Government of Karnataka

Department of Information

Sunday 15/01/2017

District News 04-10-2016

Date : Tuesday, October 4th, 2016

ಜಿಲ್ಲಾ ಸುದ್ದಿಗಳು

ನಮ್ಮ ಗ್ರಾಮ ನಮ್ಮ ಯೋಜನೆ ಕಲಾಜಾಥಾಗೆ ಚಾಲನೆ ಯೋಜನೆ ಸದ್ಬಳಗೆ ಆಗಲಿ: ಜ್ಯೋತಿ ಎಸ್.ಕುಮಾರ್

ಶಿವಮೊಗ್ಗ, ಅ.4 (ಕರ್ನಾಟಕ ವಾರ್ತೆ)- ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರು ಸದ್ಬಳಕೆ ಮಡಿಕೊಂಡಾಗ ಮಾತ್ರ ಸರ್ಕಾರದ ಉದ್ದೇಶ ಈಡೇರಿದಂತಾಗುತ್ತದೆ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಹೇಳಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಮ್ಮಿಕೊಂಡಿರುವ 20 ದಿನಗಳ ನಮ್ಮ ಗ್ರಾಮ ನಮ್ಮ ಯೋಜನೆ ಕಲಾಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮತನಾಡಿದರು.

ರಾಜ್ಯದ ಎಲ್ಲ ಜನರಿಗೂ, ಎಲ್ಲ ವರ್ಗ ಮತ್ತು ಸಮುದಾಯದವರಿಗೂ ರಾಜ್ಯ ಸರ್ಕಾರ ಒಂದಿಲ್ಲೊಂದು ಯೋಜನೆಯನ್ನು ರೂಪಿಸಿದೆ. ಅವುಗಳನ್ನು ಸಮಪರ್ಕವಾಗಿ ಅನುಷ್ಠಾನಕ್ಕೂ ತರಲಾಗಿದೆ. ಈ ಯೋಜನೆಗಳನ್ನು ಫಲನುಭವಿಗಳು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ಸರ್ಕಾರದ ಉದ್ದೇಶ ಈಡೇರುತ್ತದೆ ಎಂದರು.

ವಿಶೇಷವಾಗಿ ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಯೋಜನೆ ಅನುಷ್ಠಾನಗೊಳಿಸುವಲ್ಲಿ ಮಂಚೂಣಿ ಜಿಲ್ಲಾಯಾಗಿದ್ದು, ಹಲವಾರು ಯೋಜನೆಗಳನ್ನು ಫಲನುವಿಗಳ ಮನೆಬಾಗಿಲಿಗೆ ತಲುಪಿಸಿದೆ ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಕ ನಮ್ಮಗ್ರಾಮ ನಮ್ಮ ಯೋಜನೆ ಕಲಾಜಾಥಾ ಕಾರ್ಯಕ್ರಮ ಇಂದಿನಿಂದ ಆರಂಭವಾಗಿ ಜಿಲ್ಲಾದ್ಯಂತ ಬೀದಿನಾಟಕ ಹಾಗೂ ಸಂಗೀತ ಕಾರ್ಯಕ್ರಮಗಳ ಮೂಲಕ 20 ದಿನಗಳ ಕಾಲ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಪ್ರತಿ ಗ್ರಾಮದಲ್ಲೂ ಜನರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಅವರದೇ ಶೈಲಿಯಲ್ಲಿ ಜಾಗೃತಿ ಮೂಡಿಸುವುದು ಯೋಜನೆಯ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಲ್ಪನಾ ಪದ್ಮನಾಭ ಹಾರೋಗೊಳಿಗೆ ಸೇರಿದಂತೆ ಜಿಲ್ಲಾ ಪಂಚಾಯ್ತಿ ಸದಸ್ಯರು, ಉಪ ಕಾರ್ಯದರ್ಶಿ ಡಾ.ಚಂದ್ರಶೇಖರ್, ಜಿಲ್ಲಾ ವಾರ್ತಾಧಿಕಾರಿ ಹಿಮಂತರಾಜು ಜಿ. ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಡೆಂಗ್ಯೂ ನಿಯಂತ್ರಣಕ್ಕೆ ಎಲ್ಲರ ಸಹಕಾರ ಅವಶ್ಯಕ : ಡಿಸಿ

ದಾವಣಗೆರೆ ಅ. 04 – (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ರೋಗದ ನಿಯಂತ್ರಣಕ್ಕೆ ಎಲ್ಲರ ಸಹಕಾರ ಮತ್ತು ಸಹಭಾಗಿತ್ವದ ಅವಶ್ಯಕತೆ ಇದೆ ಎಂದು ಜಿಲ್ಲಾಧಿಕಾರಿ ಡಿ ಎಸ್ ರಮೇಶ್ ಹೇಳಿದರು.

ಅವರು ಇತ್ತೀಚೆಗೆ ಜಿಲ್ಲಾಡಳಿತ ಕಛೇರಿಯ ತುಂಗಭದ್ರಾ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಡೆಂಗ್ಯೂ ರೋಗದ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಡೆಂಗ್ಯೂ ರೋಗ ಹರಡುವ ಈಡೀಸ್ ಸೊಳ್ಳೆಯು ಪರಿಸರದಲ್ಲಿ ಮತ್ತು ಮನೆಗಳಲ್ಲಿ ಸಂಗ್ರಹಿಸಿಡಲಾಗಿರುವ ಸ್ವಚ್ಛ ನೀರಿನಲ್ಲಿ ಉತ್ಪತ್ತಿ ಹೊಂದುತ್ತವೆ. ಆದ್ದರಿಂದ ಸಾರ್ವಜನಿಕರು ಮನೆಯ ಸುತ್ತ ಪರಿಸರ ಹಾಗೂ ನೀರಿನ ಸಂಗ್ರಹಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಗ್ಯೂ ನಿಯಂತ್ರಣಕ್ಕೆ ಸಹಕರಿಸಬೇಕೆಂದ ಅವರು ಖಾಸಗಿ ಆಸ್ಪತ್ರೆಯ ವೈದ್ಯರೂ ಸಹ ಡೆಂಗ್ಯೂ ಪ್ರಕರಣಗಳ ಸೂಕ್ತ ನಿರ್ವಹಣೆ ಮಾಡುವ ಮೂಲಕ ಹೆಚ್ಚಿನ ಅನಾಹುತ ಆಗದಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.

ಜಿಲ್ಲಾ ಕೀಟಜನ್ಯ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಮೀನಾಕ್ಷಿ ಕೆ ಎಸ್ ಮಾತನಡಿ, ಖಾಸಗಿ ಆಸ್ಪತ್ರೆಗೆ ದಾಖಲಾಗುವ ಡೆಂಗ್ಯೂ ಪ್ರಕರಣದ ಖಚಿತತೆಗಾಗಿ ರೋಗಿಯ ವಿವರಣೆಯೊಂದಿಗೆ ರಕ್ತದ ಮಾದರಿಯನ್ನು ಜಿಲ್ಲಾ ಸರ್ವೇಕ್ಷಣಾ ಘಟಕಕ್ಕೆ ಕಳುಹಿಸಿಕೊಡಬೇಕು. ಇದು ಉಚಿತ ಪರೀಕ್ಷೆಯಾಗಿರುತ್ತದೆ. ಖಾಸಗಿ ಆಸ್ಪತ್ರೆಗಳು ಪರೀಕ್ಷೆ ಮಾಡಲು ಸರ್ಕಾರದ ಮಾರ್ಗಸೂಚಿಯನ್ವಯ ಪ್ರತಿ ಪರೀಕ್ಷೆಗೆ ರೂ. 250/- ಶುಲ್ಕ ತೆಗೆದುಕೊಳ್ಳಬೇಕೆಂಬ ನಿರ್ದೇಶನವಿದ್ದು, ಅದನ್ನೇ ಅನುಸರಿಸುವಂತೆ ತಿಳಿಸಿದರು.

ಮಕ್ಕಳ ತಜ್ಞರು ಹಾಗೂ ಎಸ್‍ಎಸ್‍ಐಎಂ & ಆರ್‍ಸಿ ಯ ವೈದ್ಯಕೀಯ ನಿರ್ದೇಶಕ ಡಾ. ಕಾಳಪ್ಪನವರ್ ಎನ್ ಕೆ ಇವರು ಡೆಂಗ್ಯೂ ಪ್ರಕರಣಗಳ ನಿರ್ವಹಣೆ ಬಗ್ಗೆ ಪಿಪಿಟಿ ಮೂಲಕ ವೈದ್ಯರಿಗೆ ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತ್ರಿಪುಲಾಂಭ, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಮತ್ತು ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.

ಖಾಸಗಿ ಸಂಸ್ಥೆಗಳು ಮಕ್ಕಳ ಕಲ್ಯಾಣ ಸಮಿತಿ ಮುಖಾಂತರ ಮಕ್ಕಳ ರಕ್ಷಣೆ ನೀಡಲು ಸೂಚನೆ

ದಾವಣಗೆರೆ ಅ. 04 – (ಕರ್ನಾಟಕ ವಾರ್ತೆ) ; ಮಕ್ಕಳಿಗೆ ರಕ್ಷಣೆ ಕೊಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಸಂಸ್ಥೆಗಳು ಮಕ್ಕಳ ಕಲ್ಯಾಣ ಸಮಿತಿಯ ಮುಖಾಂತರ ಮಾತ್ರ ಮಕ್ಕಳನ್ನು ರಕ್ಷಣೆಗಾಗಿ ದಾಖಲು ಮಾಡಿಕೊಳ್ಳಬೇಕು.

ಖಾಸಗಿ ಸಂಸ್ಥೆಯವರು ತಾವೇ ನೇರವಾಗಿ ಮಕ್ಕಳನ್ನು ಪಡೆಯಲು ಅರ್ಹರಲ್ಲ. ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳಿಗೆ ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಅನಾಥಾಲಯಗಳು, ಆಶ್ರಯಧಾಮಗಳು, ಪೇಯಿಂಗ್ ಗೆಸ್ಟ್(ಅತಿಥಿ ಗೃಹ), ತೆರೆದ ತಂಗುದಾಣಗಳು, ನಿರ್ಗತಿಕ ಮಕ್ಕಳ ಕುಟೀರ, ಬಾಲ ಕಾರ್ಮಿಕರಿಗಾಗಿ ನಡೆಸುತ್ತಿರುವ ಬ್ರಿಡ್ಜ್ ಶಾಲೆಗಳು, ವಿಶೇಷ ದತ್ತು ಕೇಂದ್ರಗಳು, ಉಜ್ವಲ ಕೇಂದ್ರ, ವಿಕಲ ಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಮಾನ್ಯತೆ ಪಡೆದ ವಸತಿಯುತ ಸಂಸ್ಥೆಗಳು ಹಾಗೂ ಎಲ್ಲ ರೀತಿಯ ಮಕ್ಕಳ ಪಾಲನಾ ಸಂಸ್ಥೆಗಳು ಕಡ್ಡಾಯವಾಗಿ ಬಾಲ ನ್ಯಾಯ ಕಾಯ್ದೆ 2000 ರಡಿಯಲ್ಲಿ ನೋಂದಣಿಯಾಗಿ ಕಾರ್ಯ ನಿರ್ವಹಿಸಬೇಕು.

ಈ ಅಂಶಗಳ ಹಿನ್ನೆಲೆಯಲ್ಲಿ ಬಾಲ ನ್ಯಾಯ (ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015 ರಡಿಯಲ್ಲಿ ಇದುವರೆಗೂ ನೋಂದಣಿ ಮಾಡಿಸಿಕೊಳ್ಳದಿರುವ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಈ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಾಲಕರ ಬಾಲಮಂದಿರದ ಆವರಣ, ಎಂಸಿಸಿ ‘ಬಿ’ ಬ್ಲಾಕ್, 14 ನೇ ಕ್ರಾಸ್, ಕುವೆಂಪು ನಗರ, ದಾವಣಗೆರೆ-577004, ದೂರವಾಣಿ ಸಂಖ್ಯೆ: 08192-222700 ಇಲ್ಲಿ ಸಂಪರ್ಕಿಸಿ ನಿಗದಿತ ನಮೂನೆಯನ್ನು ಪಡೆದು ಪ್ರಸ್ತಾವನೆ ಸಲ್ಲಿಸಬೇಕು. ಹಾಗೂ ಈಗಾಗಲೇ ನೋಂದಾಣೆಗೊಂಡಿರುವ ಸಂಸ್ಥೆಗಳು ನೋಂದಣಿ ಅವಧಿ ಮುಗಿಯುವ ಮೂರು ತಿಂಗಳು ಮುಂಚಿತವಾಗಿ ನವೀಕರಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಬೇಕು. ತಪ್ಪಿದಲ್ಲಿ ಸೆಕ್ಷನ್ 42(1) ರನ್ವಯ ಒಂದು ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ದಂಡ ಅಥವಾ ಎರಡೂ ಶಿಕ್ಷೆ ವಿಧಿಸಲಾಗುವುದು.

ನೋಂದಾಯಿಸಲು ತಡ ಮಾಡಿದಲ್ಲಿ ಪ್ರತಿ 30 ದಿನಕ್ಕೆ ಪ್ರತ್ಯೇಕ ಅಪರಾಧ ಎಂದು ಪರಿಗಣಿಸಲಾಗುವುದು. ಹಾಗೂ ಸಂಸ್ಥೆಯು ಯಾವುದೇ ಕಾಯ್ದೆಯಡಿ ನೋಂದಾಣೆಯಾಗಿದ್ದರೂ ಅದನ್ನು ಹಿಂಪಡೆಯಲು ಅಥವಾ ರದ್ದುಪಡಿಸಲು ಕ್ರಮ ಜರುಗಿಸಲಾಗುವುದು. ಒಂದು ವೇಳೆ ಮಕ್ಕಳ ಮೇಲೆ ದೌರ್ಜನ್ಯ ನಡೆದಲ್ಲಿ ಹಾಗೂ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದಲ್ಲಿ ಸಂಸ್ಥೆಯ ಮುಖ್ಯಸ್ಥರನ್ನು ನೇರ ಹೊಣೆಗಾರರನ್ನಾಗಿಸಲಾಗುವುದು.

ತಮ್ಮ ಆಸುಪಾಸಿನಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳಿರುವ ಸಾರ್ವಜನಿಕರು ಈ ಬಗ್ಗೆ ಮಾಹಿತಿಯನ್ನು ವಿಳಾಸದೊಂದಿಗೆ ಕೂಡಲೇ ಹತ್ತಿರದ ಪೊಲೀಸ್ ಠಾಣೆ/ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು/ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ/ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ/ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳಿಗೆ ತಿಳಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಶೈಕ್ಷಣಿಕ ಸಾಲಿಗಾಗಿ ಸಂಯೋಜನಾ ಅರ್ಜಿ ಆಹ್ವಾನ

ದಾವಣಗೆರೆ ಅ.04 – (ಕರ್ನಾಟಕ ವಾರ್ತೆ) : ವಿಶ್ವವಿದ್ಯಾಲಯ ವ್ಯಾಪ್ತಿಯ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ 2017-18ನೇ ಶೈಕ್ಷಣಿಕ ಸಾಲಿನಿಂದ ಹೊಸದಾಗಿ ಕಲಾ, ವಿಜ್ಞಾನ, ವಾಣಿಜ್ಯ, ಆಡಳಿತ ನಿರ್ವಹಣೆ, ಶಿಕ್ಷಣ ಮತ್ತು ದೈಹಿಕ ಶಿಕ್ಷಣ ವಿಷಯಗಳಲ್ಲಿ ಪದವಿ ಕಾಲೇಜುಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರದ ಅನುದಾನ ಇಲ್ಲದೇ ಕಾಲೇಜುಗಳನ್ನು ನಡೆಸಲು ಆರ್ಥಿಕ ಸಾಮಥ್ರ್ಯವುಳ್ಳ ನೋಂದಾಯಿತ ಸೊಸೈಟಿ/ಸಾರ್ವಜನಿಕ ಟ್ರಸ್ಟ್/ಸಂಸ್ಥೆಗಳಿಂದ ನವೀನ ಸಂಯೋಜನೆಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳು ತಮ್ಮ ಕಾಲೇಜುಗಳ ಮುಂದುವರಿಕೆ ಸಂಯೋಜನೆ, ಶಾಶ್ವತ ಸಂಯೋಜನಾ ಪರಿಶೀಲನೆ, ಶಾಶ್ವತ ನವೀಕರಣ, ಹೊಸ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‍ಗಳಿಗೆ ನವೀನ ಸಂಯೋಜನೆ, ಐಚ್ಚಿಕ ವಿಷಯ ಸಮೂಹ, ಭಾಷಾ ವಿಷಯಗಳ ನವೀನ ಸಂಯೋಜನೆ, ವಿದ್ಯಾರ್ಥಿ ಪ್ರಮಾಣದ ವಿಸ್ತರಣೆ ಇವುಗಳಿಗೆ ಸಂಬಂಧಿಸಿದಂತೆ 2017-18 ನೇ ಶೈಕ್ಷಣಿಕ ವರ್ಷಕ್ಕಾಗಿ ಸಂಯೋಜನಾ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸಬಹುದಾಗಿದೆ.

2017-18ನೇ ಸಾಲಿನ ಸಂಯೋಜನಾ ಪ್ರಸ್ತಾವನೆಗಳ ಅರ್ಜಿಗಳನ್ನು ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ಸಲ್ಲಿಸಬೇಕು. ದಂಡ ಶುಲ್ಕವಿಲ್ಲದೆ ಅರ್ಜಿ ಸಲ್ಲಿಸಲು ನವೆಂಬರ್ 02 ಮತ್ತು 15,000 ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.

ಭರ್ತಿಮಾಡಿದ ಅರ್ಜಿಗಳನ್ನು ನಿರ್ದೇಶಕರು, ಕಾಲೇಜು ಅಭಿವೃದ್ದಿ ಪರಿಷತ್, ದಾವಣಗೆರೆ ವಿಶ್ವವಿದ್ಯಾಲಯ ಶಿವಗಂಗೋತ್ರಿ, ದಾವಣಗೆರೆ ಇವರ ಕಛೇರಿಗೆ ಖುದ್ದಾಗಿ ಅಥವಾ ನೊಂದಾಯಿತ ಅಂಚೆಯ ಮೂಲಕ ನಿಗದಿತ ದಿನಾಂಕದೊಳಗಾಗಿ ಸಲ್ಲಿಸಬಹುದಾಗಿದೆ. ಅಂಚೆ ವಿಳಂಬಕ್ಕೆ ವಿಶ್ವವಿದ್ಯಾಲಯ ಜವಾಬ್ದಾರಿಯಲ್ಲ ಎಂದು ಪ್ರಕಟಣೆ ತಿಳಿಸಿದೆ.

ಕೊಡಗು ಜಿಲ್ಲೆಯ ಮಳೆ ವಿವರ(ಮಿಲಿ ಮೀಟರ್‍ಗಳಲ್ಲಿ)

ಮಡಿಕೇರಿ ಅ.04(ಕರ್ನಾಟಕ ವಾರ್ತೆ):- ಕೊಡಗು ಜಿಲ್ಲೆಯ ಇಂದಿನ(ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ) ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 8.16 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 1691.35 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2070.06 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 16.9 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2580.5 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3097.99 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 4.82 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1194.99 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1655.94 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 2.77 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1298.46 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1458 ಮಿ.ಮೀ. ಮಳೆಯಾಗಿತ್ತು.

ಹಾರಂಗಿ ಜಲಾಶಯದ ನೀರಿನ ಮಟ್ಟ (04-10-2016) ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2854.85 ಅಡಿಗಳು, ಕಳೆದ ವರ್ಷ ಇದೇ ದಿನ 2835.37 ಅಡಿ. ಇಂದಿನ ನೀರಿನ ಒಳ ಹರಿವು 345 ಕ್ಯೂಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 1679 ಕ್ಯೂಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 1667, ನಾಲೆಗೆ 625. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 100, ನಾಲೆಗೆ 1750 ಕ್ಯೂಸೆಕ್.

ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಮಡಿಕೇರಿ ಅ.04 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಇದೇ 15 ರಂದು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಮಂಗಳವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಸಮಾಜದ ಬಾಂಧವರು ಸೇರಿದಂತೆ ಇತರರು ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ಮನವಿ ಮಾಡಿದರು.

ಕಲೆ, ಜಾನಪದ ಸಂಸ್ಕøತಿಯನ್ನು ಪ್ರತಿಬಿಂಬಿಸುವ ನಿಟ್ಟಿನಲ್ಲಿ ವಾಲ್ಮೀಕಿ ಜಯಂತಿಯಂದು ವಿಶೇಷ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು.

ಇದೇ ಅಕ್ಟೋಬರ್ 15ರಂದು ನಡೆಯುವ ವಾಲ್ಮೀಕಿ ಜಯಂತಿಯಂದು ಜಿಲ್ಲೆಯ ನಾನಾ ಸಂಘ ಸಂಸ್ಥೆಗಳು, ಸಮುದಾಯದ ಮುಖಂಡರು ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಕೋರಿದರು.

ಮಹರ್ಷಿ ವಾಲ್ಮೀಕಿ ಅವರ ಜನ್ಮ ಜಯಂತಿಯನ್ನು ಅಚ್ಚುಕಟ್ಟಾಗಿ ಏರ್ಪಡಿಸುವಂತಾಗಬೇಕು. ಕಳೆದ ಬಾರಿಯಂತೆ ಈ ಬಾರಿಯೂ ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜಿಸಲು ಕ್ರಮವಹಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಕುಶಾಲನಗರದ ವಾಲ್ಮೀಕಿ ಭವನದಲ್ಲಿ ಆಚರಿಸುವಂತಾಗಬೇಕು ಎಂದು ಸಮಾಜದ ಮುಖಂಡರ ಮನವಿಗೆ ಪ್ರತಿಕ್ರಿಯಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಈ ಸಂಬಂಧ ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಲಾಗುವುದು ಎಂದರು.

