಹ ಪ್ರಸ್ತಾವನೆಗಳನ್ನು ಕ್ರಮವಾಗಿ ಗ್ರಾಮೀಣ ಅಭಿವೃಧ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃಧ್ಧಿ ಇಲಾಖೆ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗಳು ಸೂಕ್ತ ಪ್ರಸ್ತಾವನೆ ಪಡೆದು ಸಲ್ಲಿಸುವುದು ಮತ್ತು ಉಳಿದಂತೆ ರಾಣಿ ಗೈಡಿನ್ಲಿಯು ಜೆಲಿಯಾಂಗ್, ರಾಣಿ ಲಕ್ಷ್ಮೀಬಾಯಿ ಪ್ರಶಸ್ತಿಗಳಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ 5 ವರ್ಷಗಳಿಂದ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಸಾಧನೆಗೈದಿರುವ ಹಾಗೂ ವೀರಮಹಿಳೆ ಪ್ರಶಸ್ತಿಗೆ ಅರ್ಹವಿರುವ ಮಹಿಳೆಯರಿಂದ ಹಾಗೂ ನಾರಿಶಕ್ತಿ ಪುರಸ್ಕಾರ” ಪ್ರಶಸ್ತಿಗೆ ಅರ್ಜಿಯನ್ನು ಉಪನಿರ್ದೇಶಕರು, ಮಹಿಳಾ & ಮಕ್ಕಳ ಅಭಿವೃಧ್ಧಿ ಇಲಾಖೆ, ಜಿಲ್ಲಾ ಕಚೇರಿ, ಚಿಕ್ಕಬಳ್ಳಾಪುರ ಇಲ್ಲಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ:07.09.2015ರ ಸಂಜೆ 5.30ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ: 08156-277111, 08156-277112ಗಳನ್ನು ಸಂಪರ್ಕಿಸಬೇಕೆಂದು ಉಪನಿರ್ದೇಶಕರು, ಮಹಿಳಾ & ಮಕ್ಕಳ ಅಭಿವೃಧ್ಧಿ ಇಲಾಖೆ, ಜಿಲ್ಲಾ ಕಚೇರಿ, ಚಿಕ್ಕಬಳ್ಳಾಪುರ ಇವರ ಪ್ರಕಟಣೆ ತಿಳಿಸಿದೆ.

ಆರ್.ಜಿ.ಕೆ.ಎ. ಮತ್ತು ದಸರಾ ಕ್ರೀಡಾಕೂಟ

ಚಿಕ್ಕಬಳ್ಳಾಪುರ: 2015-16ನೇ ಸಾಲಿನ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕು, ಶಿಡ್ಲಘಟ್ಟ ತಾಲ್ಲೂಕು ಮತ್ತು ಚಿಕ್ಕಬಳ್ಳಾಪುರ ತಾಲ್ಲೂಕು ಮಟ್ಟದ ರಾಜೀವ್ ಗಾಂಧಿ ಖೇಲ್ ಅಭಿಯಾನ್ (ಆರ್.ಜಿ.ಕೆ.ಎ) ಬಾಲಕ/ಬಾಲಕಿಯರಿಗೆ ಮತ್ತು ದಸರಾ ಕ್ರೀಡಾಕೂಟವನ್ನು ಪುರುಷ/ಮಹಿಳೆಯರಿಗೆ ಹಮ್ಮಿಕೊಳ್ಳಲಾಗಿದೆ.

ಬಾಲಕ/ಬಾಲಕಿಯರಿಗೆ ಆರ್.ಜಿ.ಕೆ.ಎ ಕ್ರೀಡಾಕೂಟವು ಸೆಪ್ಟೆಂಬರ್ 9 ರಂದು ಹಾಗೂ ದಸರಾ ಕ್ರೀಡಾಕೂಟವು ಸೆಪ್ಟೆಂಬರ್ 10 ರಂದು ಬೆಳಗ್ಗೆ 10 ಗಂಟೆಗೆ ಬಾಗೇಪಲ್ಲಿ ತಾಲ್ಲೂಕು ಕ್ರೀಡಾಂಗಣದಲ್ಲಿ, ಆರ್.ಜಿ.ಕೆ.ಎ ಕ್ರೀಡಾಕೂಟವು ಸೆಪ್ಟೆಂಬರ್ 14 ರಂದು ಹಾಗೂ ದಸರಾ ಸೆಪ್ಟೆಂಬರ್ 15 ರಂದು ಬೆಳಗ್ಗೆ 10ಕ್ಕೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಸರ್.ಎಂ.ವಿ. ಕ್ರೀಡಾಂಗಣದಲ್ಲಿ ಹಾಗೂ ಆರ್.ಜಿ.ಕೆ.ಎ ಕ್ರೀಡಾಕೂಟವು ಸೆಪ್ಟೆಂಬರ್ 18 ರಂದು ಮತ್ತು ದಸರಾ ಸೆಪ್ಟೆಂಬರ್ 19 ರಂದು ಬೆಳಗ್ಗೆ 10ಕ್ಕೆ ಶಿಡ್ಲಘಟ್ಟ ತಾಲ್ಲೂಕಿನ ನೆಹರೂ ಕ್ರೀಡಾಂಗಣದಲ್ಲ ಆಯೋಜಿಸಲಾಗಿದೆ.

ರಾಜೀವ್ ಗಾಂಧಿ ಖೇಲ್ ಅಭಿಯಾನ್(ಆರ್.ಜಿ.ಕೆ.ಎ) ಕ್ರೀಡಾಕೂಟದಲ್ಲಿ ಭಾಗವಹಿಸುವ ಬಾಲಕ/ಬಾಲಕಿಯರಿಗೆ ಮದ್ಯಾಹ್ನ ಲಘು ಉಪಹಾರ, ಪ್ರಯಾಣ ಭತ್ಯೆ, ವಿಜೇತರಾದ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ, ಬಹುಮಾನ, ಹಾಗೂ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನವನ್ನು ಮಾತ್ರ ನೀಡಲಾಗುವುದೆಂದು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಬಳ್ಳಾಪುರ ಇವರ ಪ್ರಕಟಣೆ ತಿಳಿಸಿದೆ.

ಗೃಹ ಸಚಿವರ ಪ್ರವಾಸ ಕಾರ್ಯಕ್ರಮ

ಚಿಕ್ಕಬಳ್ಳಾಪುರ: ಗೃಹ ಸಚಿವರಾದ ಕೆ.ಜೆ.ಜಾರ್ಜ್ ರವರು ಸೆಪ್ಟೆಂಬರ್ 4 ರಂದು ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡುವರು.

ಅವರು ಸೆಪ್ಟೆಂಬರ್ 4ರ ಬೆಳಗ್ಗೆ 11.15 ಗಂಟೆಗೆ ಚಿಕ್ಕಬಳ್ಳಾಪುರಕ್ಕೆ ಆಗಮಿಸುವರು. ನಂತರ ಬೆಳಗ್ಗೆ 11.30ಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯ ನೂತನ ಕಟ್ಟಡ ನಿರ್ಮಾಣದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 2.30ಕ್ಕೆ ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ನಿರ್ಗಮಿಸುವರೆಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.