Government of Karnataka

Department of Information

Wednesday 29/06/2016

District News 17-06-2016

Date : Friday, June 17th, 2016

ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸ್ಥಾನಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜೂನ್, 17: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಉತ್ತರ ತಾಲ್ಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಹಾಗೂ ಬೆಂಗಳೂರು ಉತ್ತರ-2 ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳು ತಾತ್ಕಾಲಿವಾಗಿದ್ದು, ಗೌರವಧನ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ. ವಯೋಮಿತಿ 18 ರಿಂದ 35 ವರ್ಷಗಳು, ಕಾರ್ಯಕರ್ತೆಯರ ಹುದ್ದೆಗೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಕನಿಷ್ಠ 4 ನೇ ತರಗತಿ ಉತ್ತೀರ್ಣರಾಗಿಬೇಕು.

ಅರ್ಜಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಲ್ಲಿ ಜೂನ್ 10, 2016 ರಿಂದ ಜುಲೈ 04, 2016 ರವರೆಗೆ ಪಡೆಯಬಹುದು. ಅರ್ಜಿ ಸಲ್ಲಿಸಲು ಜುಲೈ 04, 2016 ಕೊನೆಯ ದಿನಾಂಕವಾಗಿರುತ್ತದೆ.

ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಿನಿ ವಿಧಾನಸೌಧ, ನೆಲಮಹಡಿ, ಯಲಹಂಕ, ಬೆಂಗಳೂರು – 560 064 ಇಲ್ಲಿ ಪಡೆಯಬಹುದು.

ಅಲ್ಪಸಂಖ್ಯಾತ ಜನಾಂಗದವರಿಗೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು, ಜೂನ್, 17: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2016-17ನೇ ಸಾಲಿಗೆ ಬೆಂಗಳೂರು ನಗರ ಜಿಲ್ಲೆಯ (ಕೇಂದ್ರೀಯ ಮತ್ತು ದಕ್ಷಿಣ ವಿಭಾಗ ವಿಭಾಗ) ನಿಗಮದ ಸಾಲದ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರ ಜನಾಂಗದವರಿಂದ (ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರು, ಜೈನ್, ಬೌದ್ಧ ಮತ್ತು ಪಾರ್ಸಿ) ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗಮದ ಯೋಜನೆಗಳ ವಿವರ:
1. ಅರಿವು (ವಿದ್ಯಾಭ್ಯಾಸ ಸಾಲ) ಯೋಜನೆ 2. ಶ್ರಮಶಕ್ತಿ ಸಾಲ ಯೋಜನೆ 3. ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ಯೋಜನೆಗಳು 4. ಸಣ್ಣ (ಮೈಕ್ರೋ) ಸಾಲ ಮತ್ತು ಸಹಾಯಧನ ಯೋಜನೆ 5.ಸ್ವಾವಲಂಬನಾ ಮಾರ್ಜಿನ್ ಹಣ ಸಾಲ ಮತ್ತು ಸಹಾಯಧನ ಯೋಜನೆ

ಅರ್ಹತೆಗಳು:

1) ನಿಗಮದ ಎಲ್ಲಾ ಯೋಜನೆಗಳಲ್ಲಿ 80:0:10 ಅನುಪಾತದಲ್ಲಿ ಅಂದರೆ ಶೇಕಡ 80 ರಷ್ಟು ಮುಸ್ಲಿಂ, ಶೇಕಡ 10 ರಷ್ಟು ಕ್ರೈಸ್ತರು ಹಾಗೂ ಶೇಕಡ 10 ರಷ್ಟು ಇತರೆ (ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಗೆ ಸೌಲಭ್ಯವನ್ನು ಒದಗಿಸಲಾಗುವುದು.

2) ನಿಗಮದ ಎಲ್ಲಾ ಯೋಜನೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಆದ್ಯತೆ ತಪ್ಪದೆ ಒದಗಿಸಲಾಗುವುದು.

3) ಎಲ್ಲಾ ಯೋಜನೆಗಳಲ್ಲಿ ಅಂಗವಿಕಲರಿಗೆ ಹಾಗೂ ಮಾಜಿ ಸೈನಿಕರಿಗೆ ಶೇ. 3 ರಷ್ಟು ಗುರಿಯನ್ನು ಆದ್ಯತೆ ಒದಗಿಸಲಾಗುವುದು.

4) ಆರ್ಥಿಕ ನೆರವು ಪಡೆಯಲಿಚ್ಚಿಸುವ ಅರ್ಜಿದಾರರು ಸರ್ಕಾರವು ಅಂಗೀಕರಿಸಿದ ಅಲ್ಪಸಂಖ್ಯಾತ ವರ್ಗಗಳ ಪ್ರವರ್ಗ-1, ಪ್ರವರ್ಗ – 2, 2ಬಿ, 3ಎ, ಮತ್ತು 3 ಬಿ ಗುಂಪಿಗೆ ಸೇರಿದವರಾಗಿರಬೇಕು.

5) ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ರೂ. 1,03,000-00 ಮೀರಿರಬಾರದು (ಅರಿವು ಯೋಜನೆಗೆ ಹೊರತುಪಡಿಸಿ)

6) ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 15 ವರ್ಷಗಳಿಂದ ವಾಸವಾಗಿರಬೇಕು.

7) ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55 ವರ್ಷಗಳು.

8) ಅರ್ಜಿದಾರರು ತಮ್ಮ ವಿಳಾಸದ ಧೃಢೀಕರಣಕ್ಕಾಗಿ ಆಧಾರ್ (ಯುಐಡಿ) ಪ್ರತಿಯನ್ನು ಲಗತ್ತಿಸಿ, ಅದನ್ನು ಅವರ ಬ್ಯಾಂಕ್ ಖಾತೆಗೆ ಹೊಂದಾಣಿಕೆ (ಲಿಂಕ್) ಮಾಡಿರಬೇಕು ಮತ್ತು ಇತರೆ ಮಾನ್ಯವಾಗಿರುವ ದಾಖಲಾತಿಗಳನ್ನು ಲಗತ್ತಿಸಬೇಕು.

9) ಅರ್ಜಿದಾರರು ಖುದ್ದಾಗಿ ಬಂದು ಅರ್ಜಿಯನ್ನು ಸಲ್ಲಿಸುವುದು ಹಾಗೂ ಒಂದು ಅರ್ಜಿದಾರರಿಂದ ಒಂದೇ ಅರ್ಜಿಯನ್ನು ಸ್ವೀಕರಿಸಲಾಗುವುದು.

10) ಅರ್ಜಿದಾರರು ಅರ್ಜಿ ಸಲ್ಲಿಸುವ ಸಮಯದಲ್ಲಿ ಪೂರ್ಣ ದಾಖಲಾತಿಗಳನ್ನು ಸಲ್ಲಿಸುವುದು. ಅಪೂರ್ಣ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.

11) ಈ ಹಿಂದೆ ನಿಗಮದ ಸಾಲ ಸೌಲಭ್ಯ ಪಡೆದವರು ಮತ್ತೆ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.

ಸಾಲದ ಅರ್ಜಿ ನಮೂನೆಯನ್ನು ನಿಗಮದ ವೆಬ್‍ಸೈಬ್ www.kmdc.kar.nic.in ಅಥವಾ kmdc.karnataka.gov.in   ಮೂಲಕ ಪಡೆಯಬಹುದು. ಸಾಲದ ಅರ್ಜಿಯನ್ನು ಜೂನ್ 30, 2016 ರೊಳಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಹಮೀದ್ ಷಾ ಕಾಂಪ್ಲೆಕ್ಸ್, 2ನೇ ಮಹಡಿ, ಎಸ್.ಎಫ್.2, ಹಲಸೂರು ಗೇಟ್ ಪೊಲೀಸ್ ಸ್ಟೇಷನ್ ಹಿಂಭಾಗ, ಕಬ್ಬನ್ ಪೇಟೆ ಮುಖ್ಯ ರಸ್ತೆ, ಬೆಂಗಳೂರು ನಗರ ಜಿಲ್ಲೆ ಇವರಿಗೆ ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-22114815, 22114817 ಸಂಪರ್ಕಿಸಬಹುದು.

ಅಫೀಶಿಯಲ್ ರಿಸೀವರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಜೂನ್, 17: ಬೆಂಗಳೂರು ನಗರ ಜಿಲ್ಲೆಯ ಅಫೀಶಿಯಲ್ ರಿಸೀವರ್ ಹುದ್ದೆ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು, ಬೆಂಗಳೂರು ಜಿಲ್ಲೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ಈ ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ 7 ವರ್ಷಕ್ಕೆ ಕಮ್ಮಿ ಇಲ್ಲದಂತೆ ಅಫೀಶಿಯಲ್ ರಿಸೀವರ್ ವೃತ್ತಿ ಮಾಡಿರುವ ಬಗ್ಗೆ ದೃಢೀಕರಿಸಿದ ದಾಖಲೆಗಳನ್ನು ಲಗತ್ತಿಸಬೇಕು. ಹುಟ್ಟಿದ ದಿನಾಂಕದ ಬಗ್ಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಅಥವಾ ಇತರೆ ದಾಖಲಾತಿಗಳನ್ನು ದೃಢೀಕರಿಸಿದ ಲಗತ್ತಿಸಬೇಕು. 2 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸಬೇಕು. ಅರ್ಜಿ ನಮೂನೆಗಳನ್ನು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪಡೆಯಬಹುದು. ಅರ್ಜಿಯೊಂದಿಗೆ ದೃಢೀಕರಿಸಿದ ದಾಖಲೆಗಳನ್ನು ಲಗತ್ತಿಸಬೇಕು.

ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 30, 2016 ರೊಳಗೆ ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ, ಕೆಂಪೇಗೌದ ರಸ್ತೆ, ಬೆಂಗಳೂರು ಈ ಕಛೇರಿಗೆ ಸ್ಲಲಿಸತಕ್ಕದ್ದು. ನಿಗದಿತ ದಿನಾಂಕದ ನಂತರ ಹಾಗೂ ನಿಗದಿತ ನಮೂನೆಯಲ್ಲಿ ಇಲ್ಲದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಇವರನ್ನು ಸಂಪರ್ಕಿಸಬಹುದು.