ಜಿಲ್ಲೆಯ ಗಿರಿಜನ ಜಾನಪದ ಕಲಾತಂಡಗಳನ್ನು ಆಹ್ವಾನಿಸುವುದು. ಪಿ.ಯು.ಸಿಯಲ್ಲಿ ಅಧಿಕ ಅಂಕ ಪಡೆದವರಿಗೆ ಪ್ರೋತ್ಸಾಹ ಧನ ನೀಡುವುದು. ಗಿರಿಜನ ಸಮುದಾಯದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸುವುದು ಹಾಗೆಯೇ ವಾಲ್ಮೀಕಿ ಜಯಂತಿಯಂದು ಭಾಷಣ ಮಾಡಲು ವಿಶೇಷ ಆಹ್ವಾನಿತರ ಹೆಸರು ಸೂಚಿಸುವಂತೆ ಸಮುದಾಯದ ಮುಖಂಡರಲ್ಲಿ ಕೋರಲಾಯಿತು.

ವಾಲ್ಮೀಕಿ ಸಮಾಜದ ಮುಖಂಡರಾದ ಅಶೋಕ್ ಅವರು ಮಾತನಾಡಿ ಕುಶಾಲನಗರದಲ್ಲಿ ಒಂದು ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ವಾಲ್ಮೀಕಿ ಭವನದಲ್ಲಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಅವರು ಮನವಿ ಮಾಡಿದರು.

ಜಿ.ಪಂ.ಸದಸ್ಯರಾದ ಕುಮಾರ್ ಮತ್ತು ವಿರಾಜಪೇಟೆ ತಾಲ್ಲೂಕು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷರಾದ ಜೆ.ಕೆ.ರಾಮು ಅವರು ಜಿಲ್ಲಾ ಕೇಂದ್ರವಾದ ಮಡಿಕೇರಿಯಲ್ಲಿ ವಾಲ್ಮೀಕಿ ಜಯಂತಿ ಆಯೋಜಿಸಬೇಕು. ಇದರಿಂದ ಕರಿಕೆ, ಪೆರಾಜೆ, ಚೆಂಬು ಹಾಗೂ ವಿರಾಜಪೇಟೆಯ ಗಡಿ ಭಾಗದ ಗ್ರಾಮಗಳಿಂದ ಆಗಮಿಸಲು ಅನುಕೂಲವಾಗಲಿದೆ ಎಂದು ಅವರು ಸಲಹೆ ಮಾಡಿದರು.

ಜಿ.ಪಂ.ಮಾಜಿ ಸದಸ್ಯರಾದ ಎಸ್.ಎನ್.ರಾಜಾರಾವ್ ಅವರು ಕಾರ್ಯಕ್ರಮಕ್ಕೆ ದೂರದಿಂದ ಆಗಮಿಸುವವರಿಗೆ ವಾಹನ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮ ಅಚ್ಚುಕಟ್ಟು ವ್ಯವಸ್ಥೆಗೆ ಹಲವು ಸಲಹೆ, ಮಾರ್ಗದರ್ಶನ ನೀಡಿದರು.

ಎಸ್‍ಎಸ್‍ಎಲ್‍ಸಿ, ಪಿ.ಯು.ಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.

ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಮಲ್ಲಪ್ಪ ಅವರು ಕಳೆದ ಬಾರಿಯಂತೆ ವಾಲ್ಮೀಕಿ ಜಯಂತಿಯನ್ನು ವ್ಯವಸ್ಥಿತವಾಗಿ ಆಯೋಜಿಸುವಂತಾಗಬೇಕು. ಸಮುದಾಯದಲ್ಲಿ ಉತ್ತಮ ಸಾಧನೆ ಮಾಡಿದವನ್ನು ಪ್ರೋತ್ಸಾಹಿಸುವಂತಾಗಬೇಕು ಎಂದು ಅವರು ಕೋರಿದರು.

ಜಿಲ್ಲಾ ಸಮಗ್ರ ಗಿರಿಜನ ಅಭಿವೃದ್ಧಿ ಅಧಿಕಾರಿ ಸುರೇಶ್ ಅವರು ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆ ಮಾಡುವ ಬಗ್ಗೆ ಹಲವು ಮಾಹಿತಿ ನೀಡಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕೆ.ರಾಮಪ್ಪ, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಡಾ.ನಾಗರಾಜು, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಬಿ.ಆರ್.ಗಿರೀಶ್, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿ.ಜಗನ್ನಾಥ್, ಉಪ ಪೊಲೀಸ್ ನಿರೀಕ್ಷರಾದ ಐ.ಪಿ.ಮೇದಪ್ಪ, ಜಿ.ಪಂ.ಎಂಜಿನಿಯರ್ ಮಂಜುನಾಥ್, ಕಾರ್ಮಿಕ ಇಲಾಖೆ ಅಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿ ಮಮ್ತಾಜ್, ತಹಶೀಲ್ದಾರ್ ಕುಸುಮ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್, ಐಟಿಡಿಪಿ ಇಲಾಖೆಯ ಆರ್.ಬಿ.ರಂಗನಾಥ್, ನಾನಾ ಇಲಾಖೆಯ ಅಧಿಕಾರಿಗಳು, ಸಮಾಜದ ಮುಖಂಡರು ಇತರರು ಇದ್ದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಅಭಿವೃದ್ಧಿಗೆ ಕ್ರಮ: ಪ್ರೊ.ಕೆ.ಬೈರಪ್ಪ

ಮಡಿಕೇರಿ ಅ.04 (ಕರ್ನಾಟಕ ವಾರ್ತೆ):-ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ಮತ್ತಷ್ಟು ಮೂಲ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸುಸರ್ಜಿತ ಬಹುಮಹಡಿ ಕಟ್ಟಡ ನಿರ್ಮಿಸಲು ಮಂಗಳೂರು ವಿಶ್ವವಿದ್ಯಾನಿಲಯ ಆಡಳಿತ ಮಂಡಳಿ ತಯಾರಿ ನಡೆಸಿದೆ ಎಂದು ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಕೆ.ಬೈರಪ್ಪ ಅವರು ತಿಳಿಸಿದ್ದಾರೆ.

ಮಂಗಳೂರು ವಿಶ್ವ ವಿದ್ಯಾನಿಲಯ ಫೀಲ್ಡ್ ಮಾರ್ಷಲ್ ಕೆಂ.ಎಂ ಕಾರ್ಯಪ್ಪ ಕಾಲೇಜಿನ ಬಳಿ ಸುಮಾರು 1 ಕೋಟಿ 3 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಮಹಿಳಾ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಫೀಲ್ಡ್ ಮಾರ್ಷಲ್ ಕೆ,ಎಂ.ಕಾರ್ಯಪ್ಪ ಕಾಲೇಜು ನ್ಯಾಕ್ ಸಂಸ್ಥೆಯಿಂದ ಎ ಶ್ರೇಣಿ ಮಾನ್ಯತೆಯೊಂದಿಗೆ ಉತ್ಕøಷ್ಟತೆಯ ಸಾಮಾಥ್ಯವುಳ್ಳ ಸಂಸ್ಥೆ ಎಂಬ ಯು.ಜಿ.ಸಿ ಮಾನ್ಯತೆಯನ್ನು ಪಡೆದಿದೆ. ಇದರ ಜೊತೆಗೆ ಕಾಲೇಜಿಗೆ ದಾಖಲಾಗುವ ವಿದ್ಯಾರ್ಥಿಗಳ ಸಂಖ್ಯೆಯು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದರಿಂದ ಕಾಲೇಜಿನಗೆ ಸುಸರ್ಜಿತ ಎಲ್ಲಾ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಬಹುಮಹಡಿ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಸದ್ಯದಲ್ಲಿಯೇ ಆಡಳಿತ ಮಂಡಳಿ ಹಾಗೂ ಕಾಲೇಜು ಕಟ್ಟಡ ಅಭಿವೃದ್ದಿ ಸಂಬಂಧ ಎಂಜಿನಿಯರ್‍ಗಳ ಜೊತೆ ಚರ್ಚೆ ನಡೆಸಿ ಒಂದು ವರ್ಷದ ಒಳಗೆ ಕಟ್ಟಡ ನಿರ್ಮಾಣಕ್ಕೆ ಮುಂದಾಗಲಾಗುವುದು ಎಂದು ಕುಲಪತಿ ಕೆ.ಬೈರಪ್ಪ ಅವರು ತಿಳಿಸಿದರು.

ಫೀಲ್ಡ್ ಮಾರ್ಷಲ್ ಕೆ,ಎಂ.ಕಾರ್ಯಪ್ಪ ಕಾಲೇಜು ಅಭಿವೃದ್ಧಿಗೆ ಸಂಬಂಧಿಸಿದಂತೆ 36.6 ಎಕರೆ ಜಾಗವಿದ್ದು, ಇದರ ಬಳಕೆ ಪೂರ್ಣವಾಗಿ ಕಾಲೇಜು ಅಭಿವೃದ್ದಿಗೆ ಸಂಬಂಧಿಸಿದಂತೆ ಮೀಸಲಿಡಲಾಗುವುದು, ಇದರ ಜೊತೆಗೆ ಶಿಕ್ಷಕರ ನೇಮಕಕ್ಕೆ ಅಗತ್ಯ ತಯಾರಿ ನಡೆಸಲಾಗುವುದು ಎಂದು ತಿಳಿಸಿದರು.

ಹೊಸದಾಗಿ ಆರಂಭಗೊಂಡ ಮಹಿಳಾ ವಸತಿ ನಿಲಯವು ಸುಸಜ್ಜಿತವಾಗಿದ್ದು, ಕಾಲೇಜಿಗೆ ದೂರದಿಂದ ಬರುವ ಅಥವಾ ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಇದರ ಅನುಕೂಲವನ್ನು ಪಡೆಯಬಹುದಾಗಿದೆ ಮತ್ತು ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆಗೆ ಆದ್ಯತೆ ಕೊಡುವ ನಿಟ್ಟಿನಲ್ಲಿ ಸಿ.ಸಿ ಕ್ಯಾಮರ ಅಳವಡಿಕೆ ಜೊತೆಗೆ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಾರ್ವತಿ ಅಪ್ಪಯ್ಯ ಅವರು ಮಾತನಾಡಿ ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, 2 ಸಾವಿರಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇದರಲ್ಲಿ ಶೇ. 65 ರಷ್ಟು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿನಿಯರು ಹೆಚ್ಚಾಗಿ ದೂರದ ಗ್ರಾಮೀಣ ಭಾಗಗಳಿಂದ ಬರುವುದರಿಂದ ಮಹಿಳಾ ವಸತಿ ನಿಲಯದ ಬೇಡಿಕೆ ಸಾಕಷ್ಟು ವರ್ಷದಿಂದ ಇತ್ತು, ಸದ್ಯ ಈಗ ಯು.ಜಿ.ಸಿ ಸಹಯೋಗದೊಂದಿಗೆ ಈಡೇರಿದೆ ಎಂದು ತಿಳಿಸಿದರು. ವಿದ್ಯಾರ್ಥಿ ವಸತಿ ನಿಲಾಯದಲ್ಲಿ 11 ಕೊಠಡಿಗಳು ಸೇರಿದಂತೆ, ಗ್ರಂಥಾಲಯ, ಕಚೇರಿ, ಅಡುಗೆ ಮನೆ ಇದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕಾರ್ಯಕಾರಿ ಅಭಿಯಂತರರಾದ ಎಂ.ಚಂದ್ರಶೇಖರ್, ವಾರ್ಡನ್ ಗಾಯತ್ರಿ ದೇವಿ ಹಾಗೂ ಕಾಲೇಜು ಪಿ.ಟಿ.ಐ ಪದಾಧಿಕಾರಿಗಳಾದ ನಂದಿನೆರವಂಡ ಅಪ್ಪಯ್ಯ, ಬಿ.ಎಸ್.ಆನಂದ, ಶಿವಕುಮಾರ್, ಶಿಕ್ಷಕರು ವಿದ್ಯಾಥಿಗಳು ಮತ್ತಿತರರು ಇದ್ದರು.

ಪ್ರಬಂಧ ಸ್ಪರ್ಧೆ ಅ.26 ಕ್ಕೆ ಮುಂದೂಡಿಕೆ

ಮಡಿಕೇರಿ ಅ.04 (ಕರ್ನಾಟಕ ವಾರ್ತೆ):- ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಅಕ್ಟೋಬರ್ 5 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಂತ ಕವಿ ಕನಕದಾಸರ ಕುರಿತು ಪ್ರಬಂಧ ಸ್ಪರ್ಧೆಯನ್ನು ನಡೆಸಲು ತೀರ್ಮಾನಿಸಲಾಗಿತ್ತು ಆದರೆ ಪ್ರೌಢಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಈ ಸ್ಪರ್ಧೆಯನ್ನು ಅಕ್ಟೋಬರ್ 26 ಕ್ಕೆ ಮುಂದೂಡಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ 9900457040 ನ್ನು ಸಂಪರ್ಕಿಸಬಹುದಾಗಿದೆ ಎಂದು ಕೂಡಿಗೆ ಡಯಟ್ ಪ್ರಾಂಶುಪಾಲರಾದ ವೇದಮೂರ್ತಿ ಅವರು ತಿಳಿಸಿದ್ದಾರೆ.

ಅರ್ಜಿ ಆಹ್ವಾನ

ಮಡಿಕೇರಿ ಅ.04 (ಕರ್ನಾಟಕ ವಾರ್ತೆ):- 2016-17 ನೇ ಸಾಲಿನ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿ.ಎಂ.ಇ.ಜಿ.ಪಿ) ಕಾರ್ಯಕ್ರಮದಡಿಯಲ್ಲಿ ಕೈಗಾರಿಕೆ/ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು www.kvic.org.in ನಲ್ಲಿ ಅರ್ಜಿಗಳನ್ನು ಪಡೆದು 2 ಸೆಟ್‍ನಲ್ಲಿ ದಾಖಲಾತಿಗಳನ್ನು ಈ ಕಚೇರಿಗೆ ಸಲ್ಲಿಸುವುದು. ಅಪೂರ್ಣವಾಗಿ ಭರ್ತಿ ಮಾಡಿದ ಹಾಗೂ ದಾಖಲೆಗಳನ್ನು ನೀಡದೆ ಇರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಇವರ ಕಚೇರಿಯನ್ನು ಸಂಪರ್ಕಿಸುವುದು. ದೂರವಾಣಿ ಸಂಖ್ಯೆ: 08272-228431. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 21 ಆಗಿರುತ್ತದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಮಡಿಕೇರಿ ಅ.04 (ಕರ್ನಾಟಕ ವಾರ್ತೆ):-ಕೊಡಗು ಜಿಲ್ಲೆಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಜಿಲ್ಲಾ ಕೈಗಾರಿಕಾ ಕೇಂದ್ರದ ಮೂಲಕ ವೃತ್ತಿ ನಿರತ ಕುಶಲಕರ್ಮಿಗಳಿಗೆ ಅವರ ವೃತ್ತಿಯನ್ನು ಮುಂದುವರೆಸಿಕೊಂಡು ಹೋಗಲು ಮತ್ತು ವಾಸಿಸಲು ಅನುಕೂಲವಾಗುವಂತೆ 2016-17 ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿಯಲ್ಲಿ ವೈಯಕ್ತಿಕ ವಸತಿ ಮತ್ತು ಕಾರ್ಯಗಾರಗಳನ್ನು ತಲಾ ರೂ. 2.50 ಲಕ್ಷಗಳ ಯೋಜನಾ ವೆಚ್ಚದಲ್ಲಿ 3 ಚದರ ಆರ್.ಸಿ.ಸಿ ಅಥವಾ 4 ಚದರ ಶೀಟಿನ ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.

ಗುರಿ ಕ್ರಮವಾಗಿ 10 ಮನೆ 5 ಸಂಖ್ಯೆ ಮನೆ ಇರುತ್ತದೆ. ಇದರಲ್ಲಿ ರೂ. 2.25 ಲಕ್ಷಗಳನ್ನು ಸರ್ಕಾರದಿಂದ ನೀಡಲಾಗುವುದು. ಉಳಿಕೆ ರೂ. 25,000 ಗಳನ್ನು ಫಲಾನುಭವಿ ಆಯ್ಕೆಯಾದ ಕೂಡಲೇ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಇವರ ಖಾತೆಗೆ ಮುಂಗಡವಾಗಿ ನೀಡಬೇಕಾಗಿದೆ. ಈ ಯೋಜನೆಯಡಿ ಸ್ವಂತ ನಿವೇಶನ ಹೊಂದಿರುವ ಮತ್ತು ಗುಡಿಸಲು/ ಶಿಥಿಲಗೊಂಡಿರುವ ಮನೆಯನ್ನು ಹೊಂದಿರುವ ವೃತ್ತಿನಿರತ ಕುಶಲಕರ್ಮಿಗಳು ಮಾತ್ರ ಅರ್ಜಿಯನ್ನು ಅಕ್ಟೋಬರ್ 28 ರೊಳಗೆ ಎಲ್ಲಾ ದಾಖಲೆಗಳೊಂದಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಡಗು ಜಿಲ್ಲೆ, ಮಡಿಕೇರಿಗೆ ಇಲ್ಲಿಗೆ ಸಲ್ಲಿಸುವುದು. ವೃತ್ತಿ ಮಾಡದೆ ಇರುವವರಿಗೆ ಅವಕಾಶವಿರುವುದಿಲ್ಲ. ಅರ್ಜಿ ನಮೂನೆಗಳು ನೀಡಬೇಕಾದ ದಾಖಲೆಗಳು ಹಾಗೂ ಹೆಚ್ಚಿನ ವಿವರಗಳನ್ನು ಕಚೇರಿಯಿಂದ ಪಡೆದುಕೊಳ್ಳಬಹುದಾಗಿದೆ. ದೂರವಾಣಿ ಸಂಖ್ಯೆ: 08272-228431 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಅರಣ್ಯ ಹಕ್ಕು ಪತ್ರ; ಅರ್ಜಿ ಸಲ್ಲಿಕೆಗೆ ಮನವಿ

ಮಡಿಕೇರಿ ಅ.04 (ಕರ್ನಾಟಕ ವಾರ್ತೆ):- ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ (ಅರಣ್ಯಹಕ್ಕುಗಳನ್ನು ಮಾನ್ಯ ಮಾಡುವ) ಅಧಿನಿಯಮ 2006 (2007ರ 2) ಮತ್ತು ನಿಯಮಗಳು 2008 ಹಾಗೂ ತಿದ್ದುಪಡಿ ನಿಯಮಗಳು 2012ರ ಪ್ರಕಾರ ಅರಣ್ಯ ವಾಸಿಗಳು ಅರಣ್ಯ ಹಕ್ಕು ಪತ್ರ ಪಡೆಯಲು ಸಂಬಂಧಿಸಿದ ಗ್ರಾಮ ಪಂಚಾಯ್ತಿ ಕಾರ್ಯಲಯದಿಂದ ನಿಗಧಿತ ನಮೂನೆಯನ್ನು ಪಡೆದು ಭರ್ತಿಮಾಡಿ ಅಕ್ಟೋಬರ್ 31 ರೊಳಗಾಗಿ ಗ್ರಾಮ ಪಂಚಾಯತ್ ಕಾರ್ಯಾಲಯಕ್ಕೆ ಸಲ್ಲಿಸುವಂತೆ ಜಿಲ್ಲಾ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಕೆ.ವಿ.ಸುರೇಶ್ ಕೋರಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ದೂರವಾಣಿ ಸಂ: 08272-223552, ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ದೂ.ಸಂ 08276-281115, ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ಪೊನ್ನಂಪೇಟೆ, ವಿರಾಜಪೇಟೆ ದೂರವಾಣಿ ಸಂ: 08274-261261 ರವರನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.

ಅ.6 ರಂದು ರಸಪ್ರಶ್ನೆ ಕಾರ್ಯಕ್ರಮ

ಮಡಿಕೇರಿ ಅ.04 (ಕರ್ನಾಟಕ ವಾರ್ತೆ):- 2016-17ನೇ ಸಾಲಿನ ಗ್ರಾಮೀಣ ಮಟ್ಟದ ಪ್ರೌಢ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ತಂತ್ರಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಅಕ್ಟೋಬರ್ 6 ರಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದು ಶಾಲಾ ಮಟ್ಟದಲ್ಲಿ ವಿಜೇತರದ ವಿದ್ಯಾರ್ಥಿಗಳು ಬೆಳಗ್ಗೆ 10 ಗಂಟೆಯೊಳಗೆ ಭಾಗವಹಿಸುವ ಸಲುವಾಗಿ ಪ್ರಾಂಶುಪಾಲರು ಅಥವಾ ಮುಖ್ಯಶಿಕ್ಷಕರು ಮತ್ತು ಕ್ಷೇತ್ರಶಿಕ್ಷಣಾಧಿಕಾರಿಗಳು ಸೂಕ್ತ ಕ್ರಮವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಅ.5 ರಂದು ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ

ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಎ ಹರೀಶ್ ಅವರ ಅದ್ಯಕ್ಷತೆಯಲ್ಲಿ ಅಕ್ಟೋಬರ್ 5 ರಂದು ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ನಡೆಯಲಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

ಅ.5 ರಂದು ಪುಸ್ತಕ ಸಂತೆ ಹಾಗೂ ಪ್ರದರ್ಶನಕ್ಕೆ ಚಾಲನೆ

ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಘಟಕದ ವತಿಯಿಂದ ಈ ಭಾರಿ ದಸರೆಯಲ್ಲಿ ಪುಸ್ತಕ ಸಂತೆ ಹಾಗೂ ಪ್ರದರ್ಶನಕ್ಕೆ ಅಕ್ಟೋಬರ್ 5 ರ ಮದ್ಯಾಹ್ನ 3 ಗಂಟೆಗೆ ಗಾಂಧಿ ಮೈದಾನದಲ್ಲಿ ಚಾಲನೆ ದೊರೆಯಲಿದೆ. ಹಿರಿಯ ಸಾಹಿತಿ ಕಸ್ತೂರಿ ಗೊವಿಂದಮಯ ಅವರು ಪುಸ್ತಕ ಸಂತೆ ಉದ್ಘಾಟನೆ ಮಾಡಲಿದ್ದಾರೆ.

