Government of Karnataka

Department of Information

Saturday 02/07/2016

District News 24-06-2016

Date : Friday, June 24th, 2016

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

ಬೆಂಗಳೂರು, ಜೂನ್, 24: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನ ಐಎಎಸ್, ಕೆಎಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಪರೀಕ್ಷಾ ಪೂರ್ವ ತರಬೇತಿಗೆ, ಹಿಂದುಳಿದ ವರ್ಗಗಳ ಪ್ರವರ್ಗ-1, 2 (ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 10 ಕಡೆಯ ದಿನಾಂಕವಾಗಿದ್ದು, ಹೆಚ್ಚಿನ ವಿವರಗಳಿಗೆ www.backwardclasses.kar.nic.in ವೆಬ್‍ಸೈಟ್ ಹಾಗೂ ಮೊಬೈಲ್ ಸಂಖ್ಯೆ: 9480818013, 948018010 ದೂ.ಸಂ: 080-44554444 ಅನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೋಟಗಾರಿಕೆ ಬೆಳೆ ವಿಮೆ ನೋಂದಣಿಗೆ ಜೂನ್ 30 ಕಡೆದಿನ

ಬೆಂಗಳೂರು, ಜೂನ್, 24: ತೋಟಗಾರಿಕೆ ಇಲಾಖೆಯು ಕೇಂದ್ರ ಸರ್ಕಾರದ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ರಾಜ್ಯದಲ್ಲಿ ಮೊದಲ ಬಾರಿಗೆ ಅನುಷ್ಠಾನಗೊಳಿಸುತ್ತಿದ್ದು, ಬೆಂಗಳೂರು ನಗರ ಜಿಲ್ಲೆಯಲ್ಲಿ ಮಾವು, ದ್ರಾಕ್ಷಿ, ಬಾಳೆ, ತೆಂಗು ಬೆಳೆಗಳಿಗೆ ವಿಮೆ ಮಾಡಿಸಬಹುದಾಗಿದೆಯಲ್ಲದೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿಯಲ್ಲಿ ಟೊಮ್ಯಾಟೋ ಮತ್ತು ಬೀನ್ಸ್ ಬೆಳೆಗಳ ವಿಮೆಗೆ ಅವಕಾಶ ಕಲ್ಪಿಸಲಾಗಿದೆ. ವಿಮೆ ನೋಂದಣಿಗೆ ಜೂನ್ 30 ಕೊನೆ ದಿನವಾಗಿದೆ. ಜಿಲ್ಲೆಯ ತೋಟಗಾರಿಕೆ ಬೆಳೆಗಾರರು ವಿಮೆ ಪ್ರಯೋಜನವನ್ನು ಪಡೆಯುವಂತೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.