Government of Karnataka

Department of Information

Tuesday 13/09/2016

State News 01-04-2016

Date : Friday, April 1st, 2016
ಕ್ರಮ ಸಂಖ್ಯೆ ಕಾರ್ಯಕ್ರಮಗಳ ವಿವರ ದಿನಾಂಕ/ಸಮಯ ಕಾರ್ಯಕ್ರಮ ನಡೆಯುವ ಸ್ಥಳ
1. ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ: ಮುಖ್ಯ ಅತಿಥಿ: ಶ್ರೀಸಿದ್ದರಾಮಯ್ಯ, ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ. ಅಧ್ಯಕ್ಷತೆ: ಡಾ. ಜಿ. ಪರಮೇಶ್ವರ, ಗೃಹ ಸಚಿವರು ಸೂಚನೆ:  ಈ ಕಾರ್ಯಕ್ರಮಕ್ಕೆ ಮಾಧ್ಯಮದವರನ್ನು ಕರೆದೊಯ್ಯಲು ಅಂದು ಬೆಳಿಗ್ಗೆ 7-15 ಗಂಟೆಗೆ ನಗರದ ಪೊಲೀಸ್ ಆಯುಕ್ತರ ಕಚೇರಿ ಮತ್ತು ಪೊಲೀಸ್ ಪ್ರಧಾನ ಕಚೇರಿಯಿಂದ ವಾಹನ ವ್ಯವಸ್ಥೆ ಮಾಡಲಾಗಿದೆ ಸಂಪರ್ಕ: ಶ್ರೀ ಮೂರ್ತಿ, ಎ.ಪಿ.ಆರ್.ಒ. ಮೊ. ಸಂಖ್ಯೆ 9480800728 ಅಥವಾ 080 22942364 02-04-2016 ಶನಿವಾರ       ಬೆಳಿಗ್ಗೆ 8-00 ಗಂಟೆಗೆ ಕೆ.ಎಸ್.ಆರ್.ಪಿ., 3ನೇ ಪಡೆಯ ಪೆರೇಡ್ ಮೈದಾನ, ಕೋರಮಂಗಲ, ಬೆಂಗಳೂರು
2. ಹಜ್ ಯಾತ್ರಾರ್ಥಿಗಳ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮ ಚಾಲನೆ: ಶ್ರೀಸಿದ್ದರಾಮಯ್ಯ,,ಮುಖ್ಯಮಂತ್ರಿಗಳು,  ಕರ್ನಾಟಕ ಸರ್ಕಾರ ಮುಖ್ಯ ಅತಿಥಿ: ಶ್ರೀ ಆರ್. ರೋಷನ್ ಬೇಗ್,  ಮೂಲಸೌಕರ್ಯ ಅಭಿವೃದ್ಧಿ, ವಾರ್ತಾ ಹಾಗೂ ಹಜ್ ಸಚಿವರು 02-04-2016 ಶನಿವಾರ ಸಂಜೆ  4-00 ಗಂಟೆಗೆ ಬ್ಯಾಂಕ್ವೆಟ್ ಹಾಲ್, ವಿಧಾನ ಸೌಧ, ಬೆಂಗಳೂರು
3. ಬೆಳ್ಳಿ ಸಿನಿಮಾ ಬೆಳ್ಳಿಮಾತು ಬೆಳ್ಳಿ ಸಿನಿಮಾ “ಕ್ರಾಂತಿವೀರ ಸಂಗೋಳ್ಳಿರಾಯಣ್ಣ” ಬೆಳ್ಳಿ ಮಾತು: ಶ್ರೀ ನಾಗಣ್ಣ, “ಕ್ರಾಂತಿವೀರ ಸಂಗೋಳ್ಳಿರಾಯಣ್ಣ”  ಚಿತ್ರದ ನಿರ್ದೇಶಕರು ಮುಖ್ಯ ಅತಿಥಿಗಳು: ಶ್ರೀ ಹೆಚ್.ಡಿ. ಗಂಗರಾಜು,  ಅಧ್ಯಕ್ಷರು, ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ. ಶ್ರೀ ರಮೇಶ್ ಭಟ್, ಚಲನಚಿತ್ರರಂಗದ ಹಿರಿಯ ಕಲಾವಿದರು. ಅಧ್ಯಕ್ಷತೆ: ಶ್ರೀ ಎಸ್.ವಿ. ರಾಜೇಂದ್ರಸಿಂಗ್ ಬಾಬು,  ಅಧ್ಯಕ್ಷರು,  ಕರ್ನಾಟಕ ಚಲನಚಿತ್ರ ಅಕಾಡೆಮಿ 02-04-2016 ಶನಿವಾರ  ಸಂಜೆ   4-00 ಗಂಟೆಗೆ ಚಾಮುಂಡಿ ಸ್ಟುಡಿಯೋ, ವಸಂತನಗರ, ಮಿಲ್ಲರ್‍ಸ್ ರಸ್ತೆ ಬೆಂಗಳೂರು