ಮುಖ್ಯ ಅಥಿತಿಗಳಾಗಿ ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ನಗರಸಭೆ ಆಯುಕ್ತರಾದ ಪುಷ್ಪಾವತಿ, ಸದಸ್ಯರಾದ ಕೆ.ಎಸ್.ರಮೇಶ್, ಸಾಹಿತಿ ರಮೇಶ್ ಉತ್ತಪ್ಪ ಮತ್ತಿತರು ಪಾಲ್ಗೋಳ್ಳಲಿದ್ದಾರೆ.

ಮತದಾರರ ಪಟ್ಟಿಗಳ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಸಭೆ

ಬಾಗಲಕೋಟೆ: ಅಕ್ಟೋಬರ 04 (ಕರ್ನಾಟಕ ವಾರ್ತೆ) : ಬಾಗಲಕೋಟೆ ಮತ್ತು ಬೀಳಗಿ ವಿಧಾನಸಭಾ ಮತಕ್ಷೇತ್ರಗಳ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2017ರ ಕುರಿತು ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಬಾಗಲಕೋಟೆ ತಹಶೀಲ್ದಾರ ಕಾರ್ಯಾಲಯದಲ್ಲಿ ಮಂಗಳವಾರ ಸಭೆ ನಡೆಸಲಾಯಿತು.

ತಹಶೀಲ್ದಾರ ವಿನಯಕುಮಾರ ಕುಲಕರ್ಣಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಸಂಬಂಧಿಸಿದ ಎಲ್ಲ ಮತಗಟ್ಟೆ ಅಧಿಕಾರಿಗಳು ಕರಡು ಮತದಾರರ ಪ್ರತಿಯನ್ನು ಪ್ರಸಿದ್ದಿಪಡಿಸಿ ಅಕ್ಟೋಬರ 31 ರೊಳಗಾಗಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಪಡೆದುಕೊಳ್ಳುವಂತೆ ತಿಳಿಸಲಾಯಿತು. ಅಕ್ಟೋಬರ 7 ಮತ್ತು 30 ರಂದು ಗ್ರಾಮ ಸಭೆಯಲ್ಲಿ ಮತದಾರರ ಪಟ್ಟಿಯ ಎಲ್ಲ ವಿವರ ಓದಿ ಸಭೆಯ ನಡವಳಿಯನ್ನು ತಯಾರಿಸಿ ಸಲ್ಲಿಸುವಂತೆ ತಿಳಿಸಲಾಯಿತು.

ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ವಿಶೇಷ ದಿನಗಳಾದ ಅಕ್ಟೋಬರ 16 ಮತ್ತು 23 ರಂದು ಕಡ್ಡಾಯವಾಗಿ ಸಂಬಂದಪಟ್ಟ ಮತಗಟ್ಟೆಯಲ್ಲಿ ಬಿ.ಎಲ್.ಓಗಳ ಜೋತೆ ವಿಶೇಷ ಆಂದೊಲನ ಕೈಗೊಂಡು ನಡುವಳಿಗಳನ್ನು ತಯಾರಿಸಿ ಸಲ್ಲಿಸತಕ್ಕದ್ದು. ಜನವರಿ 1, 2017ನ್ನು ಅರ್ಹತಾ ದಿನಾಂಕದ ಆಧಾರದ ಮೇಲೆ 18 ವರ್ಷ ತುಂಬಿದವರು ಮತದಾರರ ಪಟ್ಟಿಯಲ್ಲಿ ಸೇರಿಸುವದು ಹಾಗೂ ತಪ್ಪಾಗಿ ಬಿಟ್ಟುಹೋದ ಅರ್ಹ ಮತದಾರರು ಇದ್ದರೆ ನಮೂನೆ ನಂ-6 ರಲ್ಲಿ ವಯಸ್ಸಿನ, ರಹವಾಸಿ, ಕುಟುಂಬದ ಸದಸ್ಯೆರ ಸಂಬಂಧ, ಮಧುವೆಯಾಗಿ ಬಂದ ಹೆಣ್ಣು ಮಕ್ಕಳ ವಿಷಯದಲ್ಲಿ ಮಧುವೆ ಕಾರ್ಡ, ಗಂಡನ ಐಡಿ ಕಾರ್ಡ ಈ ಎಲ್ಲ ದಾಖಲೆಗಳೊಂದಿಗೆ ಅರ್ಜಿಗಳನ್ನು ಪಡೆದುಕೊಳ್ಳಬೇಕೆಂದು ತಿಳಿಸಲಾಯಿತು.

ಡಬಲ್, ಮೃತ ಹಾಗೂ ಮದುವೆಯಾಗಿ ಸ್ಥಳಾಂತರ ಗೊಂಡವರ ಹೆಸರುಗಳನ್ನು ಕಡಿಮೆ ಮಾಡುವ ಸಲುವಾಗಿ ನಮೂನೆ ನಂ-7 ರಲ್ಲಿ ಅರ್ಜಿಯನ್ನು ಭರಣಾ ಮಾಡಿಸಿಕೊಂಡು ಪಡೆದುಕೊಳ್ಳಬೇಕು. ಹಾಗೂ ಸಂಬಂಧಿಸಿದವರಿಗೆ ನೋಟಿಸ್ ಜಾರಿ ಮಾಡಿ ಅದನ್ನು ಸೂಕ್ತ ಷರಾದೊಂದಿಗೆ ಧೃಡಿಕರಿಸಬೇಕು. ಮತದಾರರ ಯಾದಿಯಲ್ಲಿ ತಪ್ಪಾಗಿ ಸೇರಿದ ಹೆಸರುಗಳನ್ನು ತಿದ್ದುಪಡಿಗಾಗಿ ನಮೂನೆ-8ರಲ್ಲಿ ತಿದ್ದಪಡಿಗೆ ಅಗತ್ಯವಿರುವ ಪೂರಕ ದಾಖಲೆಗಳೊಂದಿಗೆ ಅರ್ಜಿಯನ್ನು ಭರ್ತಿ ಮಾಡಿಸಿಕೊಂಡು ಸೂಕ್ತ ಷರಾದೊಂದಿಗೆ ಧೃಡಿಕರಿಸಬೇಕೆಂದು ತಿಳಿಸಲಾಯಿತು.

ಒಂದೇ ವಿಧಾನಸಭಾ ಮತ ಕ್ಷೇತ್ರದಲ್ಲಿ ಯಾವುದೇ ಮತದಾರರು ಒಂದು ಮತಗಟ್ಟೆಯಿಂದಾ ಇನ್ನೊಂದು ಮತಗಟ್ಟೆಗೆ ಸ್ಥಳಾಂತರ ಹೊಂದಿದ್ದಲ್ಲಿ ನಮೂನೆ-8ಎ ರಲ್ಲಿ ಅಗತ್ಯ ವರ್ಗಾವಣೆ ಬಯಸಿದ ಮತಗಟ್ಟೆ ವ್ಯಾಪ್ತಯಲ್ಲಿ ವಾಸವಿರು ಕುರಿತು ಮನೆ ಉತಾರ, ಆಧಾರ ಕಾರ್ಡ, ಪಡಿತರ ಚೀಟಿ ಈ ಎಲ್ಲಾ ಪೂರಕ ದಾಖಲೆಗಳೊಂದಿಗೆ ಅರ್ಜಿ ಭರ್ತಿ ಮಾಡಿಸಿ ಸೂಕ್ತ ಷರಾದೊಂದಿಗೆ ಧೃಡಿಕರಿಸಬೇಕೆಂದು ತಿಳಿಸಲಾಯಿತು. ಈ ಕಾರ್ಯದಲ್ಲಿ ಏನಾದರೂ ಸಮಸ್ಯೆ ಅಥವಾ ತೊಂದರೆ ಉಂಟಾದಲ್ಲಿ ನಿಮ್ಮ ಮೇಲ್ವಿಚಾರಕರು ಅಥವಾ ಈ ಕಾರ್ಯಾಲಯದ ದೂರವಾಣಿ ಸಂಖ್ಯೆ 08354-235474ಕ್ಕೆ ಸಂಪರ್ಕಿಸಬಹುದಾಗಿದೆ. ಎಂದು ತಿಳಿಸಲಾಯಿತು.

ಸಭೆಯಲ್ಲಿ ಉಪ ತಹಶೀಲ್ದಾರ ಮಹಾಂತೇಶ ದೊಡಮನಿ ಸೇರಿದಂತೆ ಮತಗಟ್ಟೆ ಅಧಿಕಾರಿಗಳು, ಭೂತ ವಲಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆ : ಆನ್‍ಲೈನ್‍ನಲ್ಲಿ ಅರ್ಜಿ

ಬಾಗಲಕೋಟೆ: ಅಕ್ಟೋಬರ 04 (ಕರ್ನಾಟಕ ವಾರ್ತೆ) : ಪ್ರಸಕ್ತ ಸಾಲಿಗೆ ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಉದ್ಯೋಗ ಕೈಗೊಳ್ಳಲು ಬ್ಯಾಂಕಗಳ ಮೂಲಕ ಸಾಲ ಸೌಲಭ್ಯಕ್ಕಾಗಿ ಕೈಗಾರಿಕಾ, ಸೇವಾ ಘಟಕಗಳನ್ನು ಸ್ಥಾಪಿಸಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಕೈಗಾರಿಕಾ ಕೇಂದ್ರದಿಂದ 16, ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ 13, ಖಾದಿ ಮತ್ತು ವಿಲೇಜ್ ಇಂಡಸ್ಟ್ರೀಜ್ ಕಮಿಷನ್‍ದಿಂದ 13 ಭೌತಿಕ ಗುರಿ ನಿಗದಿಪಡಿಸಲಾಗಿದೆ. ಭೌತಿಕ ಗುರಿಯಲ್ಲಿ ಶೇ.50 ರಷ್ಟು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಾಂಗಕ್ಕೆ ಮೀಸಲಿಡಲಾಗಿದೆ. ಉಳಿದ ಶೇ.50 ರಷ್ಟು ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಅಂಗವಿಕಲರು, ಮಹಿಳೆಯರು ಹಾಗೂ ಇತರರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವವರು ಕನಿಷ್ಟ 18 ವರ್ಷ ವಯಸ್ಸಾಗಿದ್ದು, 8ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಯೋಜನಾ ವೆಚ್ಚ ಉತ್ಪಾದಕ ಘಟಕಗಳಿಗೆ 10 ಲಕ್ಷ ರೂ. ಮತ್ತು ಸೇವಾ ಘಟಕಗಳಿಗೆ 5 ಲಕ್ಷ ರೂ. ಮೇಲ್ಪಟ್ಟ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗಕ್ಕೆ ಶೇ.15, ಗ್ರಾಮೀಣ ಪ್ರದೇಶದವರಿಗೆ ಶೇ.25 ಹಾಗೂ ಪ.ಜಾತಿ, ಪ.ಪಂ, ಓಬಿಸಿ, ಅಲ್ಪ ಸಂಖ್ಯಾತ, ಮಹಿಳೆಯರು, ಮಾಜಿ ಸೈನಿಕರು, ಅಂಗವಿಕಲರಿಗೆ ಪಟ್ಟಣ ಪ್ರದೇಶದಲ್ಲಿ ಶೇ.25 ಮತ್ತು ಗ್ರಾಮೀಣ ಪ್ರದೇಶದವರಿಗೆ ಶೇ.35 ರಷ್ಟು ಸಹಾಯಧನ ನೀಡಲಾಗುತ್ತದೆ.

ಆಸಕ್ತರು ವೆಬ್‍ಸೈಟ್ www.kviconline.gov.in/pmegpeportal  ನಲ್ಲಿ ಅಕ್ಟೋಬರ 15 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಜಿಲ್ಲಾ ಅಧಿಕಾರಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಬಾಗಲಕೋಟ ಹಾಗೂ ಖಾದಿ ಮತ್ತು ವಿಲೇಜ್ ಇಂಡಸ್ಟ್ರೀಜ್ ಕಮಿಷನ್ ಬೆಂಗಳೂರು ಇವರನ್ನು ಸಂಪರ್ಕಿಸಬಹುದಾಗಿದೆ.

ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬಾಗಲಕೋಟೆ: ಅಕ್ಟೋಬರ 04 (ಕರ್ನಾಟಕ ವಾರ್ತೆ) : ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವ್ಯಕ್ತಿ, ಸಂಘ, ಸಂಸ್ಥೆ ಮತ್ತು ವಿಶೇಷ ಶಾಲೆಗಳಿಗೆ ರಾಜ್ಯ ಪ್ರಶಸ್ತಿ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿ ಮತ್ತು ಸಂಘ ಸಂಸ್ಥೆಗಳು ವೆಬ್‍ಸೈಟ್ www.welfareofdisabled.kar.nic.in ನಿಂದ ಅರ್ಜಿ ನಮೂನೆಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ಅಕ್ಟೋಬರ 14 ರೊಳಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಡಳಿತ ಭವನ, ರೂ.ನಂ.5, ನವನಗರ, ಬಾಗಲಕೋಟ ಇವರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂಸಂ.08354-235556ಗೆ ಸಂಪರ್ಕಿಸಬಹುದಾಗಿದೆ.

ಮಾಜಿ ಸೈನಿಕರಿಂದ ವಿವಿಧ ಹುದ್ದೆಗಳಿಗೆ ಅರ್ಜಿ

ಬಾಗಲಕೋಟೆ: ಅಕ್ಟೋಬರ 04 (ಕರ್ನಾಟಕ ವಾರ್ತೆ) : ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕಲ್ ಲಿಮಿಟೆಡ್‍ನಲ್ಲಿ ಖಾಲಿ ಇರುವ ಅಸಿಸ್ಟಂಟ್ ಟ್ರೇನಿಂಗ್ ಆಫೀಸರ್ ಏರ್‍ಕ್ರಾಪ್ಟ್ ಫಾವರ್ ಪ್ಲಾಂಟ್ ಮತ್ತು ಏರಕ್ರಾಪ್ಟ್ ಸ್ಟ್ರಚ್ಚರ್-2 ಹುದ್ದೆಗಳಿಗೆ ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಇಂಜಿನೀಯರ್ ವಿದ್ಯಾರ್ಹತೆಯುಳ್ಳ ಮಾಜಿ ಸೈನಿಕರು ಅಕ್ಟೋಬರ 7 ರೊಳಗಾಗಿ ವೆಬ್‍ಸೈಟ್ www.hal-india.com ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂಸಂ.080-2231 4261, 2232 3426ಗೆ ಸಂಪರ್ಕಿಸಬಹುದಾಗಿದೆ.

ಜಿಲ್ಲಾಧಿಕಾರಿ ಕಚೇರಿ ವೆಬ್‍ಸೈಟ್‍ನಲ್ಲಿ ಪ್ರಗತಿ ವರದಿ ದಾಖಲಿಸಿ- ಎಡಿಸಿ

ಉಡುಪಿ, ಅಕ್ಟೋಬರ್ 04 (ಕರ್ನಾಟಕ ವಾರ್ತೆ):- ಉಡುಪಿ ಜಿಲ್ಲಾ ಅಧಿಕೃತ ವೆಬ್‍ಸೈಟ್‍ನಲ್ಲಿ ಜಿಲ್ಲೆಯ ಆಡಳಿತಾತ್ಮಕ ಬೆಳವಣಿಗೆ ಹಾಗೂ ಸಾಧನೆ, ಮಾಹಿತಿಯನ್ನು ಅಪ್‍ಡೇಟ್ ಮಾಡುವ ಸಂಬಂಧ ಇಂದು ಅಪರ ಜಿಲ್ಲಾಧಿಕಾರಿ ಅನುರಾಧ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.

ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮನ್ವಯಕಾರರಾಗಿ ಹರಿಪ್ರಸಾದ್ ಅವರನ್ನು ನೇಮಿಸಿದ್ದು, ಇತರ ಇಲಾಖೆಗಳು ತಮ್ಮ ಇಲಾಖೆಯಿಂದ ಒಬ್ಬ ತಾಂತ್ರಿಕ ಪರಿಣತಿ ಹೊಂದಿದವರನ್ನು ಈ ಸಂಬಂಧ ನೇಮಿಸಿ ಮಾಹಿತಿ ಅಪಡೇಟ್ ಮಾಡಿ ಎಂದು ಅಪರ ಜಿಲ್ಲಾಧಿಕಾರಿಗಳು ಉಪಸ್ಥಿತರಿದ್ದ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಎನ್ ಐ ಸಿಯ ಮಂಜುನಾಥ್ ಉಪಸ್ಥಿತರಿದ್ದರು.

ಅಂಗನವಾಡಿಗಳ ಸದ್ಬಳಕೆಯಾಗಲಿ- ಪ್ರಮೋದ್ ಮಧ್ವರಾಜ್

ಉಡುಪಿ, ಅಕ್ಟೋಬರ್ 04 (ಕರ್ನಾಟಕ ವಾರ್ತೆ):- ದೇಶದ ಉತ್ತಮ ಭವಿಷ್ಯದ ದೃಷ್ಟಿಯಲ್ಲಿ ಮಕ್ಕಳಿಗಾಗಿ ಸರ್ಕಾರ ಉಚಿತವಾಗಿ ಎಲ್ಲ ಸೌಲಭ್ಯಗಳನ್ನು ನೀಡುತ್ತಿದ್ದು, ಇದರ ಸದ್ಬಳಕೆಯಾಗಬೇಕೆಂದು ರಾಜ್ಯ ಮೀನುಗಾರಿಕೆ, ಯುವಜನಸೇವೆ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಶಿಶು ಅಭಿವೃದ್ಧಿ ಯೋಜನೆಯ ವತಿಯಿಂದ ಆರಂಭಿಸಲಾದ ಪಡುನಿಟ್ಟೂರು ಅಂಗನವಾಡಿ ಕೇಂದ್ರವನ್ನು ಮಂಗಳವಾರ ನಿಟ್ಟೂರು ಯುವಕ ಮಂಡಲದ ರಂಗಮಂದಿರದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಅಂಗನವಾಡಿ ಕೇಂದ್ರಗಳ ಮೂಲಕ ಮಕ್ಕಳು ಹಾಗೂ ಗರ್ಭಿಣಿಯರಿಗೆ ಉಚಿತ ಆಹಾರಗಳನ್ನು ಒದಗಿಸಲಾಗುತ್ತಿದೆ. ಮಹಿಳೆ ಮತ್ತು ಮಕ್ಕಳ ಹಿತವನ್ನು ಗಮನದಲ್ಲಿರಿಸಿ ರೂಪಿಸಲಾಗಿರುವ ಈ ಯೋಜನೆಯ ಸದ್ಬಳಕೆ ಪ್ರತಿಯೊಬ್ಬರ ಕರ್ತವ್ಯ.

ತಕ್ಷಣದ ಅವಶ್ಯಕತೆಗೆ ಪೂರಕವಾಗಿ ತಾತ್ಕಾಲಿಕವಾಗಿ ಯುವಕ ಮಂಡಲದ ಕಟ್ಟಡದಲ್ಲಿ ಆರಂಭಗೊಂಡಿರುವ ಈ ಅಂಗನವಾಡಿ ಕೇಂದ್ರಕ್ಕೆ ಹೊಸ ಕಟ್ಟಡ ನಿರ್ಮಿಸಿ ಕೊಡಲಾಗುವುದು. ಸದ್ಯಕ್ಕೆ ಈ ಕೇಂದ್ರದಲ್ಲಿ 25 ಮಕ್ಕಳು ಸೇರ್ಪಡೆಗೊಂಡಿದ್ದಾg ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯೆ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಯುವಕ ಮಂಡಲದ ಅಧ್ಯಕ್ಷಆನಂದಜತ್ತನ್ನ, ಸ್ಥಾಪಕಾಧ್ಯಕ್ಷ ಸಂಜೀವಜತ್ತನ್ನ, ಮಾಜಿಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಕಾಂಗ್ರೆಸ್ ಹಿಂದುಳಿದವರ್ಗದ ಘಟಕದಅಧ್ಯಕ್ಷ ಸುಜಯ್ ಪೂಜಾರಿ ಉಪಸ್ಥಿತರಿದ್ದರು. ಶಿಶು ಅಭಿವೃದ್ಧಿಅಧಿಕಾರಿ ವೀಣಾ ವಿವೇಕಾನಂದ ಸ್ವಾಗತಿಸಿದರು. ಮೇಲ್ವಿಚಾರಕಿ ಸಂಗೀತಕಾರ್ಯಕ್ರಮ ನಿರೂಪಿಸಿದರು.

ಮಹಿಳಾ ದೌರ್ಜನ್ಯ- ಆಂತರಿಕ ದೂರು ಸಮಿತಿ ರಚನೆ ಬಗ್ಗೆ

ಉಡುಪಿ, ಅಕ್ಟೋಬರ್ 4 (ಕರ್ನಾಟಕ ವಾರ್ತೆ):- ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ, 2013ರ ಅಧಿನಿಯಮದಡಿಯಲ್ಲಿ ಖಾಸಗಿ, ಸರ್ಕಾರಿ, ನಿಗಮ ಮಂಡಳಿ, ಸಾರ್ವಜನಿಕ ಉದ್ಯಮಿಗಳು, ಪ್ಯಾಕರಿಗಳು, ಇತ್ಯಾದಿ ಎಲ್ಲಾ ಕಚೇರಿಗಳಲ್ಲಿ “ಆಂತರಿಕ ದೂರು ಸಮಿತಿ” ಯನ್ನು ಕಡ್ಡಾಯವಾಗಿ ರಚನೆ ಮಾಡಬೇಕು.

