Government of Karnataka

Department of Information

Friday 01/04/2016

First in Cleanliness Again: Chief Minister expresses happiness

Date : Monday, February 15th, 2016

ನವದೆಹಲಿ, ಫೆಬ್ರವರಿ 15 (ಕರ್ನಾಟಕ ವಾರ್ತೆ) : ಸ್ವಚ್ಛತೆಯಲ್ಲಿ ಮತ್ತೆ ಮೈಸೂರು ಮೊದಲ ಸ್ಥಾನ ಪಡೆದಿದೆ. ನಗರಾಭಿವೃದ್ಧಿ ಸಚಿವಾಲಯದ ಈ ಪ್ರಕಟಣೆ ಹೊರಬೀಳುತ್ತಿದ್ದಂತೆಯೇ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಮೊಗದಲ್ಲಿ ಸಂತಸದ ಹೊನಲು ಮೂಡಿದೆ.

ಸ್ವಚ್ಛತಾ ನಗರಿಯ ಹಿರಿಮೆಯನ್ನು ಕಾಯ್ದುಕೊಳ್ಳುವಲ್ಲಿ ಸಹಕರಿಸಿದ ನಗರದ ನಾಗರೀಕರು, ಪಾಲಿಕೆಯ ಅಧಿಕಾರಿಗಳು ಹಾಗೂ ವಿಶೇಷವಾಗಿ ಪೌರ ಕಾರ್ಮಿಕರಿಗೂ ಶ್ರೀ ಸಿದ್ದರಾಮಯ್ಯ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅಲ್ಲದೆ, ಮುಂದೆಯೂ ಕೂಡಾ ಇದೇ ಹಾದಿಯಲ್ಲಿ ಮುನ್ನಡೆಯೋಣ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.