ಈ ವಾರದ ಬೆಳ್ಳಿ ಸಿನಿಮಾ “ಕ್ರಾಂತಿವೀರ ಸಂಗೊಳ್ಳಿರಾಯಣ್ಣ” ಕನ್ನಡ ಚಲನಚಿತ್ರ

ಬೆಂಗಳೂರು, ಏಪ್ರಿಲ್ 1 (ಕರ್ನಾಟಕ ವಾರ್ತೆ) : ಕರ್ನಾಟಕ ಚಲನಚಿತ್ರ ಅಕಾಡೆಮಿಯು ಪ್ರತಿ ಶನಿವಾರ ನಡೆಸುವ ಬೆಳ್ಳಿಸಿನಿಮಾ ಬೆಳ್ಳಿಮಾತು ಕಾರ್ಯಕ್ರಮದಲ್ಲಿ ಏಪ್ರಿಲ್ 2 ರ ಶನಿವಾರ ಸಂಜೆ 4-00 ಗಂಟೆಗೆ ನಗರದ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಬೆಳ್ಳಿ ಸಿನಿಮಾ “ಕ್ರಾಂತಿವೀರ ಸಂಗೊಳ್ಳಿರಾಯಣ್ಣ” ಚಲನಚಿತ್ರವನ್ನು ಪ್ರದರ್ಶಿಸಲಾಗುತ್ತಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಹೆಚ್. ಬಿ. ದಿನೇಶ್ ಅವರು ತಿಳಿಸಿದ್ದಾರೆ.

ಅಂದು “ಕ್ರಾಂತಿವೀರ ಸಂಗೊಳ್ಳಿರಾಯಣ್ಣ” ಚಲನಚಿತ್ರ ಪ್ರದರ್ಶನದ ನಂತರ ಚಿತ್ರದ ನಿರ್ದೇಶಕ ನಾಗಣ್ಣ ಅವರ ಬೆಳ್ಳಿಮಾತು - ಸಂವಾದ ಏರ್ಪಡಿಸಲಾಗಿದೆ. ಮುಖ್ಯ ಅತಿಥಿಗಳಾಗಿ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಶ್ರೀ ಹೆಚ್.ಡಿ. ಗಂಗರಾಜು ಹಾಗೂ ಚಲನ ಚಿತ್ರರಂಗದ ಹಿರಿಯ ಕಲಾವಿದ ಶ್ರೀ ರಮೇಶ್ ಭಟ್ ಅವರು ಪಾಲ್ಗೊಳ್ಳುವರು. ಸಮಾರಂಭದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷ ಎಸ್.ವಿ. ರಾಜೇಂದ್ರಸಿಂಗ್ ಬಾಬು ವಹಿಸುವರು ಎಂದು ಅವರು ತಿಳಿಸಿದ್ದಾರೆ.