ಆಂತರಿಕ ದೂರು ಸಮಿತಿಯನ್ನು ಯಾವುದೇ ಒಂದು ಕಚೇರಿ/ಸಂಸ್ಥೆಯಲ್ಲಿ ಕೆಲಸದ ಸ್ಥಳಗಳಲ್ಲಿ 10 ಮತ್ತು 10 ಕ್ಕಿಂತ ಹೆಚ್ಚು ಮಹಿಳೆಯರು ಕೆಲಸ ಮಾಡುತ್ತಿದ್ದರೆ, ಒಂದು ಆಂತರಿಕ ದೂರು ಸಮಿತಿಯನ್ನು ಕಡ್ಡಾಯವಾಗಿ ರಚನೆ ಮಾಡಬೇಕು. ಆಂತರಿಕ ದೂರು ಸಮಿತಿಯನ್ನು ರಚನೆ ಮಾಡಿದ ನಂತರ ಅದರ ಸದಸ್ಯರುಗಳ ಹೆಸರು ಮತ್ತು ವಿಳಾಸವನ್ನು ತಿಳಿಸುವ ಕುರಿತು ಕಚೇರಿ ಆದೇಶವನ್ನು ಮತ್ತು ತಿಳುವಳಿಕೆ ಪತ್ರವನ್ನು ಹೊರಡಿಸಬೇಕು. ಈ ವಿಚಾರವನ್ನು ನೌಕರರ ಗಮನಕ್ಕೆ ತರಬೇಕು.

ಕೆಲಸದ ಸ್ಥಳದ, ಕೆಲಸಗಾರರ ಮಧ್ಯದಲ್ಲಿನ ಹಿರಿಯ ಶ್ರೇಣಿಯ ಉದ್ಯೋಗಸ್ಥ ಮಹಿಳೆಯ ಆಂತರಿಕ ದೂರು ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಸಮಾಜ ಕ್ಷೇತ್ರಗಳಲ್ಲಿ ಅನುಭವ ಹೊಂದಿರುವ ಕಾನೂನು ಜ್ಞಾನ ಹೊಂದಿರುವ ಇಬ್ಬರು ಸದಸ್ಯರು. ಮಹಿಳೆಯರ ಉನ್ನತಿಗೆ ಕಾರಣರಾದ ಸಂಘ ಸಂಸ್ಥೆ ಅಥವಾ ಲೈಂಗಿಕ ಕಿರುಕುಳದ ವಿವಾದಕ್ಕೆ ಸಂಬಂಧಿಸಿದ ವಿಚಾರದಲ್ಲಿ ನುರಿತಿರುವ ಒಬ್ಬ ಸದಸ್ಯರನ್ನು ಒಳಗೊಂಡಿರಬೇಕು.

ಖಾಸಗಿ, ಸರ್ಕಾರಿ, ನಿಗಮ ಮಂಡಳಿ, ಸಾರ್ವಜನಿಕ ಉದ್ಯಮಗಳು, ಪ್ಯಾಕ್ಟರಿಗಳು, ಇತ್ಯಾದಿ ಎಲ್ಲಾ ಕಚೇರಿಗಳಲ್ಲಿ 10ಕ್ಕಿಂತ ಕಡಿಮೆ ಮಹಿಳೆಯರು ಕೆಲಸ ಮಾಡುತ್ತಿದ್ದರೆ ಲೈಂಗಿಕ ಕಿರುಕುಳದ ಕುರಿತಾದ ದೂರುಗಳನ್ನು ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಗೆ ದೂರು ಸಲ್ಲಿಸಲು ತಿಳಿಸಲಾಗಿದೆ. ಜಿಲ್ಲೆಯಲ್ಲಿ ಎಲ್ಲಾ ಖಾಸಗಿ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಸಮಿತಿಯನ್ನು ರಚಿಸಲು ಈ ಮೂಲಕ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 1ನೇ ಮಹಡಿ “ಬಿ”ಬ್ಲಾಕ್, ಕೊಠಡಿ ಸಂಖ್ಯೆ 204, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ 0820-2574978ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಇಲಾಖಾ ಪ್ರಕಟಣೆ ತಿಳಿಸಿದೆ.

ಮುದ್ರಾ ಯೋಜನೆಯಡಿ ಸಾಲ ಸೌಲಭ್ಯ- ಅರ್ಜಿ ಆಹ್ವಾನ

ಉಡುಪಿ ಅಕ್ಟೋಬರ್ 4 (ಕರ್ನಾಟಕ ವಾರ್ತೆ):- ಪ್ರಧಾನಮಂತ್ರಿಗಳ ಮುದ್ರಾ ಯೋಜನೆ (PMMY) ಹಾಗೂ ಸ್ಟಾಂಡ್ ಅಪ್(SUI) ಯೋಜನೆಗಳಡಿ ಅತೀ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಘಟಕಗಳನ್ನು ಸ್ಥಾಪಿಸುವ ಉದ್ದಿಮೆದಾರರಿಗೆ ಸಾಲ ಸೌಲಭ್ಯ ಮಂಜೂರಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರಧಾನಮಂತ್ರಿಗಳ ಮುದ್ರಾ ಯೋಜನೆಯನ್ನು ಪ್ರಧಾನಮಂತ್ರಿಗಳು 2015 ರ ಏಪ್ರಿಲ್ 8 ರಂದು ಉದ್ಘಾಟನೆ ಮಾಡಿದ್ದು, ಈ ಯೋಜನೆಯಡಿಯಲ್ಲಿ ಸಣ್ಣ ಕೈಗಾರಿಕಾ ಘಟಕಗಳಿಗೆ ಶಿಶು ಸಾಲ ರೂ.50 ಸಾವಿರ ದ ವರೆಗೆ, ಕಿಶೋರ್ ಸಾಲ ರೂ.50 ಸಾವಿರದಿಂದ ರೂ.5 ಲಕ್ಷ ದವರೆಗೆ ಹಾಗೂ ತರುಣ್ ಸಾಲ ರೂ.5 ಲಕ್ಷ ದಿಂದ ರೂ.10 ಲಕ್ಷ ದ ವರೆಗಿನ ಸೌಲಭ್ಯ ಒದಗಿಸಿದೆ.

ಸ್ಟಾಂಡ್ ಅಪ್ ಯೋಜನೆಯನ್ನು ಪ್ರಧಾನಮಂತ್ರಿಗಳು 2016 ರ ಏಪ್ರಿಲ್ 5 ರಂದು ಉದ್ಘಾಟನೆ ಮಾಡಿದ್ದು, ಈ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರು ಮಾತ್ರ ಗ್ರೀನ್ ಪೀಲ್ಡ್ ಎಂಟರ್‍ಪ್ರೈಸಸ್ ಸ್ಥಾಪನೆಗೆ ಸಾಲ ಸೌಲಭ್ಯಗಳನ್ನು ಪಡೆಯಲು ಅರ್ಹ ಇರುತ್ತಾರೆ. ಸಾಲದ ಮೊತ್ತವು ರೂ.10 ಲಕ್ಷ ಗಳಿಂದ ರೂ.1 ಕೋಟಿಯ ವರೆಗೆ ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಪ್ಲ್ಯಾಟ್ ನಂ.36-ಸಿ, ಶಿವಳ್ಳಿ ಕೈಗಾರಿಕಾ ಪ್ರದೇಶ ಮಣಿಪಾಲ ದೂರವಾಣಿ ಸಂಖ್ಯೆ 0820-2575650 ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಸಾಕ್ಷ್ಯಚಿತ್ರ ತಯಾರಿಕೆಗೆ ನುರಿತ ತಂತ್ರಜ್ಞರಿಂದ ಅರ್ಜಿ ಆಹ್ವಾನ

ಉಡುಪಿ ಅಕ್ಟೋಬರ್ 4 (ಕರ್ನಾಟಕ ವಾರ್ತೆ):- ಉಡುಪಿ / ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2016-17ನೇ ಸಾಲಿನಲ್ಲಿ ಸಾಹಿತ್ಯ ಸಂಸ್ಕøತಿ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸಾಹಿತಿ ಕಲಾವಿದರ ಸಾಕ್ಷ್ಯಚಿತ್ರ ತಯಾರಿಸಲಾಗುತ್ತಿದೆ. ಈ ಕುರಿತಾದ ಸಾಕ್ಷ್ಯಚಿತ್ರ ನಿರ್ಮಾಣ ಮಾಡಲು ನುರಿತ ತಂತ್ರಜ್ಞರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ಸಾಕ್ಷ್ಯಚಿತ್ರ ನಿರ್ಮಾಣದ ಕುರಿತಾದ ಸಂಪೂರ್ಣ ಮಾಹಿತಿಯೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಡಾ|ಕೆ.ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿ ನಗರ, ಮಣಿಪಾಲ ಅಂಚೆ, ಉಡುಪಿ ಜಿಲ್ಲೆ-576104 (ದೂ.ಸಂ-0820-2575552) ಇವರಿಗೆ ಅಕ್ಟೋಬರ್ 17ರೊಳಗೆ ಕಳುಹಿಸಿಕೊಡುವಂತೆ ಕನ್ನಡ ಮತ್ತು ಸಂಸಕೃತಿ ಇಲಾಖೆ ಪ್ರಕಟಣೆ ತಿಳಿಸಿದೆ.

ಎನ್.ಎಸ್.ಎಸ್. ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಂದ ಶ್ರಮದಾನ

ಉಡುಪಿ, ಅಕ್ಟೋಬರ್ 4 (ಕರ್ನಾಟಕ ವಾರ್ತೆ):- ಹಿರಿಯಡಕದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ವಿದ್ಯಾರ್ಥಿಗಳು ಇತ್ತೀಚಿಗೆ ಎನ್.ಎಸ್.ಎಸ್. ದಿನಾಚರಣೆಯ ಪ್ರಯುಕ್ತ ಶ್ರಮದಾನವನ್ನು ವಿಶಿಷ್ಟವಾಗಿ ನೆರವೇರಿಸಿದರು.ಅಷ್ಟ ಮಠಗಳಲ್ಲಿ ಒಂದಾದ ಪುತ್ತಿಗೆಯ ಮೂಲ ಮಠದಲ್ಲಿ ಒಂದು ದಿನದ ಶ್ರಮದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಈ ಶಿಬಿರದಲ್ಲಿ ಸುಮಾರು 135ಕ್ಕೂ ಹೆಚ್ಚು ಎನ್.ಎಸ್.ಎಸ್. ಸ್ವಯಂಸೇವಕರು ಭಾಗವಹಿಸಿ ಮಠದ ಹೊರಾಂಗಣ ಹಾಗೂ ಒಳಾಂಗಣವನ್ನೆಲ್ಲ ಸ್ವಚ್ಛಗೊಳಿಸಿದರು. ಸುವರ್ಣ ನದಿಯ ಸುಂದರ ತೀರದಲ್ಲಿ ನಡೆದ ಈ ಶ್ರಮದಾನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡು ಕಲ್ಲು-ಮುಳ್ಳು, ಮಳೆ ಯಾವುದನ್ನು ಲೆಕ್ಕಿಸದೆ ಮಠದ ಸುತ್ತ-ಮುತ್ತ ಸ್ವಚ್ಛಗೊಳಿಸಿ ಮಠದವರ ಮೆಚ್ಚುಗೆಗೆ ಪಾತ್ರರಾದರು. ಮಠದ ವ್ಯವಸ್ಥಾಪಕರಾದ ಚಂದ್ರಪ್ರಕಾಶ್ ಆಚಾರ್ಯ ಇವರು ಮಠದ ವತಿಯಿಂದ ಸ್ವಯಂಸೇವಕರೆಲ್ಲರಿಗೂ ಉತ್ತಮ ಭೋಜನವನ್ನು ಏರ್ಪಡಿಸಿದ್ದರು.

ಶ್ರಮದಾನದ ಜೊತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಜ್ಞಾನವನ್ನು ಹೆಚ್ಚಿಸುವ ಸಲುವಾಗಿ ಕ್ಷೇತ್ರ ಪರಿಚಯ ಎನ್ನುವ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಠದಲ್ಲಿರುವ ಗುರುಕುಲದ ಪಂಡಿತರಾದ ವತ್ಸಾ ಐತಾಳ್ ಮಾತಾನಾಡಿ ಪುತ್ತಿಗೆ ಮಠದ ಇತಿಹಾಸದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಸ್ವಯಂ ಸೇವಕರ ಕೆಲಸ ಮತ್ತು ಶಿಸ್ತನ್ನು ಪ್ರಶಂಸಿದರು.

ಪ್ರಾಂಶುಪಾಲರಾದ ಸೋಜನ್ ಕೆ. ಜಿ. ಇವರ ಮಾರ್ಗದರ್ಶನದಲ್ಲಿ ಎನ್.ಎಸ್.ಎಸ್. ಯೋಜನಾಧಿಕಾರಿಯಾದ ಸುಷ್ಮಾ ರಾವ್ ಕೆ., ಕಾರ್ಯಕ್ರಮವನ್ನು ಉಪನ್ಯಾಸಕ ಮಿತ್ರರ ನೆರವಿನೊಂದಿಗೆ ಸಂಘಟಿಸಿದರು. ಇನ್ನೋರ್ವ ಎನ್.ಎಸ್.ಎಸ್. ಯೋಜನಾಧಿಕಾರಿಯಾದ ವಿ. ಎನ್. ಗಾಂವ್ಕರ್, ಉಪನ್ಯಾಸಕ ವೃಂದದವರು ಪುತ್ತಿಗೆ ಮಠದ ಗೋವರ್ಧನ್ ಭಟ್, ಎನ್.ಎಸ್.ಎಸ್. ನಾಯಕರಾದ ಪ್ರಿತೇಶ್, ನಿತೇಶ್, ಕಾಲೇಜಿನ ಹಳೆ ವಿದ್ಯಾರ್ಥಿ ಸುರೇಶ್ ನಾಯಕ್ ಸಹಕರಿಸಿದರು. ಸಭಾ ಕಾರ್ಯಕ್ರಮವನ್ನು ಶಿವರಾಜ್ ನಿರೂಪಿಸಿದರು, ಎನ್.ಎಸ್.ಎಸ್. ನಾಯಕಿ ಸೌಜನ್ಯ ಸ್ವಾಗತಿಸಿದರು, ಕು| ಅಕ್ಷಿತಾ ಧನ್ಯವಾದ ಸಮರ್ಪಿಸಿದರು.

ರಾಜ್ಯ ಮಟ್ಟದ ಬಾಲಕ, ಬಾಲಕಿಯರ ಥ್ರೋಬಾಲ್ ಪಂದ್ಯಾವಳಿ

ಚಿಕ್ಕಬಳ್ಳಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ, ಚಿಕ್ಕಬಳ್ಳಾಪುರ ಇವರ ವತಿಯಿಂದ 2016-17ನೇ ಸಾಲಿನ ರಾಜ್ಯ ಮಟ್ಟದ ಬಾಲಕ, ಬಾಲಕಿಯರ ಥ್ರೋಬಾಲ್ ಪಂದ್ಯಾವಳಿಯನ್ನು ಅಕ್ಟೋಬರ್ 6ರ ಬೆಳಗ್ಗೆ 10 ಗಂಟೆಗೆ ಸರ್.ಎಂ.ವಿ.ಜಿಲ್ಲಾ ಕ್ರೀಡಾಂಗಣ, ಚಿಕ್ಕಬಳ್ಳಾಪುರ ಇಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಸಾರಿಗೆ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ರವರು ನೆರವೇರಿಸುವರು. ಅಧ್ಯಕ್ಷತೆಯನ್ನು ಶಾಸಕರಾದ ಡಾ.ಕೆ.ಸುಧಾಕರ್ ರವರು ವಹಿಸುವರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಎಂ. ವೀರಪ್ಪ ಮೊಯಿಲಿ, ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಕೆ.ಹೆಚ್. ಮುನಿಯಪ್ಪ, ಕರ್ನಾಟಕ ವಿಧಾನಸಭೆಯ ಉಪಾಸಭಾಧ್ಯಕ್ಷರು ಹಾಗೂ ಗೌರಿಬಿದನೂರು ಕ್ಷೇತ್ರದ ಶಾಸಕರಾದ ಎನ್.ಹೆಚ್.ಶಿವಶಂಕರರೆಡ್ಡಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಪಿ.ಎನ್.ಕೇಶವರೆಡ್ಡಿ ರವರು ಘನ ಉಪಸ್ಥಿತಿ ವಹಿಸುವರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ಎಂ.ರಾಜಣ್ಣ, ಎಸ್.ಎನ್. ಸುಬ್ಬಾರೆಡ್ಡಿ, ಎಂ.ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಸಿ.ಆರ್. ಮನೋಹರ್, ಆರ್.ಚೌಡರೆಡ್ಡಿ ತೂಪಲ್ಲಿ, ಡಿ.ಎಸ್.ವೀರಯ್ಯ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಪಿ.ನಿರ್ಮಲ, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಾದ ಶಿಖಾ ಸಿ., ಜಿಲ್ಲಾಧಿಕಾರಿಗಳಾದ ದೀಪ್ತಿ ಆದಿತ್ಯ ಕಾನಡೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಜೆ.ಮಂಜುನಾಥ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಎನ್.ಚೈತ್ರಾ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಬಿ.ಎನ್.ರಾಮಸ್ವಾಮಿ, ಉಪಾಧ್ಯಕ್ಷರಾದ ಇಂದ್ರಮ್ಮ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಅಶ್ವತ್ಥರೆಡ್ಡಿ ರವರು ಭಾಗವಹಿಸುವರು.

ಡೆಂಗ್ಯೂ, ಚಿಕುನ್‍ಗುನ್ಯಾ, ಮಲೇರಿಯಾ ಜ್ವರ ಪ್ರಕರಣಗಳ ನಿಯಂತ್ರಣ ಕುರಿತು ಅರಿವು ಸಭೆ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಸಕ್ತ ಮಾಹೆಯಲ್ಲಿ ಜ್ವರ ಪ್ರಕರಣಗಳು ಅಲ್ಲಲ್ಲಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಡೆಂಗ್ಯೂ, ಚಿಕುನ್‍ಗುನ್ಯಾ, ಮಲೇರಿಯಾ ಮತು ಮೆದುಳು ಜ್ವರ ಪ್ರಕರಣಗಳ ನಿಯಂತ್ರಣ ಕುರಿತು, ಹೆಚ್ಚಿನ ಅರಿವನ್ನು ಮೂಡಿಸುವ ಸಂಬಂಧ ಅಕ್ಟೋಬರ್ 7ರ ಮಧ್ಯಾಹ್ನ 12.30 ಗಂಟೆಗೆ ಸರ್.ಎಂ.ವಿ.ಸಭಾಂಗಣ, ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಇಲ್ಲಿ ಅರಿವು ಸಭೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಚಿಕ್ಕಬಳ್ಳಾಪುರ ಇವರ ಪ್ರಕಟಣೆ ತಿಳಿಸಿದೆ. ಸದರಿ ಸಭೆಗೆ ಮಾಧ್ಯಮ ಪ್ರತಿನಿಧಿಗಳು ಆಗಮಿಸಲು ಕೋರಿದೆ.

ಜೀವನ ಕೌಶಲ್ಯ ತರಬೇತಿ ಮತ್ತು ಒತ್ತಡ ನಿವಾರಣಾ ಕಾರ್ಯಾಗಾರ

ಚಿಕ್ಕಬಳ್ಳಾಪುರ : ಜೀವನ ಕೌಶಲ್ಯ ತರಬೇತಿ ಮತ್ತು ಒತ್ತಡ ನಿವಾರಣಾ ಕಾರ್ಯಾಗಾರ ಕಾರ್ಯಕ್ರಮವನ್ನು ಅಕ್ಟೋಬರ್ 5ರ ಬೆಳಗ್ಗೆ 9.30 ಗಂಟೆಗೆ ವಿಷ್ಣುಪ್ರಿಯ ಪಿ.ಯು. ಕಾಲೇಜ್ ಆವರಣ, ಚಿಕ್ಕಬಳ್ಳಾಪುರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಸ್. ನಟರಾಜ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಿಕ್ಕಬಳ್ಳಾಪುರ ಇವರ ಪ್ರಕಟಣೆ ತಿಳಿಸಿದೆ. ಸದರಿ ಕಾರ್ಯಕ್ರಮಕ್ಕೆ ಮಾಧ್ಯಮ ಪ್ರತಿನಿಧಿಗಳು ಆಗಮಿಸಲು ಕೋರಿದೆ.

ಆಲೂಗಡ್ಡೆ ಬೆಳೆಗಾರರಿಗೆ ವಿಶೇಷ ಸೂಚನೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಲೂಗಡ್ಡೆ ಬೆಳೆಯು ನೀರಾವರಿ ಆಶ್ರಿತ ಬೆಳೆಯಾಗಿದ್ದು, ಈ ಬೆಳೆಯಲ್ಲಿ ಗಡ್ಡೆ ಕಟ್ಟುವ ಪ್ರಕ್ರಿಯೆ ಪ್ರಾರಂಭವಾಗಲು ತಂಪಾದ ಹವಾಗುಣ ಅವಶ್ಯಕವಾಗಿದ್ದು, ವಾತಾವರಣದಲ್ಲಿ ಉಷ್ಣತೆ 16-24 ಡಿಗ್ರಿ ಸೆಲ್ಸಿಯಸ್ ಇರಬೇಕಾಗಿರುತ್ತದೆ. ಆದ್ದರಿಂದ ಆಲೂಗಡ್ಡೆ ಬಿತ್ತನೆಗೆ ಅಕ್ಟೋಬರ್-ನವೆಂಬರ್ ತಿಂಗಳು ವೈಜ್ಞಾನಿಕವಾಗಿ ಸೂಕ್ತ ಕಾಲವಾಗಿರುತ್ತದೆ. ಆದ ಕಾರಣ ರೈತ ಬಾಂಧವರು ಬಿತ್ತನೆ ಮಾಡಲು ಸೂಕ್ತ ಭೂಮಿ ಸಿದ್ದತೆ ಮಾಡಿಕೊಳ್ಳಲು ತಿಳಿಸಿದೆ. ಹಾಗೂ ಆಲೂಗಡ್ಡೆ ವಿಶೇಷ ಪ್ಯಾಕೇಜ್ ಯೋಜನೆಗೆ ಪ್ರತಿ ಹೆಕ್ಟೇರ್‍ಗೆ ರೂ.3500/-ಗಳನ್ನು ಸಸ್ಯಸಂರಕ್ಷಣೆ ಔಷಧಿ ಮತ್ತು ಜೈವಿಕ ಗೊಬ್ಬರಗಳನ್ನು ಖರೀದಿಸಿರುವ ಹಾಗೂ ರೂ.1500/-ಗಳನ್ನು ಬೆಳೆವಿಮೆ ಮಾಡಿಸುವುದಕ್ಕೆ ಸಹಾಯಧನ ನೀಡಲಾಗುವುದು. ಇದನ್ನು ರೈತರು ಸದುಪಯೋಗ ಪಡಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಹಾಗೂ ಈ ಕೆಳಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದೆಂದು ತೋಟಗಾರಿಕೆ ಉಪ ನಿರ್ದೇಶಕರು, ಜಿಲ್ಲಾ ಪಂಚಾಯತ್ ಚಿಕ್ಕಬಳ್ಳಾಪುರ ಇವರ ಪ್ರಕಟಣೆ ತಿಳಿಸಿದೆ.

