Government of Karnataka

Department of Information

Thursday 30/06/2016

District News 27-04-2016

Date : Wednesday, April 27th, 2016

ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನ

ಬೆಂಗಳೂರು, ಏಪ್ರಿಲ್ 27: 2016-17ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನೀಡಲಾಗುವುದು. ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಬೆಂಗಳೂರು ನಗರ ಜಿಲ್ಲೆ, ಪೋಡಿಯಂ ಬ್ಲಾಕ್, ವಿಶ್ವೇಶ್ವರಗೋಪುರ, ಬೆಂಗಳೂರು – 560 0001 ಇಲ್ಲಿಂದ ಪಡೆದು ಭರ್ತಿ ಮಾಡಿ ದಿನಾಂಕ: 16-05-2016 ರೊಳಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಛೇರಿಗೆ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ www.backwardclasses.kar.nic.in ಸಂಪರ್ಕಿಸಬಹುದು ಎಂದು ಜಿಲ್ಲಾ ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ

ಬೆಂಗಳೂರು, ಏಪ್ರಿಲ್ 27: ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರ ಮತ್ತು ಉಪಾಧ್ಯರ ಸ್ಥಾನಕ್ಕೆ ಚುನಾವಣೆ ನಡೆಸಲು ದಿನಾಂಕ: 10-5-2016 ರಂದು ಅಪರಾಹ್ನ 3-00 ಗಂಟೆಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಚುನಾವಣಾ ಸಭೆಯನ್ನು ಬೆಂಗಳೂರು ನಗರ ಜಿಲ್ಲಾ ಪಂಚಯತ್ ಕಛೇರಿಯ ಸಭಾಂಗಣದಲ್ಲಿ ಬೆಂಗಳೂರು ವಿಬಾಗದ ಪ್ರಾದೇಶಿಕ ಆಯುಕ್ತರವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.