Government of Karnataka

Department of Information

Monday 21/12/2015

Mr Justice N Ananda sworn-in as Karnataka Upa Lokayukta at Raj Bhavan this evening

Date : Wednesday, December 16th, 2015

ಬೆಂಗಳೂರು, ಡಿಸೆಂಬರ್ 16 (ಕರ್ನಾಟಕ ವಾರ್ತೆ):
ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಶ್ರೀ ಎನ್. ಆನಂದ ಅವರು ಕರ್ನಾಟಕ ಉಪ ಲೋಕಾಯಕ್ತರಾಗಿ ಇಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಶ್ರೀ ವಜುಭಾಯಿ ರುಢಾಭಾಯಿ ವಾಲಾ ಅವರು ರಾಜಭವನದ ಔತಣ ಸಭಾಂಗಣದಲ್ಲಿ ಸಂಜೆ ನಡೆದ ಸರಳ ಸಮಾರಂಭದಲ್ಲಿ ನ್ಯಾಯಮೂರ್ತಿ ಶ್ರೀ ಎನ್. ಆನಂದ ಅವರಿಗೆ ಅಧಿಕಾರ ಹಾಗೂ ಗೌಪ್ಯತಾ ಪ್ರಮಾಣ ವಚನವನ್ನು ಬೋಧಿಸಿದರು. ಶ್ರೀ ಆನಂದ ಅವರು ಇಂಗ್ಲೀಷ್ ಭಾಷೆಯಲ್ಲಿ ಮತ್ತು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಮುನ್ನ, ರಾಜ್ಯಪಾಲರ ಅನುಮತಿ ಪಡೆದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀ ಕೌಶಿಕ್ ಮುಖರ್ಜಿ ಅವರು ನೂತನ ಉಪ ಲೋಕಾಯುಕ್ತರ ನೇಮಕಾತಿ ಆದೇಶವನ್ನು ಸಮಾರಂಭದ ಪ್ರಾರಂಭದಲ್ಲಿ ವಾಚಿಸಿದರು.
ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ, ಉನ್ನತ ಶಿಕ್ಷಣ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಟಿ. ಬಿ. ಜಯಚಂದ್ರ, ಬೆಂಗಳೂರು ಅಭಿವೃದ್ಧಿ ಹಾಗೂ ನಗರ ಯೋಜನಾ ಸಚಿವ ಶ್ರೀ ಕೆ. ಜೆ. ಜಾರ್ಜ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಶ್ರೀ ಹೆಚ್. ಕೆ. ಪಾಟೀಲ್, ಲೋಕೋಪಯೋಗಿ ಸಚಿವ ಡಾ ಹೆಚ್. ಸಿ. ಮಹದೇವಪ್ಪ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶ್ರೀ ಹೆಚ್. ಆಂಜನೇಯ, ಗೃಹ ಸಚಿವ ಡಾ ಜಿ. ಪರಮೇಶ್ವರ್, ನಗರಾಭಿವೃದ್ಧಿ ಸಚಿವ ಶ್ರೀ ವಿನಯ್ ಕುಮಾರ್ ಸೊರಕೆ, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಎ. ಎನ್. ವೇಣುಗೋಪಾಲ ಗೌಡ, ಶ್ರೀ ಬಿ. ವೀರಪ್ಪ, ಶ್ರೀ ಅಶೋಕ್ ಬಿ ಹಿಂಚಿಗೇರಿ, ಶ್ರೀ ಎಲ್. ನಾರಾಯಣ ಸ್ವಾಮಿ ಹಾಗೂ ಶ್ರೀ ಬಿ. ಶ್ರೀನಿವಾಸೇ ಗೌಡ, ಈ ಮುನ್ನ ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸಿದ್ದ ನ್ಯಾಯಮೂರ್ತಿ ಶ್ರೀ ಚಂದ್ರಶೇಖರಯ್ಯ ಹಾಗೂ ನ್ಯಾಯಮೂರ್ತಿ ಶ್ರೀ ಎಸ್. ಬಿ.. ಮಜಗೆ, ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಶ್ರೀ ಕೆ. ಗೋವಿಂದ ರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಶ್ರೀ ಡಿ. ಎನ್. ನರಸಿಂಹ ರಾಜು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶ್ರೀ ಎಲ್. ಕೆ. ಅತೀಕ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಶ್ರೀ ನರಸಿಂಹ ಎನ್ ಮೇಘರಿಕ್ ಅವರೂ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ರಾಷ್ಟ್ರಗೀತೆಯೊಂದಿಗೆ ಪ್ರಾರಂಭವಾದ ಈ ಸಮಾರಂಭವು ರಾಷ್ಟ್ರಗೀತೆಯೊಂದಿಗೇ ಮುಕ್ತಾಯವಾಯಿತು.