ಚಿಕ್ಕಬಳ್ಳಾಪುರ ಫೋನ್ ನಂಬರ್:08156-272217, ಗೌರಿಬಿದನೂರು ಫೋನ್ ನಂಬರ್:08155-284086,. ಚಿಂತಾಮಣಿ ಫೋನ್ ನಂಬರ್:08154-251403. ಶಿಡ್ಲಘಟ್ಟ ಫೋನ್ ನಂಬರ್:08158-256813. ಬಾಗೇಪಲ್ಲಿ ಫೋನ್ ನಂಬರ್:08150-282114. ಗುಡಿಬಂಡೆ ಫೋನ್ ನಂಬರ್:08156-261072ನ್ನುಸಂಪರ್ಕಿಸಬಹುದು.

ಕೇಬಲ್ ಟಿ.ವಿ. ಗಣಕೀಕರಣ ಕಾರ್ಯ ಪೂರ್ಣಗೊಳಿಸಲು ಸೂಚನೆ

ಶಿವಮೊಗ್ಗ, ಅಕ್ಟೋಬರ್ 04 (ಕರ್ನಾಟಕ ವಾರ್ತೆ) : ಜಿಲ್ಲೆಯ ಎಲ್ಲಾ ಎಂ.ಎಸ್.ಒ.ಗಳು ಆಪರೇಟರ್‍ಗಳು ಕೇಬಲ್ ಟಿ.ವಿ. ಗಣಕೀಕರಣ ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಹಾಗೂ ಡಿಜಿಟಲ್ ಅಡ್ರೆಸ್ಸೇಬಲ್ ಸಿಸ್ಟಂನ ನೋಡಲ್ ಅಧಿಕಾರಿಗಳಾದ ಕೆ.ಚನ್ನಬಸಪ್ಪ ಅವರು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮೂರನೇ ಹಂತದ ಕೇಬಲ್ ಟಿ.ವಿ. ಗಣಕೀಕರಣ ಕಾರ್ಯ ಹಾಗೂ ಸೆಟ್‍ಟಾಪ್‍ಬಾಕ್ಸ್ ಅಳವಡಿಸುವ ಕಾರ್ಯ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಮುಕ್ತಾಯ ಹಂತದಲ್ಲಿದೆ. ಈ ಕಾರ್ಯದೊಂದಿಗೆ 4ನೇ ಹಂತದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಗಣಕೀಕರಣ ಕಾರ್ಯವನ್ನು ಅಕ್ಟೋಬರ್ ಮಾಸಾಂತ್ಯದೊಳಗಾಗಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಬಲ್ ಆಪರೇಟರ್‍ಗಳು, ಎಂ.ಎಸ್.ಒ. ಹಾಗೂ ಎಲ್.ಸಿ.ಒ.ಗಳು ಸಾರ್ವಜನಿಕರಿಗೆ ಈ ಕುರಿತು ಹೆಚ್ಚಿನ ತಿಳುವಳಿಕೆ ನೀಡಿ ಸೆಟ್‍ಟಾಪ್ ಬಾಕ್ಸ್ ಅಳವಡಿಸಿ, ನಿಗದಿತ ಅವಧಿಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸುವಂತೆ ಸೂಚಿಸಲಾಗಿದೆ. ತಪ್ಪಿದಲ್ಲಿ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಅವರು ಎಚ್ಚರಿಸಿದ್ದಾರೆ.

ಅವಧಿ ವಿಸ್ತರಣೆ

ಶಿವಮೊಗ್ಗ, ಅಕ್ಟೋಬರ್ 04 (ಕರ್ನಾಟಕ ವಾರ್ತೆ) : ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರ ಶುಲ್ಕ ವಿನಾಯಿತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗಧಿಪಡಿಸಲಾಗಿದ್ದ ದಿನಾಂಕವನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಕ್ಟೋಬರ್ 16ರವರೆಗೆ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಈ ಸದವಕಾಶದ ಲಾಭ ಪಡೆದುಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಉಚಿತ ವೈದ್ಯಕೀಯ ಶಿಬಿರ

ಶಿವಮೊಗ್ಗ, ಅಕ್ಟೋಬರ್ 04 (ಕರ್ನಾಟಕ ವಾರ್ತೆ) : ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಸರ್ವಶಿಕ್ಷಣ ಅಭಿಯಾನ ವತಿಯಿಂದ ಸಮನ್ವಯ ಶಿಕ್ಷಣ ಮಧ್ಯವರ್ತನೆಯಡಿಯಲ್ಲಿ ಪ್ರಾಥಮಿಕ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 6-14 ವಯೋಮಾನದ ಎಲ್ಲಾ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಸೆಪ್ಟಂಬರ್ 29ರಿಂದ ಅಕ್ಟೋಬರ್ 03ರವರೆಗೆ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ಗೈರುಹಾಜರಾದ ವಿಕಲಚೇತನ ಮಕ್ಕಳು ಜಿಲ್ಲಾ ಹಂತದಲ್ಲಿ ಅಕ್ಟೋಬರ್ 06ರಂದು ಬೆಳಿಗ್ಗೆ 9.30ರಿಂದ ಸಂಜೆ 5ರವರೆಗೆ ಶಿವಮೊಗ್ಗದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್‍ನಲ್ಲಿ ನಡೆಯಲಿರುವ ಉಚಿತ ವೈದ್ಯಕೀಯ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶ್ವವಿದ್ಯಾಲಯದ ಕಿರಿಯ ಶಿಷ್ಯವೇತನದ ಆಯ್ಕೆಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ, ಅಕ್ಟೋಬರ್ 04 (ಕರ್ನಾಟಕ ವಾರ್ತೆ) : ಕುವೆಂಪು ವಿಶ್ವವಿದ್ಯಾಲಯವು 2015-16ನೇ ಸಾಲಿಗೆ ಅನ್ವಯಗೊಳ್ಳುವಂತೆ ಎಲೆಕ್ಟ್ರಾನಿಕ್ಸ್, ಮೈಕ್ರೋಬಯಾಲಜಿ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಬಯೋಟೆಕ್ನಾಲಜಿ, ಭೌತಶಾಸ್ತ್ರ, ಪ್ರಾಣಿಶಾಸ್ತ್ರ, ಸಮಾಜಕಾರ್ಯ, ವಾಣಿಜ್ಯಶಾಸ್ತ್ರ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ದೈಹಿಕ ಶಿಕ್ಷಣ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ ಹಾಗೂ ಸಂಸ್ಕøತ ವಿಷಯಗಳ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಖಾಲಿ ಇರುವ ತಲಾ ಒಂದು ಸ್ಥಾನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪಿ.ಹೆಚ್.ಡಿ., ಸಂಶೋಧನಾ ಸಾಮಾನ್ಯ ಕಿರಿಯ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲಿಚ್ಚಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಗಳಲ್ಲಿ ಕನಿಷ್ಟ ಶೇ.55 ಅಂಕ ಪಡೆದಿರುವುದಕ್ಕೆ ಮತ್ತು ಘಟಿಕೋತ್ಸವದ ಪ್ರತಿ ಪಡೆದಿರುವುದಕ್ಕೆ ಪಿ.ಹೆಚ್‍ಡಿ ಮಾರ್ಗದರ್ಶಕರು ಮತ್ತು ವಿಭಾಗದ ಮುಖ್ಯಸ್ಥರ ಮೂಲಕ ದೃಢೀಕರಣ ಹೊಂದಿರಬೇಕು. ಪಿ.ಹೆಚ್‍ಡಿ ಸಂಶೋಧನೆಗೆ ನೋಂದಣಿ ಮಾಡಿಸಿರುವುದಕ್ಕೆ, ಪಿ.ಹೆಚ್‍ಡಿ ನೋಂದಣಿ ಅಧಿಸೂಚನೆಯ ಪ್ರತಿಯನ್ನು ಮಾರ್ಗದರ್ಶಕರು ಮತ್ತು ವಿಭಾಗದ ಮುಖ್ಯಸ್ಥರ ಮೂಲಕ ದೃಡೀಕರಿಸಿರಬೇಕು. ವಿಶ್ವವಿದ್ಯಾಲಯ ಅಥವಾ ಬೇರೆ ಯಾವುದೇ ಆರ್ಥಿಕ ಮೂಲಗಳಿಂದ ಧನಸಹಾಯ ಪಡೆಯುತ್ತಿರಬಾರದು. ಅತಿಥಿ ಉಪನ್ಯಾಸಕ, ಅಂಶಕಾಲಿಕ, ಹಂಗಾಮಿ ಅಧ್ಯಾಪಕ, ಅಧ್ಯಾಪಕೇತರ ಹುದ್ದೆಗಳಲಿಲ ಸೇವೆ ಸಲ್ಲಿಸುತ್ತಿಲ್ಲವೆಂದು ಪಿ.ಹೆಚ್‍ಡಿ ಮಾರ್ಗದರ್ಶಕರಿಂದ ದೃಢೀಕರಣ ಪಡೆದಿರಬೇಕು. ಸಾಮಾನ್ಯ ಪಿ.ಹೆಚ್‍ಡಿ ಸಂಶೋಧನಾ ಕೋಟಾದಡಿ ಆಯ್ಕೆಯಾಗಿರುವುದಕ್ಕೆ ಪಿ.ಹೆಚ್‍ಡಿ ಮಾರ್ಗದರ್ಶಕರು ಮತ್ತು ವಿಭಾಗದ ಮುಖ್ಯಸ್ಥರ ಮೂಲಕ ದೃಢೀಕರಣ ಹೊಂದಿರಬೇಕು.

ವಿಶ್ವವಿದ್ಯಾಲಯ ಸಾಮಾನ್ಯ ಸಂಶೋಧನಾ ಕಿರಿಯ ಶಿಷ್ಯವೇತನ ಎರಡು ವರ್ಷದ ಅವಧಿಗೆ ಮಾತ್ರ ಸೀಮಿತವಾಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿಮಾಹೆ ರೂ.6,000/-ಗಳ ಶಿಷ್ಯವೇತನ ಹಾಗೂ ವಿಜ್ಞಾನ ವಿಭಾಗದ ಅಭ್ಯರ್ಥಿಗಳಿಗೆ ರೂ.4,500/- ಹಾಗೂ ವಿಜ್ಞಾನೇತರ ಅಭ್ಯರ್ಥಿಗಳಿಗೆ ರೂ.4,000/-ಗಳ ವಾರ್ಷಿಕ ಅನುಸಂಗಿಕ ವೆಚ್ಚವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ಅಂತರ್ಜಾಲತಾಣದ ಮೂಲಕ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟಂಬರ್ 20ರೊಳಗಾಗಿ ಸಂಬಂಧಿಸಿದ ಮಾರ್ಗದರ್ಶಕರು ಮತ್ತು ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರ ಮೂಲಕ ಉಪಕುಲಸಚಿವರು, ಶೈಕ್ಷಣಿಕ ವಿಭಾಗ, ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ ಇವರಿಗೆ ಸಲ್ಲಿಸಲು ತಿಳಿಸಿದೆ. ಮಾಹಿತಿಗಾಗಿ ವಿವಿಯ ಅಂತರ್ಜಾಲತಾಣ : www.kuvempu.ac.in ನ್ನು ವೀಕ್ಷಿಸಬಹುದಾಗಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಾ|| ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆ : ಅರ್ಜಿ ಆಹ್ವಾನ

ಮಂಡ್ಯ ಅಕ್ಟೋಬರ್ 4 (ಕರ್ನಾಟಕ ವಾರ್ತೆ):- ಡಾ|| ಬಿ.ಆರ್.ಅಂಬೇಡ್ಕರ್ ನಗರ ವಸತಿ ಯೋಜನೆಯಡಿ ಸ್ವಂತ ಮನೆ ನಿರ್ಮಾಣಕ್ಕೆ ಸಹಾಯಧನ ಪಡೆಯಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಅಕ್ಟೋಬರ್ 20ರೊಳಗೆ ದಾಖಲಾತಿಗಳೊಂದಿಗೆ ಮಳವಳ್ಳಿ ಪುರಸಭಾ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮಳವಳ್ಳಿ ಪುರಸಭೆ ಮುಖ್ಯಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಆಹ್ವಾನಿಸಲಾದ ಅರ್ಜಿಯ ಸಲ್ಲಿಕೆ ಅವಧಿಯನ್ನು ಅಕ್ಟೋಬರ್ 16ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗೆ www.backwardclasses.kar.nic.in ಅಥವಾ ದೂರವಾಣಿ ಸಂಖ್ಯೆ 9480818013 ಅಥವಾ ಸಹಾಯವಾಣಿ ಸಂಖ್ಯೆ 080-44554444 ನ್ನು ಸಂಪರ್ಕಿಸಬಹುದು. ಅರ್ಜಿಯನ್ನು ಆನ್‍ಲೈನ್ ಮೂಲಕ karepass.cgg.gov.in ಹಾಗೂ www.backwardclasses.kar.nic.in ನಲ್ಲಿ ಸಲ್ಲಿಸಬಹುದು ಎಂದು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಜಪೇಯಿ ನಗರ ವಸತಿ ಯೋಜನೆ : ಅರ್ಜಿ ಆಹ್ವಾನ

ವಾಜಪೇಯಿ ನಗರ ವಸತಿ ಯೋಜನೆಯಡಿ ಸ್ವಂತ ಮನೆ ನಿರ್ಮಾಣಕ್ಕೆ ಸಹಾಯಧನ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಅಕ್ಟೋಬರ್ 20ರೊಳಗೆ ದಾಖಲಾತಿಗಳೊಂದಿಗೆ , ಮಳವಳ್ಳಿ ಪುರಸಭಾ ಕಾರ್ಯಾಲಯಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮಳವಳ್ಳಿ ಪುರಸಭೆ ಮುಖ್ಯಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮಗುವಿನ ಪೋಷಕರ ಪತ್ತೆಗೆ ಮನವಿ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಕಳ್ಳನಕೆರೆ ಗ್ರಾಮದ ಮರಡಿ ಲಿಂಗೇಶ್ವರ ದೇವಸ್ಥಾನದ ಬಳಿ ಗಂಡು ಮಗು ಸಿಕ್ಕಿದ್ದು, ಮಗುವನ್ನು ಜನಪದ ದತ್ತು ಸೇವಾ ಟ್ರಸ್ಟ್, ಮೇಲುಕೋಟೆ ಇಲ್ಲಿ ಪಾಲನೆ ಪೋಷಣೆ ಮಾಡಲಾಗುತ್ತಿದೆ. ಮಗುವಿನ ಪೋಷಕರು ಇದ್ದಲ್ಲಿ ಮೂಲ ಅಗತ್ಯ ದಾಖಲಾತಿಗಳೊಂದಿಗೆ ಹಾಗೂ ಮಗು ಕಾಣೆಯಾಗಿರುವ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವರದಿಯ ಜೊತೆಗೆ ಸುಭಾಷ್ ನಗರದಲ್ಲಿರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯ ದೂರವಾಣಿ ಸಂಖ್ಯೆ:08232-223222 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಫಲಾನುಭವಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಪ್ರವಾಸೋದ್ಯಮ ಇಲಾಖೆಯಿಂದ ಜಾರಿಗೊಳಿಸಿರುವ 2015-16ನೇ ಸಾಲಿನ ಎಸ್‍ಸಿಎಸ್‍ಪಿ/ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮತ್ತು ಹಿಂದುಳಿದ ಹಾಗು ಅಲ್ಪಸಂಖ್ಯಾತರ ವರ್ಗದ ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಗಾಗಿ ಸಹಾಯಧನ ನೀಡಲು ಮಂಡ್ಯ ಜಿಲ್ಲೆಯಲ್ಲಿ ಫಲಾನುಭವಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಅಕ್ಟೋಬರ್ 3 ರಂದು ಪ್ರಕಟಣೆ ಮಾಡಲಾಗಿದೆ.

ಆಯ್ಕೆ ಪಟ್ಟಿಯ ವಿರುದ್ದ ಆಕ್ಷೇಪಣೆಗಳು ಸಲ್ಲಿಸಲು 7 ದಿನಗಳ ಕಾಲಾವಕಾಶ ನೀಡಲಾಗಿದೆ. ಆಕ್ಷೇಪಣೆಯನ್ನು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ದಿ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಿಗೆ ಕಚೇರಿ ವೇಳೆ ಅಕ್ಟೋಬರ್ 19ರೊಳಗಾಗಿ ಸಲ್ಲಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆ ತಿಳಿಸಿದೆ.

ಸಹಾಯಧನ : ಅರ್ಜಿ ಆಹ್ವಾನ

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ನೇಕಾರರ ವಸತಿ ಕಾರ್ಯಗಾರ ಯೋಜನೆಯಡಿ ವಸತಿ ನಿರ್ಮಾಣ ಮಾಡಲು ಕೈಮಗ್ಗ, ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ನಿರತರಾಗಿರುವ ನೇಕಾರರಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ.
ಸೌಲಭ್ಯವನ್ನು ಪಡೆಯಲು ಆಸಕ್ತಿ ಹೊಂದಿರುವ ಅರ್ಹ ನೇಕಾರರು ಅರ್ಜಿಯನ್ನು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ಕಛೇರಿಯಲ್ಲಿ ಪಡೆಯಬಹುದು. ಅರ್ಜಿ ಪಡೆಯಲು ಅಕ್ಟೋಬರ್ 25 ಕೊನೆಯ ದಿನವಾಗಿದ್ದು, ನವೆಂಬರ್ 5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಗರದ ಹಳೇ ಎಸ್.ಪಿ.ಕಛೇರಿ ಆವರಣದಲ್ಲಿರುವ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ಕಛೇರಿ ದೂರವಾಣಿ ಸಂಖ್ಯೆ:08232-222366 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಕಾಣೆಯಾದ ಹುಡುಗನ ಪತ್ತೆಗೆ ಮನವಿ

ಮಂಡ್ಯ ನಗರದ ಚಾಮುಂಡೇಶ್ವರಿನಗರದಲ್ಲಿ ವಾಸವಾಗಿದ್ದ 20 ವರ್ಷದ ಎಸ್.ಎಂ.ಸಂಜಯ್ ಸೆಪ್ಟೆಂಬರ್ 27 ರಿಂದ ಕಾಣೆಯಾಗಿದ್ದು, ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಎಸ್.ಎಂ.ಸಂಜಯ್ 5.2 ಅಡಿ ಎತ್ತರ, ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ದಿನ ಬಿಳಿ ಟೀ ಷರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು. ಸಂಜಯ್ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ದೂರವಾಣೆ ಸಂಖ್ಯೆ 08232-224500, 224888 ಸಂಪರ್ಕಿಸಬಹುದು ಅಥವಾ ಪಶ್ಚಿಮ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಿದೆ.

ಕಾಣೆಯಾದ ಹುಡುಗನ ಪತ್ತೆಗೆ ಮನವಿ

ಮಂಡ್ಯ ಗಾಂಧಿ ನಗರದಲ್ಲಿ ವಾಸವಾಗಿದ್ದ್ದ 28 ವರ್ಷದ ಪ್ರಕಾಶ್ ಸೆಪ್ಟೆಂಬರ್ 23 ರಿಂದ ಕಾಣೆಯಾಗಿದ್ದು, ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಕಾಶ್ 5.2 ಅಡಿ ಎತ್ತರ, ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ದಿನ ನೀಲಿ ಬಣ್ಣದ ಷರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು. ಕಾಣೆಯಾದ ಪ್ರಕಾಶ್ ಬಗ್ಗೆ ಮಾಹಿತಿ ಲಭ್ಯವಿದ್ದಲ್ಲಿ ದೂರವಾಣೆ ಸಂಖ್ಯೆ 08232-224500, 224888 ಸಂಪರ್ಕಿಸಬಹುದು ಅಥವಾ ಪಶ್ಚಿಮ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಿದೆ.

ಅಲ್ಪಸಂಖ್ಯಾತರ ಹಾಸ್ಟೆಲ್ ಸೇರ್ಪಡೆಗಾಗಿ ಅರ್ಜಿ ಆಹ್ವಾನ

ಮ0ಗಳೂರು, ಅಕ್ಟೋಬರ್ 04 (ಕರ್ನಾಟಕ ವಾರ್ತೆ):- ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ 2016-17ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ನೂತನವಾಗಿ 4 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು ಮಂಜೂರುಗೊಂಡಿರುತ್ತದೆ.