ಭೇಟಿ ಬಚಾವ್, ಭೇಟಿ ಪಡಾವೋ ಸಂವಾದ ಕಾರ್ಯಕ್ರಮ

ಬೆಂಗಳೂರು, ಏಪ್ರಿಲ್ 1 (ಕರ್ನಾಟಕ ವಾರ್ತೆ) : ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಇತ್ತೀಚೆಗೆ ರಾಜ್ಯದ ಇಲಾಖೆ ಎಲ್ಲಾ ಅಧಿಕಾರಿಗಳಿಗಾಗಿ “ಭೇಟಿ ಬಚಾವ್, ಭೇಟಿ ಪಡಾವೋ” ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಶ್ರೀ ಎನ್.ಆರ್. ವಿಶುಕುಮಾರ್ ಅವರು ಮಾತನಾಡಿ ಇಂದಿನ ಆಧುನಿಕ ಯುಗದಲ್ಲೂ ಹೆಣ್ಣು ಮಕ್ಕಳನ್ನು ಸಂರಕ್ಷಿಸುವ ಅಗತ್ಯತೆ ಇದೆ. ಕುಸಿಯುತ್ತಿರುವ ಮಕ್ಕಳ ಲಿಂಗಾನುಪಾತವನ್ನು ಕಡಿಮೆ ಮಾಡುವುದಕ್ಕಾಗಿ ಈ ಯೋಜನೆ ರೂಪಿತವಾಗಿದೆ. ಈ ಯೋಜನೆಯ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುವುದು ಹಾಗೂ ಅವರ ಘನತೆ ಹೆಚ್ಚಿಸಿ ಅವರಿಗೆ ಹೆಚ್ಚಿನ ಅವಕಾಶವನ್ನು ಒದಗಿಸಿಕೊಡುವ ಅಗತ್ಯತೆ ಇದೆ ಈ ನಿಟ್ಟಿನಲ್ಲಿ ವಾರ್ತಾ ಇಲಾಖೆಯ ಅಧಿಕಾರಿಗಳು ತಮ್ಮ ಕಾರ್ಯಕ್ರಮಗಳಲ್ಲಿ ಹೆಣ್ಣು ಮಕ್ಕಳನ್ನು ಸಂರಕ್ಷಿಸುವ ಹಾಗೂ ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಹೇಳಿದರು.

ಸಂವಾದ ಕಾರ್ಯಕ್ರಮದಲ್ಲಿ ಎಲ್ಲರನ್ನೂ ಸ್ವಾಗತಿಸಿ ಮಾತನಾಡಿದ ಇಲಾಖೆಯ ಜಂಟಿ ನಿರ್ದೇಶಕ ಶ್ರೀ ಪಿ.ಎನ್. ಗುರುಮೂರ್ತಿ ಅವರು ಹೆಣ್ಣು ಮಕ್ಕಳ ಸಂಖ್ಯೆಯು ಗಂಡು ಮಕ್ಕಳ ಸಂಖ್ಯೆಗೆ ಹೋಲಿಸಿದರೆ ಗಮನಾರ್ಹವಾಗಿ ಕಡಿಮೆಯಾಗುತ್ತಿರುವು ಕಂಡುಬರುತ್ತಿದೆ. ಹೆಣ್ಣು ಮಕ್ಕಳ ಹುಟ್ಟುವಿಕೆಯ ಸಂಖ್ಯೆ ಗ್ರಾಮೀಣ ಮಟ್ಟ ಹಾಗೂ ಬುಡಕಟ್ಟಿನ ಸಮುದಾಯದಲ್ಲೂ ಕುಸಿಯುತ್ತಿರುವುದು ಕಂಡುಬಂದಿದೆ. ಇದನ್ನು ಹೋಗಲಾಡಿಸುವ ಅಗತ್ಯತೆ ಇದೆ ಎಂದು ಹೇಳಿದರು.

ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಎನ್.ಐ.ಪಿ.ಸಿ.ಸಿ.ಡಿ ಯ ಡಾ. ಬಿ.ಎಸ್. ಅನುರಾಧಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಮತಿ ವೀಣಾ, ಸಹಾಯಕ ನಿರ್ದೇಶಕರಾದ ಶ್ರೀಮತಿ ಅಲೀಮಾ ಅವರುಗಳು “ಭೇಟಿ ಬಚಾವ್,ಭೇಟಿ ಪಡಾವೋ” ಯೋಜನೆಯ ವಿವರಗಳನ್ನು ತಿಳಿಸಿದರು.

ಸಭೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಜಂಟಿ ನಿರ್ದೇಶಕರುಗಳಾದÀ ಶ್ರೀ ಎಂ. ರವಿಕುಮಾರ್, ಶ್ರೀ ಎನ್. ಭೃಂಗೀಶ್ ಹಾಗೂ ಇಲಾಖೆಯ ರಾಜ್ಯದ ಎಲ್ಲಾ ಅಧಿಕಾರಿಗಳು ಪಾಲ್ಗೊಂಡಿದರು.

Conducting of qurrah (Draw) of Haj Applications for Haj-2016

Bengaluru, April 1 (Karnataka Information): Haj -2016 is scheduled to take place during Second Week of September, 2016 in Saudi Arabia.

The Karnataka State Haj Committee, Bangalore has received applicants for Haj – 2016 as on 15-02-2016 (Last date).
As per the directions of the Haj Committee of India, Mumbai online district wise Computerized (draw of lots) for selecting the Haj pilgrims will be held on 02nd April,2016 at 4-00 PM at Banquet Hall of Vidhana Soudha, Bangalore – 560 001. Hon’ble Chief Minister of Government of Karnataka has given his consent to inaugurate the Qurrah Programme. Hon’ble Minister for Infrastructure Development, Information, Public Relations & Haj, other Ministers, Ulemas etc., are attending the above said programme.

