Government of Karnataka

Department of Information

Wednesday 29/06/2016

District News 18-06-2016

Date : Saturday, June 18th, 2016

ಆದ್ಯತಾ ವಲಯಕ್ಕೆ ಬ್ಯಾಂಕ್ ಸಾಲ ಸೌಲಭ್ಯ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು, ಜೂನ್, 18: ಜಿಲ್ಲಾ ಮಾರ್ಗದರ್ಶಿ ಬ್ಯಾಂಕಾದ ಕೆನರಾ ಬ್ಯಾಂಕಿನ ಮಾರ್ಗದರ್ಶನದಲ್ಲಿ ವಿವಿಧ ಇಲಾಖೆಗಳ ಮೂಲಕ ಜಿಲ್ಲೆಯಲ್ಲಿ ಆದ್ಯತಾ ವಲಯಕ್ಕೆ ನೀಡಲಾಗಿರುವ ಸಾಲಸೌಲಭ್ಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಲು ಜೂನ್ 20 ರಂದು ಬೆಳಿಗ್ಗೆ 11.30 ಗಂಟೆಗೆ ಬನಶಂಕರಿಯ ಕಾರಿಯಪ್ಪ ರಸ್ತೆಯಲ್ಲಿರುವ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಪರಿಶೀಲನಾ ಸಭೆ ಕರೆಯಲಾಗಿದೆ.

ಲೋಕಸಭಾ ಸದಸ್ಯರಾದ ಪಿ.ಸಿ.ಮೋಹನ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಿರುವ ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಮಂಜುಶ್ರೀ, ಲೀಡ್‍ಬ್ಯಾಂಕ್ ವ್ಯವಸ್ಥಾಪಕ ಕೆ.ಎಸ್.ಗುರುದತ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಮಾಧ್ಯಮ ಆಹ್ವಾನ

ಕ್ರ.ಸಂ. ಕಾರ್ಯಕ್ರಮದ ವಿವರ ದಿನಾಂಕ ಸಮಯ ಸ್ಥಳ
1. ಕೆನರಾ ಬ್ಯಾಂಕ್, ಬೆಂಗಳೂರು ೨೦೧೬-೧೭ನೇ ಸಾಲಿಗೆ ಜಿಲ್ಲಾವಾರು ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ:  ಪಿ.ಸಿ.ಮೋಹನ್                              ಲೋಕಸಭಾ ಸದಸ್ಯರು ಎನ್.ಮಂಜುಶ್ರೀ                               ಸಿ.ಇ.ಓ. ಜಿ.ಪಂ.ನಗರ ಜಿಲ್ಲೆ ಕೆ.ಎಸ್.ಗುರುದತ್                                   ಲೀಡ್‌ಬ್ಯಾಂಕ್ ವ್ಯವಸ್ಥಾಪಕರು ದಿನಾಂಕ 20-06-2016  ಬೆ 11-30 ಗಂಟೆ ಜಿಲ್ಲಾ ಪಂಚಾಯತ್ ಸಭಾಂಗಣ,             ಬೆಂಗಳೂರು ನಗರ ಜಿಲ್ಲೆ, ಕಾರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು.

ಉಪನಿರ್ದೇಶಕರು