Government of Karnataka

Department of Information

Saturday 07/11/2015

District News 04-09-2015

Date : Friday, September 4th, 2015
ಕ್ರ.ಸಂ. ಕಾರ್ಯಕ್ರಮದ ವಿವರ ದಿನಾಂಕ ಸಮಯ ಸ್ಥಳ
1. ಡಾ: ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ 2015 ನೇ ಸಾಲಿನ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟನೆ ಶ್ರೀ ಸಿದ್ದರಾಮಯ್ಯ ಸನ್ಮಾನ್ಯ ಮುಖ್ಯಮಂತ್ರಿಗಳು ಅಧ್ಯಕ್ಷತೆ: ಶ್ರೀ ಆರ್. ರೋಷನ್‌ಬೇಗ್ ಸನ್ಮಾನ್ಯ ಮೂಲ ಸೌಕರ್ಯ ಅಭಿವೃದ್ಧಿ, ವಾರ್ತಾ, ಸಾರ್ವಜನಿಕ ಸಂಪರ್ಕ ಮತ್ತು ಹಜ್ ಸಚಿವರು ದಿನಾಂಕ 05-09-2015 ಶನಿವಾರ ಮಧ್ಯಾಹ್ನ 3-00 ಗಂಟೆಗೆ ಡಾ: ಬಿ.ಆರ್.ಅಂಬೇಡ್ಕರ್ ಭವನ, ಮಿಲ್ಲರ್‌ಸ್ ರಸ್ತೆ, ವಸಂತನಗರ, ಬೆಂಗಳೂರು-52

ನಾರಿಶಕ್ತಿ ಪುರಸ್ಕಾರ ಪ್ರಶಸ್ತಿ

ಬೆಂಗಳೂರು: ಸೆ,4: ದಿನಾಂಕ: 8-3-2016 ರಂದು ನಡೆಯಲಿರುವ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ 2015-16ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಾಡುವ ನಾರಿಶಕ್ತಿ ಪುರಸ್ಕಾರಕ್ಕಾಗಿ ಮಹಿಳಾ ಅಭಿವೃದ್ಧಿ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಅರ್ಹ ವ್ಯಕ್ತಿಗಳಿಂದ ಪ್ರಸ್ತಾವನೆಗಳನ್ನು ಪ್ರಶಸ್ತಿ ನೀಡಲು ಆಹ್ವಾನಿಸಲಾಗಿದೆ.

ರಾಣಿ ರುದ್ರಮ್ಮ ದೇವಿ, ಮಾತಾ ಜೀಜಾಬಾಯಿ, ಕನ್ನಗೀ ದೇವಿ ಹಾಗೂ ದೇವಿ ಅಹಲ್ಯ ಹೋಳ್ಕರ್ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದ್ದು, ಪ್ರಶಸ್ತಿಯು ನಗದು ಹಾಗೂ ಪ್ರಮಾಣ ಪತ್ರಗಳನ್ನು ಹೊಂದಿರುತ್ತದೆ. ಈ ಪ್ರಶಸ್ತಿಗಾಗಿ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಇವರಿಂದ ಪಡೆದು ಆಂಗ್ಲ ಭಾಷೆಯಲ್ಲಿ ಅರ್ಜಿಗಳನ್ನು ತ್ರಿಪ್ರತಿಯಲ್ಲಿ ಭರ್ತಿ ಮಾಡಿ ಸಂಬಂಧಪಟ್ಟ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಲೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ: ಎಂ.ಹೆಚ್.ಮರಿಗೌಡ ರಸ್ತೆ, ಕಿದ್ವಾಯಿ ಆಸ್ಪತ್ರೆ ಪಕ್ಕ, ಬೆಂಗಳೂರು-29 ಇವರಿಗೆ ದಿನಾಂಕ: 10-9-2015 ರೊಳಗೆ ತಲುಪುವಂತೆ ಕಳುಹಿಸತಕ್ಕದ್ದು. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಅರ್ಹ ವ್ಯಕ್ತಿಗಳು ಮಾತ್ರ ಪ್ರಸ್ತಾವನೆಗಳನ್ನು ಸಲ್ಲಿಸಬಹುದು (ದೂರವಾಣಿ ಸಂ: 26578688) ಎಂದು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.