The applicants who desires to witness the Qurrah (draw of lots) are requested to bring the Haj pilgrim acknowledgement letter issued by the Karnataka State Haj Committee along with one original Identity proof, which has to be produced to the Security at Vidhana Soudha, Bangalore.

The result of the selected pilgrims will be published in the Website of Haj Committee of India “www.hajcommittee.com” and website of Karnataka State Haj Committee” “www.karhaj.in”.

ಸ್ಥಳೀಯ ಸಂಸ್ಥೆಗಳ 53 ಸ್ಥಾನಗಳಿಗೆ ಉಪ ಚುನಾವಣೆ

ಬೆಂಗಳೂರು, ಏಪ್ರಿಲ್ 1 (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ 53 ಖಾಲಿ ಸ್ಥಾನಗಳಿಗೆ ಏಪ್ರಿಲ್ 24 ರಂದು ಚುನಾವಣೆ ನಡೆಸಲಿದೆ. ನಾಮಪತ್ರಗಳನ್ನು ಏಪ್ರಿಲ್ 5 ರಿಂದ ಏಪ್ರಿಲ್ 12 ರವರೆಗೆ ಸಲ್ಲಿಸಬಹುದಾಗಿದೆ. ಏಪ್ರಿಲ್ 15 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 27 ರಂದು ಮತ ಎಣಿಕೆ ನಡೆಯಲಿದೆ. ಸದಾಚರ ಸಂಹಿತೆಯು ಮಾರ್ಚ್ 31 ರಿಂದ ಏಪ್ರಿಲ್ 27 ರವರೆಗೆ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವ್ಯಾಪ್ತಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಈ ವಾರದ ಬೆಳ್ಳಿ ಸಿನಿಮಾ “ಕ್ರಾಂತಿವೀರ ಸಂಗೊಳ್ಳಿರಾಯಣ್ಣ” ಕನ್ನಡ ಚಲನಚಿತ್ರ

ಬೆಂಗಳೂರು, ಏಪ್ರಿಲ್ 1 (ಕರ್ನಾಟಕ ವಾರ್ತೆ) : ಕರ್ನಾಟಕ ಚಲನಚಿತ್ರ ಅಕಾಡೆಮಿಯು ಪ್ರತಿ ಶನಿವಾರ ನಡೆಸುವ ಬೆಳ್ಳಿಸಿನಿಮಾ ಬೆಳ್ಳಿಮಾತು ಕಾರ್ಯಕ್ರಮದಲ್ಲಿ ಏಪ್ರಿಲ್ 2 ರ ಶನಿವಾರ ಸಂಜೆ 4-00 ಗಂಟೆಗೆ ನಗರದ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಬೆಳ್ಳಿ ಸಿನಿಮಾ “ಕ್ರಾಂತಿವೀರ ಸಂಗೊಳ್ಳಿರಾಯಣ್ಣ” ಚಲನಚಿತ್ರವನ್ನು ಪ್ರದರ್ಶಿಸಲಾಗುತ್ತಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಹೆಚ್. ಬಿ. ದಿನೇಶ್ ಅವರು ತಿಳಿಸಿದ್ದಾರೆ.

ಅಂದು “ಕ್ರಾಂತಿವೀರ ಸಂಗೊಳ್ಳಿರಾಯಣ್ಣ” ಚಲನಚಿತ್ರ ಪ್ರದರ್ಶನದ ನಂತರ ಚಿತ್ರದ ನಿರ್ದೇಶಕ ನಾಗಣ್ಣ ಅವರ ಬೆಳ್ಳಿಮಾತು - ಸಂವಾದ ಏರ್ಪಡಿಸಲಾಗಿದೆ. ಮುಖ್ಯ ಅತಿಥಿಗಳಾಗಿ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಶ್ರೀ ಹೆಚ್. ಡಿ. ಗಂಗರಾಜು ಹಾಗೂ ಚಲನ ಚಿತ್ರರಂಗದ ಹಿರಿಯ ಕಲಾವಿದ ಶ್ರೀ ರಮೇಶ್ ಭಟ್ ಅವರು ಪಾಲ್ಗೊಳ್ಳುವರು. ಸಮಾರಂಭದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷ ಎಸ್.ವಿ. ರಾಜೇಂದ್ರಸಿಂಗ್ ಬಾಬು ವಹಿಸುವರು ಎಂದು ಅವರು ತಿಳಿಸಿದ್ದಾರೆ.