ಮಂಗಳೂರು ನಗರದಲ್ಲಿ ತಲಾ ಒಂದು ಬಾಲಕರ ಹಾಗೂ ಬಾಲಕಿಯರ ಹಾಸ್ಟೆಲ್, ಬಂಟ್ವಾಳ ತಾಲೂಕಿನ ಬೆಂಜನಪದವು ಗ್ರಾಮದಲ್ಲಿ ಬಾಲಕಿಯರ ಹಾಗೂ ಪುತ್ತೂರು ತಾಲೂಕು ಕಡಬ ಗ್ರಾಮದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ ನವೆಂಬರ್ ತಿಂಗಳಿನಲ್ಲಿ ಪ್ರಾರಂಭಗೊಳ್ಳುತ್ತಿದೆ. ಪಿಯುಸಿ, ಡಿಗ್ರಿ ಹಾಗೂ ಸ್ನಾತಕೋತ್ತರ ಪದವಿ ಕಲಿಯುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಉಚಿತವಾಗಿ ವಸತಿ, ಊಟ ಹಾಗೂ ಇತರ ಸೌಲಭ್ಯ ನೀಡಲಾಗುವುದು. ಈ ಕುರಿತಂತೆ ಪ್ರವೇಶ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಜಿಲ್ಲೆಯ ಎಲ್ಲಾ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಕಚೇರಿಗಳಿಂದ ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿಯಿಂದ ಅರ್ಜಿಯನ್ನು ಪಡೆದು, ನವೆಂಬರ್ 30ರ ಒಳಗೆ ಆಯಾ ವ್ಯಾಪ್ತಿಯ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಕಚೇರಿಗೆ ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

ಪ್ಲಾಂಟರ್ಸ್: ವಾರ್ಷಿಕ ಸಮ್ಮೇಳನ

ಚಿಕ್ಕಮಗಳೂರು,ಅ.04:- ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ವತಿಯಿಂದ 58 ನೇ ವಾರ್ಷಿಕ ಸಮ್ಮೇಳನವನ್ನು ಅಕ್ಟೋಬರ್ 15 ರಂದು ಬೆಳಗ್ಗೆ 10.30 ಕ್ಕೆ ಬೆಂಗಳೂರಿನ ಸ್ಯಾಂಕಿ ರಸ್ತೆಯ ದಿ ಐ.ಟಿ.ಸಿ ವಿಂಡ್ಸರ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.

ಮಾಜಿ ಸಚಿವ ದಿನೇಶ್ ಗುಂಡೂ ರಾವ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾದವ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

ಡೆಲ್ಲಿ ಪೊಲೀಸ್ ಮತ್ತು ಕಾನ್ಸ್‍ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು,ಅ.04:- ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಡೆಲ್ಲಿ ಪೋಲಿಸ್, ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 21 ವರ್ಷ ವಯೋಮಿತಿಯ ಪುರುಷರು ಹಾಗೂ 18 ರಿಂದ 25 ವರ್ಷ ವಯೋಮಿತಿಯ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.

12 ನೇ ತರಗತಿ ಓದಿರುವ ಹಾಗೂ ಡ್ರೈವಿಂಗ್ ಲೈಸನ್ಸ್ ಹೊಂದಿರುವ ಪುರುಷರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನವಾಗಿದ್ದು, 2017 ರ ಮಾರ್ಚ್ 4 ರಂದು ಪರೀಕ್ಷೆ ನಡೆಯಲಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.ssckkr.kar.nic.in ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಮೀನುಕೃಷಿಕರಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಚಿಕ್ಕಮಗಳೂರು,ಅ.04:- ಮೀನುಗಾರಿಕೆ ಇಲಾಖೆ ವತಿಯಿಂದ ಭೂ ಸಮೃದ್ಧಿ ಯೋಜನೆಯಡಿ ಸ್ವಂತ ಜಮೀನಿನಲ್ಲಿ ಮೀನುಕೃಷಿ ಹೊಂಡ ಹೊಂದಿರುವ ಮೀನುಕೃಷಿಕರಿಗೆ ಮೀನುಮರಿ ಮತ್ತು ಮೀನುಮರಿ ಆಹಾರ ಖರೀದಿಸಲು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಭೂಸಮೃದ್ಧಿ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ ಚಿಕ್ಕಮಗಳೂರು ತಾಲ್ಲೂಕಿನ ಲಕ್ಯಾ ಹೋಬಳಿ, ಮೂಡಿಗೆರೆ ತಾಲ್ಲೂಕಿನ ಕಸಬಾ ಹೋಬಳಿ, ಕಡೂರು ತಾಲ್ಲೂಕಿನ ಬೀರೂರು ಹೋಬಳಿ, ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಹೋಬಳಿ ಮತ್ತು ಕೊಪ್ಪ ತಾಲ್ಲೂಕಿನ ಮೇಗುಂದ ಹೋಬಳಿಗಳಲ್ಲಿ ಅನುಷ್ಟಾನಗೊಳ್ಳಲಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕುಗಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಹೆತ್ತ ತಾಯಿಯನ್ನೇ ಹತ್ಯೆಗೈದ ಮದ್ಯವ್ಯಸನಿ ಮಗನಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ

ಚಿಕ್ಕಮಗಳೂರು,ಸೆ.17:- ಮಧ್ಯಸೇವನೆಗೆ ಹಣವನ್ನು ನೀಡದ ಹಿನ್ನೆಲೆಯಲ್ಲಿ ಹೆತ್ತ ತಾಯಿಯನ್ನೇ ಹತ್ಯೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 5000 ರೂ. ದಂಡ ವಿಧಿಸಿ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ.

2015 ಏಪ್ರಿಲ್ 3 ರಂದು ತರೀಕೆರೆಯ ವಾಸಿಯಾದ ಮಲ್ಲಮ್ಮಳನ್ನು ರಾತ್ರಿ ಸಮಯದಲ್ಲಿ ಆಕೆಯ ಮಗ ಆರೋಪಿ ಶ್ರೀನಿವಾಸನು ಬ್ರಾಂಡಿ ಕುಡಿಯಲು 500 ರೂಗಳ ಕೇಳಿದ್ದು ಆ ಸಂದರ್ಭದಲ್ಲಿ ಹಣವನ್ನು ಕೊಡಲು ನಿರಾಕರಿಸಿದ ಮಲ್ಲಮ್ಮಳನ್ನು ಆರೋಪಿ ಮರದ ಕೋಲನ್ನು ತೆಗೆದುಕೊಂಡು ಮಲ್ಲಮ್ಮಳ ಮೂಗಿಗೆ ಹಾಗೂ ತಲೆಗೆ ಜೋರಾಗಿ ಹೊಡೆದಾಗ ಅವಳ ಮೂಗು ಮತ್ತು ಬಾಯಿಯಿಂದ ರಕ್ತ ಬಂದಿದ್ದು, ಆಕೆ ಕೂಗಿಕೊಂಡಾಗ ಆರೋಪಿಯು ಮಲ್ಲಮ್ಮಳ ಕುತ್ತಿಗೆಯನ್ನು ಸೀರೆ ಸೆರಗಿನಿಂದ ಸುತ್ತಿ ಜೋರಾಗಿ ಎಳೆದು ಕೊಲೆ ಮಾಡಿ ಆಕೆಯ ಜಾಕೀಟಿನಲ್ಲಿದ್ದ ಹಣದ ಪರ್ಸ್ ಅನ್ನು ತೆಗೆದುಕೊಂಡು ಶವವನ್ನು ಮರೆಮಾಚುವ ಉದ್ದೇಶದಿಂದ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಟ್ಟಿದ್ದನು ತರೀಕೆರೆ ಪೋಲಿಸ್ ಠಾಣೆಯವರು ಪ್ರಕರಣವನ್ನು ದಾಖಲಿಸಿಕೊಂಡು ಭಾ.ದಂ.ಸಂ. ಕಲಂ 302, 392 ಮತ್ತು 201 ರ ಅನ್ವಯ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಭಾವತಿ ಎಂ. ಹಿರೇಮಠ್ ಅವರು ಆರೋಪಿ ಶ್ರೀನಿವಾಸನಿಗೆ ಭಾ.ದಂ.ಸಂ ಕಲಂ 302 ರ ಅಪರಾಧಕ್ಕೆ ಜೀವವಧಿ ಶಿಕ್ಷೆ ಹಾಗೂ ರೂ. 5,000 ದಂಡ ವಿಧಿಸಿ ತೀರ್ಪು ನೀಡಿರುತ್ತಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಕೆ.ಕೆ ಕುಲಕರ್ಣಿ ಮೊಕದ್ದಮೆಯನ್ನು ನಡೆಸಿದರು.

ಅ. 5 ಮತ್ತು 6 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಚಿಕ್ಕಮಗಳೂರು ಸೆ.29:- ಜಿಲ್ಲೆಯ ಬಾಳೆಹೊನ್ನೂರು, ಆಲ್ದೂರು ಮತ್ತು ಹಿರೇಮಗಳೂರು ವಿ.ವಿ. ಕೇಂದ್ರದಲ್ಲಿ ಪ್ರಸ್ತುತ ಸಾಲಿನ ಮೂರನೇ ತ್ರೈಮಾಸಿಕ ನಿರ್ವಹಣೆಯನ್ನು ಮಾಡಲಿರುವುದರಿಂದ ಅಕ್ಟೋಬರ್ 5 ಮತ್ತು 6 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಹಾಗೂ ಚಿಕ್ಕಮಗಳೂರು ವಿ.ವಿ. ಕೇಂದ್ರದಲ್ಲಿ ಅಕ್ಟೋಬರ್ 6 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿ.ವಿ. ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಫೀಡರ್‍ಗಳಿಗೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರವಾಸೋಧ್ಯಮಕ್ಕೆ ಹೈಟೆಕ್ ಸ್ಪರ್ಶ

ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ

ಚಿಕ್ಕಬಳ್ಳಾಪುರ: ರಾಜ್ಯದಾದ್ಯಂತ ಇರುವ ಪ್ರವಾಸಿ ತಾಣಗಳನ್ನು ವಿಶ್ವಮಟ್ಟದಲ್ಲಿ ಗುರ್ತಿಸಿಕೊಳ್ಳುವಂತೆ ಮಾಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ವಿಶ್ವ ಪ್ರಸಿದ್ಧ ನಂದಿ ಗಿರಿಧಾಮದಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಾಗಿದೆ ಎಂದು ಐಟಿ ಬಿಟಿ ಮತ್ತು ಪ್ರವಾಸೋದ್ಯಮ ಸಚಿವರಾದ ಪ್ರಿಯಾಂಕ್ ಖರ್ಗೆ ರವರು ತಿಳಿಸಿದರು.

ವಿಶ್ವಪ್ರಸಿದ್ಧ ನಂದಿಗಿರಿಧಾಮದ ನೆಹರು ನಿಲಯದಲ್ಲಿ ಮಂಗಳವಾರ ಉನ್ನತ ಮಟ್ಟದ ಅಧಿಕಾರಿಗಳ ಪ್ರವಾಸೋದ್ಯಮ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಇರುವ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲು ಚರ್ಚೆ ನಡೆಸಲಾಗಿದೆ ಎಂದರು.

ನಂದಿ ಲೆಜೆಂಡ್ ಸರ್ಕೀಟ್ ಹೆಸರಿನಲ್ಲಿ ಧಾರ್ಮಿಕ ಹಾಗೂ ಪ್ರಾಕೃತಿಕ ತಾಣಗಳ ಅಭಿವೃದ್ಧಿ ಮತ್ತು ಪ್ರವಾಸಿಗರ ಆಕರ್ಷಣೆ ಹಂತದಲ್ಲಿ ಕ್ರಮಗಳನ್ನು ಕೈಗೊಳ್ಳಬೇಕಿದ್ದು, ಇದರಿಂದ ಪ್ರಕೃತಿಯ ಮೇಲೆ ಯಾವುದೇ ಹಾನಿ ಆಗದಂತೆ ಎಚ್ಚರ ವಹಿಸಲಾಗುವುದು ಎಂದು ತಿಳಿಸಿದರು.

ನಂದಿಗಿರಿಧಾಮಕ್ಕೆ ವಾಹನಗಳನ್ನು ನಿಷೇಧಿಸುವುದು, ಗಿರಿಧಾಮದ ಪ್ರದೇಶದಲ್ಲಿ ಪ್ಲಾಸ್ಟಿಕನ್ನು ಸಂಪೂರ್ಣವಾಗಿ ನಿಷೇಧ ಮಾಡುವ ಮಹತ್ವದ ಯೋಜನೆಗಳು ಚರ್ಚೆಯಲ್ಲಿದ್ದು, ಗಿರಿಧಾಮದ ತಪ್ಪಲಿನಿಂದ ಮೇಲಕ್ಕೆ ಪರಿಸರ ಸ್ನೇಹಿ ವಾಹನಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದರು.

ಅಲ್ಲದೆ ಗೌರಿಬಿದನೂರು ತಾಲೂಕಿನಲ್ಲಿರುವ ದಕ್ಷಿಣ ಭಾರತದ ಜಲಿಯನ್ ವಾಲಾಬಾಗ್ ಎಂದೇ ಖ್ಯಾತಿ ಪಡೆದಿರುವ ವಿದುರಾಶ್ವತ್ಥದಲ್ಲಿ ಧ್ವನಿ, ಬೆಳಕು ಪ್ರದರ್ಶನಾಲಯ, ಇದೇ ತಾಲೂಕಿನ ಕುಡುಮಲುಕುಂಟೆ ಕೈಗಾರಿಕಾ ಪ್ರದೇಶದಲ್ಲಿ ವಿಜ್ಞಾನ ವಸ್ತು ಪ್ರದರ್ಶನಾಲಯ ಮತ್ತು ವಿಶ್ವೇಶ್ವರಯ್ಯ ಮ್ಯೂಸಿಯಂ ನಿರ್ಮಾಣಕ್ಕಾಗಿ ಈಗಾಗಲೇ ಅಡಿಗಲ್ಲು ಹಾಕಲಾಗಿದೆ ಎಂದು ತಿಳಿಸಿದರು.

ಸಂಸದರಾದ ಡಾ.ಎಂ.ವೀರಪ್ಪ ಮೊಯ್ಲಿ ಮಾತನಾಡಿ, ತಮ್ಮ ಸಂಸತ್ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಇತಿಹಾಸ ಪ್ರಸಿದ್ಧ ತಾಣಗಳನ್ನು ಪ್ರವಾಸಿ ತಾಣಗಳಾಗಿ ಮೇಲ್ದರ್ಜೆಗೇರಿಸಲು ಅಗತ್ಯವಿರುವ ಕ್ರಮಗಳ ಕುರಿತು ಈಗಾಗಲೇ ಪ್ರವಾಸೋಧ್ಯಮ ಸಚಿವರೊಂದಿಗೆ ಚರ್ಚೆ ನಡೆಸಿದ್ದು, ಆದಷ್ಟು ಶೀಘ್ರದಲ್ಲಿ ಇವುಗಳ ಅನುಷ್ಠಾನಕ್ಕಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಬಾಗೇಪಲ್ಲಿ ತಾಲೂಕಿನ ಗುಮ್ಮನಾಯಕನಪಾಳ್ಯ, ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ, ರಂಗಸ್ಥಳ, ಬೆಂಗಳೂರು ಗ್ರಾಮಾಂತರ ಜ್ಲಿಲೆಯ ಕೆಂಪೇಗೌಡ ಜನ್ಮಸ್ಥಳ ಆವತಿ, ಟಿಪ್ಪುಸುಲ್ತಾನ್ ಜನ್ಮಸ್ಥಳ ದೇವನಹಳ್ಳಿ, ಘಾಟಿ ಸುಬ್ರಹ್ಮಣ್ಯ ಸೇರಿದಂತೆ ಅನೇಕ ಸ್ಥಳ ಅಭಿವೃದ್ಧಿಗಾಗಿ ಮುತುವರ್ಜಿ ವಹಿಸಲಾಗಿದೆ ಎಂದರು.

ಸಭೆಯಲ್ಲಿ ವಿಧಾನಸಭಾ ಉಪಸಭಾಧ್ಯಕ್ಷರಾದ ಎನ್.ಎಚ್. ಶಿವಶಂಕರರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗರೆಡ್ಡಿ, ಚಿಕ್ಕಬಳ್ಳಾಪುರ ಶಾಸಕರಾದ ಡಾ.ಕೆ. ಸುಧಾಕರ್, ಜಿ.ಪಂ ಅಧ್ಯಕ್ಷರಾದ ಪಿ.ಎನ್. ಕೇಶವರೆಡ್ಡಿ, ಪ್ರವಾಸೋಧ್ಯಮ ಇಲಾಖೆ ನಿರ್ದೇಶಕರಾದ ಮಂಜುಳ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ವಿ.ಶಂಕರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಎಸ್.ಪಾಲಯ್ಯ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎನ್.ಮಂಜುಶ್ರೀ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಾಧಿಕಾರಿ ಜೆ.ಮಂಜುನಾಥ್, ಅಪರ ಜಿಲ್ಲಾಧಿಕಾರಿಗಳಾದ ಕೆ.ಎನ್. ಅನುರಾಧ ಸೇರಿದಂತೆ ಇತರೆ ಹಲವು ಇಲಾಖೆಗಳ ರಾಜ್ಯ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಗತಿ ಪರಿಶೀಲನಾ ಸಭೆ

ಚಿಕ್ಕಬಳ್ಳಾಪುರ : ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಕೆ.ಹೆಚ್. ಮುನಿಯಪ್ಪ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಕ್ಟೋಬರ್ 6ರ ಬೆಳಗ್ಗೆ 11 ಗಂಟೆಗೆ ಚಿಂತಾಮಣಿ ಮತ್ತು ಶಿಡ್ಲಘಟ್ಟ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಸದರಿ ಸಭೆ ಮುಗಿದ ನಂತರ ಮಧ್ಯಾಹ್ನ 1.30 ಗಂಟೆಗೆ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುತ್ತದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್, ಚಿಕ್ಕಬಳ್ಳಾಪುರ ಇವರ ಪ್ರಕಟಣೆ ತಿಳಿಸಿದೆ. ಸದರಿ ಸಭೆಗೆ ಮಾಧ್ಯಮ ಪ್ರತಿನಿಧಿಗಳು ಆಗಮಿಸಲು ಕೋರಿದೆ.

ಜೀವನ ಕೌಶಲ್ಯ ತರಬೇತಿ ಮತ್ತು ಒತ್ತಡ ನಿವಾರಣಾ ಕಾರ್ಯಾಗಾರ

ಜೀವನ ಕೌಶಲ್ಯ ತರಬೇತಿ ಮತ್ತು ಒತ್ತಡ ನಿವಾರಣಾ ಕಾರ್ಯಾಗಾರ ಕಾರ್ಯಕ್ರಮ

ಚಿಕ್ಕಬಳ್ಳಾಪುರ :ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶ್ರೀ ವಿಷ್ಣುಪ್ರಿಯ ಎಜುಕೇಷನ್ ಟ್ರಸ್ಟ್ (ರಿ), ಚಿಕ್ಕಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಜೀವನ ಕೌಶಲ್ಯ ತರಬೇತಿ ಮತ್ತು ಒತ್ತಡ ನಿವಾರಣಾ ಕಾರ್ಯಾಗಾರ ಕಾರ್ಯಕ್ರಮವನ್ನು ಅಕ್ಟೋಬರ್ 5ರ ಬೆಳಗ್ಗೆ 9.30 ಗಂಟೆಗೆ ವಿಷ್ಣುಪ್ರಿಯ ಪಿ.ಯು. ಕಾಲೇಜ್ ಆವರಣ, ಚಿಕ್ಕಬಳ್ಳಾಪುರದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಎ.ಎಸ್.ಬೆಳ್ಳುಂಕೆ ರವರು ನೆರವೇರಿಸುವರು. ಅಧ್ಯಕ್ಷತೆಯನ್ನು ವಿಷ್ಣುಪ್ರಿಯ ಎಜುಕೇಷನ್ ಟ್ರಸ್ಟ್ ಅಧ್ಯಕ್ಷರಾದ ವೈ.ಎನ್.ರಾಮಚಂದ್ರರೆಡ್ಡಿ ರವರು ವಹಿಸುವರು.
ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ವಿ.ತುರಮರಿ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ಎಸ್.ಶೋಭ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಎಸ್.ನಟರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಡಿ.ರವಿಶಂಕರ್, ವಕೀಲರ ಸಂಘದ ಅಧ್ಯಕ್ಷರಾದ ಪ್ರಕಾಶ್, ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷರಾದ ಡಾ.ರಾಮಚಂದ್ರರೆಡ್ಡಿ, ಜಿಲ್ಲಾಸ್ಪತ್ರೆ ಜಿಲ್ಲಾಶಸ್ತ್ರ ಚಿಕಿತ್ಸಕರಾದ ಡಾ.ವಿಜಯಕುಮಾರ್, ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿಗಳಾದ ಡಾ.ಕೆ.ಎನ್.ಚಂದ್ರಮೋಹನ್, ಮಾನಸಿಕ ತಜ್ಞರಾದ ಡಾ.ಕಿಶೋರ್, ಡಾ.ಹೇಮಂತ್, ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಕಾರ್ಯದರ್ಶಿಗಳಾದ ಡಾ.ಸತ್ಯನಾರಾಯಣರೆಡ್ಡಿ, ವಕೀಲರ ಸಂಘದ ಉಪಾಧ್ಯಕ್ಷರಾದ ಹೆಚ್.ಸಿ.ಪಾಪಿರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ಆರ್.ಶ್ರೀನಿವಾಸ್ ರವರು ಭಾಗವಹಿಸುವರು.

