Government of Karnataka

Department of Information

Thursday 02/06/2016

State News 10-03-2016

Date : Thursday, March 10th, 2016
ಕ್ರಮ ಸಂಖ್ಯೆ ಕಾರ್ಯಕ್ರಮಗಳ ವಿವರ ದಿನಾಂಕ & ಸಮಯ ಕಾರ್ಯಕ್ರಮ ನಡೆಯುವ ಸ್ಥಳ
1. ಕರ್ನಾಟಕ ರಾಜ್ಯ ಪೊಲೀಸ್ ವಾರ್ಷಿಕ ಕ್ರೀಡಾ ಕೂಟ - ಸಮಾರೋಪ ಸಮಾರಂಭ:
ಮುಖ್ಯ ಅತಿಥಿಗಳು:ಡಾ. ಜಿ. ಪರಮೇಶ್ವರ್, ಗೃಹ ಸಚಿವರುಬಹುಮಾನ ವಿತರಣೆಶ್ರೀಮತಿ ಕನ್ನಿಕಾ ಪರಮೇಶ್ವರಿ ಪರಮೇಶ್ವರ,ವಾಹನ ವ್ಯವಸ್ಥೆ:
ಸಂಜೆ 3-30 ಗಂಟೆಗೆ ಡಿ. ಜಿ. ಆಫೀಸ್ ನೃಪತುಂಗ ರಸ್ತೆ ಮತ್ತು ಪೊಲೀಸ್ ಕಮೀಷನರ್ ಆಫೀಸ್ ಭಗವಾನ್ ಮಹಾವೀರ ರಸ್ತೆ, ಬೆಂಗಳೂರು.ಸಂಪರ್ಕ:ಸಹಾಯಕ ಸಾರ್ವಜನಿಕ ಸಂರ್ಪಕಾಧಿಕಾರಿಮೊ. ಸಂಖ್ಯೆ 94808 00728
11-3-2016 ಶುಕ್ರವಾರ ಸಂಜೆ 5-00 ಗಂಟೆಗೆ ಕೆ.ಎಸ್.ಆರ್.ಪಿ. ಪೆರೇಡ್ ಮೈದಾನ, ಕೋರಮಂಗಲ, ಬೆಂಗಳೂರು

ಸಾರಿಗೆ ಅದಾಲತ್

ಬೆಂಗಳೂರು, ಮಾರ್ಚ್ 10 (ಕರ್ನಾಟಕ ವಾರ್ತೆ): ಬೆಂಗಳೂರಿನ ಯಲಹಂಕ ಸಾರಿಗೆ ಪ್ರಾದೇಶಿಕ ಕಚೇರಿಯಲ್ಲಿ ಮಾರ್ಚ್ 18 ರಂದು ಸಾರಿಗೆ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳುವರು. ಈ ಅದಾಲತ್‍ನಲ್ಲಿ ಈ ಕಚೇರಿಯ ವ್ಯಾಪ್ತಿಗೆ ಬರುವ ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ.

ಬೆಂಗಳೂರು, ಮಾರ್ಚ್ 10 (ಕರ್ನಾಟಕ ವಾರ್ತೆ): ರಾಜ್ಯದಲ್ಲಿ ಖಾಲಿ ಇರುವ ಸಮೂಹ ಸಂಪನ್ಮೂಲ ವ್ಯಕ್ತಿ (ಸಿ.ಆರ್.ಪಿ) ಮತ್ತು ಕ್ಷೇತ್ರ ಸಂಪನ್ಮೂಲ ವ್ಯಕ್ತಿ (ಬಿ.ಆರ್.ಪಿ.) ಹುದ್ದೆಗಳನ್ನು ಭರ್ತಿಮಾಡಲು ಸೇವೆಯಲ್ಲಿರುವ ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಶಿಕ್ಷಕರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸಲು ಮಾರ್ಚ್ 14 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಜಿಲ್ಲೆಯ ಉಪ ನಿರ್ದೇಶಕರು (ಆಡಳಿತ), ಉಪನಿರ್ದೇಶಕರು, (ಅಭಿವೃದ್ಧಿ) ಹಾಗೂ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸುವುದು ಅಥವಾ ಇಲಾಖಾ ವೆಬ್‍ಸೈಟ್ www.ssakarnataka.gov.in ಅನ್ನು ವೀಕ್ಷಿಸಬಹುದಾಗಿದೆ.

ಗ್ರಂಥಾಲಯ ವಿಜ್ಞಾನ ತರಬೇತಿ

ಬೆಂಗಳೂರು, ಮಾರ್ಚ್ 10 (ಕರ್ನಾಟಕ ವಾರ್ತೆ): ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಬೆಂಗಳೂರು, ಮೈಸೂರು ವಿಭಾಗದ ಮಂಗಳೂರು, ಬೆಳಗಾವಿ ವಿಭಾಗದ ಧಾರವಾಡ ಮತ್ತು ಕಲಬುರಗಿ ವಿಭಾಗಗಳಲ್ಲಿ ನಾಲ್ಕು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಗಳನ್ನು ನಡೆಸಲಾಗುತ್ತಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 40 ರಷ್ಟು,ಮತ್ತು (ಎಸ್‍ಸಿ/ಎಸ್‍ಟಿ) ಶೇಕಡ 35 ರಷ್ಟು ಅಂಕ ಪಡೆದ ಅಭ್ಯರ್ಥಿಗಳು ಈ ತರಬೇತಿಗೆ ಅರ್ಹರಾಗಿದ್ದಾರೆ.

ಹಾಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಾಲಯ ಸಹವರ್ತಿಗಳು, ಗ್ರಾಮ ಪಂಚಾಯತಿ ಮೇಲ್ವಿಚಾರಕರು ಸಂಬಂಧಪಟ್ಟ ಉಪನಿರ್ದೇಶಕರು/ಮುಖ್ಯ ಗ್ರಂಥಾಲಯಾಧಿಕಾರಿಗಳ ಮೂಲಕ ಹಾಗೂ ಇತರೆ ಶೈಕ್ಷಣಿಕ ಸಂಸ್ಥೆಯಿಂದ ಬರುವ ಅಭ್ಯರ್ಥಿಗಳು ತಮ್ಮ ಸಂಸ್ಥೆಯ ಮುಖ್ಯಸ್ಥರ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿಯ ಜೊತೆಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ಸೇವೆಗೆ ಸೇರಿದ ದಿನಾಂಕ, ವೇತನ ಪ್ರಮಾಣ ಪತ್ರ ನಡವಳಿಕೆ ಪ್ರಮಾಣ ಪತ್ರಗಳ ನಕಲು ಪ್ರತಿಗಳನ್ನು ಲಗತ್ತಿಸಬೇಕು.

20 ಸೀಟುಗಳನ್ನು ಶ್ರೇಷ್ಠತೆಯ ಮೀಸಲಾತಿ ಆಧಾರದ ಮೇಲೆ ಆದ್ಯತೆ ನೀಡಲಾಗುವುದು. ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಜಾತಿ, ಗ್ರಾಮೀಣ/ಯೋಜನಾ ನಿರಾಶ್ರಿತರು/ಮಾಜಿ ಸೈನಿಕ/ಅಂಗವಿಕಲ/ಕನ್ನಡ ಮಾಧ್ಯಮ ಪ್ರಮಾಣ ಪತ್ರಗಳ ದೃಢೀಕೃತ ನಕಲು ಪ್ರತಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನ ಏಪ್ರಿಲ್ 5 ಆಗಿದೆ.

ಅರ್ಜಿ ಆಹ್ವಾನ : ಅವಧಿ ಮುಂದೂಡಿಕೆ

ಬೆಂಗಳೂರು, ಮಾರ್ಚ್ 10 (ಕರ್ನಾಟಕ ವಾರ್ತೆ): ಕರ್ನಾಟಕ ಜಾನಪದ ಅಕಾಡೆಮಿಯ 2015-16 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಪ್ರಶಸ್ತಿ ಪುರಸ್ಕøತರು ಹಾಗೂ ಹಿರಿಯ ಜಾನಪದ ಕಲಾವಿದರ ಸಾಕ್ಷಚಿತ್ರ ನಿರ್ಮಾಣಕ್ಕಾಗಿ ನಿರ್ದೇಶನ, ತಾಂತ್ರಿಕ ಪರಿಣಿತಿ ಹೊಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಂದ ತಮ್ಮ ಅನುಭವದ ಮಾಹಿತಿಗಳೊಂದಿಗೆ ಅರ್ಜಿಯನ್ನು ಆಹ್ವಾನಿಲಾಗಿದ್ದು, ಈ ಸಂಬಂಧ ಅರ್ಜಿಯನ್ನು ಸ್ವೀಕರಿಸಲು ಇದ್ದ ಮಾರ್ಚ್ 8 ರ ಕೊನೆಯ ದಿನಾಂಕವನ್ನು ಮಾರ್ಚ್ 16 ರವರೆಗೆ ಮುಂದೂಡಲಾಗಿದೆ.

ಅರ್ಜಿಯನ್ನು ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರುಗಳ ಕಚೇರಿಯಿಂದ ಹಾಗೂ ಕನಾಟಕ ಜಾನಪದ ಅಕಾಡೆಮಿ ಕಚೇರಿಯಿಂದ ಪಡೆಯಬಹುದಾಗಿದೆ. ಅಕಾಡೆಮಿ ವಿಳಾಸ ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು – 02 ದೂರವಾಣಿ ಸಂಖ್ಯೆ: 080 – 22215509 ಸಂಪರ್ಕಿಸಬಹುದಾಗಿದೆ.

Prof D. Shivalingaiah appointed as Vice Chancellor KSOU

Bangalore, March 10 (Karnataka Information): Hon’ble Governor and Chancellor of Universities has appointed Prof. D. Shivalingaiah, Registrar, Tumkur University, Tumkur, as the Vice Chancellor of Karnataka State Open University, Mysore.