Government of Karnataka

Department of Information

Thursday 30/06/2016

District News 29-04-2016

Date : Friday, April 29th, 2016

ವಿಶ್ವಕರ್ಮ ಸಮುದಾಯದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು, ಏಪ್ರಿಲ್ 29: ವಿಶ್ವಕರ್ಮ ಸಮುದಾಯ ಜನರ ಆರ್ಥಿಕ ಅಭಿವೃದ್ಧಿಗಾಗಿ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅವಧಿ ಸಾಲ ಯೋಜನೆಗಳು-ಕೃಷಿ ವಲಯ, ಸಣ್ಣ ವ್ಯಾಪಾರ, ಸೇವಾ ವಲಯ, ಸಾರಿಗೆ ವಲಯ, ಶೈಕ್ಷಣಿಕ ಸಾಲ ಯೋಜನೆ, ಶಿಲ್ಪಸಂಪದ, ಕೃಷಿ ಸಂಪದ ಮತ್ತು ವೈಯಕ್ತಿಕ ಸಾಲ ಮುಂತಾದವುಗಳಿಗೆ ನಿಗಮದಿಂದ ಸಾಲ ಪಡೆಯಲು ಇಚ್ಛಿಸುವವರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಳ ಕಛೇರಿಯಲ್ಲಿ ದಿನಾಂಕ: 7-5-2016 ರೊಳಗೆ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 13-5-2016 ರೊಳಗೆ ಜಿಲ್ಲಾ ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ನಿಗಮದ ವೆಬ್‍ಸೈಟ್ www.karnataka.gov.in/kvcdcl   ಸಂಪರ್ಕಿಸಬಹುದು.

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಮೇ 10 ಚುನಾವಣೆ

ಬೆಂಗಳೂರು, ಏಪ್ರಿಲ್ 29: ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ದಿನಾಂಕ: 10-5-2016 ರಂದು ಅಪರಾಹ್ನ 3-00 ಗಂಟೆಗೆ ಚುನಾವಣೆ ನಡೆಸಲಾಗುವುದು ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರ ಸ್ಥಾನವು ಸಾಮಾನ್ಯ ವರ್ಗಕ್ಕೆ ಮತ್ತು ಉಪಾಧ್ಯಕ್ಷರ ಸ್ಥಾನವು ಪರಿಶಿಷ್ಟ ಜಾತಿ (ಮ) ವರ್ಗಕ್ಕೆ ಮೀಸಲಾಗಿರುತ್ತದೆ. ನಾಮಪತ್ರವನ್ನು ಅರ್ಹ ಚುನಾಯಿತ ಸದಸ್ಯರು ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ಅಥವಾ ಅವರಿಂದ ಅಧಿಕೃತಗೊಳಿಸಲಾದ ಹೆಚ್ಚುವರಿ ಆಯುಕ್ತರು, ಪ್ರಾದೇಶಿಕ ಆಯುಕ್ತರ ಕಛೇರಿ, ಬೆಂಗಳೂರು ವಿಭಾಗ ಇವರಿಗೆ ದಿನಾಂಕ: 10-5-2016 ರಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯವರ ಕೊಠಡಿಯಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಸಲ್ಲಿಸಬಹುದಾಗಿದೆ ಎಂದು ಪ್ರಾದೇಶಿಕ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.