ಬಾಲಕಾರ್ಮಿಕ ಮುಕ್ತ ಜಿಲ್ಲೆಯಾಗಿಸಲು ಕಟ್ಟುನಿಟ್ಟಿನ ಕ್ರಮ ವಹಿಸಿ- ಎಂ. ಕನಗವಲ್ಲಿ

ಕೊಪ್ಪಳ ಅ. 04 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನಾ ಕ್ರಿಯಾ ಯೋಜನೆ ಅನುಷ್ಠಾನ ಪ್ರಗತಿ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕಾರ್ಯಕಾರಿಣಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಇನ್ನೂ ವ್ಯಾಪಕವಾಗಿ ಅಸ್ತಿತ್ವದಲ್ಲಿರುವ ಬಗ್ಗೆ ಕೇಳಿಬರುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶದೊಂದಿಗೆ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ಸಂಬಂಧಪಟ್ಟ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಕಾರ್ಮಿಕ ಅಧಿಕಾರಿ ಶಾಮರಾವ್ ಅವರು, 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳುವವರ ವಿರುದ್ಧ ಇದೀಗ ಕಾನೂನು ಇನ್ನಷ್ಟು ಕಠಿಣಗೊಂಡಿದೆ. 18 ವರ್ಷದ ಮಕ್ಕಳನ್ನು ಅಪಾಯಕಾರಿ ಉದ್ದಿಮೆಯಲ್ಲಿ ನೇಮಿಸಿಕೊಂಡರೂ ಸಹ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾನೂನು ಅನ್ವಯಿಸುತ್ತದೆ. ಬಾಲಕಾರ್ಮಿಕರನ್ನು ಕೆಲಸಕ್ಕೆ ಇರಿಸಿಕೊಳ್ಳುವವರ ಮೇಲೆ ಇಲಾಖೆ ಅಧಿಕಾರಿಗಳು ನೇರವಾಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ, ಎಫ್‍ಐಆರ್ ದಾಖಲಿಸಲು ಕಾನೂನು ತಿದ್ದುಪಡಿಯಾಗಿದೆ. ಈ ಕುರಿತಂತೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ತರಬೇತಿ ನೀಡುವ ಅಗತ್ಯವಿದೆ. ಶೀಘ್ರದಲ್ಲೇ ತರಬೇತಿ ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಮೀಕ್ಷಾ ವರದಿ ಬಗ್ಗೆ ಪರಿಶೀಲಿಸಿ : ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತಂತೆ ಸಮೀಕ್ಷೆ ಈಗಾಗಲೆ ಪೂರ್ಣಗೊಂಡಿದೆ. ವರದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿ, ಖಚಿತಪಡಿಸಿಕೊಳ್ಳುವ ಅಗತ್ಯವಿದೆ. ಸಮೀಕ್ಷಾ ವರದಿಯಲ್ಲಿ ಶಾಲೆಯಿಂದ ಹೊರಗುಳಿಯಲು ಕಾರಣವನ್ನು ಮನೆಗೆಲಸ ಎಂದು ನಮೂದಿಸಲಾಗಿದ್ದು, ಈ ಬಗ್ಗೆಯೂ ಪರಿಶೀಲಿಸುವ ಅಗತ್ಯವಿದೆ. ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಆಯಾ ಗ್ರಾಮ ಪಂಚಾಯತಿ, ಸ್ಥಳೀಯ ಸಂಸ್ಥೆಗಳಿಂದ ಸಮರ್ಪಕ ವರದಿಯನ್ನು ಅಕ್ಟೋಬರ್ ತಿಂಗಳಿನ ಅಂತ್ಯದೊಳಗೆ ಪಡೆಯಬೇಕು. ವರದಿ ಬಂದ ನಂತರ ಪುನರ್ವಸತಿ ಯೋಜನೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದರು.

ಆರೋಗ್ಯ ಇಲಾಖೆ ಸಹಕಾರ : ಬಾಲಕಾರ್ಮಿಕರನ್ನು ಪತ್ತೆ ಹಚ್ಚಿದ ಸಂದರ್ಭದಲ್ಲಿ ವಯಸ್ಸಿನ ದೃಢೀಕರಣ ನೀಡಲು ಆರೋಗ್ಯ ಇಲಾಖೆ ಸಮರ್ಪಕ ಸಹಕಾರ ನೀಡುತ್ತಿಲ್ಲ. ಮಕ್ಕಳ ವಯಸ್ಸಿನ ಬಗ್ಗೆ ಆಸ್ಪತ್ರೆಗಳಲ್ಲಿರುವ ದಂತ ವೈದ್ಯರು ಅಥವಾ ಎಂ.ಬಿ.ಬಿ.ಎಸ್. ವೈದ್ಯರು ಪ್ರಮಾಣ ಪತ್ರ ನೀಡಬೇಕು ಎಂಬ ನಿಯಮವಿದೆ. ಆದಾಗ್ಯೂ ವೈದ್ಯರು ಸಹಕಾರ ನೀಡುತ್ತಿಲ್ಲ. ಇದರಿಂದಾಗಿ ಕಾನೂನು ಉಲ್ಲಂಘಿಸುವವರ ಮೇಲೆ ದೂರು ದಾಖಲಿಸಲು ತೊಂದರೆ ಉಂಟಾಗುತ್ತಿದೆ ಎಂದು ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಕುರಿತಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಕ್ತ ಸೂಚನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ಎಂ.ಕೆ. ನಿಂಗಪ್ಪ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡರ, ಜಿಲ್ಲಾ ಕಾರ್ಮಿಕ ಅಧಿಕಾರಿ ಶಾಮರಾವ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಭಕ್ತಿ-ಭಾವದಿಂದ ಅ. 15 ರಂದು ವಾಲ್ಮೀಕಿ ಜಯಂತಿ ಆಚರಣೆಗೆ ನಿರ್ಧಾರ

ಕೊಪ್ಪಳ ಅ. 04 (ಕರ್ನಾಟಕ ವಾರ್ತೆ) : ಆದಿಕವಿ ಮಹರ್ಷಿ ವಾಲ್ಮೀಕಿಯವರ ಜಯಂತಿಯನ್ನು ಅ. 15 ರಂದು ಜಿಲ್ಲಾ ಕೇಂದ್ರದಲ್ಲಿ ಎಲ್ಲ ಸಮುದಾಯದ ಸಹಭಾಗಿತ್ವದಲ್ಲಿ ಭಕ್ತಿ ಭಾವದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಹೇಳಿದರು.

ಮಹರ್ಷಿ ವಾಲ್ಮೀಕಿಯವರ ಜಯಂತಿಯನ್ನು ಆಚರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಕ್ಟೋಬರ್ 15 ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತವು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗುವುದು. ವಾಲ್ಮೀಕಿ ಜಯಂತಿಯ ಅಂಗವಾಗಿ ಅಂದು ಬೆಳಿಗ್ಗೆ 8-30 ಗಂಟೆಗೆ ನಗರದ ಸಿರಸಪ್ಪಯ್ಯನ ಮಠ ಆವರಣದಿಂದ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದೊಂದಿಗೆ ಅದ್ಧೂರಿ ಮೆರವಣಿಗೆ ಏರ್ಪಡಿಸಲಾಗುವುದು. ವಾಲ್ಮೀಕಿಯವರ ಭಾವಚಿತ್ರದ ಮೆರವಣಿಗೆಗೆ ಈ ಬಾರಿ ವೈಭವದ ಸಾರೋಟ್ ಬಳಸಲು ನಿರ್ಧರಿಸಲಾಗಿದೆ. ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ವಿವಿಧ ಸಾಂಸ್ಕøತಿಕ ಕಲಾತಂಡಗಳು, ಸ್ತಬ್ಧ ಚಿತ್ರಗಳು ಪಾಲ್ಗೊಂಡು ಮೆರವಣಿಗೆಯನ್ನು ಆಕರ್ಷಕಗೊಳಿಸಲಿವೆ. ಮೆರವಣಿಗೆಯಲ್ಲಿ ಎಲ್ಲಾ ಸಂಘಟನೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರು, ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಬೇಕು. ಮೆರವಣಿಗೆಯ ನಂತರ ಮಧ್ಯಾಹ್ನ 12 ಗಂಟೆಗೆ ಸಾಹಿತ್ಯ ಭವನದಲ್ಲಿ ಸಮಾರಂಭ ಏರ್ಪಡಿಸಲಾಗಿದ್ದು, ಸಮಾರಂಭದಲ್ಲಿ ಗಣ್ಯಾತಿಗಣ್ಯರೆಲ್ಲರು ಭಾಗವಹಿಸಲಿದ್ದಾರೆ. ಮಹರ್ಷಿ ವಾಲ್ಮೀಕಿಯವರ ಕುರಿತು ಹಾಗೂ ಜಯಂತಿ ಕಾರ್ಯಕ್ರಮದ ಮಹತ್ವ ಕುರಿತಂತೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೊಪ್ಪಳದ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಲ್.ಜಿ. ರಾಟಿಮನಿ ಅವರು ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಗಣನೀಯ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸಲಾಗುವುದು. ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗುವುದು. ಸಾರ್ವಜನಿಕರು, ಸಂಘಟನೆಗಳ ಪದಾಧಿಕಾರಿಗಳು ವಾಲ್ಮೀಕಿ ಜಯಂತಿಯನ್ನು ನಗರದ ಪ್ರಮುಖ ವೃತ್ತಗಳಿಗೆ ದೀಪಾಲಂಕಾರ ಸೇರಿದಂತೆ ಹಬ್ಬದ ವಾತಾವರಣದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಹೇಳಿದರು. ವಾಲ್ಮೀಕಿ ಜಯಂತಿ ದಿನದಂದು ಹಾಗೂ ಮುನ್ನಾ ದಿನದಂದು, ನಗರದ ಜವಾಹರ ರಸ್ತೆ ಹಾಗೂ ನಗರದ ಪ್ರಮುಖ ರಸ್ತೆಯನ್ನು ಸ್ವಚ್ಛಗೊಳಿಸಲು ಅಲ್ಲದೆ ಮೆರವಣಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಲು ನಗರಸಭೆ ಅಧಿಕಾರಿಗಳಿಗೆ ಹಾಗೂ ಎಲ್ಲ ಶಾಲಾ ಕಾಲೇಜುಗಳು, ಗ್ರಾಮ ಪಂಚಾಯತಿಗಳಲ್ಲಿ ವಾಲ್ಮೀಕಿ ಜಯಂತಿ ಅಚರಣೆ ಸಂಬಂಧ ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಾಕಿ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ವಾಲ್ಮೀಕಿ ಭವನಗಳ ನಿರ್ಮಾಣ, ಪ.ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ಹಾಗೂ ಕುಷ್ಟಗಿಯಲ್ಲಿ ಪರಿಶಿಷ್ಟ ಪಂಗಡ ಇಲಾಖೆ ಕಚೇರಿ ಪ್ರಾರಂಭಿಸುವುದರ ಸಂಬಂಧ ಸೂಕ್ತ ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಸದಸ್ಯ ರಾಮಣ್ಣ ಚೌಡ್ಕಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ. ಕಲ್ಲೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ದೇಸಾಯಿ, ನಗರಸಭೆ ಪೌರಾಯುಕ್ತರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರಾದ ರತ್ನಾಕರ್ ಟಿ, ಹನುಮಂತಪ್ಪ ನಾಯಕ್, ರಾಮಣ್ಣ ಕಲ್ಲನ್ನವರ್, ಲಕ್ಷ್ಮಣ್, ಮಂಜುನಾಥ ಗೊಂಡಬಾಳ, ಬಸವರಾಜ್ ಹಾಗೂ ಹಲವು ಮುಖಂಡರು, ಗಣ್ಯರಾದ ಇಂದಿರಾ ಬಾವಿಕಟ್ಟಿ, ಶಿವಾನಂದ ಹೊದ್ಲೂರ್ ಮತ್ತಿತರರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.

ವಿದ್ಯುತ್ ನಿಲುಗಡೆ ಸಹಕರಿಸಲು ಮನವಿ

ಚಿತ್ರದುರ್ಗ,ಅಕ್ಟೋ.4- : ದಿನಾಂಕ 5-10-2016 ರಂದು ಹಿರೇಗುಂಟೂರಿನ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ 66 ಕೆ.ವಿ. ಸಿ.ಟಿ. ಆಯಿಲ್ ಸೋರಿಕೆಯನ್ನು ನಿಯಂತ್ರಿಸಲು ಹಾಗೂ ಸಿರಿಗೆರೆ ಮತ್ತು ಭರಮಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 3 ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕಾರ್ಯವಿರುವುದರಿಂದ ಸದರಿ ದಿನದಂದು ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ 11 ಕೆ.ವಿ. ವಿದ್ಯುತ್ ಮಾರ್ಗಗಳಲ್ಲಿ ಬೆ.10 ಗಂಟೆಯಿಂದ ಮಧ್ಯಾಹ್ನ 4 ಗಂಟೆವರೆಗೆ ವಿದ್ಯುತ್ ನಿಲುಗಡೆಗೊಳಿಸುವುದರಿಂದ ಸಾರ್ವಜನಿಕರು ಸಹಕರಿಸಬೇಕಾಗಿ ಕಾರ್ಯನಿರ್ವಾಹಕ ಇಂಜಿನಿಯರ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ಚಿತ್ರದುರ್ಗ ಇವರು ಕೋರಿದ್ದಾರೆ.

ನಿಲುಗಡೆಗೊಳಪಡುವ ಪ್ರದೇಶಗಳು:- 66/11 ಕೆ.ವಿ. ಹಿರೇಗುಂಟನೂರು, ಸಿರಿಗೆರೆ ಮತ್ತು ಭರಮಸಾಗರ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಕನ್ನಡ ರಾಜ್ಯೋತ್ಸವ ಆಚರಣೆ ಬಗ್ಗೆ ಪೂರ್ವಭಾವಿ ಸಭೆ

ಚಿತ್ರದುರ್ಗ,ಅ.4-: ದಿ: 1-11-2016 ರಂದು ಆಚರಿಸುವ ಕನ್ನಡ ರಾಜ್ಯೋತ್ಸವ ಆಚರಣೆ ಬಗ್ಗೆ ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ದಿ: 7-10-2016 ರಂದು ಬೆ.11 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಪ.ಜಾತಿ/ಪ.ಪಂಗಡ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ

ಚಿತ್ರದುರ್ಗ,ಅ.4-: 2016-17 ನೇ ಸಾಲಿನ ಅಕ್ಟೋಬರ್ ಮಾಹೆಯ ರಜೆ ಅವಧಿಯಲ್ಲಿ ಅಂದರೆ ದಿ: 8-10-2016 ರಿಂದ 23-10-2016 ರವರೆಗೆ ಒಟ್ಟು 12 ದಿನಗಳಲ್ಲಿ ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಗುರುತಿಸಲಾಗಿರುವ ಪದವಿಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ವರ್ಗದ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಸರ್ಕಾರದ ನಿರ್ದೇಶನದಂತೆ ಇಂಗ್ಲೀಷ್, ಅರ್ಥಶಾಸ್ತ್ರ, ಲೆಕ್ಕಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳಲ್ಲಿ ವಿಶೇಷ ತರಬೇತಿಯನ್ನು ಪದವಿಪೂರ್ವ ಶಿಕ್ಷಣಿಲಾಖೆ ವತಿಯಿಂದ ಆಯೋಜಿಸಲಾಗಿದೆ. ಪ.ಜಾತಿ, ಪ.ವರ್ಗದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಲು ಮತ್ತು ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ದಾವಣಗೆರೆ ವಿಶ್ವವಿದ್ಯಾಲಯದಿಂದ 2017-18 ನೇ ಶೈಕ್ಷಣಿಕ ಸಾಲಿಗೆ ಸಂಯೋಜನಾ ಅರ್ಜಿ ಆಹ್ವಾನ

ಚಿತ್ರದುರ್ಗ,ಅ.4-: ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ 2017-18 ನೇ ಶೈಕ್ಷಣಿಕ ಸಾಲಿನಿಂದ ಹೊಸದಾಗಿ ಕಲಾ, ವಿಜ್ಞಾನ, ವಾಣಿಜ್ಯ, ಆಡಳಿತ ನಿರ್ವಹಣೆ, ಶಿಕ್ಷಣಮತ್ತು ದೈಹಿಕ ಶಿಕ್ಷಣ ವಿಷಯಗಳಲ್ಲಿ ಪದವಿ ಕಾಲೇಜುಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರದ ಅನುದಾನ ಇಲ್ಲದೆ ಕಾಲೇಜುಗಳನ್ನು ನಡೆಸಲು ಆರ್ಥಿಕ ಸಾಮಥ್ರ್ಯವುಳ್ಳ ನೊಂದಾಯಿತ ಸೊಸೈಟಿ, ಸಾರ್ವಜನಿಕ ಟ್ರಸ್ಟ್/ಸಂಸ್ಥೆಗಳಿಂದ ನವೀನ ಸಂಯೋಜನೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳು ತಮ್ಮ ಕಾಲೇಜುಗಳ ಮುಂದುವರಿಕೆ, ಸಂಯೋಜನೆ, ಶಾಶ್ವತ ಸಂಯೋಜನೆ, ಶಾಶ್ವತ ಸಂಯೋಜನಾ ಪರಿಶೀಲನೆ, ಶಾಶ್ವತ ಸಂಯೋಜನಾ ನವೀಕರಣ, ಹೊಸ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ನವೀನ ಸಂಯೋಜನೆ, ಐಚ್ಛಿಕ ವಿಷಯ ಸಮೂಹ, ಭಾಷಾ ವಿಷಯಗಳ ನವೀನ ಸಂಯೋಜನೆ, ವಿದ್ಯಾರ್ಥಿ ಪ್ರಮಾಣದ ವಿಸ್ತರಣೆ ಇವುಗಳಿಗೆ ಸಂಬಂಧಿಸಿದಂತೆ 2017-18 ನೇ ಶೈಕ್ಷಣಿಕ ವರ್ಷಕ್ಕಾಗಿ ಸಂಯೋಜನಾ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸಬಹುದಾಗಿದೆ.

2017-18 ನೇ ಸಾಲಿನ ಸಂಯೋಜನಾ ಪ್ರಸ್ತಾವನೆಗಳ ಅರ್ಜಿಗಳನ್ನು ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಸಂಯೋಜನಾ ಶುಲ್ಕದ ಮಾಹಿತಿಯನ್ನು ಸಂಯೋಜನಾ ಅರ್ಜಿಯ ಜೊತೆ ಒದಗಿಸಲಾಗುವುದು, ಹೆಚ್ಚಿನ ಮಾಹಿತಿಯನ್ನು ವಿಶ್ವವಿದ್ಯಾಲಯದ ವೆಬ್‍ಸೈಟ್ www.davangereuniversity.ac.in ನಲ್ಲಿ ಪಡೆಯಬಹುದು.

ನಿಗದಿತ ಸಂಯೋಜನಾ ಅರ್ಜಿ ಶುಲ್ಕ ರೂ.2500/- ಗಳನ್ನು ಯಾವುದೇ ರಾಷ್ಟ್ರೀಕೃತ ಬ್ಯಾಂಕ್‍ನಿಂದ ಹಣಕಾಸು ಅಧಿಕಾರಿ, ದಾವಣಗೆರೆ ವಿಶ್ವವಿದ್ಯಾಲಯ, ಶಿವಗಂಗೋತ್ರಿ, ದಾವಣಗೆರೆ-577002 ಇವರ ಪದನಾಮದಲ್ಲಿ ಡಿಮ್ಯಾಂಡ್ ಡ್ರಾಫ್ಟ್ ಪಡೆದು ವಿಶ್ವವಿದ್ಯಾಲಯದ ಕಚೇರಿ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಿ ಅರ್ಜಿ ನಮೂನೆ ಹಾಗೂ ಇತರ ಮಾಹಿತಿ ಪಡೆಯಬಹುದು. ದಂಡಶುಲ್ಕವಿಲ್ಲದೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 2-11-2016. ರೂ.15,000/- ದಂಡಶುಲ್ಕದೊಡನೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 30-11-2016 ಆಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭರ್ತಿ ಮಾಡಿದ ಅರ್ಜಿಗಳನ್ನು ನಿರ್ದೇಶಕರು, ಕಾಲೇಜು ಅಭಿವೃದ್ದಿ ಪರಿಷತ್, ದಾವಣಗೆರೆ ವಿಶ್ವವಿದ್ಯಾಲಯ, ಶಿವಗಂಗೋತ್ರಿ, ದಾವಣಗೆರೆ ಇವರ ಕಚೇರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು. ಅಂಚೆ ವಿಳಂಬಕ್ಕೆ ವಿಶ್ವವಿದ್ಯಾಲಯ ಜವಾಬ್ದಾರಿಯಲ್ಲ.

ಶಿಷ್ಯವೇತನ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಚಿತ್ರದುರ್ಗ,ಅ.4-: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜೀ ಸಲ್ಲಿಸಲು ದಿ: 25-9-2016 ನಿಗಧಿಪಡಿಸಲಾಗಿತ್ತು.

ಕೆಲವು ಕಾಲೇಜುಗಳಲ್ಲಿ ಇನ್ನೂ ವಿವಿಧ ಕೋರ್ಸುಗಳಲ್ಲಿ ಪ್ರವೇಶ ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳು/ವಿದ್ಯಾರ್ಥಿಗಳ ಪೋಷಕರು, ಜನಪ್ರತಿನಿಧಿಗಳು, ವಿವಿಧ ಕಾಲೇಜುಗಳ ಪ್ರಾಂಶುಪಾಲರು ದಿನಾಂಕ ವಿಸ್ತರಿಸಲು ಕೋರಿರುತ್ತಾರೆ. ಆದ್ದರಿಂದ ಮೆಟ್ರಿಕ್ ನಂತರಸ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜೀ ಸಲ್ಲಿಸುವ ಅವಧಿಯನ್ನು ದಿ: 16-10-2016 ರವರೆಗೆ ವಿಸ್ತರಿಸಲಾಗಿದೆ. ದಿನಾಂಕವನ್ನು ಮತ್ತೆ ವಿಸ್ತರಿಸಲಾಗುವುದಿಲ್ಲವೆಂದು ಆಯುಕ್ತರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ತಿಳಿಸಿದ್ದಾರೆ. ಅರ್ಜಿಗಳನ್ನು ಆನ್‍ಲೈನ್ ಮೂಲಕ karepass.cgg.gov.in ಹಾಗೂ www.backwardclasses.kar.nic.in ಸಲ್ಲಿಸುವುದು. ಸಂಪರ್ಕಿಸಬೇಕಾದ ಮೊಬೈಲ್ ನಂ. 9480818013, ಸಹಾಯವಾಣಿ 080-44554444.