ಶಾಲೆಯಿಂದ ವಂಚಿತರಾದ ಮಕ್ಕಳನ್ನು ಮತ್ತೆ ಶಾಲೆ ಸೇರಿಸುವ ಕೆಲಸವಾಗಬೇಕು – ಡಾ. ಜಿ. ಪರಮೇಶ್ವರ್

ಬೆಂಗಳೂರು, ಏಪ್ರಿಲ್ 1 (ಕರ್ನಾಟಕ ವಾರ್ತೆ): ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸುವಂತಹ ಕೆಲಸ ಆದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಗೃಹ ಸಚಿವ ಶ್ರೀ ಜಿ. ಪರಮೇಶ್ವರ್ ಅವರು ತಿಳಿಸಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಇಂದು ಏರ್ಪಡಿಸಿದ್ದ ” ಶಾಲೆ ಕಡೆ - ನನ್ನ ನಡೆ” ಕಾರ್ಯಕ್ರಮವನ್ನು ಉದ್ಫಾಟಿಸಿ ಮಾತನಾಡಿದ ಗೃಹ ಸಚಿವರು ಇನ್ನೂ ಕೂಡಾ ಹಲವು ಸಮುದಾಯಗಳ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಅಂತಹವರಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮುಂದಾಗಬೇಕು ಎಂದರು.

ಸಮಾಜದಲ್ಲಿ ಶಿಕ್ಷಿತರು ಹಾಗೂ ಸಾಕ್ಷರರ ಪ್ರಮಾಣ ಹೆಚ್ಚಿದಲ್ಲಿ ಪ್ರಜ್ಞಾವಂತ ಸಮಾಜ ನಿರ್ಮಾಣವಾಗುತ್ತದೆ ಎಂದು ಮಾತನಾಡಿದ ಪರಮೇಶ್ವರ್ ಅವರು ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಆಡಳಿತಾವಧಿಯಲ್ಲಿ ಜಾರಿಗೆ ತಂದಿದ್ದ “ಮರಳಿ ಬಾ ಶಾಲೆಗೆ’ ಹಾಗೂ ಬಿಸಿಯೂಟ ಯೋಜನೆ ಕಾರ್ಯಕ್ರಮದಿಂದಾಗಿ ರಾಜ್ಯದಲ್ಲಿ ಸಾಕ್ಷರತಾ ಪ್ರಮಾಣ ಹೆಚ್ಚಾಗಿತ್ತು ಹಾಗೂ ಶಾಲೆಯಿಂದ ವಂಚಿತರಾಗಿದ್ದ ಮಕ್ಕಳು ಶಾಲೆಗೆ ಬರಲು ಪ್ರಾರಂಭಿಸಿದ್ದರೂ ಎಂದು.

ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬೇಡಿ ಎಂದು ಇದೇ ಸಂದರ್ಭದಲ್ಲಿ ಗೃಹ ಸಚಿವರು ಕರೆ ನೀಡಿದರು.

ಹೊರದೇಶಗಳಲ್ಲಿ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸದ ಪೋಷಕರುಗಳಿಗೆ ಶಿಕ್ಷೆ ವಿಧಿಸುತ್ತಾರೆ ಎಂದು ಕೇಳಿದ್ದೇವು. ಆ ರೀತಿಯ ಕಾನೂನು ನಮ್ಮ ದೇಶದಲ್ಲೂ ಜಾರಿಗೆ ತಂದಲ್ಲಿ ಎಲ್ಲರೂ ವಿದ್ಯಾವಂತರಾಗುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಶ್ರೀಮತಿ ಉಮಾಶ್ರೀ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಜ್ ಸಚಿವ ಶ್ರೀ ಆರ್. ರೋಷನ್ ಬೇಗ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹೊರತಂದ ಲಾಂಛನ ಹಾಗೂ ಅರಿವು ಮೂಡಿಸುವ ಕಿರುಹೊತ್ತಿಗೆಗಳನ್ನು ಬಿಡುಗಡೆ ಮಾಡಿದರು.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ರಜನೀಶ್ ಗೋಯಲ್, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾದ ಶ್ರೀ ನಿರಂಜನಾರಾಧ್ಯ ಹಾಗೂ ಆಯೋಗದ ಸದಸ್ಯರು ಪಾಲ್ಗೊಂಡಿದ್ದರು.

ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ಡಾ. ಕೃಪಾಅಮರ್ ಆಳ್ವ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.