ಪ್ರವಾಸೋಧ್ಯಮಕ್ಕೆ ಹೈಟೆಕ್ ಸ್ಪರ್ಶ

ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ

ಬೆಂ.ಗ್ರಾ.ಜಿ. ಅ. 04 (ಕರ್ನಾಟಕ ವಾರ್ತೆ) : ರಾಜ್ಯದಾದ್ಯಂತ ಇರುವ ಪ್ರವಾಸಿ ತಾಣಗಳನ್ನು ವಿಶ್ವಮಟ್ಟದಲ್ಲಿ ಗುರ್ತಿಸಿಕೊಳ್ಳುವಂತೆ ಮಾಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ವಿಶ್ವ ಪ್ರಸಿದ್ಧ ನಂದಿ ಗಿರಿಧಾಮದಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಾಗಿದೆ ಎಂದು ಐಟಿ ಬಿಟಿ ಮತ್ತು ಪ್ರವಾಸೋದ್ಯಮ ಸಚಿವರಾದ ಪ್ರಿಯಾಂಕ್ ಖರ್ಗೆ ರವರು ತಿಳಿಸಿದರು.

ವಿಶ್ವಪ್ರಸಿದ್ಧ ನಂದಿಗಿರಿಧಾಮದ ನೆಹರು ನಿಲಯದಲ್ಲಿ ಇಂದು ಉನ್ನತ ಮಟ್ಟದ ಅಧಿಕಾರಿಗಳ ಪ್ರವಾಸೋದ್ಯಮ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾತನಾಡಿದ ಅವರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಇರುವ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲು ಚರ್ಚೆ ನಡೆಸಲಾಗಿದೆ ಎಂದರು.

ನಂದಿ ಲೆಜೆಂಡ್ ಸರ್ಕೀಟ್ ಹೆಸರಿನಲ್ಲಿ ಧಾರ್ಮಿಕ ಹಾಗೂ ಪ್ರಾಕೃತಿಕ ತಾಣಗಳ ಅಭಿವೃದ್ಧಿ ಮತ್ತು ಪ್ರವಾಸಿಗರ ಆಕರ್ಷಣೆ ಹಂತದಲ್ಲಿ ಕ್ರಮಗಳನ್ನು ಕೈಗೊಳ್ಳಬೇಕಿದ್ದು, ಇದರಿಂದ ಪ್ರಕೃತಿಯ ಮೇಲೆ ಯಾವುದೇ ಹಾನಿ ಆಗದಂತೆ ಎಚ್ಚರ ವಹಿಸಲಾಗುವುದು ಎಂದು ತಿಳಿಸಿದರು.

ನಂದಿಗಿರಿಧಾಮಕ್ಕೆ ವಾಹನಗಳನ್ನು ನಿಷೇಧಿಸುವುದು, ಗಿರಿಧಾಮದ ಪ್ರದೇಶದಲ್ಲಿ ಪ್ಲಾಸ್ಟಿಕನ್ನು ಸಂಪೂರ್ಣವಾಗಿ ನಿಷೇಧ ಮಾಡುವ ಮಹತ್ವದ ಯೋಜನೆಗಳು ಚರ್ಚೆಯಲ್ಲಿದ್ದು, ಗಿರಿಧಾಮದ ತಪ್ಪಲಿನಿಂದ ಮೇಲಕ್ಕೆ ಪರಿಸರ ಸ್ನೇಹಿ ವಾಹನಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದರು.

ಅಲ್ಲದೆ ಗೌರಿಬಿದನೂರು ತಾಲೂಕಿನಲ್ಲಿರುವ ದಕ್ಷಿಣ ಭಾರತದ ಜಲಿಯನ್ ವಾಲಾಬಾಗ್ ಎಂದೇ ಖ್ಯಾತಿ ಪಡೆದಿರುವ ವಿದುರಾಶ್ವತ್ಥದಲ್ಲಿ ಧ್ವನಿ, ಬೆಳಕು ಪ್ರದರ್ಶನಾಲಯ, ಇದೇ ತಾಲೂಕಿನ ಕುಡುಮಲುಕುಂಟೆ ಕೈಗಾರಿಕಾ ಪ್ರದೇಶದಲ್ಲಿ ವಿಜ್ಞಾನ ವಸ್ತು ಪ್ರದರ್ಶನಾಲಯ ಮತ್ತು ವಿಶ್ವೇಶ್ವರಯ್ಯ ಮ್ಯೂಸಿಯಂ ನಿರ್ಮಾಣಕ್ಕಾಗಿ ಈಗಾಗಲೇ ಅಡಿಗಲ್ಲು ಹಾಕಲಾಗಿದೆ ಎಂದು ತಿಳಿಸಿದರು.

ಸಂಸದರಾದ ಡಾ.ಎಂ.ವೀರಪ್ಪ ಮೊಯ್ಲಿ ಮಾತನಾಡಿ, ತಮ್ಮ ಸಂಸತ್ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಇತಿಹಾಸ ಪ್ರಸಿದ್ಧ ತಾಣಗಳನ್ನು ಪ್ರವಾಸಿ ತಾಣಗಳಾಗಿ ಮೇಲ್ದರ್ಜೆಗೇರಿಸಲು ಅಗತ್ಯವಿರುವ ಕ್ರಮಗಳ ಕುರಿತು ಈಗಾಗಲೇ ಪ್ರವಾಸೋಧ್ಯಮ ಸಚಿವರೊಂದಿಗೆ ಚರ್ಚೆ ನಡೆಸಿದ್ದು, ಆದಷ್ಟು ಶೀಘ್ರದಲ್ಲಿ ಇವುಗಳ ಅನುಷ್ಠಾನಕ್ಕಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಬೆಂಗಳೂರು ಗ್ರಾಮಾಂತರ ಜ್ಲಿಲೆಯ ಕೆಂಪೇಗೌಡ ಜನ್ಮಸ್ಥಳ ಆವತಿ, ಟಿಪ್ಪುಸುಲ್ತಾನ್ ಜನ್ಮಸ್ಥಳ ದೇವನಹಳ್ಳಿ, ಘಾಟಿ ಸುಬ್ರಹ್ಮಣ್ಯ, ಬಾಗೇಪಲ್ಲಿ ತಾಲೂಕಿನ ಗುಮ್ಮನಾಯಕನಪಾಳ್ಯ, ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ, ರಂಗಸ್ಥಳ, ಸೇರಿದಂತೆ ಅನೇಕ ಸ್ಥಳಗಳ ಅಭಿವೃದ್ಧಿಗಾಗಿ ಮುತುವರ್ಜಿ ವಹಿಸಲಾಗಿದೆ ಎಂದರು.

ಸಭೆಯಲ್ಲಿ ವಿಧಾನಸಭಾ ಉಪಸಭಾಧ್ಯಕ್ಷರಾದ ಎನ್.ಎಚ್. ಶಿವಶಂಕರರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗರೆಡ್ಡಿ, ಚಿಕ್ಕಬಳ್ಳಾಪುರ ಶಾಸಕರಾದ ಡಾ.ಕೆ. ಸುಧಾಕರ್, ಜಿ.ಪಂ ಅಧ್ಯಕ್ಷರಾದ ಪಿ.ಎನ್. ಕೇಶವರೆಡ್ಡಿ, ಪ್ರವಾಸೋಧ್ಯಮ ಇಲಾಖೆ ನಿರ್ದೇಶಕರಾದ ಮಂಜುಳ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ವಿ.ಶಂಕರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಎಸ್.ಪಾಲಯ್ಯ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎನ್.ಮಂಜುಶ್ರೀ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಾಧಿಕಾರಿ ಜೆ.ಮಂಜುನಾಥ್, ಅಪರ ಜಿಲ್ಲಾಧಿಕಾರಿಗಳಾದ ಕೆ.ಎನ್. ಅನುರಾಧ ಸೇರಿದಂತೆ ಇತರೆ ಹಲವು ಇಲಾಖೆಗಳ ರಾಜ್ಯ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಉದ್ಯೋಗ ಖಾತ್ರಿ: ದೂರುಗಳ ವಿಚಾರಣೆ

ಬೆಳಗಾವಿ: ಆಕ್ಟೋಬರ್, 3 (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯ್ತಿಯ ನರೇಗಾ ಓಂಬುಡ್ಸಮನ್‍ರಾದ ಡಾ.ಎ.ಜೆ.ಧುಮಾಳೆ ಅವರು ವಿವಿಧ ತಾಲ್ಲೂಕುಗಳ ತಾಲ್ಲೂಕು ಪಂಚಾಯ್ತಿ ಕಾರ್ಯಾಲಯಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನ ಕುರಿತು ಬಂದ ದೂರುಗಳ ವಿಚಾರಣೆ ನಡೆಸಲಿದ್ದಾರೆ.

ಅ.6ರಂದು ಬೆಳಿಗ್ಗೆ 11 ಚಿಕ್ಕೋಡಿ; ಮಧ್ಯಾಹ್ನ 3 ಗಂಟೆಗೆ ಅಥಣಿ; ಅಕ್ಟೋಬರ್ 14ರಂದು ಬೆಳಿಗ್ಗೆ 11 ಗಂಟೆಗೆ ಹುಕ್ಕೇರಿ; ಮಧ್ಯಾಹ್ನ 3 ಗಂಟೆಗೆ ಗೋಕಾಕ ಹಾಗೂ ಅಕ್ಟೋಬರ್ 17ರಂದು ಬೆಳಿಗ್ಗೆ 11 ಗಂಟೆಗೆ ಸವದತ್ತಿ ಹಾಗೂ ಸಂಜೆ ಗಂಟೆಗೆ ಬೈಲಹೊಂಗಲನಲ್ಲಿ ದೂರುಗಳ ವಿಚಾರಣೆ ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜಿಲ್ಲಾ ಭೇಟಿ ಇಂದು

ಬೆಳಗಾವಿ: ಆಕ್ಟೋಬರ್, 3 (ಕರ್ನಾಟಕ ವಾರ್ತೆ): ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಅಕ್ಟೋಬರ್ 5ರಂದು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿ ಅವರು ಬೆಳಿಗ್ಗೆ 10 ಗಂಟೆಗೆ ನಿಪ್ಪಾಣಿಯಲ್ಲಿ ನಿರ್ಮಿಸಲಾಗಿರುವ ನೂತನ ಮಾದರಿಯ ಬಸ್ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ.
ಸಮಾರಂಭದ ನಂತರ ಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲಿದ್ದಾರೆ.

11.30 ಗಂಟೆಗೆ ಚಿಕ್ಕೋಡಿಯ ನೂತನ ಮಾದರಿಯ ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭದಲ್ಲಿ ಸಚಿವರು ಭಾಗವಹಿಸುವರು. ತದನಂತರ ಸಾರ್ವಜನಿಕರಿಂದ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಸಚಿವ ರಾಮಲಿಂಗಾರೆಡ್ಡಿ ಅವರು ಗದಗ ಜಿಲ್ಲೆಯ ನರಗುಂದಗೆ ತೆರಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವೈದ್ಯಾಧಿಕಾರಿ ಹುದ್ದೆಗೆ ನೇರಸಂದರ್ಶನ 14ರಂದು

ಬೆಳಗಾವಿ: ಆಕ್ಟೋಬರ್, 3 (ಕರ್ನಾಟಕ ವಾರ್ತೆ): ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಗುತ್ತಿಗೆ ಒಪ್ಪಂದದ ಷರತ್ತಿನೊಂದಿಗೆ ತಾತ್ಕಾಲಿಕವಾಗಿ ನೇಮಿಸಲು ಎಂಬಿಬಿಎಸ್ ಪದವೀಧರರನ್ನು ಅಥವಾ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ವೈದ್ಯಾಧಿಕಾರಿಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 14ರಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ನೇರಸಂದರ್ಶನದಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ, ಟಿಳಕವಾಡಿ-ಬೆಳಗಾವಿ(0831-2407241) ಅವರನ್ನು ಸಂಪರ್ಕಿಸಬುದು ಎಂದು ಪ್ರಕಟಣೆ ತಿಳಿಸಿದೆ.

ಚುನಾವಣಾ ಸಿಬ್ಬಂದಿ ನಿಧನ: ಕುಟುಂಬಕ್ಕೆ ಪರಿಹಾರ ವಿತರಣೆ

ಬೆಳಗಾವಿ: ಆಕ್ಟೋಬರ್, 3 (ಕರ್ನಾಟಕ ವಾರ್ತೆ): ಲೋಕಸಭಾ ಸಾರ್ವತ್ರಿಕ ಚುನಾವಣಾ ಕರ್ತವ್ಯನಿರತರಾಗಿರುವ ಸಂದರ್ಭದಲ್ಲಿ ನಿಧನ ಹೊಂದಿದ್ದ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಬಸೀರಅಹ್ಮದ್ ಮೌಲಾಸಾಬ್ ಝಾರಿ ಅವರ ಕುಟುಂಬದವರಿಗೆ ಜಿಲ್ಲಾಧಿಕಾರಿ ಎನ್.ಜಯರಾಮ್ ಮಂಗಳವಾರ(ಅ.4) ಹತ್ತು ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಿಸಿದರು.

ಹುಕ್ಕೇರಿ ತಾಲ್ಲೂಕು ಪಂಚಾಯ್ತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸೀರ್‍ಅಹ್ಮದ್ ಅವರು, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯ ಮುಗಳಖೋಡ ಮತಗಟ್ಟೆ ಸಂಖ್ಯೆ 155ರಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದಾಗ ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡು ನಿಧನ ಹೊಂದಿದ್ದರು.

ಭಾರತ ಚುನಾವಣಾ ಆಯೋಗ ಮಂಜೂರು ಮಾಡಿರುವ ಪರಿಹಾರ ಧನವನ್ನು ಜಿಲ್ಲಾಧಿಕಾರಿ ಜಯರಾಮ್ ಅವರು ವಾರಸುದಾರರಿಗೆ ಹಸ್ತಾಂತರಿಸಿದರು.
ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಅತ್ಯುತ್ತಮ ರೈತ, ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕೋಲಾರ, ಅಕ್ಟೋಬರ್ 04 (ಕರ್ನಾಟಕ ವಾರ್ತೆ) : ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯವು 2016 ರಲ್ಲಿ ಕೃಷಿ ಮೇಳ ಆಯೋಜಿಸಲಾಗಿದ್ದು ಈ ಮೇಳದಲ್ಲಿ ಒಂದು ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಹಾಗೂ ರೈತ ಮಹಿಳಾ ಪ್ರಶಸ್ತಿ ಮತ್ತು ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಹಾಗೂ ಯುವ ರೈತ ಮಹಿಳಾ ಪ್ರಶಸ್ತಿಯನ್ನು ನೀಡಲಾಗುವುದು.

ಈ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.08 ಕೊನೆ ದಿನಾಂಕವಾಗಿದೆ. ಅರ್ಜಿಯನ್ನು ಕೃಷಿ ವಿಶ್ವ ವಿದ್ಯಾನಿಲಯದ ವೆಬ್‍ಸೈಟ್ www.uasbanglore.edu.in ನಲ್ಲಿ ಪಡೆಯಬಹುದಾಗಿದೆ. ಜೊತೆಗೆ ಅರ್ಜಿಗಳನ್ನು ಆಯಾ ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆಯಬಹುದಾಗಿದೆ.

ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ

ಕೋಲಾರ, ಅಕ್ಟೋಬರ್ 04 (ಕರ್ನಾಟಕ ವಾರ್ತೆ) : ಪ್ರಸಕ್ತ ಸಾಲಿನಲ್ಲಿ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಜಿ.ಟಿ.ಟಿ.ಸಿ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದು ಇದಕ್ಕೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಸುಮಾರು 20 ಮಂದಿಗೆ ಅಭ್ಯರ್ಥಿಗಳಿಗೆ 6 ತಿಂಗಳು ತರಬೇತಿ ನೀಡಲಾಗುವುದು. ಐ.ಟಿ.ಐ, ಡಿಪ್ಲೋಮೋ ಮೆಕ್ಯಾನಿಕಲ್, ಬಿ.ಇ. ಮೆಕ್ಯಾನಿಕಲ್, ಬಿ.ಇ. ಇಂಡಸ್ಟ್ರಿಯಲ್ ಪ್ರೊಡೆಕ್ಟನ್ ಮತ್ತು ಪಿಯುಸಿ ಮುಗಿಸಿದ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗಹಿಸಬಹುದಾಗಿದೆ.

ಆಸಕ್ತರು ಅ. 07 ರಂದು ಬೆಳಗ್ಗೆ 11 ಗಂಟೆಗೆ ಕೋಲಾರದ ಜಿಲ್ಲಾ ಕೈಗಾರಿಕಾ ಕೇದ್ರದ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಸಲಾಗುವುದು. ಸಂದರ್ಶನಕ್ಕೆ ಅವಶ್ಯಕ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಆಹ್ವಾನ

ಕೋಲಾರ, ಅಕ್ಟೋಬರ್ 04 (ಕರ್ನಾಟಕ ವಾರ್ತೆ) : 2016-17 ನೇ ಸಾಲಿನ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಗೆ ಹೊರಗುತ್ತಿಗೆ ಆಧಾರದ ಮೇಲೆ ಚಾಲಕ ಸಹಿತ ವಾಹನ ಸೇವೆ ಒದಗಿಸಲು ಅರ್ಹರಿಂದ ಅರ್ಜಿ ಕರೆಯಲಾಗಿದೆ. ಅರ್ಜಿಯನ್ನು ಸಲ್ಲಿಸಲು ಅ.17 ಕೊನೆ ದಿನವಾಗಿರುತ್ತದೆ ಎಂದು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಉಪ ನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪೊಲೀಸ್ ದೂರುಗಳ ಪ್ರಾಧಿಕಾರ

ಕೋಲಾರ, ಅಕ್ಟೋಬರ್ 04 (ಕರ್ನಾಟಕ ವಾರ್ತೆ) : ಕೋಲಾರ ಜಿಲ್ಲೆಯಲ್ಲಿ ಪೊಲೀಸ್ ದೂರುಗಳ ಪ್ರಾಧಿಕಾರವು ರಚನೆಯಾಗಿದ್ದು, ದೂರು ಪ್ರಾಧಿಕಾರವು ಈ ಕೆಳಕಂಡಂತೆ ಪದಾಧಿಕಾರಿಗಳನ್ನು ಹೊಂದಿರುತ್ತದೆ.

ದೂರು ಪ್ರಾಧಿಕಾರದ ಅಧ್ಯಕ್ಷರಾಗಿ ಕೋಲಾರ ಜಿಲ್ಲಾಧಿಕಾರಿಗಳು, ಸದಸ್ಯ ಕಾರ್ಯದರ್ಶಿಗಳಾಗಿ ಕೋಲಾರ ಪೊಲೀಸ್ ಅಧೀಕ್ಷಕರು, ಸದಸ್ಯರಾಗಿ ಬೆಂಗಳೂರಿನ ನಿವೃತ್ತ ಸರ್ಕಾರಿ ಹೆಚ್ಚುವರಿ ಕಾರ್ಯದರ್ಶಿಗಳಾದ ಶ್ರೀ ಎ.ಮುನಿಯಲ್ಲಪ್ಪ, ಕೋಲಾರ ಜಿಲ್ಲಾ ಶಾಂತಿ ಸಮಿತಿ ಅಧ್ಯಕರಾದ ಶ್ರೀ ಶ್ರೀಕೃಷ್ಣ ಇವರು ಸದಸ್ಯರಾಗಿರುತ್ತಾರೆ.

ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರವು ಡಿ.ಎಸ್.ಪಿ. ಮತ್ತು ಕೆಳಗಿನ ಹಂತದ ಪೊಲೀಸ್ ಅಧಿಕಾರಿ/ಸಿಬ್ಬಂದಿಯವರ ಪೊಲೀಸ್ ಅಭಿರಕ್ಷೆಯಲ್ಲಿ ನಡೆದ ಸಾವು, ತೀವ್ರ ಸ್ವರೂಪದ ಗಾಯ ಅಥವಾ ಅತ್ಯಾಚಾರದ ದೂರಿನ ಬಗ್ಗೆ ವಿಚಾರಣೆ ಮಾಡಬಹುದಾಗಿದೆ.

ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರಿ, ಪೊಲೀಸ್ ಅಧೀಕ್ಷಕರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಕೋಲಾರ ಜಿಲ್ಲೆ, ಕೋಲಾರ. ದೂರವಾಣಿ: 08152-243066 ಈ ವಿಳಾಸಕ್ಕೆ ದೂರನ್ನು ಸಲ್ಲಿಸಬಹುದು.

ಡಿ.ಎಸ್.ಪಿ ಹುದ್ದೆಗಿಂತ ಮೇಲಿನ ಹುದ್ದೆಯ ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸುವಂತಿದ್ದಲ್ಲಿ, ಅಧ್ಯಕ್ಷರು, ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರಿ, ಕೊಠಡಿ ಸಂಖ್ಯೆ: 36, ನೆಲಮಹಡಿ, ವಿಕಾಸಸೌಧ, ಬೆಂಗಳೂರು-01. ದೂರವಾಣಿ: 080-22386063, 22034220 ಈ ವಿಳಾಸಕ್ಕೆ ದೂರನ್ನು ಸಲ್ಲಿಸಬಹುದು.

ಈ ಸಂಬಂಧವಾಗಿ ಸಾರ್ವಜನಿಕರಿಗಾಗಿ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದಿಂದ www.karnataka.gov.in/spca ವೆಬ್‍ಸೈಟನ್ನು ಪ್ರಾರಂಭಿಸಲಾಗಿದ್ದು,  ಕೋಲಾರ ಜಿಲ್ಲಾ ದೂರುಗಳ ಪ್ರಾಧಿಕಾರಕ್ಕೆ ಇ-ಮೇಲ್ ಮುಖಾಂತರ ದೂರು ಸಲ್ಲಿಸಬೇಕಾದಲ್ಲಿ, ಇ-ಮೇಲ್ ವಿಳಾಸ  [email protected] ಕ್ಕೆ  ಸಲ್ಲಿಸಬಹುದಾಗಿರುತ್ತದೆ ಎಂದು ಪೊಲೀಸ್ ಅಧೀಕ್ಷಕರು, ಕೋಲಾರ ಜಿಲ್ಲೆ ಇವರು ತಿಳಿಸಿದ್ದಾರೆ.